ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


30 ಸಾವಿರ ಲೀಟರ್ ತೈಲ ರಸ್ತೆಗೆ ಚೆಲ್ಲಿದರೂ ಯಾವುದೇ ಅನಾಹುತ ಸಂಭವಿಸಿಲ್ಲ

Posted by Vidyamaana on 2023-10-20 11:41:36 |

Share: | | | | |


30 ಸಾವಿರ ಲೀಟರ್ ತೈಲ ರಸ್ತೆಗೆ ಚೆಲ್ಲಿದರೂ ಯಾವುದೇ ಅನಾಹುತ ಸಂಭವಿಸಿಲ್ಲ

ಪುತ್ತೂರು: ರಸ್ತೆಗೆ ಬಿದ್ದ ತುಣುಕು ಇಂಧನ ದೊಡ್ಡ ಅವಘಡಕ್ಕೆ ಕಾರಣವಾದ ನಿದರ್ಶನ ನಮ್ಮ ಮುಂದಿದೆ. ಅಂತಹದ್ದರಲ್ಲಿ ಟ್ಯಾಂಕರ್ ನಲ್ಲಿದ್ದ 30 ಸಾವಿರ ಲೀಟರ್ ನಷ್ಟು ಆಯಿಲ್ ರಸ್ತೆಗೆ ಚೆಲ್ಲಿದ್ದರೂ ಗುರುವಾರ ಯಾವುದೇ ವಾಹನ ಅಪಘಾತಕ್ಕೆ ಈಡಾಗಿಲ್ಲ, ಯಾರೊಬ್ಬರಿಗೂ ತೊಂದರೆಯಾಗಿಲ್ಲ.

ಆ ಒಂದು ಟ್ಯಾಂಕರ್ ಅಪಘಾತ – ಆ ಬಳಿಕ ನಡೆಯಿತೊಂದು ಬೃಹತ್ ರಸ್ತೆ ಶುದ್ಧತಾ ಕಾರ್ಯದ ವಿಡಿಯೋ ನೋಡಿ


ಹೌದಲ್ಲ, ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ನಿಮ್ಮ ಮನದಲ್ಲಿ ಈಗ ಮೂಡಿರಬಹುದು. ಈ ಎಲ್ಲಾ ತೆರೆಮರೆಯ ಕೆಲಸದ ಹಿಂದೆ ಕಾಣದ ಕೈಗಳಿತ್ತು, ಅಪಾರ ಪರಿಶ್ರಮವಿತ್ತು, ಜಾಣ್ಮೆಯ ಕಾರ್ಯವಿತ್ತು.

ಆ ಕಾಣದ ಕೈಗಳು ಯಾರೆಂಬ ಕುತೂಹಲವೇ!! ಅದು ಪೊಲೀಸ್ ಇಲಾಖೆ, ಅಗ್ನಿಶಾಮಕ, ಮೆಸ್ಕಾಂ ಹಾಗೂ  ಸ್ಥಳೀಯರು.

ರಸ್ತೆಗೆ ಬಿದ್ದಿದ್ದ ಆಯಿಲನ್ನು ಉಜ್ಜಿ ತೆಗೆದು, ಯಾರೊಬ್ಬರಿಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಯಿತು. ಹೀಗೆ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾನೆ 4 ಗಂಟೆಯವರೆಗೆ ಶ್ರಮ ವಹಿಸಿ ದುಡಿದರು.


ಮೊದಲಿಗೆ ವಾಹನ ಸಂಚಾರವನ್ನು ಬದಲಿ ಮಾರ್ಗಕ್ಕೆ ಸ್ಥಳಾಂತರ ಮಾಡಲಾಯಿತು. ನಂತರ ರಸ್ತೆಗೆ ಚೆಲ್ಲಿದ್ದ ಆಯಿಲ್ ಮೇಲೆ ಮಣ್ಣನ್ನು ಹಾಕಲಾಯಿತು. ಬಳಿಕ ಅಗ್ನಿಶಾಮಕ ತಂಡ ಮಣ್ಣು ಸಹಿತ ಆಯಿಲನ್ನು ನೀರಿನ ಫ್ರೆಷರ್ ಹರಿಸುವ ಮೂಲಕ ಉಜ್ಜಿ ತೆಗೆದರು. ಆ ಶ್ರಮವನ್ನು ಊಹಿಸುವುದು ಕಷ್ಟವೇ ಸರಿ.

ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ಸ್ವತಃ ಸ್ಥಳದಲ್ಲಿದ್ದು ಮಾರ್ಗದರ್ಶನ ನೀಡಿದರು. ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಟ್ರಾಫಿಕ್ ಎಸ್ಸೈ ಉದಯ ರವಿ, ಎಎಸ್ಸೈ ಚಕ್ರಪಾಣಿ, ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್, ನವೀನ್, ಲಕ್ಷ್ಮಣ್, ಸಲೀಂ, ಲೊಕೇಶ್, ಶ್ರೀಶೈಲ, ಹರೀಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಶಂಕರ್, ಅಗ್ನಿಶಾಮಕ ಚಾಲಕ ರಾಜೇಶ್, ಅಗ್ನಿಶಾಮಕರಾದ ಪ್ರಸಾದ್, ಸಿದ್ಧರೂಢ, ಮೆಸ್ಕಾಂ ಸಿಬ್ಬಂದಿಗಳಾದ ವಿಶ್ವನಾಥ್, ನೆಬಿಸಾಬ್ ನದಾಫ್, ಸ್ಥಳೀಯರಾದ ಹಾರೀಶ್ ಬಪ್ಪಳಿಗೆ, ಶಯನ್ ಟ್ರಾನ್ಸ್ಪೋರ್ಟ್ ಮಾಲಕ ತೌಸೀಫ್ ಶೇಕ್ ಪಡೀಲ್  ಹಾಗೂ ಇತರರು ಶ್ರಮಿಸಿ ಅಪಘಾತದ ಕುರುಹೂ ಇಲ್ಲದಂತಾಗಿಸಿದ್ದರು‌.

ಘಟನೆ:

ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿತ್ತು. ಟ್ಯಾಂಕ‌ರ್ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರು. ಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು, ಸಂಪರ್ಕ ಕಡಿತಗೊಂಡಿತ್ತು. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ರ್ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿತ್ತು.

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

Posted by Vidyamaana on 2023-09-17 14:49:48 |

Share: | | | | |


ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

ಬೆಂಗಳೂರು (ಸೆ.17): ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್‌ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಗೆ ಗುಡ್‌ ನ್ಯೂಸ್‌ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ


ಪೊಲೀಸ್‌ ಆಯುಕ್ತರು, ಬೆಂಗಳೂರು ನಗರ ಇವರು ಕರ್ನಾಟಕ ಕಳ್ಳ ಭಟ್ಟಿ ವ್ಯಾಪಾರಿಗಳ, ಮಾದಕ ವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ವಿಡಿಯೋ ಅಥವಾ ಆಡಿಯೋ ಪೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ, 1985ರಡಿಯಲ್ಲಿ ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ (32 ವರ್ಷ) ವಿರುದ್ಧ ಆ.11ರಂದು ಹೊರಡಿಸಿರುವ ಬಂಧನ ಆದೇಶವನ್ನು ಆ.17ರಂದು ಅನುಮೋದಿಸಲಾಗಿತ್ತು. ಆದರೆ, ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಸೆ.13ರ ವರದಿಯಲ್ಲಿ ಅಭಿಪ್ರಾಯಪಟ್ಟಿರುತ್ತದೆ.ಆದ್ದರಿಂದ ಕರ್ನಾಟಕ ಸರ್ಕಾರವು ಸದರಿ ಅಧಿನಿಯಮದ 12ನೇ ಪುಕರಣದ 2ನೇ ಉಪ ಪುಕರಣದಡಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು, ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ ವಿರುದ್ಧ ಹೊರಡಿಸಿರುವ ಬಂಧನ ಆದೇಶವನ್ನು ಹಿಂಪಡೆದು, ಈ ಪುಕರಣಕ್ಕೆ ಅನ್ವಯವಾಗುವಂತೆ ಮಾತ್ರ ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಿ ಆದೇಶಿಸಿದೆ.


ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದ್ದ ಹೈಕೋರ್ಟ್‌: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್‌ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌ನಿಂದ ಆ.24ರಂದು ನೋಟಿಸ್‌ ಜಾರಿ ಮಾಡಿತ್ತು. ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದುಆರೋಪಿಸಿ ಪುನೀತ್‌ ಕೆರೆಹಳ್ಳಿ (Puneeth kerehalli) ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿ (Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತ್ತು.

ಸಮಾಜ ಸೇವಕ ಪುನೀತ್‌ ಕೆರೆಹಳ್ಳಿ ಎಂದು ವಾದ ಮಂಡನೆ:

ಇನ್ನು ಈ ಅರ್ಜಿಯ ಕುರಿತು ವಿಚಾರಣೆ ವೇಳೆ ಪುನೀತ್‌ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌ (Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

Posted by Vidyamaana on 2024-04-06 09:46:16 |

Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

ಪುತ್ತೂರು:ಯುವತಿಯೋರ್ವರನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿರುವ ಆರೋಪದ ಘಟನೆ ಕುರಿಯ ಮಲಾ‌ರ್ ಎಂಬಲ್ಲಿಂದ ವರದಿಯಾಗಿದೆ.

ಘಟನೆ ಕುರಿತು ಅಶ್ವಿತ್ ಕುಮಾರ್(24 ವ.)ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ತಾನು ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಕಟ್ಟಿಸಿದ ಹೊಸ ಮನೆಗೆ ಏ.3ರಂದು ಸಂಜೆ ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್ ಮುಕ್ವೆ ಎಂಬಾತ ಕರೆ ಮಾಡಿ.ನಿನ್ನಲ್ಲಿ ಮಾತನಾಡುವುದು ಇದೆ ಎಂದು ತಿಳಿಸಿದಾಗ, ತಾನು ಮಲಾರ್‌ನಲ್ಲಿದ್ದು, ದರ್ಬೆಗೆ ಬರುವುದಾಗಿ ತಿಳಿಸಿ, ಮಲಾರ್‌ನಿಂದ ತನ್ನ ಬೈಕ್‌ನಲ್ಲಿ ಹೊರಟು ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ

ಪತಿಯೂ ಬೇಕು ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

Posted by Vidyamaana on 2024-04-04 21:52:51 |

Share: | | | | |


ಪತಿಯೂ ಬೇಕು  ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

ಲಕ್ನೋ: 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ.ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು.ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು.


ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದ್ದು, ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದಳು

ಸಿದ್ದು ವಾಯ್ಸ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ

Posted by Vidyamaana on 2023-12-20 08:02:16 |

Share: | | | | |


ಸಿದ್ದು ವಾಯ್ಸ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ವಾಯ್ಸ ರಿಮೇಕ್‌ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಶರತ್‌ ಗೌಡ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನನ್ವಯ ನರಸಿಂಹರಾಜಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಿಎಸ್‌ವೈ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದ್ದಾರೆಂದು ವಾಯ್ಸ ರಿಮೇಕ್‌ ಮಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಣವನ್ನು ಎಲ್ಲಿಂದ ತರಲಿ, ಚುನಾವಣೆಗೋಸ್ಕರ ಹೇಳಿರ್ತಿವಿ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾ ಎಂದು ಆಡಿಯೋದಲ್ಲಿದೆ.

SDPI ಪುತ್ತೂರು ಅಭ್ಯರ್ಥಿ ಚಿಹ್ನೆ ಆಟೋ ರಿಕ್ಷಾ

Posted by Vidyamaana on 2023-04-24 12:20:21 |

Share: | | | | |


SDPI ಪುತ್ತೂರು ಅಭ್ಯರ್ಥಿ ಚಿಹ್ನೆ ಆಟೋ ರಿಕ್ಷಾ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಚಿಹ್ನೆ‌ ಪ್ರಕಟವಾಗಿದೆ.

ಆಟೋ ರಿಕ್ಷಾ ಚಿಹ್ನೆಯನ್ನು ಪಕ್ಷದ ಆಭ್ಯರ್ಥಿ ಶಾಫಿ ಬೆಳ್ಳಾರೆ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.



Leave a Comment: