ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಕುಷ್ಟಗಿ : ಭೀಕರ ರಸ್ತೆ ಅಪಘಾತ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತ್ಯು

Posted by Vidyamaana on 2023-05-28 14:56:58 |

Share: | | | | |


ಕುಷ್ಟಗಿ : ಭೀಕರ ರಸ್ತೆ ಅಪಘಾತ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತ್ಯು

ದೋಟಿಹಾಳ: ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎನ್ನಲಾಗಿದೆ.ಕಾರು ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಲಾರಿಯ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದು ಸ್ಥಳೀಯರು ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ

ಕೆ.ಪಿ.ಸಿ.ಸಿ. ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆ

Posted by Vidyamaana on 2024-04-11 17:34:31 |

Share: | | | | |


ಕೆ.ಪಿ.ಸಿ.ಸಿ. ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆ

ಬೆಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ,ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಅಬ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ಮತ್ತು ಗೆಲುವಿಗೆ ಸಹಕಾರಿಯಾಗಲು ಕೆ.ಪಿ.ಸಿ‌.ಸಿ. ಕಾರ್ಯದ್ಯಾಕ್ಷರಾದ ಶ್ರೀ ಮಂಜುನಾಥ ಭಂಡಾರಿ ಶಿಪಾರಸ್ಸಿನ ಮೇರೆಗೆ ಕೆ.ಪಿ.ಸಿ.ಸಿ ಅದ್ಯಕ್ಷರಾದ ಶ್ರೀ. ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಯವರನ್ನು ತಕ್ಷಣದಿಂದ ಕಾರ್ಯಪ್ರವರ್ತರಾಗುವಂತೆ ಈ ಮೂಲಕ ಆದೇಶಿಸಿಸಲಾಗಿದೆ..



ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

Posted by Vidyamaana on 2023-07-01 16:00:10 |

Share: | | | | |


ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

Posted by Vidyamaana on 2023-07-27 14:52:14 |

Share: | | | | |


ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

ಉಡುಪಿ: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.


ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. 


ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು. 


ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.

ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ!!!?

Posted by Vidyamaana on 2023-05-26 16:24:56 |

Share: | | | | |


ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ!!!?

ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿದ್ದ ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ ಎದುರಾಗಿತ್ತಂತೆ! ಆದ್ದರಿಂದ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರು ಹೊಸ ಕಚೇರಿಯ ತಲಾಷ್’ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿರುವ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರು, ಸಹಾಯಕ ಆಯುಕ್ತರ ಜೊತೆ ಮಾತನಾಡುತ್ತಾ ಹೊಸ ಕಚೇರಿಯನ್ನು ಹುಡುಕಿ ಕೊಡಲು ಸೂಚಿಸಿದ್ದಾರೆ.

ಹಳೆ ಕಚೇರಿಯಲ್ಲಿ ವಾಸ್ತುದೋಷ ಇದೆಯೋ ಏನೋ ಗೊತ್ತಿಲ್ಲ. ಆದರೆ ಆ ಕಚೇರಿ ತೀರಾ ಚಿಕ್ಕದಾಗಿದ್ದು, ಸ್ಥಳಾವಕಾಶದ ಕೊರತೆಯಿದೆ. ನನ್ನನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಸರಿಯಾಗಿ ಕುಳಿತುಕೊಳ್ಳುವಷ್ಟು ಸ್ಥಳಾವಕಾಶ ಇರಬೇಕು. ಆದ್ದರಿಂದ ದೊಡ್ಡ ಕೊಠಡಿಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ನೂತನ ಕಚೇರಿಯು ಕೆಲವೇ ದಿನಗಳಲ್ಲಿ ತೆರೆದುಕೊಳ್ಳಲಿದ್ದು, ತುರ್ತಾಗಿ ಕಚೇರಿ ಕೆಲಸ ನಡೆಯಲಿದೆ ಎಂದು ತಿಳಿದುಬಂದಿದೆ.

ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

Posted by Vidyamaana on 2024-04-06 17:30:22 |

Share: | | | | |


ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

ಉಳ್ಳಾಲ, ಎ.6: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅವರು ಉಳ್ಳಾಲದಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಹಿರಿಯರು, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಪದ್ಮರಾಜ್ ಅವರನ್ನ ಆಶೀರ್ವದಿಸಿ ಸಲಹೆ ನೀಡಿದರು.


ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಅವರು ಪ್ರತಿನಿಧಿಸುವ ಮಂಗಳೂರು (ಉಳ್ಳಾಲ) ಕ್ಷೇತ್ರದ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಗೆ ಇಂದು ಬೆಳಗ್ಗೆ ಪದ್ಮರಾಜ್ ಭೇಟಿ ನೀಡಿ ವರ್ತಕರು, ಗ್ರಾಹಕರಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಮಂಗಳೂರಿನಲ್ಲಿ ನಲ್ವತ್ತು ವರುಷಗಳ ಕಾಲ ಕಾಂಗ್ರೆಸ್ ಸಂಸದರಿದ್ದರು. ನಂತರ ಬಿಜೆಪಿಯವರು ಸುಳ್ಳು ಹೇಳಿ ಜಯ ಗಳಿಸಿದರೆ ಹೊರತು ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ಈಗಾಗಲೇ ನಾನು ಬಹುತೇಕ ಮತದಾರರನ್ನ ತಲುಪಿದ್ದೇನೆ. ಮುಂದಿನ ಹದಿನೈದು ದಿವಸಗಳಲ್ಲಿ ಎಲ್ಲ ಮತದಾರರನ್ನು ಮುಟ್ಟುವ ಪ್ರಯತ್ನ ನಡೆಸುತ್ತೇನೆ. ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌‌ಗಳೇ ಹೊರತು ಮಂಗಳೂರಿಗೆ ಸ್ಟಾರ್ ಪ್ರಚಾರಕರ ಅಗತ್ಯ ಇಲ್ಲ ಎಂದರು.



Leave a Comment: