ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಸುದ್ದಿಗಳು News

Posted by vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಅ 07

Posted by Vidyamaana on 2023-10-07 07:37:25 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಅ 07

ಪುತ್ತೂರು : ಶಾಸಕ ಅಶೋಕ್ ಕುಮಾರ್ ಅವರು ಅಕ್ಟೋಬರ್ 07 ರಂದು

ಬೆಳಿಗ್ಗೆ 10 ಗಂಟೆಗೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಕಚೇರಿ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ 

10.30 ಕ್ಕೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಸಭೆ

11 ಗಂಟೆಗೆ ನಗರ ಸಭೆಯಲ್ಲಿ ಅಧಿಕಾರಿಗಳ ಸಭೆ

 12 ಗಂಟೆಗೆ ಬೆಟ್ಟಂಪಾಡಿಯಲ್ಲಿ ವಲಯ ಮಟ್ಟದ ಕ್ರೀಡಾ ಕೂಟ

ಮಧ್ಯಾಹ್ನ‌ 3 ಗಂಟೆಗೆ ರೈ ಚಾರಿಟೇಬಲ್ ಟ್ರಸ್ಟ್ ಸಭೆ

ಸಂಜೆ 4 ಗಂಟೆಗೆ ವಿಟ್ಲ‌ಮಾದರಿ ಶಾಲೆಯಲ್ಲಿ ಕಬಡ್ಡಿ ಪಂದ್ಯಾಟ

ಸಂಜೆ 7 ಗಂಟೆಗೆ ಉಪ್ಪಿನಂಗಡಿ ರಾಮನಗರದಲ್ಲಿ ಈದ್ ಮಿಲಾದ್ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ

ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

Posted by Vidyamaana on 2024-04-11 07:34:41 |

Share: | | | | |


ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.

ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.

ಗುಪ್ತ್ ಗುಪ್ತಾಗಿ ಮದುವೆಯಾದ್ರಾ ಪ್ರಶಾಂತ್ ಮತ್ತು ಆಯೇಷಾ

Posted by Vidyamaana on 2023-12-08 10:30:16 |

Share: | | | | |


ಗುಪ್ತ್ ಗುಪ್ತಾಗಿ ಮದುವೆಯಾದ್ರಾ ಪ್ರಶಾಂತ್ ಮತ್ತು ಆಯೇಷಾ

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ.



ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು.


ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.


ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟೂಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯದವರಾಗಿದ್ದು , ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

Posted by Vidyamaana on 2023-10-27 10:46:59 |

Share: | | | | |


ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು.

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

*ಘಟನೆಗೆ ಕಾರಣವೇನು?*


ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.

ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು,ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರೀತಿಸುವಂತೆ ವಿವಾಹಿತೆಗೆ ಜೈಲಿನಿಂದಲೇ ಪಾಗಲ್‌ ಪ್ರೇಮಿ ಬ್ಲ್ಯಾಕ್‌ಮೇಲ್‌

Posted by Vidyamaana on 2023-09-11 19:33:40 |

Share: | | | | |


ಪ್ರೀತಿಸುವಂತೆ ವಿವಾಹಿತೆಗೆ ಜೈಲಿನಿಂದಲೇ ಪಾಗಲ್‌ ಪ್ರೇಮಿ ಬ್ಲ್ಯಾಕ್‌ಮೇಲ್‌

ಬೆಂಗಳೂರು: ಜೈಲಿನಿಂದಲೇ ಫೋನ್‌ ಮಾಡಿ ವಿವಾಹಿತೆಗೆ ಪ್ರೀತಿಸುವಂತೆ (Love Case) ಪ್ರೇಮಿಯೊಬ್ಬ ಕೊಲೆ ಬೆದರಿಕೆ (Blackmailing) ಹಾಕಿರುವ ಘಟನೆ ವರದಿ ಆಗಿದೆ. ಅಕ್ರಮಗಳ ಅಡ್ಡೆಯಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ಸಲೀಸಾಗಿ ಮೊಬೈಲ್ ಸಿಗುತ್ತಿದೆ.ಶ್ರೀನಿವಾಸ ಎಂಬಾತ ಜೈಲು ಸೇರಿದ್ದರೂ, ಅಲ್ಲಿಂದಲೇ ಅಮಲಾ ಎಂಬಾಕೆಗೆ ಕೊಲೆ ಬೆದರಿಕೆ (Blackmail Case) ಹಾಕುತ್ತಿದ್ದಾನೆ.


ಜೈಲಿಗೆ ಕಳಿಸಿದ್ದೀಯಾ ಈಗ ನನ್ನ ನೋಡಲು ಜೈಲಿಗೆ ಬಾ, ಬರದಿದ್ದರೆ ಹೊರಗೆ ಬಂದು ಹತ್ಯೆ ಮಾಡುವುದಾಗಿ ಅಮಲಾಗೆ ಧಮ್ಕಿ ಹಾಕಿದ್ದಾನೆ. ಜೈಲಿನಲ್ಲಿ ತನ್ನೊಟ್ಟಿಗೆ ಇರುವಂತೆ ಹೇಳುತ್ತಿದ್ದಾನೆ ಎಂದು ಸಂತ್ರಸ್ಥೆ ಆರೋಪಿ ಶ್ರೀನಿವಾಸ ವಿರುದ್ಧ ಮತ್ತೊಮ್ಮೆ ದೂರು ನೀಡಿದ್ದಾರೆ.ಬ್ಯಾಟರಾಯನಪುರ ನಿವಾಸಿಯಾದ ಅಮಲಾ ಮದುವೆಯಾಗಿ ಪತಿಯಿಂದ ದೂರವಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಈ ಶ್ರೀನಿವಾಸ ಅಮಲಾಳನ್ನು ಮೋಹಿಸಿದ್ದ. ಆಕೆ ಹಿಂದೆ ಬಿದ್ದು ಪ್ರೀತಿಸು ಇಲ್ಲದಿದ್ದರೆ ಆಯಸಿಡ್ ಹಾಕುವೆ, ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ಆವಾಜ್ ಹಾಕುತ್ತಿದ್ದ.


ಆತನ ಹುಚ್ಚುತನಕ್ಕೆ ಮನಸೋತು ಅಮಲಾ ಶ್ರೀನಿವಾಸ್ ಪ್ರೀತಿಗೆ ಸಮ್ಮತಿಸಿದ್ದರು. ಕೆಲಕಾಲ ಇಬ್ಬರು ಪ್ರೀತಿಯ ಗುಂಗಲ್ಲಿ ತೇಲಾಡಿದ್ದರು. ಈ ನಡುವೆ ಅಮಲಾ ಮದುವೆ ವಿಚಾರ ಪ್ರಸ್ತಾಪ ಮಾಡಿದಾಗ ಶ್ರೀನಿವಾಸ ಉಲ್ಟಾ ಹೊಡೆಡಿದ್ದ. ನಿನ್ನನ್ನು ಮದುವೆ ಆಗಲ್ಲ, ಜತೆಯಲ್ಲೇ ಇರು ಸಾಕು ಎಂದಿದ್ದ. ಅಲ್ಲದೇ ಇದೇ ವಿಚಾರಕ್ಕೆ ಶ್ರೀನಿವಾಸ ಮತ್ತು ಆತನ ತಾಯಿ ಸೇರಿ ಅಮಲಾ ಮೇಲೆ ಹಲ್ಲೆ ನಡೆಸಿದ್ದರು.ಹೀಗಾಗಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಮಲಾ ಈ ಸಂಬಂಧ ದೂರು ದಾಖಲಿಸಿದ್ದರು. ಆರೋಪಿ ಶ್ರೀನಿವಾಸನನ್ನು ಬಂಧಿಸಿ ಜೈಲಿಗಟ್ಟಿದ್ದರು. ಜೈಲು ಸೇರಿದರೂ ಬುದ್ಧಿ ಕಲಿಯದ ಶ್ರೀನಿವಾಸ, ಅಲ್ಲಿಂದಲೇ ಅಮಲಾಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ಹೀಗಾಗಿ ಸಂತ್ರಸ್ಥೆ ಮಹಿಳೆ ಶ್ರೀನಿವಾಸ್‌ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

Recent News


Leave a Comment: