ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

Posted by Vidyamaana on 2023-12-02 12:05:19 |

Share: | | | | |


ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಯುವಕರ ಗುಂಪೊಂದು ಮುಸ್ಲಿಂ ಅಂಧ ವೃದ್ಧನಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೆಬೂಬನಗರದ ನಿವಾಸಿ ಹುಸೇನಸಾಬ್​ (70) ಎಂಬುವರ ಮೇಲೆ ನವೆಂಬರ್​ 20ರಂದು ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರದ ಬೈಪಾಸ್ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಯುವಕರ ಗುಂಪೊಂದು ತಮ್ಮನ್ನು ಅಡ್ಡಗಟ್ಟಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದ್ದಾರೆ. ಜೊತೆಗೆ ಗಡ್ಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದು, ಬಳಿಕ ತಮ್ಮ ಬಳಿಯಿದ್ದ ಹಣವನ್ನೂ ದೋಚಿಕೊಂಡು ಹೋಗಿದ್ದಾರೆ. ಸಮಯಕ್ಕೆ ಸರಿಯಾಗಿ ಸಮೀಪದಲ್ಲಿದ್ದ ಕುರಿಗಾಹಿ ಯುವಕರು ಸ್ಥಳಕ್ಕೆ ಆಗಮಿಸಿ ತಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ.


ಜೊತೆಗೆ ವೃದ್ಧನಿಗೆ ಕೀಟಲೆ ಮಾಡಿದ ಅಪರಿಚಿತ ಯುವಕರು ಗುಂಪು ಬೆದರಿಕೆ ಹಾಕಿದ್ದರು. ಹೀಗಾಗಿ ಅವರು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ ಎನ್ನಲಾಗಿದೆ. ಬಳಿಕ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಕೆಲವರು ಗಂಗಾವತಿಯ ಕೆಲ ಯುವಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಯುವಕರು ವೃದ್ಧನನ್ನು ಹುಡುಕಿ ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಅಲ್ಲದೇ ಮಾನಸಿಕವಾಗಿ ಕುಗ್ಗಿದ್ದ ವೃದ್ಧನಿಗೆ ಸಮಾಧಾನ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಬಂಧನಕ್ಕೆ ಒತ್ತಾಯ: ಘಟನೆ ನಡೆದು ಹತ್ತು ದಿನ ಕಳೆದಿದೆ. ಪ್ರಕರಣ ದಾಖಲಾಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೂ ಪೊಲೀಸರು ಆರೋಪಿಗಳ ಪತ್ತೆ ಮಾಡಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಸ್ಟೂಡೆಂಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯಾರ ಒತ್ತಾಯಿಸಿದ್ದಾರೆ. ಗಂಗಾವತಿಯಲ್ಲಿ ಎಲ್ಲರೂ ಸಹ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇಂತಹ ಘಟನೆಗಳಿಂದ ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸಲೀಂ ಒತ್ತಾಯಿಸಿದ್ದಾರೆ.

ಸಂಚಾರದಲ್ಲಿ ಕ್ರಾಂತಿ ಮಾಡಲಿದೆ ಎನ್ನಲಾದ ಹೈಪರ್‌ಲೂಪ್ ಯೋಜನೆ ಆರಂಭಕ್ಕೂ ಮುನ್ನವೇ ಬಂದ್

Posted by Vidyamaana on 2023-12-25 18:26:42 |

Share: | | | | |


ಸಂಚಾರದಲ್ಲಿ ಕ್ರಾಂತಿ ಮಾಡಲಿದೆ ಎನ್ನಲಾದ ಹೈಪರ್‌ಲೂಪ್ ಯೋಜನೆ ಆರಂಭಕ್ಕೂ ಮುನ್ನವೇ ಬಂದ್

ನವದೆಹಲಿ: ಪ್ರಯಾಣದಲ್ಲಿ ಕ್ರಾಂತಿ ಮಾಡಲಿದೆ ಎಂದು ಹೇಳಲಾಗಿದ್ದ ಹೈಪರ್‌ಲೂಪ್ ಯೋಜನೆ ಆರಂಭಕ್ಕೂ ಮುನ್ನವೇ ಅಂತ್ಯಗೊಂಡಿದೆ. ನಂ.1 ಶ್ರೀಮಂತ ಎಲಾನ್ ಮಸ್ಕ್ ಆರಂಭಿಸಿದ್ದ ಹೈಪರ್‌ಲೂಪ್ ಒನ್ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೈಪರ್‌ಲೂಪ್ ಯೋಜನೆ ಅಂತ್ಯವಾಗಿರುವ ಕುರಿತಾಗಿ ವರದಿ ಪ್ರಕಟಿಸಿರುವ ಬ್ಲೂಮ್‌ಬರ್ಗ್, ಹೈಪರ್‌ಲೂಪ್ ಒನ್ ಯೋಜನೆಯಲ್ಲಿ ಹಣ ತೊಡಗಿಸಿದ್ದ ರಿಚರ್ಡ್ ಬ್ರಾನ್‌ಸನ್ ತಮ್ಮ ಹಣವನ್ನು ಹಿಂಪಡೆದುಕೊಂಡಿದ್ದಾರೆ.ಅಲ್ಲದೇ ಈ ಕಂಪನಿಯಲ್ಲಿರುವ ಉಳಿದ ನೌಕರರನ್ನು ಮುಂದಿನ ವರ್ಷಾಂತ್ಯದ ವೇಳೆಗೆ ವಜಾ ಮಾಡಲಾಗುತ್ತದೆ ಎಂದು ಹೇಳಿದೆ.


ಬೆಂಗಳೂರಿನಲ್ಲೂ ಆರಂಭಕ್ಕೆ ಚರ್ಚೆ

ಹೈಪರ್‌ಲೂಪ್ ಯೋಜನೆಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದಲೂ ಆರಂಭಿಸಲು ನಿರ್ಧರಿಸಲಾಗಿತ್ತು. ಬೆಂಗಳೂರು ವಿಮಾನ ನಿಲ್ದಾಣದಿಂದ ನಗರ ಕೇಂದ್ರಕ್ಕೆ ಹೈಪರ್ ಲೂಪ್ ಅಳವಡಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಬಳಿಕ ಡೋನ್ ಟ್ಯಾಕ್ಸಿ ಸೇರಿದಂತೆ ಇತರ ಸಂಚಾರ ವ್ಯವಸ್ಥೆ 7 ಬಗ್ಗೆ ಚಿಂತನೆ ಆರಂಭವಾಗಿತ್ತು.


ಏನಿದು ಹೈಪರ್‌ಲೂಪ್‌ಯೋಜನೆ:


ಅಯಸ್ಕಾಂತದ ಶಕ್ತಿಯನ್ನು ಬಳಸಿಕೊಂಡು ಪೈಪ್ ಮುಖಾಂತರ ಅತಿ ವೇಗದ ಸಂಚಾರ ಸೌಲಭ್ಯ ಒದಗಿಸುವುದು ಹೈಪರ್‌ಲೂಪ್‌ ಯೋಜನೆಯಾಗಿದೆ. ಇದರಲ್ಲಿ ರೈಲುಗಳು ಗಂಟೆಗೆ 1127 ಕಿ.ಮೀ.ವೇಗದಲ್ಲಿ ಚಲಿಸಲಿದೆ. ಅಲ್ಲದೇ ಇದು ಈಗಿರುವ ಎಲ್ಲಾ ಸಾರಿಗೆ ಸೌಲಭ್ಯಗಳಿಗೆ ಹೋಲಿಸಿದರೆ ಇದು ಹೆಚ್ಚು ಪರಿಸರಸ್ನೇಹಿಯಾಗಿರಲಿದೆ ಎನ್ನಲಾಗಿತ್ತು. ಹೀಗಾಗಿ ಎಲಾನ್ ಮಸ್ಕ್ ಈ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿ ಹೈಪರ್‌ಲೂಪ್ ಒನ್ ಯೋಜನೆಯನ್ನು ಆರಂಭಿಸಿದ್ದರು. ಇದಕ್ಕಾಗಿ ಅಮೆರಿಕದ ನೆವಾಡ ಮರುಭೂಮಿಯಲ್ಲಿ ಕೆಲವು ಪ್ರತಿಕೃತಿಗಳನ್ನು ರಚನೆ ಮಾಡಲಾಗಿತ್ತು. ಆದರೆ ಇದರ ಎಂಜಿನಿಯರಿಂಗ್ ವ್ಯವಸ್ಥೆಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನಲೆಯಲ್ಲಿ ಮತ್ತು ವಿಶ್ವದ ಯಾವುದೇ ದೇಶಗಳಿಂದಲೂ ಯೋಜನೆ ಆರಂಭಕ್ಕೆ ಪ್ರಸ್ತಾವ ಬರದೇ ಇರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈಬಿಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ.2020ರಲ್ಲಿ ಮೊದಲು ಹೈಪರ್ ಲೂಪ್‌ನ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿತ್ತು. ಈ ವೇಳೆ 170 ಕಿ.ಮೀ. ವೇಗವನ್ನು ಸಾಧಿಸಲಾಗಿತ್ತು. ಇದಾದ ಬಳಿಕ 2022 ಯೋಜನೆಯನ್ನು ಬದಲಾಯಿಸಿರುವುದಾಗಿ ಘೋಷಿಸಿದ ಮಸ್ಕ್, ಜನರ ಬದಲು ಸರಕನ್ನು ಇದರಲ್ಲಿ ಸಾಗಿಸಲು ನಿರ್ಧರಿ ಸಲಾಗಿದೆ ಎಂದು ಹೇಳಿದ್ದರು. ಇದಾದ ಬಳಿಕ ಒಂದಷ್ಟು ಹೂಡಿಕೆದಾರರು ಯೋಜನೆಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಈ ಯೋಜನೆಯನ್ನು ಇದೀಗ ಕೈಬಿಡಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.

ಪೊಲೀಸ್ ಇಲಾಖೆಗೆ ಸರ್ಜರಿ

Posted by Vidyamaana on 2023-05-30 07:42:43 |

Share: | | | | |


ಪೊಲೀಸ್ ಇಲಾಖೆಗೆ ಸರ್ಜರಿ

ಬೆಂಗಳೂರು: ನೂತನ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ನೂತನ ಕಮಿಷನರ್ ಆಗಿ ಬಿ.ದಯಾನಂದ ಅವರನ್ನು ನೇಮಿಸಲಾಗಿದೆ.ಎಡಿಜಿಪಿ ಮತ್ತು ನಗರ ಟ್ರಾಫಿಕ್ ವಿಶೇಷ ಆಯುಕ್ತರಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ಬೆಂಗಳೂರು ಅಪರಾಧ ತನಿಖೆ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಯಾಗಿ ವರ್ಗಾವಣೆ ಮಾಡಿ ನೇಮಿಸಲಾಗಿದೆಬೆಂಗಳೂರು ಅಪರಾಧ ತನಿಖೆ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತ್ ಚಂದ್ರ ಅವರನ್ನು ಇಂಟಲಿಜೆನ್ಸ್ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಪ್ರಜ್ವಲ್‌ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

Posted by Vidyamaana on 2024-05-03 07:03:38 |

Share: | | | | |


ಪ್ರಜ್ವಲ್‌ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದೆ.

BIG NEWS : 1ನೇ ತರಗತಿ ದಾಖಲಾತಿಗೆ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ : ರಾಜ್ಯ ಸರ್ಕಾರಿಂದ ಮಹತ್ವದ ಆದೇಶ

Posted by Vidyamaana on 2024-05-28 21:28:50 |

Share: | | | | |


BIG NEWS : 1ನೇ ತರಗತಿ ದಾಖಲಾತಿಗೆ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ : ರಾಜ್ಯ ಸರ್ಕಾರಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಖಾಸಗಿ ಕ್ಷಣದ ವಿಡಿಯೋ ವೈರಲ್

Posted by Vidyamaana on 2023-07-29 11:24:46 |

Share: | | | | |


ಖಾಸಗಿ ಕ್ಷಣದ ವಿಡಿಯೋ ವೈರಲ್

ದಾವಣಗೆರೆ: ಖಾಸಗಿ ಕ್ಷಣದ ವಿಡಿಯೋ ವೈರಲ್​ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.ಮೃತರನ್ನು ಆಲೂರಟ್ಟಿ ತಾಂಡಾದ ರತನ್ (20) ಮತ್ತು ಜಗಳೂರು ತಾಲೂಕಿನ ಗ್ರಾಮವೊಂದರ ಯುವತಿ ಎಂದು ಗುರುತಿಸಲಾಗಿದೆ. ಇಬ್ಬರೂ ದಾವಣಗೆರೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳದುಬಂದಿದೆ.


ಕಾಲೇಜಿನ ಟೆರೆಸ್​ ಮೇಲೆ ಇಬ್ಬರು ಏಕಾಂತದಲ್ಲಿರುವುದನ್ನು ಗಮನಿಸಿ, ಅರಿವಿಗೆ ಬಾರದಂತೆ ಪಕ್ಕದ ಕಟ್ಟದಿಂದ ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಾಟ್ಸ್​ಆ್ಯಪ್​ಗಳಲ್ಲಿಯೂ ವಿಡಿಯೋ ಹರಿದಾಡಿತ್ತು. ಅಲ್ಲದೆ, ಕೆಲ ವೆಬ್​ಸೈಟ್​ಗಳಲ್ಲೂ ಸುದ್ದಿ ಪ್ರಕಟವಾಗಿತ್ತುಖಾಸಗಿ ವಿಡಿಯೋ ವೈರಲ್ ಆಗಿ, ತಲೆತಗ್ಗಿಸುವಂತಾಗಿದ್ದಕ್ಕೆ ತೀವ್ರ ಮನನೊಂದಿದ್ದ ವಿದ್ಯಾರ್ಥಿನಿ ನಿನ್ನೆ ಆತ್ಮಹತ್ಯೆಗೆ ಶರಣಾದಳು. ಆಕೆಯ ಸಾವಿನ ಸುದ್ದಿ ಕೇಳಿದ ಆಲೂರಟ್ಟಿ ತಾಂಡಾದ ರತನ್ ಸಹ ಸಾವನ್ನಪ್ಪಿದ್ದಾನೆ. ರತನ್​ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ನಿನ್ನೆ ಸಂಜೆ ಆಲೂರಟ್ಟಿ ತಾಂಡಕ್ಕೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಮಕ್ಕಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಯುವಕ ಮತ್ತು ಯುವತಿಯ ಪಾಲಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.

Recent News


Leave a Comment: