ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

Posted by Vidyamaana on 2024-03-11 23:19:42 |

Share: | | | | |


ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.


ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.

ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

Posted by Vidyamaana on 2024-03-18 20:29:07 |

Share: | | | | |


ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.  ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ವ್ಯಕ್ತಿ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಲಾಯಿತು. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಲಾಕಪ್ ಡೆತ್​ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಯಲು

Posted by Vidyamaana on 2024-05-29 22:29:32 |

Share: | | | | |


ಲಾಕಪ್ ಡೆತ್​ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಯಲು

ದಾವಣಗೆರೆ:- ಚನ್ನಗಿರಿ ಲಾಕಪ್ ಡೆತ್​ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆದಿಲ್ ಸಾವಿನ ರಹಸ್ಯ ಬಯಲಾಗಿದೆ.ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ‌ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ.

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

Posted by Vidyamaana on 2023-10-08 21:23:11 |

Share: | | | | |


ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

 ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ.ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.


ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಇದೀಗ ಈ ಸಾಲಿಗೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ ಸೇರಿದ್ದು, ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯಲ್ಲಿನ ಶೇ 75ರಷ್ಟು ಜನರಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪತ್ರಿಕೆಯೊಂದರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ನಿಜ.


ಆದರೆ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸದೆ, ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಚುನಾವಣೆ ಮುಗಿದು ನಾಲ್ಕುತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿತ್ತು.


ಇದೀಗ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗುತ್ತದೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೂ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಪಕ್ಷವು ನನಗೆ ಎಲ್ಲವನ್ನೂ ನೀಡಿದೆ. ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಪಕ್ಷಕ್ಕೆ ಈ ಸ್ಥಿತಿ ಬಂದಿರುವುದರ ಬಗ್ಗೆ ನೋವಿದೆ.


ಅದನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹ. ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಾಸ್ತವ ವಿಚಾರಗಳನ್ನು ಮಾತನಾಡಲು ನನಗೆ ಯಾವ ರೀತಿಯ ಭಯವೂ ಇಲ್ಲ ಎಂದು ಹೇಳಿದರು.

ಸಂವಿಧಾನ ತಿರಸ್ಕರಿಸಿ ಮನುವಾದ ಪುರಸ್ಕರಿಸುವ ಶಕ್ತಿಗಳು: ಸಿದ್ದರಾಮಯ್ಯ

Posted by Vidyamaana on 2024-04-06 21:41:11 |

Share: | | | | |


ಸಂವಿಧಾನ ತಿರಸ್ಕರಿಸಿ ಮನುವಾದ ಪುರಸ್ಕರಿಸುವ ಶಕ್ತಿಗಳು: ಸಿದ್ದರಾಮಯ್ಯ

ಮಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ ಕುಮಾರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೊಬ್ಬ ಅವಹೇಳನ ಮಾಡಿ ಪೋಸ್ಟ್‌ ಮಾಡಿದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.


ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ ಎಂದು ಸಿಎಂ ಹೇಳಿದ್ದಾರೆ.


ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಹಂಚಿಕೊಂಡ ಸಿಎಂ, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ

ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

Posted by Vidyamaana on 2024-06-25 21:18:36 |

Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

ಬೆಂಗಳೂರು , ಜೂನ್‌ 25: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರವಾಗಿ ಕೊಲೆಯಾಗಿದ್ದು, ಈ ಪ್ರಕರಣ ಕುರಿತು ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಜೈಲುವಶವಾಗಿದ್ದಾರೆ. ಆದರೆ ಕುಟುಂಬದ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡ ತಂದೆ ತಾಯಿ ಇಂದು (ಮಂಗಳವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಪುತ್ರನಿ ಸಾವಿನ ಕುರಿತು ತಂದಿ ತಾಯಿ ಇಬ್ಬರು ಕಣ್ಣೀರು ಹಾಕಿದ್ದಾರೆ. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ.

Recent News


Leave a Comment: