ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

Posted by Vidyamaana on 2023-09-05 15:31:58 |

Share: | | | | |


ICC ODI World Cup: ಟೀಂ ಇಂಡಿಯಾ ಪ್ರಕಟ - ಯಾರಿಗೆಲ್ಲಾ ಸಿಕ್ತು ಚಾನ್ಸ್??

ಮುಂಬೈ: ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ತಂಡದ ಆಯ್ಕೆ ಬಗ್ಗೆ ಪ್ರಕಟಿಸಿದರು.


ಏಷ್ಯಾ ಕಪ್ ನಲ್ಲಿ ಆಡುತ್ತಿರುವ ತಂಡವೇ ಬಹುತೇಕ ಅಂತಿಮವಾಗಿದೆ. ವಿಶ್ವಕಪ್ ಗೆ 15 ಜನರ ತಂಡ ಪ್ರಕಟಿಸಬೇಕಾದ ಕಾರಣ 17 ಜನರ ಏಷ್ಯಾ ಕಪ್ ತಂಡದಲ್ಲಿದ್ದ ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಕನ್ನಡಿಗ ಪ್ರಸಿಧ್ ಕೃಷ್ಣ ವಿಶ್ವಕಪ್ ಕೂಟಕ್ಕೆ ಸ್ಥಾನ ಪಡೆದಿಲ್ಲ.


ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕಳೆದ ಐಪಿಎಲ್ ವೇಳೆ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಹಲವು ತಿಂಗಳ ಚೇತರಿಕೆಯ ಬಳಿಕ ಏಷ್ಯಾ ಕಪ್ ಗೆ ಆಯ್ಕೆಯಾಗಿದ್ದರು. ಆದರೆ ಸರಿಯಾಗಿ ಫಿಟ್ ಆಗದ ಕಾರಣ ಮೊದಲೆರಡು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.ವಿಕೆಟ್ ಕೀಪರ್ ಕೋಟಾದಲ್ಲಿ ಕೆಎಲ್ ರಾಹುಲ್ ಮತ್ತು ಎಡಗೈ ಆಟಗಾರ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಗೆ ಬ್ಯಾಕಪ್ ಆಟಗಾರನಾಗಿದ್ದ ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ನಿಂದ ಕೈಬಿಡಲಾಗಿದೆ.



ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ, ಅನುಭವಿ ವಿರಾಟ್ ಕೊಹ್ಲಿ ಜೊತೆಗೆ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹೊರತಾಗಿಯೂ ಸೂರ್ಯ ವಿಶ್ವಕಪ್ ಸ್ಕ್ಯಾಡ್ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.



ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.


ತಂಡದಲ್ಲಿ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರು ಸ್ಪಿನ್ನರ್ ಗಳಾಗಿದ್ದಾರೆ. ಏಷ್ಯಾಕಪ್ ನಲ್ಲಿ ಸ್ಥಾನ ಪಡೆಯದ ಅನುಭವಿ ಸ್ಪಿನ್ನರ್ ಗಳಾದ ಯುಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ವಕಪ್ ಗೂ ಅವಕಾಶ ಸಿಕ್ಕಿಲ್ಲ.


ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ.


ವಿಶ್ವಕಪ್ ಗೆ ಭಾರತ ತಂಡ


ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ  ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮತ್ತು ಮೊಹಮ್ಮದ್ ಸಿರಾಜ್.

ಎದೆ ಝಲ್​ ಎನಿಸುವ ಹುಡುಗಿಯ ಡೇಂಜರಸ್ ಸ್ಟಂಟ್! ವೈರಲ್​ ವೀಡಿಯೋ

Posted by Vidyamaana on 2024-06-20 16:47:02 |

Share: | | | | |


ಎದೆ ಝಲ್​ ಎನಿಸುವ ಹುಡುಗಿಯ ಡೇಂಜರಸ್ ಸ್ಟಂಟ್! ವೈರಲ್​ ವೀಡಿಯೋ

ನವದೆಹಲಿ: ಪುಣೆಯ ಜಂಬೂಲ್ ವಾಡಿ ಸ್ವಾಮಿ ನಾರಾಯಣ ದೇವಸ್ಥಾನದ ಬಳಿ ಯುವತಿಯೊಬ್ಬಳು ಸಾಹಸ ಪ್ರದರ್ಶಿಸಿದ್ದಾಳೆ. ಹಾನಿಗೊಳಗಾದ ಕಟ್ಟಡದ ಮೇಲಕ್ಕೆ ಯುವತಿ ಮತ್ತು ಇಬ್ಬರು ಯುವಕರು ಹತ್ತಿದ್ದಾರೆ. ಒಬ್ಬ ಕ್ಯಾಮೆರಾ ಹಿಡಿದಿದ್ದರೆ, ಇನ್ನೊಬ್ಬ ಕಟ್ಟಡದ ಮೇಲೆ ನೇರವಾಗಿ ಮಲಗಿದ್ದಾನೆ.ಹುಡುಗಿ ಸಾಹಸ ಮಾಡಲು ಪ್ರಾರಂಭಿಸಿ, ಮೇಲಿಂದ ಕೆಳಕ್ಕೆ ಇಳಿದಿದ್ದು, ಆ ವೇಳೆ ಯುವಕ ಯುವತಿಯ ಕೈ ಹಿಡಿದಿದ್ದ. ಆಗ ಒಂದು ಕೈಯಿಂದ ಹುಡುಗನ ಕೈ ಹಿಡಿದುಕೊಂಡು ವಿಡಿಯೋ ತೆಗೆದಿದ್ದಾಳೆ.

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

Posted by Vidyamaana on 2024-05-08 17:47:42 |

Share: | | | | |


ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಈದ್ ಶುಭಾಶಯ

Posted by Vidyamaana on 2024-04-11 15:51:49 |

Share: | | | | |


ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಈದ್ ಶುಭಾಶಯ

ನವದೆಹಲಿ : ದೇಶದ ಅನೇಕ ಭಾಗಗಳಲ್ಲಿ ಕಂಡುಬರುವ ಶವ್ವಾಲ್ ತಿಂಗಳ ಚಂದ್ರ ದರ್ಶನವಾಗಿದ್ದು, ನಾಳೆ ದೇಶಾದ್ಯಂತ ಆಡಂಬರದಿಂದ ಈದ್ ಆಚರಿಸಲಾಗುವುದು. ಸಧ್ಯ ದೇಶದ ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ.ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಈದ್-ಉಲ್-ಫಿತರ್ ಶುಭಾಶಯಗಳು

ಮುಸ್ಲಿಂ ಮಹಿಳೆಯೊಂದಿಗೆ ಹಿಂದು ವ್ಯಕ್ತಿ; ಹೋಟೆಲ್‌ಗೆ ನುಗ್ಗಿ ಥಳಿಸಿದ ಯುವಕರು

Posted by Vidyamaana on 2024-01-10 20:27:54 |

Share: | | | | |


ಮುಸ್ಲಿಂ ಮಹಿಳೆಯೊಂದಿಗೆ ಹಿಂದು ವ್ಯಕ್ತಿ; ಹೋಟೆಲ್‌ಗೆ ನುಗ್ಗಿ ಥಳಿಸಿದ ಯುವಕರು

ಹಾವೇರಿ: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಹಿಂದು ವ್ಯಕ್ತಿ ಮೇಲೆ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ (Assault Case) ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ತಮ್ಮ ಕೋಮಿನ ಮಹಿಳೆಯೊಂದಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕರ ಗುಂಪು, ಹೋಟೆಲ್‌ಗೆ ನುಗ್ಗಿ ಪುರುಷನ ಜತೆಗೆ ಮಹಿಳೆಯನ್ನೂ ಹಿಗ್ಗಾಮುಗ್ಗಾ ಥಳಿಸಿದೆ.


ಹಾನಗಲ್‌ 4ನೇ ಕ್ರಾಸ್ ಬಳಿಯ ಖಾಸಗಿ ಹೊಟೇಲ್‌ನಲ್ಲಿ ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಇರುವ ಬಗ್ಗೆ ಮಾಹಿತಿ ಪಡೆದು ಯುವಕರ ಗುಂಪು ತೆರಳಿದೆ. ಬಾಗಿಲು ಬಡಿದು ರೂಮಲ್ಲಿ ನೀರು ಬರುತ್ತಿದ್ದೆಯೇ ಚೆಕ್ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ನೀರು ಬರುತ್ತಿದೆ, ಏನೂ ಸಮಸ್ಯೆ ಇಲ್ಲ ಎಂದು ಮಹಿಳೆ ಜತೆಗಿದ್ದ ವ್ಯಕ್ತಿ ಹೇಳಿದ್ದಾನೆ. ಬಾಗಿಲು ಓಪನ್ ಮಾಡಿದ್ದೇ ತಡ, ರೊಚ್ಚಿಗೆದ್ದ ಯುವಕರ ಗುಂಪು, ವ್ಯಕ್ತಿ ಹಾಗೂ ಮಹಿಳೆ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.ಬುರ್ಖಾ ಹಾಕಿಕೊಂಡು ಬಂದು ಮಲಗಿದ್ದೀಯಾ? ಎಂದು ಮಹಿಳೆಯನ್ನು ಥಳಿಸಿದ ಯುವಕರು, ನಿನಗೆ ನಮ್ ಹುಡುಗೀನೇ ಬೇಕಾ ಎಂದು ಆ ವ್ಯಕ್ತಿಗೂ ಹೊಡೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಘಟನೆ ಸಂಬಂಧ ಒಬ್ಬ ಯುವಕನನ್ನು ಹಾನಗಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಹಿಳೆ ಮೇಲೆ ಮತ್ತೇನಾದರೂ ದೌರ್ಜನ್ಯ ನಡೆದಿದೆಯಾ ಎಂಬ ಬಗ್ಗೆ ತನಿಖೆ ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಹಾನಗಲ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೆನ್‌ಡ್ರೈವ್ ಪ್ರಕರಣ: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ- ಮೇ 31ಕ್ಕೆ ಭಾರತಕ್ಕೆ ಬರ್ತೀನಿ: ವಿದೇಶದಿಂದಲೇ ಹೇಳಿಕೆ ಕೊಟ್ಟ ಪ್ರಜ್ವಲ್

Posted by Vidyamaana on 2024-05-27 16:35:55 |

Share: | | | | |


ಪೆನ್‌ಡ್ರೈವ್ ಪ್ರಕರಣ: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ- ಮೇ 31ಕ್ಕೆ ಭಾರತಕ್ಕೆ ಬರ್ತೀನಿ: ವಿದೇಶದಿಂದಲೇ ಹೇಳಿಕೆ ಕೊಟ್ಟ ಪ್ರಜ್ವಲ್

ಬೆಂಗಳೂರು : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಕಿಡಿ ಹೊತ್ತಿದ ನಂತರ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಈ ಕುರಿತು ವಿಡಿಯೋ ರಿಲೀಸ್ ಮಾಡಿರುವ ಪ್ರಜ್ವಲ್, ಮೇ 31ಕ್ಕೆ ಎಸ್‌ಐಟಿ ತನಿಖೆಗೆ ಬರುವುದಾಗಿ ಖುದ್ದು ಹೇಳಿದ್ದಾರೆ.ಇನ್ನು ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ. ಹೀಗಾಗಿ ಎಲ್ಲರ ಕ್ಷಮೆ ಕೇಳುವೆ ಎಂದಿದ್ದಾರೆ.

Recent News


Leave a Comment: