ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಸುದ್ದಿಗಳು News

Posted by vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್‌ ಸಮೇತ  ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 Share: | | | | |


ಬೆಳ್ತಂಗಡಿ : ಹಳೇಕೋಟೆ ಬೈಕಿಗೆ ಲಾರಿ ಡಿಕ್ಕಿ ಸವಾರ ವಿನೋದ್ ಗೌಡ ಪಾಲಡ್ಕ ಸ್ಥಳದಲ್ಲೇ ಮೃತ್ಯು

Posted by Vidyamaana on 2024-06-01 18:09:41 |

Share: | | | | |


ಬೆಳ್ತಂಗಡಿ : ಹಳೇಕೋಟೆ  ಬೈಕಿಗೆ ಲಾರಿ ಡಿಕ್ಕಿ ಸವಾರ ವಿನೋದ್ ಗೌಡ ಪಾಲಡ್ಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ   ಘಟನೆ ನಡೆದಿದೆ.

ಬೆಳ್ತಂಗಡಿಯ ಹಳೇಕೋಟೆ ಬಳಿಯ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಲುಕಿ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಚ್ಚಿನದ ಕೃಷಿಕ ವಿನೋದ್ ಗೌಡ(45) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಮಂಗಳೂರು ಜೆರೋಸಾ ಶಾಲೆ ಪ್ರಕರಣ; ತನಿಖಾಧಿಕಾರಿ ನೇಮಕ: ದಿನೇಶ್ ಗುಂಡೂರಾವ್

Posted by Vidyamaana on 2024-02-17 21:50:33 |

Share: | | | | |


ಮಂಗಳೂರು ಜೆರೋಸಾ ಶಾಲೆ ಪ್ರಕರಣ; ತನಿಖಾಧಿಕಾರಿ ನೇಮಕ: ದಿನೇಶ್ ಗುಂಡೂರಾವ್

ಮಂಗಳೂರು: ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. IAS ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.

ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

Posted by Vidyamaana on 2023-12-25 13:07:55 |

Share: | | | | |


ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

ಮಂಗಳೂರು: ಕೇರಳ ಯುವ ಜೋಡಿಯನ್ನು ತಡೆದು ಅವರ ಧರ್ಮದ ಬಗ್ಗೆ ವಿಚಾರಿಸಿ ಮತೀಯ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಹಂಪನಕಟ್ಟೆಯ ಮಳಿಗೆಯೊಂದರ ಬಳಿ ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ನಿಂತಿದ್ದ ಕೇರಳದ ಯುವಕ ಹಾಗೂ ಆತನ ಜೊತೆಗಿದ್ದ ಯುವತಿಯನ್ನು ಯುವಕರ ಗುಂಪೊಂದು ವಿಚಾರಿಸಿತ್ತು.ಕೇರಳದ ಯುವಕ ಮತ್ತು ಯುವತಿಯ ಧರ್ಮದ ಬಗ್ಗೆ ಪ್ರಶ್ನಿಸಿ, ಗುರುತಿನ ಚೀಟಿ ತೋರಿಸುವಂತೆ ಗುಂಪಿನಲ್ಲಿದ್ದ ಯುವಕನೊಬ್ಬ ಏರುಧ್ವನಿಯಲ್ಲಿ ಸೂಚಿಸಿದ ಹಾಗೂ ಅವರ ಸೊತ್ತುಗಳನ್ನು ಪರೀಶೀಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಬಂಟ್ವಾಳ ನಿವಾಸಿ ಸಂದೇಶ (28), ಆತನ ಜೊತೆಗಿದ್ದ ಪ್ರಶಾಂತ್ (31) ಹಾಗೂ ರೋನಿತ್ (31) ಅವರನ್ನು ಬಂಧಿತರು. ಆರೋಪಿಗಳ ವಿರುದ್ಧ ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಪ್ರಚೋದನೆ ಮತ್ತು ಅಕ್ರಮವಾಗಿ ನಿರ್ಬಂಧ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

Posted by Vidyamaana on 2024-03-25 04:45:39 |

Share: | | | | |


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.


ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ

Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

Posted by Vidyamaana on 2024-03-06 04:53:57 |

Share: | | | | |


Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

      ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ನರೇಂದ್ರ ಮೋದಿ ಯಾರು ಎಂದು ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರ ಹೇಗಿತ್ತು ಎಂಬುದನ್ನು ನೀವು ಒಮ್ಮೆ ನೋಡಿ


ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಭಾವನಾತ್ಮಕವಾಗಿದ್ದರೆ, ಕೆಲವು ವಿಡಿಯೋಗಳು ನಮಗೆಲ್ಲರಿಗೂ ಜೀವನ ಪಾಠವನ್ನು ಕಲಿಸುವಂತಿರುತ್ತದೆ. ಇನ್ನೂ ಹಲವು ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ.


ಇಂತಹ ದೃಶ್ಯಗಳಂತೂ ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರವನ್ನು ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಖಾಸಗಿ ನ್ಯೂಸ್ ಚಾನೆಲ್ ಒಂದರ ರಿಪೋರ್ಟರ್ ಒಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಜನರಲ್ ನಾಲೆಜ್ ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ವೈರಲ್ ಆಗುತ್ತಿರುವ ಈ ವಿಡಿಯೋವನ್ನು @psyco_rider_143 ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.


ವೈರಲ್ ವಿಡಿಯೋದಲ್ಲಿ ಪತ್ರಕರ್ತೆಯೊಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ನೋಡಬಹುದು. ಮೊದಲಿಗೆ ಆ ಪತ್ರಕರ್ತೆ ವಿದ್ಯಾರ್ಥಿಯೊರ್ವನ ಬಳಿ ಲಾಲು ಪ್ರಸಾದ್ ಯಾದವ್ ಯಾರು ಗೊತ್ತಾ? ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ಬಾಲಕ ಹಾ.. ಗೊತ್ತಿದೆ ಅನ್ನೋ ಉತ್ತರವನ್ನು ನೀಡುತ್ತಾನೆ. ಬಳಿಕ ಪತ್ರಕರ್ತೆ ಹಾಗಾದ್ರೆ ಅವರು ಯಾರು ಎಂದು ಹೇಳಬಹುದೇ ಎಂದು ಪ್ರಶ್ನೆ ಕೇಳುತ್ತಾರೆ. ಈ ಪ್ರಶ್ನೆಗೆ ಹೇಗೆ ಉತ್ತರಿಸುವುದು ಎಂದು ತಿಳಿಯದ ಆ ವಿದ್ಯಾರ್ಥಿ ನಗುತ್ತಾ, ನಾಚಿಕೆಯಿಂದ ಅಲ್ಲಿಂದ ಹೋಗಿಯೇ ಬಿಡುತ್ತಾನೆ.


ನಂತರ ರಿಪೋರ್ಟರ್ ವಿದ್ಯಾರ್ಥಿನಿಯೊಬ್ಬಳ ಬಳಿ ನರೇಂದ್ರ ಮೋದಿ ಯಾರು ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ವಿದ್ಯಾರ್ಥಿನಿ ಬಹಳ ಆತ್ಮವಿಶ್ವಾಸದಿಂದ ಬಿಹಾರದ ಪ್ರಧಾನ ಮಂತ್ರಿ ಎಂದು ಥಟ್ಟನೆ ಉತ್ತರಿಸುತ್ತಾಳೆ. ತಾನು ತಪ್ಪು ಉತ್ತರ ನೀಡಿದ್ದೇನೆ ಎಂದು ಅರಿತ ಆ ಬಾಲಕಿ ತಕ್ಷಣವೇ ಅವರು ಭಾರತದ ಪ್ರಧಾನ ಮಂತ್ರಿ ಎಂಬ ಉತ್ತರವನ್ನು ನೀಡುತ್ತಾಳೆ. ವಿದ್ಯಾರ್ಥಿನಿಯ ಉತ್ತರವನ್ನು ಕಂಡು ನೋಡುಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 70 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ʼಒಬ್ಬ ಬಳಕೆದಾರರು ಪಾಪ ಆ ಹುಡುಗಿ ಸ್ವಲ್ಪ ನರ್ವಸ್ ಆಗಿ ಮೊದಲಿಗೆ ತಪ್ಪು ಉತ್ತರವನ್ನು ನೀಡಿದ್ದಾಳೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬಿಹಾರದ ಶಿಕ್ಷಣ ಉತ್ತಮ ಗುಣಮಟ್ಟದ್ದಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ವಿದ್ಯಾರ್ಥಿಗಳ ಉತ್ತರವನ್ನು ಕೇಳಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ

ಫೆ. 12 ರಿಂದ 23 ವರೆಗೆ ಬಜೆಟ್ ಅಧಿವೇಶನ: ನೂತನ ಶಾಸಕರಿಗೆ ಬಜೆಟ್ ಬಗ್ಗೆ ತರಬೇತಿ: UT ಖಾದರ್

Posted by Vidyamaana on 2024-02-07 14:30:51 |

Share: | | | | |


ಫೆ. 12 ರಿಂದ 23 ವರೆಗೆ ಬಜೆಟ್ ಅಧಿವೇಶನ: ನೂತನ ಶಾಸಕರಿಗೆ ಬಜೆಟ್ ಬಗ್ಗೆ ತರಬೇತಿ: UT ಖಾದರ್

ರಾಯಚೂರು : ಫೆ. 12 ರಿಂದ 23 ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ 12ನೇ ತಾರೀಕು ಜಂಟಿ ಸದನ ಸದನ ಉದ್ದೇಶ ಸಿ ರಾಜ್ಯಪಾಲರು ಮಾತನಾಡಲಿದ್ದಾರೆ ಹಾಗೆ 14ನೇ ತಾರೀಕು ಮುಖ್ಯಮಂತ್ರಿಗಳು ಸರ್ಕಾರದ ಪರವಾಗಿ ಬಜೆಟನ್ನು ಮಂಡಿಸುತ್ತಾರೆ ಎಂದು ರಾಯಚೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.ನಗರದಲ್ಲಿ ಮಾಧ್ಯಮ ಉದ್ದೇಶಿಸಿ ಮಾತನಾಡಿದ ಅವರು, ನೂತನ ಶಾಸಕರಿಗೆ 9ನೇ ತಾರೀಕಿನಿಂದ ಬಜೆಟ್ ಬಗ್ಗೆ ತರಬೇತಿ ನೀಡಲಾಗಿದ್ದು ಇನ್ನೊಂದು ಕಡೆ ಪತ್ರಕರ್ತರಿಗೂ ವರ್ಕ್ ಶಾಪ್ ನಡೆಯಲಿದೆ ಬಹಳಷ್ಟು ಜನ ಭಾಗವಹಿಸುತ್ತಾರೆ ಎಂಬುವ ನಿರೀಕ್ಷೆ ಇದೆ


ಅಧಿವೇಶನ ಸಂದರ್ಭದಲ್ಲಿ ಕೂಡ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಾರೆ ಬೆಳಗ್ಗೆನಿಂದ ಮಧ್ಯಾಹ್ನವರೆಗೂ ಬಿಸಿಲಲ್ಲಿ ಕ್ಯೂನಲ್ಲಿ ನಿಂತಿರುತ್ತಾರೆ ಅಧಿವೇಶನ ಪ್ರಾರಂಭ ಆಗದ ಮುಂಚೆಯೇ ಬರುವ ವಿದ್ಯಾರ್ಥಿಗಳಿಗೆ ವಿಧಾನಸೌಧದಲ್ಲಿ ಪ್ರವೇಶ ಇಲ್ಲ ಹಾಗೆ ಅಧಿವೇಶನ ಅಷ್ಟೇ ಅಲ್ಲ ಇಸ್ರೋ, ಕಿದ್ವಾಯ್,ನಿಮಾನ್ಸ್ ಸಂಸ್ಥೆಗಳನ್ನು ನೋಡಬೇಕಾದರೆ ಅನುಮತಿ ಕೂಡ ಸರ್ಕಾರವೇ ಕೊಡುತ್ತದೆ.

Recent News


Leave a Comment: