ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

Posted by Vidyamaana on 2024-08-12 07:05:50 |

Share: | | | | |


ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ(ಆಗಸ್ಟ್ 11) ವೇಳೆ ನಡೆದಿದೆ.

ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

ಬಂಟ್ವಾಳ: ಅಕ್ರಮ ಮರಳು ಸಾಗಾಟ - ಲಾರಿ ವಶಕ್ಕೆ

Posted by Vidyamaana on 2023-11-30 13:06:33 |

Share: | | | | |


ಬಂಟ್ವಾಳ: ಅಕ್ರಮ ಮರಳು ಸಾಗಾಟ - ಲಾರಿ ವಶಕ್ಕೆ

ಬಂಟ್ವಾಳ : ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.


ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಲಾರಿ ಮತ್ತು ಮರಳಿನ ಮೌಲ್ಯ ಒಟ್ಟು 2 ಲಕ್ಷ 5 ಸಾವಿರ ಎಂದು ಅಂದಾಜಿಸಲಾಗಿದೆ.


ಸಜೀಪ ಹೊಳೆಬದಿಯಲ್ಲಿ ಅಬ್ದುಲ್ ರಹಮಾನ್ ಎಂಬವರು ಮರಳುಗಾರಿಕೆ ‌ನಡೆಸುತ್ತಿದ್ದು,ಅವರು ಲಾರಿಗೆ ಲೋಡ್ ಮಾಡಿ ಕಳುಹಿಸಿದ ಬಗ್ಗೆ ಲಾರಿ ಚಾಲಕ ಮಹಮ್ಮದ್ ಶಾಫಿ ಪೋಲೀಸರಿಗೆ ತಿಳಿಸಿದ್ದಾನೆ.


ಪರವಾನಿಗೆ ರಹಿತವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ, ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿ ಮರೀಬೇಡಿ: ಯತ್ನಾಳ್

Posted by Vidyamaana on 2023-12-12 12:37:53 |

Share: | | | | |


ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ, ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿ ಮರೀಬೇಡಿ: ಯತ್ನಾಳ್

ಬೆಳಗಾವಿ: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಯತ್ನಾಳ್ ವಿರುದ್ಧ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ. ಬಿ.ಕೆ.ಹರಿಪ್ರಸಾದ್ ಅವರು ಮಾಧ್ಯಮದಲ್ಲಿ ಯಾರೋ ಹೊರಗಿನಿಂದ ಬಂದವರು ಅಂತಾ ಬೈಯ್ಯುತ್ತಿದ್ದರು. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತಿದೆ. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಯತ್ನಾಳ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.

ಪುತ್ತೂರು : ಬಾಯ್ದೆರೆದ ಹೊಂಡ: ಸೇತುವೆಯಲ್ಲಿದೆ ಅಪಾಯ ನೋಡ

Posted by Vidyamaana on 2024-06-06 11:51:22 |

Share: | | | | |


ಪುತ್ತೂರು : ಬಾಯ್ದೆರೆದ ಹೊಂಡ: ಸೇತುವೆಯಲ್ಲಿದೆ ಅಪಾಯ ನೋಡ

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿರುವ ಆದರ್ಶ ಆಸ್ಪತ್ರೆ ಸಮೀಪದ ಸೇತುವೆ ಮೇಲೆ ಹೊಂಡವೊಂದು ಬಾಯ್ದೆರೆದು ಕೂತಿದೆ. ದಿನದಿಂದ ದಿನಕ್ಕೆ ಗಾತ್ರ ಹಿಗ್ಗಿಸಿಕೊಳ್ಳುತ್ತಿದ್ದು, ವಾಹನ ಸವಾಹರರಿಗೆ, ಪಾದಚಾರಿಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.

ಪುತ್ತೂರು ಕ್ಷೇತ್ರದಿಂದ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿ :ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಆಗ್ರಹ

Posted by Vidyamaana on 2023-04-11 03:00:56 |

Share: | | | | |


ಪುತ್ತೂರು ಕ್ಷೇತ್ರದಿಂದ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿ :ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಆಗ್ರಹ

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಎರಡು ಸ್ಥಾನಗಳಲ್ಲಿ ಒಕ್ಕಲಿಗ ಗೌಡರಿಗೆ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಪರಿಗಣಿಸಲೇಬೇಕು ಎಂದು ಅವರು ಆಗ್ರಹಿಸಿದರು.

ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ನಮ್ಮ ಸಮುದಾಯದ ಸಮರ್ಥ ನಾಯಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಮಠಂದೂರು ಅವರಿಗೆ ಟಿಕೆಟ್ ದೊರೆಯದಿರಲು ಕಾರಣವೇನುಎಂದು ಅವರು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಸುಮಾರು 3.75 ಲಕ್ಷ ಮತದಾರರಿದ್ದು, ಈ ಪೈಕಿ ಪುತ್ತೂರಿನಲ್ಲಿ ಅತೀ ಹೆಚ್ಚು ಗೌಡ ಸಮುದಾಯದ ಮತದಾರರಿದ್ದಾರೆ. ಆದ್ದರಿ0ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಒಂದು ಸ್ಥಾನ ನೀಡಬೇಕು ಎಂದು ಈ ಹಿಂದೆಯೇ ವಿವಿಧ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಲಾಗಿತ್ತು.ಆದರೆ ಇತ್ತೀಚಿನ ವರದಿಗಳನ್ನು ಗಮನಿಸಿದಾಗ ಸಮುದಾಯದ ಯಾವೊಬ್ಬ ನಾಯಕರ ಹೆಸರೂ ಪ್ರಸ್ತಾಪವಾಗಿರುವುದು ಕಂಡು ಬಂದಿಲ್ಲ.ಪುತ್ತೂರಿನಲ್ಲಿ ಗೌಡ ಸಮುದಾಯದವರಿಗೆ ಸ್ಥಾನ ಕಲ್ಪಿಸದಿದ್ದಲ್ಲಿ ಮೇ 10ರಂದು ನಡೆಯುವ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ಪದ್ಮನಾಭ ಗೌಡ, ಗುರುದೇವ್‌ ಯು.ಬಿ. ಉಪಸ್ಥಿತರಿದ್ದರು.

ಪ್ರಾಮಾಣಿಕರಿಗೆ ಇರಿಸು- ಮುರುಸು

ಪಕ್ಷಗಳಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕವಾಗಿ ಸಂಘಟನೆ ಮಾಡುತ್ತಿರುವವರಿಗೆ ಚುನಾವಣೆ ಸಂದರ್ಭದಲ್ಲಿ ಜಾತಿಯಾಧಾರದ ಮೇಲೆ ಟಿಕೆಟ್ ಕೇಳುವವರಿಂದಾಗಿ ಇರಿಸು ಮುರುಸು ಉಂಟಾಗಿದೆ. ಹಲವು ವರ್ಷಗಳ ಕಾಲ ಪಕ್ಷವನ್ನ ಸಂಘಟನೆ ಮಾಡಿ, ಬಲಿಷ್ಠಗೊಳಿಸಿದ ಕಾರ್ಯಕರ್ತರು ಒಂದೆಡೆ ಟಿಕೆಟ್‌ಗಾಗಿ ನಿಷ್ಠೆಯಿಂದ ಪ್ರಯತ್ನ ನಡೆಸುತ್ತಿದ್ದರೆ, ಇನ್ನೊಂದೆಡೆ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಜಾತಿಯ ಆಧಾರದ ಮೇಲೆ ಒತ್ತಡ ಹೇರುವವರಿಂದಾಗಿ ಪ್ರಾಮಾಣಿಕರಿಗೆ ಬೇಸರ ಉಂಟಾಗಿದೆ.


Recent News


Leave a Comment: