ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

Posted by Vidyamaana on 2023-11-25 12:24:25 |

Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.


ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.


ಬೆಂಗಳೂರು ಕಂಬಳದ ವಿಶೇಷತೆ

6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗವಹಿಸುವ ಸಾಧ್ಯತೆ ಇದೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರಾಕ್‌ (ಕರೆ)ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಆಯೋಜಿಸಲಾಗಿದೆ.ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ. 228 ಜೋಡಿ ಕೋಣಗಳ ರಿಜಿಸ್ಟ್ರೇಷನ್ ಆಗಿದ್ದು, 200 ಜೋಡಿ‌ ಫೈನಲ್‌ ಆಗಿವೆ. ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ.


ಕೋಣಗಳ ಆರೈಕೆ

ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ ವಹಿಸಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ನೀರನ್ನು ಕೂಡ ಊರಿನಿಂದಲೇ ತರಲಾಗಿದೆ. ನೀರು ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ. ಹೀಗಾಗಿ ಊರಿನಿಂದಲೇ ಟ್ಯಾಂಕರ್ ಮೂಲಕ ನೀರು ತರಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದುದ್ದಾರೆ.


ಗೆದ್ದ ಕೋಣಗಳಿಗೆ ಬಹುಮಾನ

ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು


ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು


ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

ಜು. 19:ದ. ಕ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಜಿಲ್ಲೆಯ ಐದು ತಾಲೂಕಿನ ಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Posted by Vidyamaana on 2024-07-19 03:04:07 |

Share: | | | | |


ಜು. 19:ದ. ಕ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಜಿಲ್ಲೆಯ ಐದು ತಾಲೂಕಿನ ಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜುಲೈ 18: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗ ಹೊರತುಪಡಿಸಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಜುಲೈ 19ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜುಲೈ 18ರ ಗುರುವಾರವೂ ಮಂಗಳೂರು, ಮೂಲ್ಕಿ- ಮೂಡುಬಿದ್ರೆ, ಉಳ್ಳಾಲ ಹೊರತುಪಡಿಸಿ ಶಾಲೆ, ಕಾಲೇಜಿಗೆ ರಜೆ ನೀಡಿ ಆದೇಶ ಮಾಡಲಾಗಿತ್ತು. ಅದೇ ರೀತಿಯ ಆದೇಶವನ್ನು ಜುಲೈ 19ರಂದೂ ಹೊರಡಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಗುರುವಾರವೂ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಮಳೆ ಕಡಿಮೆಯಿತ್ತು. ಇಡೀ ದಿನ ಕಪ್ಪಗಿನ ಮೋಡ ಕವಿದ ವಾತಾವರಣ ಮತ್ತು ಆಗಿಂದಾಗ್ಗೆ ಜಿಟಿ ಜಿಟಿ ಮಳೆಯಾಗಿತ್ತು. 

ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

Posted by Vidyamaana on 2024-02-28 04:26:48 |

Share: | | | | |


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್‌ ಫೆ.25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್‌ ಜಹಾನ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್‌ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

ಐಟಿ ದಾಳಿ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣ: ಖದೀಮರನ್ನು ಸೆರೆ ಹಿಡಿದ ಉಡುಪಿ ಪೊಲೀಸರು

Posted by Vidyamaana on 2024-08-21 21:51:30 |

Share: | | | | |


ಐಟಿ ದಾಳಿ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣ: ಖದೀಮರನ್ನು ಸೆರೆ ಹಿಡಿದ ಉಡುಪಿ ಪೊಲೀಸರು

ಉಡುಪಿ, ಆಗಸ್ಟ್​​ 21: ಐಟಿ ಅಧಿಕಾರಿಗಳ(it officer) ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ (arrested). ಸಂತೋಷ್ ನಾಯಕ್ (45) ಮತ್ತು ದೇವರಾಜ್ ಸುಂದರ್ ಮೆಂಡನ್ (46) ಬಂಧಿತರು. ಉಳಿದ ಆರೋಪಿಗಳಿಗಾಗಿ ಉಡುಪಿ ಪೊಲೀಸ್​ರು ಶೋಧ ಮುಂದುವರಿಸಿದ್ದಾರೆ. ಜುಲೈ 25ರಂದು ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಣೂರು ಎಂಬಲ್ಲಿ ಕವಿತಾ ಎಂಬುವವರ ಮನೆಯಲ್ಲಿ ಘಟನೆ ನಡೆದಿತ್ತು.


ಸದ್ಯ 15 ದಿನಗಳ ಹಿಂದೆ ಕೃತ್ಯಕ್ಕೆ ಬಳಸಿರುವ ಇನ್ನೋವಾ ಕಾರನ್ನು ಪೊಲೀಸ್​ರು ವಶಕ್ಕೆ ಪಡೆದಿದ್ದು, ಉಡುಪಿ ನ್ಯಾಯಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಹಾರಾಷ್ಟದಿಂದ ಸಂಚು ರೂಪಿಸಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ಕೃತ್ಯ ನಡೆಸಲು ಖದೀಮರು ಯೋಜನೆ ಹಾಕಿದ್ದರು.

ಮನೆಗೆ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದ ಲೈವ್ ಸರ್ವೇಲೆನ್ಸ್ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಲಾಗಿತ್ತು. ಎಚ್ಚರಿಕೆಯ ಹಿನ್ನಲೆ ಕವಿತಾ ಮನೆಯ ಬಾಗಿಲು ಭದ್ರಪಡಿಸಿ ಒಳಗೆ ಕುಳಿತಿದ್ದರು. ಮನೆಯ ಒಳಗೆ ಪ್ರವೇಶಿಸಲು ಯತ್ನ ನಡೆಸಿ ವಿಫಲರಾಗಿ ವಾಪಾಸ್ ಆಗಿದ್ದರು. ಘಟನೆ ಬಳಿಕ ಕವಿತಾ ದೂರಿನ ಮೇಲೆ ತನಿಖೆ ನಡೆಸಿದ್ದ ಉಡುಪಿ ಪೊಲೀಸ್​, ಮಹಾರಾಷ್ಟ್ರ ಮತ್ತು ಬೆಂಗಳೂರಿನಲ್ಲಿ ಅಪರಾಧಿಗಳ ಶೋಧ ಮಾಡಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

ಕುರಿಯ : ಪತಿ ಮನೆಯಲ್ಲೇ ನೇಣಿಗೆ ಶರಣಾದ ನವ ವಿವಾಹಿತೆ

Posted by Vidyamaana on 2024-02-05 17:03:20 |

Share: | | | | |


ಕುರಿಯ : ಪತಿ ಮನೆಯಲ್ಲೇ ನೇಣಿಗೆ ಶರಣಾದ ನವ ವಿವಾಹಿತೆ

ಪುತ್ತೂರು :ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ  ಫೆ.4 ರಂದು ನಡೆದಿದೆ.


 ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು  ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.

ಹೃದಯಾಘಾತದಿಂದ ಆಟೋ ಚಾಲಕ ಅಶ್ರಫ್ ನಿಧನ

Posted by Vidyamaana on 2024-05-04 14:40:31 |

Share: | | | | |


ಹೃದಯಾಘಾತದಿಂದ ಆಟೋ ಚಾಲಕ  ಅಶ್ರಫ್ ನಿಧನ

ವಿಟ್ಲ: ಇಲ್ಲಿನ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.



Leave a Comment: