ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಆಲಂಕಾರು ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

Posted by Vidyamaana on 2024-03-31 06:15:03 |

Share: | | | | |


ಆಲಂಕಾರು ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ.

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

Posted by Vidyamaana on 2023-10-08 21:23:11 |

Share: | | | | |


ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

 ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ.ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.


ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಇದೀಗ ಈ ಸಾಲಿಗೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ ಸೇರಿದ್ದು, ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯಲ್ಲಿನ ಶೇ 75ರಷ್ಟು ಜನರಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪತ್ರಿಕೆಯೊಂದರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ನಿಜ.


ಆದರೆ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸದೆ, ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಚುನಾವಣೆ ಮುಗಿದು ನಾಲ್ಕುತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿತ್ತು.


ಇದೀಗ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗುತ್ತದೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೂ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಪಕ್ಷವು ನನಗೆ ಎಲ್ಲವನ್ನೂ ನೀಡಿದೆ. ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಪಕ್ಷಕ್ಕೆ ಈ ಸ್ಥಿತಿ ಬಂದಿರುವುದರ ಬಗ್ಗೆ ನೋವಿದೆ.


ಅದನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹ. ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಾಸ್ತವ ವಿಚಾರಗಳನ್ನು ಮಾತನಾಡಲು ನನಗೆ ಯಾವ ರೀತಿಯ ಭಯವೂ ಇಲ್ಲ ಎಂದು ಹೇಳಿದರು.

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

Posted by Vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



BREAKING : ಇನ್ಮುಂದೆ ಟೋಲ್ ವ್ಯವಸ್ಥೆ ಇಲ್ಲ, ರದ್ದು : ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಘೋಷಣೆ

Posted by Vidyamaana on 2024-07-26 16:26:50 |

Share: | | | | |


BREAKING : ಇನ್ಮುಂದೆ ಟೋಲ್ ವ್ಯವಸ್ಥೆ ಇಲ್ಲ, ರದ್ದು : ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದ್ದು, ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆಯನ್ನ ರದ್ದುಗೊಳಿಸಿದ್ದಾರೆ. ಇದರೊಂದಿಗೆ, ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯ ಉಡಾವಣೆಯನ್ನ ಘೋಷಿಸಲಾಗಿದೆ. ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ ಮತ್ತು ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ಅವರು ಶುಕ್ರವಾರ (ಜುಲೈ 26) ಹೇಳಿದರು.

ಅದ್ರಂತೆ, ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ ಎಂದು ಹೇಳಿದರು. ಇದನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಮಾತ್ರ ಮಾಡಲಾಗುತ್ತದೆ.

ಇದಕ್ಕೂ ಮುನ್ನ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ನಿತಿನ್ ಗಡ್ಕರಿ, ಈಗ ನಾವು ಟೋಲ್ ರದ್ದುಗೊಳಿಸುತ್ತಿದ್ದೇವೆ ಮತ್ತು ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಇರುತ್ತದೆ. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ ಮತ್ತು ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ. ಈ ಮೊದಲು ಮುಂಬೈನಿಂದ ಪುಣೆಗೆ ಪ್ರಯಾಣಿಸಲು 9 ಗಂಟೆಗಳು ತೆಗೆದುಕೊಳ್ಳುತ್ತಿತ್ತು, ಈಗ ಅದು 2 ಗಂಟೆಗಳಿಗೆ ಇಳಿದಿದೆ ಎಂದರು.

ಚಾರಣ ತೆರಳಿದ್ದ ಯುವಕ ಹೃದಯಘಾತದಿಂದ ಹರಿಯಾಣ ಮೂಲದ ಜತಿನ್ ನಿಧನ

Posted by Vidyamaana on 2023-12-25 14:52:36 |

Share: | | | | |


ಚಾರಣ ತೆರಳಿದ್ದ ಯುವಕ ಹೃದಯಘಾತದಿಂದ ಹರಿಯಾಣ ಮೂಲದ ಜತಿನ್ ನಿಧನ

ಕೊಡಗು:ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.ಹರಿಯಾಣ ಮೂಲದ ಜತಿನ್ (25) ಮೃತಪಟ್ಟ ಯುವಕ. ಜತಿನ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದನು. 5 ಮಂದಿ ಸ್ನೇಹಿತರ ಜೊತೆ ತಡಿಯಂಡಮೋಳ್ ಬೆಟ್ಟಕ್ಕೆ ಬಂದಿದ್ದನು.ಬೆಟ್ಟದ ಮೇಲೆ ತಲುಪಿದಾಗ ತೀವ್ರತರಹದ ಎದೆನೋವಿಗೆ ಒಳಗಾದ ಜತಿನ್ ಹೃದಯಾಘಾತದಿಂದ ಬೆಟ್ಟದ ಮೇಲೆ ಕೊನೆಯುಸಿರೆಳೆದಿದ್ದಾನೆ.ಸ್ಥಳಕ್ಕೆ ನಾಪೋಕ್ಲು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುರ್ಗಮ ಹಾದಿಯಲ್ಲೆ ಪ್ರವಾಸಿಗನ ಮೃತದೇಹ ಹೊತ್ತು ತಂದಿದ್ದಾರೆ.

ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-08-24 07:40:44 |

Share: | | | | |


ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದರು.


ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಅಭಿನಂದಿಸಿದರು.


ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎಸ್.ಎನ್. ಬೋಸರಾಜು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಗಿದ್ದರು.


ನಿನ್ನೆ ರಾತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದು, ಶನಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

Recent News


Leave a Comment: