ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

ಸುದ್ದಿಗಳು News

Posted by vidyamaana on 2024-07-08 08:23:43 |

Share: | | | | |


ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

 ಮಂಗಳೂರು : ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.ಈ ಕೃತ್ಯವನ್ನು ಹೊರ ರಾಜ್ಯದ ಚಡ್ಡಿ ಗ್ಯಾಂಗ್ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್ ಪರಿಸರದಲ್ಲಿ ಅಡ್ಡಾಡುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಐವರಿದ್ದ ಕಳ್ಳರ ತಂಡ ಮೆಲ್ಲನೆ ಹೆಜ್ಜೆ ಇಡುತ್ತಾ ಕೈಯಲ್ಲಿ ಟಾರ್ಚ್ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಚಡ್ಡಿ ಹಾಕಿದ್ದ ಕಳ್ಳರ ಗ್ಯಾಂಗ್ ಸದಸ್ಯರು ಬರುತ್ತಿದ್ದಾಗಲೇ ನಾಯಿಗಳು ಜೋರಾಗಿ ಬೊಗಳಿದ್ದು ಅವುಗಳತ್ತ ಕಳ್ಳರು ಕಲ್ಲೆಸೆದು ಓಡಿಸಿದ್ದಾರೆ.

ಕಿಟಕಿ ಕತ್ತರಿಸಿ ಒಂದು ಮನೆಯ ಒಳಗೆ ನುಗ್ಗಿದ್ದ ಕಳ್ಳರು ಬೆಲೆಬಾಳುವ ವಸ್ತುಗಳಿಗಾಗಿ ಜಾಲಾಡಿದ್ದಾರೆ. ಆದರೆ ಅವರಿಗೆ ಚಿಲ್ಲರೆ ನಗದು ಬಿಟ್ಟರೆ ಯಾವುದೇ ವಸ್ತುಗಳು ಸಿಕ್ಕಿಲ್ಲ. ವಿಶೇಷ ಅಂದ್ರೆ, ಮನೆಮಂದಿ ಮಲಗಿದ್ದಾಗಲೇ ಕಳ್ಳರು ನುಗ್ಗಿ ಹುಡುಕಾಟ ಮುಗಿಸಿ ಸದ್ದಿಲ್ಲದೆ ಹೊರಕ್ಕೆ ತೆರಳಿದ್ದಾರೆ. ಮನೆಯವರಿಗೆ ಬೆಳಗಾದಾಗಲೇ ಕಳವು ಕೃತ್ಯ ತಿಳಿದುಬಂದಿತ್ತು.

 Share: | | | | |


ಪುತ್ತೂರು ನಗರಸಭೆ ಹೊರಗುತ್ತಿಗೆ ನೌಕರರಿಂದ ಸಾಂಕೇತಿಕ ಪ್ರತಿಭಟನೆ

Posted by Vidyamaana on 2023-02-18 14:08:58 |

Share: | | | | |


ಪುತ್ತೂರು ನಗರಸಭೆ ಹೊರಗುತ್ತಿಗೆ ನೌಕರರಿಂದ ಸಾಂಕೇತಿಕ ಪ್ರತಿಭಟನೆ

ಪುತ್ತೂರು : ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಪುತ್ತೂರು ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಂದ ಸಾಂಕೇತಿಕ ಪ್ರತಿಭಟನೆ ಶನಿವಾರ ನಗರಸಭೆ ಎದುರು ನಡೆಸಯಿತು.

ಇತ್ತೀಚೆಗೆ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ನೇರಪಾವತಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೊಷಣೆ ಮಾಡಿಲ್ಲ ಎಂಬ ಕಾರಣಕ್ಕೆ ಹೊರಗುತ್ತಿಗೆ ಕಾರ್ಮಿಕರು ಸಹಿತ ಚಾಲಕರು ಸಾಂಕೇತಿಕ ಪ್ರತಿಭಟನೆ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಹೊರಗುತ್ತಿಗೆ ನೌಕರರ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಮಾತನಾಡಿ, ಇತ್ತೀಚೆಗೆ ಬೇಡಿಕೆ ಈಡೇರಿಕೆಗಾಗಿ ಸಂಘದ ವತಿಯಿಂದ ನಡೆಸಿದ ಪ್ರತಿಭಟನೆ ಫಲವಾಗಿ ಚಾಲಕರು, ವಾಟರ್ ಮೆನ್, ಡಾಟಾ ಅಪರೇಟರ್ ಗಳು ಸಹಿತ ಹೊರಗುತ್ತಿಗೆ ನೌಕರರಾಗಿರುವ ಎಲ್ಲಾ ಕಾರ್ಮಿಕರನ್ನು ನೇರ ಪಾವತಿಗೊಳಪಡಿಸುವ ಕುರಿತು ಬಜೆಟ್ ನಲ್ಲಿ ಘೊಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಈ ಭರವಸೆ ಈಡೇರಲಿಲ್ಲ. ಈ ಕುರಿತು ಉತ್ತರ ಕರ್ನಾಟಕದ ಎಲ್ಲಾ ಹೊರಗುತ್ತಿಗೆದಾರರು ದಿಕ್ಕಾರ ಕೂಗಿದ್ದಾರೆ. ಆದರೆ ನಾವು ದಿಕ್ಕಾರ ಕೂಗುವುದಿಲ್ಲ. ಮಂದಿನ ತಿಂಗಳೊಳಗೆ ಮುಖ್ಯಮಂತ್ರಿಗಳು ನಮಗೆ ನೇರಪಾವತಿ ಮಾಡಿ ಕೊಡುವ ನಂಬಿಕೆ ಇದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಭಟನೆ ಸಾಂಕೇತಿಕ. ಮುಂದಿನ ತಿಂಗಳು ನಮ್ಮ ಬೇಡಿಕೆ ಈಡೇರಿಸದೇ ಹೋದರೆ ಪ್ರತಿಭಟನೆಯ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

Posted by Vidyamaana on 2023-09-08 21:50:08 |

Share: | | | | |


ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಮುಂಬೈ: ಗಗನಸಖಿ ಒಬ್ಬರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಅಂಧೇರಿಯ ಪೊಲೀಸ್ ಠಾಣೆಯಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂಬೈನ ಮರೋಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ 23 ವರ್ಷದ ಗಗನಸಖಿಯನ್ನು ಕೊಂದ ಆರೋಪದಲ್ಲಿ ವಿಕ್ರಂ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಗಗನಸಖಿ ರೂಪಲ್ ಒಗ್ರೆ ಅಂಧೇರಿಯ ಅಪಾರ್ಟ್ಮೆಂಟ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಢ ಮೂಲದ ಅವರು ವಿಮಾನಯಾನ ಸಂಸ್ಥೆಯಲ್ಲಿ ತರಬೇತಿಗಾಗಿ ಏಪ್ರಿಲ್ ನಲ್ಲಿ ಮುಂಬೈಗೆ ಬಂದಿದ್ದರು.

ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ಬಂಧಿಸಿದ್ದರು. ಆದರೆ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸುಳ್ಯ : ನಾಪತ್ತೆಯಾಗಿದ್ದ ಬಾಲಕ ಪತ್ತೆಯಾದದ್ದು ಎಲ್ಲಿ ಗೊತ್ತಾ???

Posted by Vidyamaana on 2023-11-18 20:41:58 |

Share: | | | | |


ಸುಳ್ಯ : ನಾಪತ್ತೆಯಾಗಿದ್ದ ಬಾಲಕ ಪತ್ತೆಯಾದದ್ದು ಎಲ್ಲಿ ಗೊತ್ತಾ???

ಬೆಳ್ಳಾರೆ : ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರ ಸಂಜೆಯಿಂದ ನಾಪತ್ತೆಯಾಗಿದ್ದ. ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ.


ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದರು. ಶನಿವಾರ ಸಂಜೆ ಮೈಸೂರು ಝೂ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ಬೆಳ್ತಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

Posted by Vidyamaana on 2024-07-02 16:30:31 |

Share: | | | | |


ಬೆಳ್ತಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ :ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Posted by Vidyamaana on 2023-10-02 07:54:25 |

Share: | | | | |


ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC  ಏಜೆಂಟ್ ನಾರಾಯಣ ಕುಲಾಲ್  ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ 02 ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.


    ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.


  ಅ 2 ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.


   ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


   ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.

ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

Posted by Vidyamaana on 2024-01-18 07:21:45 |

Share: | | | | |


ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು.  ಈ ಸಂದರ್ಬದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷರಾದ ರಾಮ ಕೆ ಮೇನಾಲ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ ಮಂಗಳೂರು, ಪುತ್ತೂರು ಡ್ಯಾಶ್ ಮಾರ್ಕೆಂಟಿಂಗ್ ವ್ಯವಸ್ಥಾಪಕರಾದ ನಿಹಾಲ್ ಶೆಟ್ಟಿ ಕಲ್ಲಾರೆ, ದೀಕ್ಷಿತ್ ರೈ ಕುತ್ಯಾಳ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಮೇನಾಲ, ಕರ್ನೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ಲ , ವಿಕ್ರಂ ರೈ ಸಾಂತ್ಯ, ಸುರೇಶ್ ಮೇನಾಲ, ಅಬೂ ಮೇನಾಲ, ಎಂ ಪಿ ಅಬ್ದುಲ್ ಕುಂಞಿ ಪಳ್ಳತ್ತೂರು, ಗಿರೀಶ್ ರೈ ಮರ್ಕಡ,ಅಬ್ದುಲ್ ಕುಂಞಿ ಮೇನಾಲ, ಇಬ್ರಾಹಿಂ ಪಳ್ಳತ್ತೂರು ಮೊದಲಾದವರು ಉಪಸ್ತಿತರಿದ್ದರು.


ಇದೇ ಸಂದರ್ಭದಲ್ಲಿ ನೂತನ ದರ್ಗಾ ಕಟ್ಟ ಕಾಮಗಾರಿಗೆ ರೂ. ೫೦ ಸಾವಿರ ಅನುದಾನವನ್ನು ನೀಡುವುದಾಗಿ ಶಾಸಕರು ಭರವಸೆ ನೀಡಿದರು.ಜಮಾತ್ ಕಮಿತಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

Recent News


Leave a Comment: