ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

Posted by Vidyamaana on 2023-11-04 08:34:52 |

Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ ೭೬ ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. ೭೬ ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ ೧೧೦೦ ಕೋಟಿ ರೂ ಮತ್ತು ಎರಡನೇ ಹಂತದಲ್ಲಿ ೧೧೦೦ ಕೋಟಿ ರೂ ಒಟ್ಟು ೨೨೦೦ ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕರಾದ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.


೨ ಫೈಓವರ್ ೧ ಅಂಡರ್‌ಪಾಸ್

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ.


ಕಿ ಮೀ ಕಡಿತವಾಗಲಿದೆ

ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ರಸ್ತೆಯು ನೇರವಾಗಿ ನಿರ್ಮಾಣವಾಗಲಿರುವ ಕಾರಣ ಕಿ ಮಿ ಅಂತರವೂ ಕಡಿಮೆಯಾಗುವ ಸಾಧ್ಯತೆ ಇದೆ.



ಶಾಸಕನಾಗಿ ಆಯ್ಕೆಯಾದ ಮೊದಲ ದಿನದಂದೇ ಚತುಷ್ಪಥ ರಸ್ತೆಯ ಕನಸು ಕಂಡಿದ್ದೆ. ಆ ಬಳಿಕ ನಾನು ಅದರ ಬಗ್ಗೆ ಮಾಹಿತಿ ಕಲೆ ಹಾಕಲು ಹೆದ್ದಾರಿ ಪ್ರಾಧಿಕಾರದ ದೆಹಲಿ ಮತ್ತು ಬೆಂಗಳೂರು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಇದೀಗ ನಾನು ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಕಾಮಗಾರಿಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೇವೆ. ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರಕಿದ್ದು ಮುಂದೆ ಯೋಜನಾ ವರದಿ ಸಿದ್ದಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ಹಂತದಲ್ಲಿ ೨೨೦೦ ಕೋಟಿ ರೂ ಅನುದಾನಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ಸುಮಾರು ೩೦೦೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ದಿಗಾಗಿ ನಾನು ಮತ್ತು ನಳಿನ್‌ಕುಮಾರ್ ಕಟೀಲ್ ಜೊತೆಯಾಗಿ ಈ ವಿಚಾರದಲ್ಲಿ ಕೆಲಸ ಮಾಡಿದ್ದೇವೆ . ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಜನತೆಯ ಬಹುವರ್ಷಗಳ ಕನಸು ಮತ್ತು ನನ್ನ ಕನಸು ನನಸಾಗಿದ್ದು ಇದು ಬಹಳ ಸಂತೋಷದ ವಿಚಾರವಾಗಿದೆ


ಅಶೋಕ್ ರೈ, ಶಾಸಕರು ಪುತ್ತೂರು

ಮಸೀದಿ ಆವರಣದಲ್ಲಿ ಘೋಷಣೆ ಕೂಗಿದ್ದಾಗಿ ಮಸೀದಿ ಆಡಳಿತ ಮಂಡಳಿಯಿಂದ ಕಡಬ ಠಾಣೆಗೆ ದೂರು

Posted by Vidyamaana on 2023-09-25 17:22:20 |

Share: | | | | |


ಮಸೀದಿ ಆವರಣದಲ್ಲಿ  ಘೋಷಣೆ ಕೂಗಿದ್ದಾಗಿ ಮಸೀದಿ ಆಡಳಿತ ಮಂಡಳಿಯಿಂದ ಕಡಬ ಠಾಣೆಗೆ ದೂರು

ಪುತ್ತೂರು: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ.


ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಕಡಬ ಠಾಣೆ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಘಟನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮಸೀದಿ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ನೋಡಿ ತಕ್ಷಣ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿ‌ನಲ್ಲಿ ತಿಳಿಸಲಾಗಿದೆ.


ಸ್ಥಳಕ್ಕಾಗಮಿಸಿದ ಕಡಬ ಠಾಣೆ ಎಸ್ಐ ಹಾಗೂ ಉಪ್ಪಿನಂಗಡಿ ಠಾಣೆ ಎಸ್ಐ ಮತ್ತು ಸಿಬಂದಿ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಫೈಝಲ್ ಸಂಶಯಾಸ್ಪದ ಮೃತ್ಯು

Posted by Vidyamaana on 2024-03-31 13:44:12 |

Share: | | | | |


ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಫೈಝಲ್ ಸಂಶಯಾಸ್ಪದ ಮೃತ್ಯು

ಬ್ರಹ್ಮಾವರ , ಮಾ.31: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬವರ ಮೃತದೇಹವು ಮಾ.29ರಂದು ಮಧ್ಯಾಹ್ನ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ.ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಇವರು ಮಾ.27ರಂದು ರಾತ್ರಿ ಮನೆಯಿಂದ ರಿಕ್ಷಾದಲ್ಲಿ ಹೋಗಿದ್ದರು.ಬಳಿಕ ಹುಡು ಕಾಡಿದಾಗ ಮನೆ ಬಳಿಯ ಮೈದಾನದ ಸಮೀಪ ಇವರ ರಿಕ್ಷಾ ಪತ್ತೆಯಾಗಿತ್ತು. 

ಗುರುಗಳಿಗೆ ಮುಳಿಯ ನಮನ: ಚಿನ್ನ-ಬೆಳ್ಳಿ ಖರೀದಿ ಮೇಲೆ ವಿಶೇಷ ರಿಯಾಯಿತಿ

Posted by Vidyamaana on 2023-09-05 08:36:08 |

Share: | | | | |


ಗುರುಗಳಿಗೆ ಮುಳಿಯ ನಮನ: ಚಿನ್ನ-ಬೆಳ್ಳಿ ಖರೀದಿ ಮೇಲೆ ವಿಶೇಷ ರಿಯಾಯಿತಿ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  ಗುರುವಂದನೆ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.


ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.


ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್  ಪ್ರಕಟಿಸಿದೆ.

ಸೌಜನ್ಯ ರೇಪ್ ಮರ್ಡರ್ ಖಂಡಿಸಿ ಪುತ್ತಿಲ ಪರಿವಾರದ ವತಿಯಿಂದ ಆ.14 ಕ್ಕೆ ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥ - ರಸ್ತೆ ತಡೆ

Posted by Vidyamaana on 2023-08-08 15:05:12 |

Share: | | | | |


ಸೌಜನ್ಯ ರೇಪ್  ಮರ್ಡರ್ ಖಂಡಿಸಿ ಪುತ್ತಿಲ ಪರಿವಾರದ ವತಿಯಿಂದ ಆ.14 ಕ್ಕೆ ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥ - ರಸ್ತೆ ತಡೆ

ಪುತ್ತೂರು: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆ. 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ನಮ್ಮ ನಡೆ ನ್ಯಾಯದ ಕಡೆ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ.ಆ.8 ರಂದು ಪುತ್ತಿಲ ಪರಿವಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ

ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಆ.8 ರ ಪೂರ್ವಭಾವಿ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ, ಪ್ರಮುಖರಾದ ಸುನೀಲ್ ಬೋರ್ಕರ್, ರವಿ ಕುಮಾರ್ ಕೆದಂಬಾಡಿ ಮಠ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣಪ್ರಸಾದ್ ಶೆಟ್ಟಿ, ಚಂದ್ರಹಾಸ್ ಈಶ್ವರಮಂಗಲ, ಪ್ರೇಮ್ ರಾಜ್ ಆರ್ಲಪದವು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು

ಸಹೋದರಿ ಸೌಜನ್ಯಳಿಗೆ ನ್ಯಾಯಕ್ಕಾಗಿ 1 ಗಂಟೆ ಬಂದ್ ಮಾಡುವಂತೆ ಮನವಿ: ಪುತ್ತೂರು ಪೇಟೆಯ ವರ್ತಕರು ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿ ಮಾಡಿದೆ.

ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Posted by Vidyamaana on 2024-04-16 11:38:03 |

Share: | | | | |


ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡವನ್ನು ದೇಶದ ಬಲಿಷ್ಠ ಜಿಲ್ಲೆಯಾಗಿ ರೂಪಿಸಲು ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಅಡ್ಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.

ಜಿಲ್ಲೆಯನ್ನು ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಮಾಡಲು ಬೇಕಾದ ಮೂಲಸೌಕರ್ಯಗಳು ಇವೆ. ಇದರ ಜೊತೆಗೆ ಹೂಡಿಕೆ, ಉದ್ದಿಮೆಗೆ ಪ್ರೋತ್ಸಾಹ ನೀಡಿ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯ. ಮಾತ್ರವಲ್ಲ ಎಂದರು.



Leave a Comment: