ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಡಬಲ್ ಮರ್ಡರ್: ಮದುವೆಯಾಗಿ 30 ದಿನಕ್ಕೆ ಓಡಿಹೋದ ಹೆಂಡ್ತಿಯನ್ನು ಪ್ರಿಯಕರನೊಂದಿಗೆ ಕೊಲೆಗೈದ ಗಂಡ

Posted by Vidyamaana on 2024-01-31 10:34:46 |

Share: | | | | |


ಡಬಲ್ ಮರ್ಡರ್: ಮದುವೆಯಾಗಿ 30 ದಿನಕ್ಕೆ ಓಡಿಹೋದ ಹೆಂಡ್ತಿಯನ್ನು ಪ್ರಿಯಕರನೊಂದಿಗೆ ಕೊಲೆಗೈದ ಗಂಡ

ಬೆಳಗಾವಿ : ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಚಂದುಳ್ಳಿ ಚಲುವೆ ಮದುವೆಗೂ ಮೊದಲೇ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಆದರೆ, ಮನೆಯವರ ಬಲವಂತಕ್ಕೆ ಪ್ರೀತಿ ಮುಚ್ಚಿಟ್ಟು ಮದುವೆಯಾದ ಹೆಂಡತಿ ತನ್ನ ಹಳೇ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ.ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ಮಾಡಿಕೊಂಡ ಗಂಡ ಇಬ್ಬರೂ ಚೆನ್ನಾಗಿರುವುದನ್ನು ನೋಡಿ ಸಹಿಸಿಕೊಳ್ಳಲಾಗದೇ ಬರ್ಬರವಾಗಿ ಕೊಲೆ ಮಾಡಿದ್ದಾನೆ.


ಹೌದು, ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ.ತೌಫಿಕ್ ಹಾಗೂ ಹೀನಾ ಕೌಸರ್‌ಳಿಗೆ ಕಳೆದ 4 ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ 1 ತಿಂಗಳಿಗೆ (30 ದಿನಗಳು) ಹೆಂಡತಿ ಹೀನಾ ಕೌಸರ್ ಆಕೆಯ ಹಳೆ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಇದಾದ ಬಳಿಕ ಪುನಃ ಅವರನ್ನು ಮನೆಯವರು ಹುಡುಕಿ ಸಮಾಜದ ಮುಖಂಡರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದರು. ಈ ವೇಳೆ ತಾನು ತೌಫಿಕ್‌ ಜೊತೆಗೆ ಸಂಸಾರ ಮಾಡುವುದಕ್ಕೆ ಇಷ್ಟವಿಲ್ಲ, ಯಾಸೀನ್‌ನೇ ಬೇಕು ಎಂದು ಹೀನಾ ಹಠ ಮಾಡಿದ್ದಾಳೆ. ಆಗ ಗ್ರಾಮಸ್ಥರೆಲ್ಲರೂ ಸೇರಿ ತೌಫಿಕ್‌ ಜೊತೆಗಿನ ವಿವಾಹವನ್ನು ಮುರಿದು ಯಾಸಿನ್ ಬಾಗೊಡೆ ಜೊತೆಗೆ ಹಿರಿಯರೆಲ್ಲರು ಸೇರಿ ಮದುವೆ ಮಾಡಿಸಿದ್ದರು.


ಜೀವನದಲ್ಲಿ ಹೇಗೆಲ್ಲಾ ಇರಬೇಕು ಎಂದು ಕನಸು ಕಟ್ಟಿಕೊಂಡು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಮದುವೆಯಾದ ಹೆಂಡತಿ ಕೇವಲ ಒಂದು ತಿಂಗಳಿಗೆ ಬೇರೊಬ್ಬನ ಜೊತೆಗೆ ಮದುವೆಯಾಗಿ ಸಂಸಾರ ಮಾಡುತ್ತಿದ್ದಾಳೆ. ಇದನ್ನು ಕಂಡು ಸಹಿಸಿಕೊಳ್ಳಲಾಗದ ತೌಫಿಕ್‌ ತನ್ನ ಮಾಜಿ ಪತ್ನಿ ಹಾಗೂ ಆಕೆಯ ಹಾಲಿ ಗಂಡನನ್ನು ಹುಡುಕಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನು ಇಬ್ಬರನ್ನು ಕೊಲೆ ಮಾಡಿದ ಬಳಿಕ ತಾನು ನೇರವಾಗಿ ಪೊಲೀಸ್ ಠಾಣೆಗೆ ಹೋಗುವುದಾಗಿ ಹೇಳಿದ ತೌಫಿಕ್ ಅಲ್ಲಿಂದ ಪರಾರಿ ಆಗಿದ್ದಾನೆ.ಡಬಲ್ ಮರ್ಡರ್ ನಡೆದ ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಬಂದು ಪರಿಶೀಲನೆ ಮಾಡಿದ್ದಾರೆ. ಈಗ ಆರೋಪಿ ತೌಫಿಕ್‌ನ ಪತ್ತೆಗಾಗಿ ಪೊಲೀಸರು ಎರಡೂ ತಂಡಗಳಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ. ಆದರೆ, ಈ ಪ್ರೇಮ ಹಾಗೂ ವಿವಾಹ ಪ್ರಕರಣದಲ್ಲಿ ಯಾರದ್ದು ತಪ್ಪು ಎಂದು ಹೇಳಲು ಬರುವುದಿಲ್ಲವಾದರೂ, ಕಾನೂನಿನ ರೀತಿಯಲ್ಲಿ ಕೊಲೆ ಮಾಡಿದ್ದಂತೂ ದೊಡ್ಡ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಶಿಕ್ಷೆಯಾಗಲಿದೆ.

ಪೊಲೀಸ್ ಠಾಣೆಯಲ್ಲೇ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

Posted by Vidyamaana on 2023-11-21 16:38:20 |

Share: | | | | |


ಪೊಲೀಸ್ ಠಾಣೆಯಲ್ಲೇ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

ಹಾಸನ: ಪೊಲೀಸ್ ಠಾಣೆಯಲ್ಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ಸೋಮವಾರ ನಡೆದಿದೆ.ಕಿರುಕುಳದಿಂದ ಬೇಸತ್ತು ಪತ್ನಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.ಹರೀಶ್​ (34) ಪ್ರಕರಣದ ಆರೋಪಿ. ಶಿಲ್ಪಾ ಗಂಡನಿಂದ ಹಲ್ಲೆಗೊಳಗಾದವರು. 


ಹರೀಶ್ ಮತ್ತು​ ಶಿಲ್ಪಾ ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಹಾಸನದ ಕೈಗಾರಿಕಾ ಪ್ರದೇಶದ ಸಮೀಪವಿರುವ ಬಿಟ್ಟಗೌಡನಹಳ್ಳಿಯಲ್ಲಿ ವಾಸವಿದ್ದರು. ಪತ್ನಿ ವಿರುದ್ಧ ಆರೋಪಿ ಅನುಮಾನ ಪಡುತ್ತಿದ್ದ. ಈ ನಡೆಯನ್ನು ಪ್ರಶ್ನಿಸಿದರೆ ಹಲ್ಲೆ ಮಾಡುತ್ತಿದ್ದ. ಹೀಗೆ ಪ್ರತಿನಿತ್ಯದ ಕಿರುಕುಳದಿಂದ ನೊಂದ ಶಿಲ್ಪಾ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು.


ದೂರಿನಂತೆ ಪೊಲೀಸರು ಆರೋಪಿಯನ್ನು ಕರೆಯಿಸಿ ಬುದ್ಧಿ ಹೇಳಲು ಮುಂದಾಗಿದ್ದರು. ಈ ವೇಳೆ ಪಿಎಸ್‌ಐ ಉಮಾ ಅವರು ಹರೀಶ್​ನನ್ನು ವಿಚಾರಣೆ ಮಾಡುತ್ತಿದ್ದರು. ಇದರಿಂದ ಕುಪಿತನಾದ ಆತ ಪೊಲೀಸರೆದುರೇ ಪತ್ನಿಯ ಹತ್ಯೆ ಮುಂದಾದ. ತಾನು ಮೊದಲೇ ತಂದಿದ್ದ ಚಾಕುವಿನಿಂದ ಕುತ್ತಿಗೆ ಕೊಯ್ದಿದ್ದಾನೆ.ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಚಾಕು ಕಿತ್ತುಕೊಂಡಿದ್ದಾರೆ.


ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹರೀಶ್‌ ವಿರುದ್ಧ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

Posted by Vidyamaana on 2024-04-09 17:32:02 |

Share: | | | | |


ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. 


ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

Posted by Vidyamaana on 2023-08-04 09:10:15 |

Share: | | | | |


ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

 ಪುತ್ತೂರು: ಅಪಘಾತ ಸಂದರ್ಭ ತಲೆಯನ್ನು ರಕ್ಷಿಸುವ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಈಗಾಗಲೇ ಕಡ್ಡಾಯ ಮಾಡಲಾಗಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅರ್ಧ ಹೆಲ್ಮೆಟ್ ಧಾರಣೆಗೆ ಮತ್ತು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳಿಗೂ ಪುತ್ತೂರಿನಲ್ಲೂ ಶೀಘ್ರವೇ ಮುಕ್ತಿ ಸಿಗಲಿದೆ ಎಂದು ತಿಳಿದುಬಂದಿದೆ.

ಹೆಲ್ಮೆಟ್ ಕಡ್ಡಾಯ ಮಾಡುತ್ತಿದ್ದಂತೆ, ವಿವಿಧ ವಿನ್ಯಾಸದ ಹೆಲ್ಮೆಟ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದವು. ದ್ವಿಚಕ್ರ ವಾಹನ ಸವಾರರು ವೈವಿಧ್ಯಮಯವಾದ ಹೆಲ್ಮೆಟ್‌ಗಳನ್ನು ಧರಿಸಿಕೊಂಡು ಓಡಾಡುವುದನ್ನು ಕಾಣಬಹುದು. ಇದರಲ್ಲಿ ಕೆಲವಷ್ಟೇ ಭದ್ರತೆಯನ್ನು ನೀಡಿದರೆ, ಉಳಿದವುಗಳು ಕೇವಲ ಫ್ಯಾಷನ್‌ಗಷ್ಟೇ ಸೀಮಿತವಾಗಿವೆ. ಇಂತಹ ಹೆಲ್ಮೆಟ್‌ಗಳು ಜೀವಕ್ಕೆ ಭದ್ರತೆಯನ್ನು ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಅರ್ಧ ಹೆಲ್ಮೆಟ್‌ಗಳು ಕೂಡ ಒಂದು.

ಇನ್ನು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳು ಅಪಘಾತದ ಸಂದರ್ಭದಲ್ಲಿ ಸವಾರನಿಗೆ ರಕ್ಷಣೆ ನೀಡುವುದಿಲ್ಲ ಬದಲಾಗಿ ಇದು ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಹಲವರು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಾರೆ.

ಅರ್ಧ ಹೆಲ್ಮೆಟ್‌ಗಳು ಮುಖದ ಭಾಗಕ್ಕೆ, ಕತ್ತಿನ ಭಾಗಕ್ಕೆ ಹಾಗೂ ತಲೆಯ ಎರಡು ಬದಿಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ. ಅಪಘಾತ ಸಂಭವಿಸಿದಾಗ ಮುಖದ ಹಾಗೂ ತಲೆಯ ಹಿಂಬದಿ ಭಾಗಕ್ಕೆ ಗಂಭೀರ ಗಾಯಗಳಾಗುವ ಸಾಧ್ಯತೆಗಳೇ ಅಧಿಕ. ಈ ಎಲ್ಲಾ ದೃಷ್ಟಿಯಿಂದ ಅರ್ಧ ಹೆಲ್ಮೆಟ್‌ಗಳಿಗೆ ಮುಕ್ತಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲವೇ ದಿನಗಳಲ್ಲಿ ಪುತ್ತೂರಿನಲ್ಲಿ ಅರ್ಧ ಹೆಲ್ಮೆಟ್‌ಗಳಿಗೆ ಮತ್ತು ಐ.ಎಸ್.ಐ ಮಾರ್ಕ್ ರಹಿತ ಹೆಲ್ಮೆಟ್ ಗಳಿಗೆ ಮುಕ್ತಿ ಸಿಗುವುದು ಪಕ್ಕಾ. ಫ್ಯಾಶನ್ ಬದಲು ವಾಹನ ಸವಾರರ ಜೀವ ಉಳಿಸಲು ಒತ್ತು ನೀಡಬೇಕು ಎನ್ನುವ ಆಶಯ ಇದರ ಹಿಂದಿದೆ.

ನಾಪತ್ತೆಯಾದ ನೇಹಾ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆ

Posted by Vidyamaana on 2024-05-29 13:49:17 |

Share: | | | | |


ನಾಪತ್ತೆಯಾದ ನೇಹಾ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆ

ಮಂಗಳೂರು :  ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ  ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parish

non

) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

ಸ್ನಾನ ಮಾಡುತ್ತಿದ್ದ ಯುವತಿಯರ ವಿಡಿಯೋ ಚಿತ್ರೀಕರಣ: ಕುಂದಾಪುರ ಮೂಲದ ರಘುರಾಮ್ ಬಂಧನ

Posted by Vidyamaana on 2023-05-25 09:34:57 |

Share: | | | | |


ಸ್ನಾನ ಮಾಡುತ್ತಿದ್ದ ಯುವತಿಯರ ವಿಡಿಯೋ ಚಿತ್ರೀಕರಣ: ಕುಂದಾಪುರ ಮೂಲದ ರಘುರಾಮ್ ಬಂಧನ

ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಮೂಲದ ಆರೋಪಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪಶ್ಚಿಮ ಬಂಗಾಳ ಮೂಲದ 22 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಕುಂದಾಪುರ ಮೂಲದ ರಘುರಾಮ್‌ ಎಂಬಾತನನ್ನು ಬಂಧಿಸಲಾಗಿದೆ.ನಿಸರ್ಗ ಗಾರ್ಡನ್‌ನಲ್ಲಿ ಕ್ಯಾಟರಿಂಗ್‌ ನಡೆಸುತ್ತಿದ್ದ ರಘುರಾಮ್‌, ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಬಾಗ್‌ ಮನೆ ಟೆಕ್‌ಪಾರ್ಕ್‌ ಹಾಗೂ ಮತ್ತಿತರ ಕಡೆಗಳಿಗೆ ಕ್ಯಾಟರಿಂಗ್‌ ವ್ಯವಸ್ಥೆ ಕಲ್ಪಿಸುತ್ತಿದ್ದ. ಸಂತ್ರಸ್ತೆ ಕ್ಯಾಟರಿಂಗ್‌ ನ ಕ್ಯಾಷಿಯರ್‌ ಆಗಿದ್ದರೆ, ಆಕೆಯ ಸ್ನೇಹಿತೆ ಕೌಂಟರ್‌ ಮ್ಯಾನೇಜರ್‌ ಆಗಿದ್ದರು. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಾಗೂ ಆರೋಪಿ ರಘುರಾಮ್‌ ನಿಸರ್ಗ ಗಾರ್ಡನ್‌ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮೇ 12ರಂದು ದೂರುದಾರೆ ಸ್ನಾನ ಮಾಡಲು ಬಾತ್‌ ರೂಮಿಗೆ ಹೋಗಿದ್ದು, ಆಗ ಆರೋಪಿಯು ಬಾತ್‌ ರೂಮಿನ ಗೋಡೆಯ ಮೇಲಿನಿಂದ ಆಕೆ ಸ್ನಾನ ಮಾಡುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ. ಅದನ್ನು ಗಮನಿಸಿದ ಆಕೆಯ ಸ್ನೇಹಿತೆ ಜೋರಾಗಿ ಕೂಗಿಕೊಂಡಿದ್ದಾಳೆ. ನಂತರ ಆರೋಪಿಯ ಮೊಬೈಲ್‌ ಕಸಿದುಕೊಂಡಾಗ ಇಬ್ಬರು ಯುವತಿಯರು ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಸೆರೆಹಿಡಿದು ಸಂಗ್ರಹಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಬಗ್ಗೆ ಪ್ರಶ್ನಿಸಿದಾಗ, ‘ತಾನು ಹೇಳಿದಂತೆ ಕೇಳಬೇಕು, ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲವಾದಲ್ಲಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ’ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದರು

Recent News


Leave a Comment: