ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಚಾರ್ಮಾಡಿ ಘಾಟ್ ಇಳಿಯುತ್ತಿದ್ದ ಬಸ್ಸಿನ ಬ್ರೇಕ್ ಫೇಲ್ – ಸಮಯ ಪ್ರಜ್ಞೆ ಮೆರೆದ ಚಾಲಕ ಸಂತೋಷ್ ಮಾಡಿದ್ದೇನು?

Posted by Vidyamaana on 2024-03-09 08:55:21 |

Share: | | | | |


ಚಾರ್ಮಾಡಿ ಘಾಟ್ ಇಳಿಯುತ್ತಿದ್ದ ಬಸ್ಸಿನ ಬ್ರೇಕ್ ಫೇಲ್ – ಸಮಯ ಪ್ರಜ್ಞೆ ಮೆರೆದ ಚಾಲಕ ಸಂತೋಷ್ ಮಾಡಿದ್ದೇನು?


ಮೂಡಿಗೆರೆ: ಸದಾ ಅಪಘಾತಗಳು ಸಂಭವಿಸುತ್ತಿರುವ ಚಾರ್ಮಾಡಿ ಘಾಟ್‌ನಲ್ಲಿ ಶುಕ್ರವಾರ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಚಾರ್ಮಾಡಿ ಘಾಟ್‌ನಲ್ಲಿ ಬ್ರೇಕ್‌ ಫೇಲ್ ಆಗಿತ್ತು.


ಕಡಿದಾದ ರಸ್ತೆ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿದ್ದ ಬಸ್‌ ನಿಯಂತ್ರಿಸೋದು ಕಷ್ಟವಾಗಿತ್ತು. ಆದ್ರೆ, ಬ್ರೇಕ್‌ ಫೇಲ್ ಆಗಿರೋದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಬಸ್ ನಿಲ್ಲಿಸಲು ಕೇವಲ ಯಾವುದಾದರು ತಡೆಗೋಡೆಗೆ ಗುದ್ದುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.


ಹೀಗಾಗಿ ಬಸ್ ಬ್ರೇಕ್‌ ಫೇಲ್ ಆಗಿರುವ ವಿಚಾರವನ್ನು ಪ್ರಯಾಣಿಕರ ಗಮನಕ್ಕೆ ತಂದು ಯಾರೂ ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದ್ದಾರೆ. ಎಲ್ಲರಿಗೂ ಗಟ್ಟಿಯಾಗಿ ಕುಳಿತುಕೊಳ್ಳುವಂತೆ ಸೂಚನೆ ನೀಡಿ ರಸ್ತೆಯಲ್ಲಿ ಸಿಗುವ ಯಾವುದಾದರೂ ಕಿರು ಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆಯುವುದಾಗಿ ಹೇಳಿದ್ದಾರೆ.


ಚಾರ್ಮಾಡಿ ಘಾಟ್‌ನ 6 ನೇ ತಿರುವು ಬಳಿ ಸ್ವಲ್ಪ ನೇರವಾಗಿರುವ ರಸ್ತೆಯಲ್ಲಿ ಇದ್ದ ಕಿರು ಸೇತುವೆಗೆ ಬಸ್ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಚಾರ್ಮಾಡಿ ಘಾಟ್‌ನಂತಹ ರಸ್ತೆಯಲ್ಲಿ ಬ್ರೇಕ್‌ ಫೇಲ್‌ ಆದ್ರೆ, ಕೈಕಾಲು ಬಿಡುವ ಚಾಲಕರ ನಡುವೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಂತೋಷ್‌ ಅವರ ಸಮಯ ಪ್ರಜ್ಞೆ ನಿಜಕ್ಕೂ ಮೆಚ್ಚತಕ್ಕದು.


ಪ್ರಯಾಣಿಕರೂ ಕೂಡಾ ಚಾಲಕ ಸಂತೋಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಸಮಯ ಪ್ರಜ್ಞೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

Posted by Vidyamaana on 2024-03-21 20:40:14 |

Share: | | | | |


ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಉಪ್ಪಿನಂಗಡಿ :ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ.

ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ.

ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ ಎಂದು ತಿಳಿದು ಬಂದಿದೆ. ಗುರುತು ಸಿಗದಂತೆ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ ಈತನ ಚಲನವಲನಗಳು ಸಂಘದ ಸಿಸಿ ಕೆಮರಾದಲ್ಲಿ ಪತ್ತೆಯಾಗಿವೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

Posted by Vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರಿನ ಬಹುತೇಕ ಏರಿಯಾಗಳಲ್ಲಿ ಪವರ್ ಕಟ್ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ

Posted by Vidyamaana on 2023-08-19 02:43:09 |

Share: | | | | |


ಪುತ್ತೂರಿನ ಬಹುತೇಕ ಏರಿಯಾಗಳಲ್ಲಿ ಪವರ್ ಕಟ್ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ

ಪುತ್ತೂರು: ಶಾಂತಿಗೋಡು, ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ, ರಾಮಕುಂಜ, ಕೆದಿಲ, ಕಬಕ ಮತ್ತು ವಾಟರ್ ಸಪ್ಲೈ ಪೀಡರ್‌ನಲ್ಲಿ ಆ. 19ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಲ್ಲಿ ಯುಜಿ ಕೇಬಲ್ ಕಾಮಗಾರಿ ಹಾಗೂ ವಿದ್ಯುತ್‌ ಮಾರ್ಗ ನಿರ್ವಹಣೆ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಶಾಂತಿಗೋಡು, ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ, ರಾಮಕುಂಜ, ಕೆದಿಲ, ಕಬಕ ಮತ್ತು ವಾಟರ್ ಸಪ್ಲೈ ಪೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.


ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು, ಕೊಯಿಲ, ರಾಮಕುಂಜ, ನೆಕ್ಕಿಲಾಡಿ, ಶಾಂತಿಗೋಡು, ಬಲ್ನಾಡು, ಬನ್ನೂರು, ಕಬಕ, ಪಡ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ನರಿಮೊಗರು, ಕೊಡಿಪ್ಪಾಡಿ ಮತ್ತು ಕಸಬಾ ಗ್ರಾಮಗಳ ವಿದ್ಯುತ್‌ ಬಳಕೆದಾರರು ಗಮನಿಸುವಂತೆ ಪ್ರಕಟಣೆ ತಿಳಿಸಿದೆ.

ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

Posted by Vidyamaana on 2023-08-21 10:11:13 |

Share: | | | | |


ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

ಪುತ್ತೂರು: ಮುಕ್ವೆ ಜಮಾಅತ್ ಗೆ ಒಳಪಟ್ಟ ಬೆದ್ರಾಳ ನಿವಾಸಿ, ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಎಸ್. ಇಸ್ಮಾಯಿಲ್ ಹಾಜಿ ಯಾನೆ ಶಿಬರ ಮೋನುಚ್ಚ (84 ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಆ. 21ರಂದು ಬೆದ್ರಾಳದ ಸ್ವಗೃಹದಲ್ಲಿ ನಿಧನರಾದರು.

ಇವರು ಹಲವಾರು ವರ್ಷಗಳ ಕಾಲ ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು, ಸಮುದಾಯ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು  ಪತ್ನಿ, ಪುತ್ರ ಅಬ್ದುಲ್ ರಹಿಮಾನ್,

 ಪುತ್ರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


ಸ್ಯಾನಿಟರಿ ಪ್ಯಾಡ್‌ಗಳಲ್ಲಿ 5 ಕೋಟಿ ರೂ. ಮೌಲ್ಯದ ಕೊಕೇನ್‌ ಪತ್ತೆ ದಂಗಾದ ಕಸ್ಟಮ ಅಧಿಕಾರಿಗಳು ಲಾಕ್ ಆದ ಮೂವರು ಆಫ್ರಿಕನ್ ಲೇಡೀಸ್

Posted by Vidyamaana on 2023-10-14 12:12:21 |

Share: | | | | |


ಸ್ಯಾನಿಟರಿ ಪ್ಯಾಡ್‌ಗಳಲ್ಲಿ 5 ಕೋಟಿ ರೂ. ಮೌಲ್ಯದ ಕೊಕೇನ್‌ ಪತ್ತೆ ದಂಗಾದ ಕಸ್ಟಮ ಅಧಿಕಾರಿಗಳು ಲಾಕ್ ಆದ ಮೂವರು ಆಫ್ರಿಕನ್ ಲೇಡೀಸ್

ಮುಂಬೈ, : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.68 ಕೋಟಿ ರೂ ಮೌಲ್ಯದ ಕೊಕೇನ್‌ ಸಹಿತ ಮೂವರು ಆಫ್ರಿಕನ್ ಮಹಿಳೆಯರನ್ನು ಬಂಧಿಸಲಾಗಿದೆ.


ಸ್ಯಾನಿಟರಿ ಪ್ಯಾಡ್‌ಗಳಲ್ಲಿ ನಿಷಿದ್ಧ ವಸ್ತುಗಳನ್ನು ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ತಿಳಿಸಿದೆ.


ಮೂವರು ವಿದೇಶಿ ಮಹಿಳಾ ಪ್ರಯಾಣಿಕರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಮರೆಮಾಚಿ ಡ್ರಗ್ಸ್ ತರುತ್ತಿದ್ದರು.


ನಿರ್ದಿಷ್ಟ ಗುಪ್ತಚರ ವರದಿಯ ಆಧಾರದ ಮೇಲೆ, DRI ಯ ಮುಂಬೈ ಘಟಕವು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.



Leave a Comment: