ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ವಿಶ್ಲೇಶ್ ಆತ್ಮಹತ್ಯೆ

Posted by Vidyamaana on 2024-03-09 20:09:25 |

Share: | | | | |


ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ವಿಶ್ಲೇಶ್ ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಶ್ಲೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

Posted by Vidyamaana on 2023-05-28 13:44:56 |

Share: | | | | |


ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

ಕಡಬ : ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಬೆನ್ನಿಗೇ ಮತ್ತೆ ಕಾಡಾನೆ ದಾಳಿ ನಡೆದಿದೆ. ಆದರೆ ವ್ಯಕ್ತಿ ಪವಾಡಸದೃಶ ಪಾರಾಗಿದ್ದು, ಗಂಭೀರ ಗಾಯಗೊಂಡಿದ್ದಾರೆ

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಮೇ 28ರಂದು ಮಧ್ಯಾಹ್ನ ನಡೆದಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್ ಕಾಡಾನೆ ದಾಳಿಯಿಂದ ಗಾಯಗೊಂಡವರು. ಇವರು ಮಧ್ಯಾಹ್ನ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಇಚ್ಲಂಪಾಡಿ ಗ್ರಾಮದ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡಿರುವ ವಿಜುಕುಮಾರ್ ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಪುತ್ತೂರಿನ ನೆಲದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಹತ್ತೂರ ಜನತೆಯನ್ನು ಧನ್ಯರಾಗಿಸಿದ ಪುತ್ತಿಲ ಪರಿವಾರದ ಕಾರ್ಯಕ್ರಮ

Posted by Vidyamaana on 2023-12-27 11:43:03 |

Share: | | | | |


ಪುತ್ತೂರಿನ ನೆಲದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಹತ್ತೂರ ಜನತೆಯನ್ನು ಧನ್ಯರಾಗಿಸಿದ ಪುತ್ತಿಲ ಪರಿವಾರದ ಕಾರ್ಯಕ್ರಮ

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.

ಹಿಂದುಗಳು ಹಿಂದೂಗಳಾಗಿ ಉಳಿದರೆ ರಾಮ ಮಂದಿರ ಉಳಿಯುತ್ತದೆ. ಜತೆಗೆ ಮೋದಿ ಇರುವಷ್ಟು ಕಾಲ ಮಂದಿರ ಇರುತ್ತದೆ. ಮೋದಿಯನ್ನು ಕಿತ್ತೊಗೆಯುವ ಅಪಸ್ವರಗಳು ಪ್ರಸ್ತುತ ಕೇಳಿ ಬರುತ್ತಿದ್ದು, ಅದನ್ನು ಸುಳ್ಳಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ರಕ್ತಗತಗೊಳಿಸಬೇಕಾದ ಅಗತ್ಯವಿದೆ ಎಂದು ನುಡಿದರು.

ಸ್ವಾಮೀಜಿಯವರು ಶ್ರೀನಿವಾಸ ಕಲ್ಯಾಣೋತ್ಸವದ ಮಾಂಗಲ್ಯ ಧಾರಣೆ ಸಹಿತ ಎಲ್ಲಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಈ ಸಂದರ್ಭ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ಸ್ವಾಮೀಜಿಗಳಿಗೆ ಪುಷ್ಪವೃಷ್ಠಿ ಸಮರ್ಪಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಉಮೇಶ್ಕೋಡಿಬೈಲು, ಪ್ರಸನ್ನ ಕುಮಾರ ಮಾರ್ತ ಸಹಿತಿ ಸೇವಾರ್ಥಿಗಳು ಪುಷ್ಪವೃಷ್ಠಿ ಮಾಡಿದರು.

ಸೋಮವಾರ ರಾತ್ರಿ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದು, ಶ್ರೀನಿವಾಸ ಕಲ್ಯಾಣೋತ್ಸವವನ್ನು ಸಂಭ್ರಮದಿಂದ ವೀಕ್ಷಿಸಿದರು. ಈ ಸಂದರ್ಭದಲ್ಲಿ ಭಜನೆ, ಭಜನಾ ಸಂಕೀರ್ತನೆ, ಆಕರ್ಷಕ ಕುಣಿತ ಭಜನೆ, ಭಕ್ತಿ ರಸಮಂಜರಿ ಜರಗಿತು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಸುಡುಮದ್ದು ಪ್ರದರ್ಶನವೂ ನಡೆಯಿತು. ತಿರುಪತಿ ಕ್ಷೇತ್ರ ಮೂಲದ ಬೆಂಗಳೂರಿನ ಲಕ್ಷ್ಮೀಪತಿ ನೇತೃತ್ವದಲ್ಲಿ ಸುಮಾರು 27 ಮಂದಿ ಆಗಮಿಕರು ಕಲ್ಯಾಣೋತ್ಸವವನ್ನು ನಡೆಸಿಕೊಟ್ಟರು. ಸಂಜೆ ಗೋಧೋಳಿ ಸಮಯದಲ್ಲಿಭಕ್ತರ ಗೋವಿಂದನ ಉದ್ಘೋಷದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಮಹಾಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು. 

ಈ ಸಂದರ್ಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಕೋಶಾಧಿಕಾರಿ ಉದಯ ಕುಮಾರ್ ರೈ ಸಂಪ್ಯ, ಸ್ವಾಗತ ಸಮಿತಿ ಅಧ್ಯಕ್ಷ ಕಿರಣ್ಧರ್ಮಸ್ಥಳ, ಸಂಚಾಲಕ  ರವಿಕುಮಾರ್ ರೈ ಕೆದಂಬಾಡಿ, ಕಾರ್ಯದರ್ಶಿಗಳಾದ ಗಣೇಶ್ ಚಂದ್ರ ಭಟ್, ನಟೇಶ್ಪೂಜಾರಿ, ವಿವಿಧ ಸಮಿತಿ ಸಂಚಾಲಕರು, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

Posted by Vidyamaana on 2024-02-22 06:28:44 |

Share: | | | | |


ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ  ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್  ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕ್ವೆ ನಿವಾಸಿ  ಸಫ್ವಾನ್  ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ವಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

 ಸಂಪ್ಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಯಾನಂದ ನಾಯ್ಕ ದಿಢೀರ್‌ ವರ್ಗಾವಣೆ

Posted by Vidyamaana on 2024-02-14 20:59:58 |

Share: | | | | |


ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಯಾನಂದ ನಾಯ್ಕ ದಿಢೀರ್‌ ವರ್ಗಾವಣೆ

ಮಂಗಳೂರು : ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್‌.ಲೋಬೊ ಕೂಡ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಕ ಮಾಡಲಾಗಿದೆ

ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

Posted by Vidyamaana on 2023-06-30 16:40:35 |

Share: | | | | |


ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.

ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತ ಯುವಕ. ಯತೀಶ್ ಕೈಕಂಬದ ಹೋಲಿ ಫ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.

ಈ ವೇಳೆ ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಹಾಕಿದ್ದ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.



Leave a Comment: