ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

Posted by Vidyamaana on 2024-03-11 07:24:23 |

Share: | | | | |


ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು ಪುತ್ತೂರು,ಉಪ್ಪಿನಂಗಡಿ ಮತ್ತು ಕಡಬದ ಐವರಿಗೆ ಅವಕಾಶ ನೀಡಲಾಗಿದೆ.ವಿಧಾನಪರಿಷತ್ ಶಾಸಕರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

ಹೊಸದಾಗಿ ಎಂಟು ಮಂದಿ ಸಕ್ರಿಯ ಕಾರ್ಯಕರ್ತರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ನಾಲ್ವರನ್ನು ಉಪಾಧ್ಯಕ್ಷರಾಗಿ ಮತ್ತು 8 ಮಂದಿಯನ್ನು  ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ. ಉಪ್ಪಳಿಗೆಯ ಕೃಷ್ಣಪ್ರಸಾದ್ ಆಳ್ವ, ಕಡಬದ ಸಿ.ಜೆ.ಸೈಮನ್, ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕಾರ್ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಅರ್ಷದ್ ದರ್ಬೆ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೃಷ್ಣಪ್ರಸಾದ್ ಆಳ್ವ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಅವರು ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಜಿಲ್ಲಾ  ಯುವ ಕಾಂಗ್ರೆಸ್‌ ಉಪಾಧ್ಯಕ್ಷ, ರಾಜ್ಯ ಇಂಟಕ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಹುದ್ದೆ ನಿರ್ವಹಿಸಿದ್ದು, ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತ ಘಟ ಕದ ರಾಜ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಪ್ಪಿನಂಗಡಿಯ ಆಶ್ರಫ್ ಬಸ್ತಿಕಾರ್ ಅವರು ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿ,  ಗಾಂಪಾ ಗೆಳೆಯರು ಸಂಘಟನೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ವಕ್ತಾರ ಹಾಗೂ ಉಪಾಧ್ಯಕ್ಷರಾಗಿರುತ್ತಾರೆ.ಕಡಬ  ನಿವಾಸಿಯಾಗಿರುವ ಸೈಮನ್ ಸಿ.ಜೆ.ಅವರು ವಿದ್ಯಾರ್ಥಿಯಾಗಿದ್ದಾಗ ಎನ್.ಎಸ್.ಯು.ಐ. # ಕಾರ್ಯದರ್ಶಿಯಾಗಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ  ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಜಿಲ್ಲಾ ಪ್ರಧಾನ  ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಈ ಅರ್ಷದ್ ದರ್ಬೆ ಅವರು ಈ ಹಿಂದೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.

ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

Posted by Vidyamaana on 2024-02-09 07:41:42 |

Share: | | | | |


ಪರಶುರಾಮ ಥೀಂ ಪಾರ್ಕ್ ಹಗರಣ ಸಿಐಡಿ ತನಿಖೆಗೆ ಸಿದ್ದರಾಮಯ್ಯ ಆದೇಶ; ಬಿಜೆಪಿ ಶಾಸಕನಿಗೆ ಎದುರಾಗುತ್ತಾ ಸಂಕಷ್ಟ?

ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.


ಆದೇಶದಲ್ಲೇನಿದೆ..!??


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ.2 ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಸುಚನಾ ಸೇಠ್ ಪ್ರಕರಣ: ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು

Posted by Vidyamaana on 2024-01-10 10:18:43 |

Share: | | | | |


ಸುಚನಾ ಸೇಠ್ ಪ್ರಕರಣ: ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು

ಚಿತ್ರದುರ್ಗ: ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು, ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ನಡೆಸಿದ್ದಾರೆ.ಬಳಿಕ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದು ಹೇಳಿದರು.

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

Posted by Vidyamaana on 2022-11-17 12:35:37 |

Share: | | | | |


ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷೆ ದೀಕ್ಷಾ ಪೈ ಮತ್ತು ಸದಸ್ಯ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ವರದಿ ವಾಚಿಸಿದರು. ಭೂಮಿಕ ಪ್ರಾರ್ಥಿಸಿದರು. ಉಪನ್ಯಾಸಕಿ ಚಿತ್ರಲೇಖಾ ಕೆ. ಸ್ವಾಗತಿಸಿದರು. ಅಶೋಕ ಪಿ. ವಂದಿಸಿದರು ಶೋಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ಕೆ, ಗ್ರೀಷ್ಮಾ, ಧನ್ಯಶ್ರೀ ಪಿ. ಮತ್ತು ದಾಮೋದರ ವಿಜೇತರ ಪಟ್ಟಿ ವಾಚಿಸಿದರು. ಭೋಜರಾಜ ಆಚಾರಿ ಕೆ.ರವರು ದತ್ತಿ ನಿಧಿ ನಗದು ಬಹುಮಾನ ಪಡೆದ ವಿದ್ಯಾರ್ಥಿನಿಯರ ಪಟ್ಟಿ ವಾಚಿಸಿದರು.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉಂಗುರ ಹಾಗೂ ಕಿವಿಯೋಲೆಗಳ ಮೇಳ

Posted by Vidyamaana on 2024-07-02 06:15:40 |

Share: | | | | |


ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉಂಗುರ ಹಾಗೂ ಕಿವಿಯೋಲೆಗಳ ಮೇಳ

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಜುಲೈ 1ರಿಂದ ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮೂಡಬಿದ್ರೆ, ಸುಳ್ಯ ಹಾಸನ, ಮತ್ತು ಕುಶಾಲನಗರ ಮಳಿಗೆಗಳಲ್ಲಿ ಆಯೋಜಿಸಿದೆ.

ಚಿನ್ನವನ್ನು ಧರಿಸುವುದು ಸೌಂದರ್ಯದ ಸಂಕೇತವಾಗಿದೆ. ಹೂಡಿಕೆಯ ದೃಷ್ಟಿಯಿಂದ ಕೂಡಾ ಲಾಭದಾಯಕ. ಗ್ರಾಹಕರಿಗೆ ವಿವಿಧ ವಿನ್ಯಾಸಗಳ ಉಂಗುರ ಹಾಗೂ ಕಿವಿಯೋಲೆಗಳ ಅಪೂರ್ವ ಸಂಗ್ರಹ ಲಭ್ಯವಿದೆ. ಅದೇ ರೀತಿ Yellow Tag ಆಭರಣಗಳನ್ನು ಆಯ್ಕೆಮಾಡಿ ಅತ್ಯಂತ ಕಡಿಮೆ ತಯಾರಿಕಾ ವೆಚ್ಚದಲ್ಲಿ ಗ್ರಾಹಕರಿಗೆ ಲಭ್ಯವಿದೆ.



Leave a Comment: