ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 02

Posted by Vidyamaana on 2023-07-02 02:13:16 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 02

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 2 ರಂದು..

ಬೆಳಿಗ್ಗೆ 10 ಗಂಟೆಗೆ ಬನ್ನೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಳ ವೀಕ್ಷಣೆ

10.30 ಬನ್ನೂರು ಕುಂಟ್ಯಾನ ದೇವಳದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ 

 ಭಾಗವಹಿಸಲಿದ್ದಾರೆ.

ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಕೇಸ್: ಎಚ್​ಡಿಕೆ , ದೇವೇಗೌಡ ಹೇಳಿದ್ದೇನು ಗೊತ್ತಾ?

Posted by Vidyamaana on 2024-04-28 14:01:13 |

Share: | | | | |


ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಕೇಸ್: ಎಚ್​ಡಿಕೆ , ದೇವೇಗೌಡ ಹೇಳಿದ್ದೇನು ಗೊತ್ತಾ?

ಬೆಂಗಳೂರು, (ಏಪ್ರಿಲ್ 28): ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ(Prajwal Revanna Scandal Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.

ಕಲ್ಯಾಣ್ ಜ್ಯುವೆಲರ್ಸ್ ಶೋರೂಮ್ ನಲ್ಲಿ ಎಸಿ ಸ್ಫೋಟ

Posted by Vidyamaana on 2024-05-04 08:27:14 |

Share: | | | | |


ಕಲ್ಯಾಣ್ ಜ್ಯುವೆಲರ್ಸ್ ಶೋರೂಮ್ ನಲ್ಲಿ ಎಸಿ ಸ್ಫೋಟ

ಬಳ್ಳಾರಿ, ಮೇ.03: ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ.

ಮಡಿಕೇರಿ- ಸೋಮವಾರಪೇಟೆ ಮಾರ್ಗ ಬೆಂಗಳೂರಿಗೆ ಬಸ್‌ ಸಂಚಾರಕ್ಕೆ ಚಾಲನೆ

Posted by Vidyamaana on 2024-06-14 16:21:36 |

Share: | | | | |


ಮಡಿಕೇರಿ- ಸೋಮವಾರಪೇಟೆ ಮಾರ್ಗ ಬೆಂಗಳೂರಿಗೆ ಬಸ್‌ ಸಂಚಾರಕ್ಕೆ ಚಾಲನೆ

ಮಡಿಕೇರಿ: ಕೆಎಸ್‌ಆರ್‌ಟಿಸಿಯ ನೂತನ ಅಶ್ವಮೇಧ ಬಸ್‍ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15ಕ್ಕೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ.

ಅಹಿಂಸೆಯನ್ನು ಪ್ರತಿಪಾದಿಸುವ ಜೈನ ಮುನಿಗಳ ಹತ್ಯೆ ಘನಘೋರ ಕೃತ್ಯ

Posted by Vidyamaana on 2023-07-10 16:52:13 |

Share: | | | | |


ಅಹಿಂಸೆಯನ್ನು ಪ್ರತಿಪಾದಿಸುವ ಜೈನ ಮುನಿಗಳ ಹತ್ಯೆ ಘನಘೋರ ಕೃತ್ಯ

ಮಂಗಳೂರು;ಅಹಿಂಸಾ ತತ್ವದ ಜೈನ ಮುನಿ ಧಾರ್ಮಿಕ ಆಚಾರ್ಯ  ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿಗಳ ಬೀಬತ್ಸ  ಹತ್ಯೆಯು ಇಡೀ ಮಾನವ ಕುಲಕ್ಕೆ ಕಪ್ಪು ಚುಕ್ಕೆಯಾಗಿದ್ದು ಇದು ಅಮನವೀಯವೂ  ರಾಕ್ಷಸೀಯವೂ ಆದ ಕೃತ್ಯವಾಗಿದೆ.

ಈ ಕ್ರೂರ ಕೃತ್ಯವೆಸಗಿದ ರಾಕ್ಷಸರನ್ನು ಜಾತಿ ಧರ್ಮದ ಹಂಗಿಗೆ ಒಳಗಾಗದೇ ಮರಣ ದಂಡನೆಯಂತಹ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಸರಕಾರವನ್ನು ಒತ್ತಾಯಿಸಿದೆ.

ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೇ ಇದರ ಹಿಂದಿರುವ ಎಲ್ಲಾ ಷಡ್ಯಂತ್ರವನ್ನು ಬಯಲಿಗೆಳೆದು ನ್ಯಾಯಯುತವಾದ ತನಿಖೆ ನಡೆಸಿ ಜನರ ಗೊಂದಲವನ್ನು ನಿವಾರಿಸ ಬೇಕಾಗಿದೆ. 

ಇಂತಹ ಕ್ರೂರ ಕೃತ್ಯಗಳಿಂದಾಗಿ ಇಡೀ ದೇಶದ ಮಾನ ಹರಾಜಾಗುತ್ತಿದ್ದು ಇದನ್ನು ಸ್ವಾರ್ಥ ರಾಜಕೀಯಕ್ಕೆ ಬಳಸಿಕೊಳ್ಳದೇ ಮುಂದೆ ಇಂತಹ ಕೃತ್ಯಗಳು ಮರುಕಳಿಸದಂತೆ ನೋಡಿ ಕೊಳ್ಳ ಬೇಕಾದ ಕಾನೂನು ಕ್ರಮಗಳನ್ನು ತೆಗೆದು ಕೊಳ್ಳಲು ಪಕ್ಷ ಭೇದ ಮೆರೆತು ಒತ್ತಾಯಿಸ ಬೇಕಿದೆ ಎಂದು ದಾರಿಮಿ ಒಕ್ಕೂಟ ಅಭಿಪ್ರಾಯ ಪಟ್ಟಿದೆ ಎಂದು ಸಮಿತಿಯ ಅಧ್ಯಕ್ಷ ಎಸ್ ಬಿ ದಾರಿಮಿ,ಕಾರ್ಯದರ್ಶಿ ಯುಕೆ ದಾರಿಮಿ,ಕೋಶಾಧಿಕಾರಿ ಹುಸೈನ್ ದಾರಿಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

Posted by Vidyamaana on 2023-06-13 02:18:12 |

Share: | | | | |


ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.

ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್‌ನ ವಾಕ್ ಪಾಟ್‌ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.

ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.



Leave a Comment: