ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

Posted by Vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

Posted by Vidyamaana on 2024-05-25 20:01:21 |

Share: | | | | |


ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ಬೆಂಗಳೂರು : ವಿಧಾನಪರಿಷತ್‌ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೇ?: ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.

ನಕಲಿ ಟ್ರಾಫಿಕ್ ಪೊಲೀಸರು; ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ

Posted by Vidyamaana on 2024-05-24 05:59:45 |

Share: | | | | |


ನಕಲಿ ಟ್ರಾಫಿಕ್ ಪೊಲೀಸರು; ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ

ಬೆಂಗಳೂರು : ಸಾಮಾನ್ಯವಾಗಿ ಕಳ್ಳರು ಮನೆಗಳಲ್ಲಿ, ಬ್ಯಾಂಕ್ ಗಳನ್ನು ದರೋಡೆ ಮಾಡುವುದನ್ನು ನೋಡಿರುತ್ತೇವೆ. ಆದರೆ ಬೆಂಗಳೂರಲ್ಲಿ ಖದೀಮರು ಟ್ರಾಫಿಕ್ ಪೋಲೀಸರ ಹೆಸರಲ್ಲಿ ವಾಟ್ಸಪ್ ಮೂಲಕ ದಂಡ ವಸೂಲಿ ಮಾಡಿದ್ದಾರೆ. ಇದೀಗ ಖದೀಮರ ಕೈಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹೌದು ಮೃತ ಹೆಡ್​ ಕಾನ್ಸ್​ಟೇಬಲ್​ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರು ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಈ ಹಿನ್ನಲೆ ಮೂವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ ಹಾಗೂ ಸುಭಿರ್ ಮಲ್ಲಿಕ್ ಬಂಧಿತರು ಎಂದು ತಿಳಿದುಬಂದಿದೆ.

ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಆರೋಪ ತನಿಖೆ ಚುರುಕು

Posted by Vidyamaana on 2024-02-28 19:43:09 |

Share: | | | | |


ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಆರೋಪ ತನಿಖೆ ಚುರುಕು

ಬೆಂಗಳೂರು : ರಾಜ್ಯಸಭೆ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.


ಮಂಗಳವಾರ ತಡರಾತ್ರಿವರೆಗೂ ಠಾಣೆಯಲ್ಲೇ ಉಳಿದುಕೊಂಡಿದ್ದ ಅವರು ಪೊಲೀಸ್ ಸಿಬ್ಬಂದಿಯ ಜೊತೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದ ಮುಂದಿನ ಆಯಾಮ ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದ್ದರು.


ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವೀಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ. ಸದ್ಯ ವಿಧಾನಸೌಧ ಪೊಲೀಸರು ಘೋಷಣೆ ಕೂಗಿದಾತನ ಶೋಧ ನಡೆಸುತ್ತಿದ್ದಾರೆ.


ಘೋಷಣೆ ಕೂಗಿದ ಸಂದರ್ಭದಲ್ಲಿ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು (ಬುಧವಾರ) ವಿಚಾರಣೆ ನಡೆಸುವ ಸಾಧ್ಯತೆ ಇದೆ.


ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾಹಿತಿ ನೀಡಲು ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಮುಂದಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಗೃಹ ಸಚಿವರ ನಿವಾಸಕ್ಕೆ ತೆರಳಿದ್ದಾರೆ. ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ತೆರಳಿರುವ ಹಿತೇಂದ್ರ, ಮಂಗಳವಾರದ ಘಟನೆ, ಪ್ರಕರಣದ ಬೆಳವಣಿಗೆ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ.


ಪೊಲೀಸರಿಂದ ವೀಡಿಯೋ ಸಂಗ್ರಹ


ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿನ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ವಾಸ್ತವಾಂಶ ತಿಳಿಯುವುದಕ್ಕಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ತಯಾರಿ ಮಾಡಲಾಗುತ್ತಿದೆ.

ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ರಾತ್ರಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮತ್ತೊಂದೆಡೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿರ್ ಹುಸೇನ್ ಸ್ಪಷ್ಟನೆ ನೀಡಿದ್ದಾರೆ. ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನನಗೆ ಕೇಳಿಸಿಲ್ಲ. ಒಂದು ವೇಳೆ ಯಾರಾದರೂ ಆ ರೀತಿ ಘೋಷಣೆ ಕೂಗಿದ್ದರೆ ಅಂಥವರ ವಿರುದ್ಧ ಕ್ರಮಕೈಗೊಳ್ಳಲಿ ಎಂದು ಹೇಳಿದ್ದಾರೆ.

ಜೂನ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯ ಸಹಿತ ಭಾರೀ ಮಳೆಯ ಮುನ್ನೆಚ್ಚರಿಕೆ

Posted by Vidyamaana on 2024-06-08 06:54:08 |

Share: | | | | |


ಜೂನ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯ ಸಹಿತ ಭಾರೀ ಮಳೆಯ ಮುನ್ನೆಚ್ಚರಿಕೆ

ಮಂಗಳೂರು, ಜೂನ್ 8: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಕೊನೆಗೂ ಪುತ್ತೂರಿಗೆ ವರುಣಾಗಮನ ; ಖುಷಿ ತಂದ ಮೊದಲ ಮಳೆಯ ಸಿಂಚನ

Posted by Vidyamaana on 2023-05-05 07:52:47 |

Share: | | | | |


ಕೊನೆಗೂ ಪುತ್ತೂರಿಗೆ ವರುಣಾಗಮನ ; ಖುಷಿ ತಂದ ಮೊದಲ ಮಳೆಯ ಸಿಂಚನ

ಪುತ್ತೂರು: ಬಿರುಬಿಸಿಲಿನಿಂದ ಕಂಗಾಲಾಗಿದ್ದ ಪುತ್ತೂರಿನ ಜನತೆಗೆ ಇಂದು ಮಳೆಯ ಆಗಮನ ಸಂತೋಷವನ್ನು ನೀಡಿದೆ. ಪುತ್ತೂರು ಜಾತ್ರೆಗೆ ನಾಲ್ಕು ಹನಿ ಮಳೆಯಾದರೂ ಸುರಿಯುತ್ತದೆ ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗಿತ್ತು. ಮಾತ್ರವಲ್ಲದೇ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದರೂ ಪುತ್ತೂರು ಭಾಗದಲ್ಲಿ ಮಳೆ ಇಲ್ಲದೆ ಜನ ಪರಿತಪಿಸುವಂತಾಗಿತ್ತು.



Leave a Comment: