ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಮಂಗಳೂರು :ಚುನಾವಣಾ ಸಿಬಂದಿ ಆತ್ಮಹತ್ಯೆ ಯತ್ನ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Posted by Vidyamaana on 2024-04-02 20:06:48 |

Share: | | | | |


ಮಂಗಳೂರು :ಚುನಾವಣಾ ಸಿಬಂದಿ ಆತ್ಮಹತ್ಯೆ ಯತ್ನ  ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಮಂಗಳೂರು ಏ.2: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದೆ. ಕೂಡಲೇ ಅವರನ್ನು ನಗರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.


ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ  ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಶೂಟಿಂಗ್ ಕ್ಯಾನ್ಸಲ್ ಮಾಡಿ ಗದಗಕ್ಕೆ ಬಂದ ಯಶ್, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ​ ಹೇಳಿದ ನಟ

Posted by Vidyamaana on 2024-01-08 20:48:57 |

Share: | | | | |


ಶೂಟಿಂಗ್ ಕ್ಯಾನ್ಸಲ್ ಮಾಡಿ ಗದಗಕ್ಕೆ ಬಂದ ಯಶ್, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ​ ಹೇಳಿದ ನಟ

  ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು  ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು (Yash Birthday) ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ (G

non

aga) ಬಂದಿದ್ದಾರೆ.ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್​, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 


ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.ವಿದ್ಯುತ್ ಸ್ಪರ್ಶಿಸಿ ಮೂವರ ಸಾವು


ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್​ಡೇ ಬ್ಯಾನರ್​ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ


ಇತ್ತ ರಾಜ್ಯ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಲಾಗಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

Posted by Vidyamaana on 2024-01-06 07:29:29 |

Share: | | | | |


ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

 ಮಡಿಕೇರಿ: ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ಪರಿಸ್ಥಿತಿಯಲ್ಲಿ ಕೊಡಗಿನ ಮಸೀದಿಯೊಂದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ.ತಿತಿಮತಿಯಲ್ಲಿರುವ ಜಾಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು ಬೆಳಗಾವಿಯಿಂದ ಕೊಡಗು ಮಾರ್ಗವಾಗಿ ಬೈಕ್ನಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಭಕ್ತರು ಗುರುವಾರ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಬೆಳಕು ಕಡಿಮೆಯಾದ ಕಾರಣ ಪ್ರಯಾಣ ಮುಂದುವರಿಸಲು ಸಾಧ್ಯವಾಗದೆ ತಿತಿಮತಿಯಲ್ಲಿ ಸ್ಥಗಿತಗೊಳಿಸಿದ್ದಾರೆ.


ಕಮಲೇಶ್ ಗೌರಿ, ಭೀಮಪ್ಪ ಸನದಿ, ಶಿವಾನಂದ್ ಎನ್, ಗಂಗಾಧರ್ ಬಿ ಮತ್ತು ಎಸ್ ಸಿದ್ದರೋಡ್ ಜಮ್ಮಾ ಮಸೀದಿ ಬಳಿ ಹೋಗಿ ನೆರವು ಕೇಳಿದ್ದರೂ ಮುಂದೆ ಹೇಗೆ ಹೋಗಬೇಕು ಎಂಬುದು ಗೊತ್ತಾಗಿಲ್ಲ. ನಂತರ ಮಸೀದಿ ಆಡಳಿತ ಮಂಡಳಿಯವರು ಶಬರಿಮಲೆ ಭಕ್ತರ ನೆರವಿಗೆ ಬಂದಿದ್ದು, ರಾತ್ರಿ ಮಸೀದಿಯಲ್ಲಿ ತಂಗಲು ಅನುಮತಿ ನೀಡಿದ್ದಾರೆ. ಅಲ್ಲದೇ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಮಸೀದಿ ಅಧ್ಯಕ್ಷ ಉಸ್ಮಾನ್ ಹಾಗೂ ಕೆ.ಕತೀಬ್ ಒದಗಿಸಿದ್ದಾರೆ.ಶುಕ್ರವಾರ ಬೆಳಗ್ಗೆ 6 ಗಂಟೆಗೆ ಐವರು ಭಕ್ತರು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಮಸೀದಿ ಸೌಹಾರ್ದತೆಯ ಸಂಕೇತವಾಗಿದೆ. ಜಾತಿ, ಧರ್ಮದ ಭೇದವಿಲ್ಲದೆ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಉಸ್ಮಾನ್ ಹೇಳಿದರು.

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

Posted by Vidyamaana on 2023-04-17 05:59:48 |

Share: | | | | |


ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ದರ್ಬೆ ಜಂಕ್ಷನ್ ನಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಪುತ್ತಿಲ ರವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

Posted by Vidyamaana on 2023-08-11 12:56:45 |

Share: | | | | |


ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

ಬೆಳ್ತಂಗಡಿ: ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದರು. ಆದರೆ ಇದೀಗ ನಾನು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.


ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗಳ ಪತ್ತೆ ಹಚ್ಚಲು ಸಾಧ್ಯ ಸಂದರ್ಭ ಬಂದಾಗ ಸೌಜನ್ಯ ವಿಚಾರದಲ್ಲಿ ಹೇಳಬೇಕಾದ ವಿಚಾರವನ್ನು ಹೇಳುತ್ತೇನೆ.


ಆದರೆ ಸತ್ಯ ಹೇಳಿದರೆ ನನ್ನನ್ನು ಕೊಲ್ಲುತ್ತಾರೆ ಎಂದು ನಾನು ಹೇಳೆ ಇಲ್ಲ ಎಂದರು. ಜೀವಂತವಾಗಿ ಯಾರಿಗೂ ನನ್ನನ್ನು ಕೊಲ್ಲಲು ಸಾಧ್ಯವಿಲ್ಲ ಜಿಲ್ಲೆಯಲ್ಲಿ ತಾಲೂಕಿನಲ್ಲಿ ಎಷ್ಟೇ ದೊಡ್ಡವರಿಗೂ ಒಬ್ಬನನ್ನು ಕೊಲ್ಲಲು ಸಾಧ್ಯವಿಲ್ಲ. ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ದೇವರು ನನ್ನನ್ನು ರಕ್ಷಣೆ ಮಾಡುತ್ತಾರೆ ಎಂದಿದ್ದೆ, ಆದರೆ ನನ್ನ ಮಾತನ್ನು ಮಾಧ್ಯಮಗಳ ತಿರುಚಿವೆ ಎಂದಿದ್ದಾರೆ.



Leave a Comment: