ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

Posted by Vidyamaana on 2023-05-19 14:41:54 |

Share: | | | | |


2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

ನವದೆಹಲಿ : (Rs 2000 Currency Note) ಭಾರತೀಯ ರಿಸರ್ವ್‌ ಬ್ಯಾಂಕ್‌ 2000 ರೂಪಾಯಿ ಮುಖ ಬೆಲೆಯ ನೋಟ್‌ ನ್ನು ಹಿಂಪಡೆದಿದೆ. 2000 ರೂಪಾಯಿ ನೋಟಿನ ಚಲಾವಣೆ ಈ ಕ್ಷಣದಿಂದಲೇ ಸ್ಥಗಿತವಾಗಲಿದೆ. ಆದರೆ 2000 ರೂಪಾಯಿ ನೋಟು ಹೊಂದಿದ್ದವರು ಬ್ಯಾಂಕುಗಳಿಗೆ ತೆರಳಿ ಸೆಪ್ಟೆಂಬರ್ 30 2023ರ ಒಳಗಾಗಿ ನೋಟನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.2000 ರೂಪಾಯಿಯ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ ಕರೆನ್ಸಿ ನೋಟುಗಳ ಚಲಾವಣೆ ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮುಂದುವರಿಯುತ್ತದೆ . ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ RBI ಬ್ಯಾಂಕ್‌ಗಳನ್ನು ಕೇಳಿದೆ.ಆದರೆ ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ನೋಟುಗಳನ್ನು ಚಲಾವಣೆ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಸುತ್ತೋಲೆಯಲ್ಲಿ ತಿಳಿಸಿದ. ಎರಡು ಸಾವಿರ ರೂಪಾಯಿಯ ನೋಟು ಹೊಂದಿದ್ದವರು ಆತಂಕ ಪಡುವ ಅಗತ್ಯವಿಲ್ಲ. ಇನ್ನು ಕಳೆದ ಒಂದು ವರ್ಷಗಳಿಗೂ ಅಧಿಕ ಕಾಲದಿಂದಲೂ ಎರಡು ಸಾವಿರ ರೂಪಾಯಿಯ ನೋಟು ಎಟಿಎಂ, ಬ್ಯಾಂಕ್‌ ಶಾಖೆಗಳಲ್ಲಿಯೂ ಲಭ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದೆಯೇ ಎರಡು ಸಾವಿರ ರೂಪಾಯಿಯ ನೋಟು ಬ್ಯಾನ್‌ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಕುರಿತು ಯಾವುದೇ ಯೋಚನೆಯೂ ಕೇಂದ್ರ ಸರಕಾರದ ಮುಂದಿಲ್ಲ ಎಂದು ತಿಳಿಸಿದ್ದರು.

ಈ ಹಿಂದೆ ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಆರ್‌ಬಿಐ ಚಲಾವಣೆಗೆ ತಂದಿತ್ತು. ಸುಮಾರು ಆರು ವರ್ಷಗಳ ತರುವಾಯ ಆರ್‌ಬಿಐ ಎರಡು ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿದೆ. ಸಪ್ಟೆಂಬರ್‌ ವರೆಗೂ ನೋಟುಗಳು ಚಲಾವಣೆಯಲ್ಲಿ ಇರಲಿದ್ದು, ನಂತರದಲ್ಲಿ ಸಂಪೂರ್ಣವಾಗಿ ನೋಟುಗಳ ಚಲಾವಣೆ ರದ್ದಾಗಲಿದೆ.

ಅಪಘಾತಕ್ಕೀಡಾದ ಕಾರ್​ನಲ್ಲೇನಿತ್ತು? ಜನ ಮುಗಿಬಿದ್ದು ದೋಚಿದ್ದೇಕೆ?

Posted by Vidyamaana on 2023-11-02 15:53:12 |

Share: | | | | |


ಅಪಘಾತಕ್ಕೀಡಾದ ಕಾರ್​ನಲ್ಲೇನಿತ್ತು? ಜನ ಮುಗಿಬಿದ್ದು ದೋಚಿದ್ದೇಕೆ?

ಪಾಟ್ನಾ: ಅಲ್ಲೊಂದು ಕಾರ್​ ಅಪಘಾತಕ್ಕೀಡಾಗಿತ್ತು. ಕೆಲವರು ಏನಾಯಿತೆಂದು ರಕ್ಷಣೆಗೆ ದಾವಿಸಿ ಬಂದಿದ್ದರು. ಒಳಗೇನಿದೆ ಎಂದು ಹಲವರು ಇಣುಕಿ ನೋಡಿದರು. ಅಲ್ಲಿ ಅದೇನೋ ಕಾಣಿಸಿದೆ. ಕೂಡಲೇ ಜಾಗೃತರಾದಜನ ಕಾರ್​ನ ಗ್ಲಾಸ್​ ಹೊಡೆದು ಕೈಗೆ ಸಿಕ್ಕಿದಷ್ಟು ಬಾಚಿಕೊಂಡು ಹೋಗಿದ್ದಾರೆ.ಇಷ್ಟಕ್ಕೂ ಆ ಕಾರ್​ನಲ್ಲಿ ಇದ್ದಿದ್ದಾದರೂ ಏನು?….ಮುಂದೆ ಓದಿ…


ಮಂಗಳವಾರ ಸಂಜೆ ಬಿಹಾರದ ಗಯಾ ಜಿಲ್ಲೆಯ ದೋಭಿ ಬಳಿ ಮದ್ಯ ತುಂಬಿದ್ದ ಕಾರ್​ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅದರಲ್ಲಿದ್ದ ಮದ್ಯವನ್ನು ಕದಿಯಲು ಜನ ಮುಗಿಬಿದ್ದಿದ್ದರು. ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್​ ಆಗಿದೆ.ಜನರು ಕಾರಿನ ಗಾಜು ಒಡೆದು ಮದ್ಯದ ಬಾಟಲಿಗಳೊಂದಿಗೆ ಓಡಿ ಹೋಗುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತಿದೆ. ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಜನರು ಕಾರಿನೊಳಗೆ ಇದ್ದ ಮದ್ಯವನ್ನು ಲೂಟಿ ಮಾಡಿದ್ದರು.


ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಇದರ ವೀಡಿಯೊ ವೈರಲ್ ಆಗಿದ್ದು, ಇರುವೆಗಳು ಬೆಲ್ಲಕ್ಕೆ ಮುತ್ತಿಕೊಂಡಂತೆ ಜನರು ಕಾರ್​ನಲ್ಲಿ ತುಂಬಿದ್ದ ಮದ್ಯಕ್ಕಾಗಿ ಸುತ್ತುವರಿದಿದ್ದಾರೆ.


ಬಿಹಾರದಲ್ಲಿ ಮದ್ಯವನ್ನು ನಿಷೇಧಿಸಿರುವುದರಿಂದ ಕಾರ್​ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳು ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಶಾಖಪಟ್ಟಣಂನಿಂದ ಅಕ್ರಮವಾಗಿ 1.5ಲಕ್ಷ ರೂ.ಮೌಲ್ಯದ ನಕಲಿ ಮದ್ಯವನ್ನು ತರಿಸಲಾಗುತ್ತಿತ್ತು. ಆದರೆ ಮದ್ಯ ಸಾಗಿಸುತ್ತಿದ್ದವರು ಪರಾರಿಯಾಗಿದ್ದೇ ತಡ, ಜನ ಸಿಕ್ಕಿದ್ದೇ ಚಾನ್ಸ್​ ಎಂದು ಮದ್ಯದ ಬಾಟಲಿಗಳನ್ನು ಹೊತ್ತೊಯ್ದರು.

ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ

Posted by Vidyamaana on 2023-07-26 15:17:13 |

Share: | | | | |


ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.



ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.


ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.


ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಡ್ರೈವಿಂಗ್‌ನಲ್ಲಿರುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ: ಆಸ್ಪತ್ರೆಯಲ್ಲಿ ನಿಧನ

Posted by Vidyamaana on 2024-02-19 12:22:54 |

Share: | | | | |


ಡ್ರೈವಿಂಗ್‌ನಲ್ಲಿರುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ: ಆಸ್ಪತ್ರೆಯಲ್ಲಿ ನಿಧನ

ಕುಂಬಳೆ: ಬಸ್‌ ಚಲಾಯಿಸುತ್ತಿದ್ದ ವೇಳೆಯಲ್ಲಿ ಚಾಲಕ ಹೃದಯಾಘಾತದಿಂದ ಸಾವೀಗೀಡಾದ ಘಟನೆ ಚೇವಾರು ಕುಂಟಂಗರಡ್ಕದಲ್ಲಿ ನಡೆದಿದೆ.


ಕಾಸರಗೋಡು-ಧರ್ಮತ್ತಡ್ಕ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್‌‌ನ ಚಾಲಕ ಕುಂಟಗರಡ್ಕದ ಅಬ್ದುಲ್‌ ರಹಿಮಾನ್‌ (42) ಮೃತ ವ್ಯಕ್ತಿ. ಧರ್ಮತ್ತಡ್ಕದಿಂದ ಬಸ್ ಕಾಸರಗೋಡಿಗೆ ತೆರಳುತ್ತಿದ್ದು, ಕುಂಟಗರಡ್ಕಕ್ಕೆ ತಲಪಿದಾಗ ಅಬ್ದುಲ್ ರಹಿಮಾನ್‌ಗೆ ಎದೆನೋವು ಕಾಣಿಸಿಕೊಂಡಿದೆ.


ಅಬ್ದುಲ್ ರಹಿಮಾನ್ ತಕ್ಷಣ ಬಸ್‌‌ಅನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಆ ಬಳಿಕ ಅವರು ಕುಸಿದು ಬಿದ್ದಿದ್ದಾರೆ.


ಅವರನ್ನು ಬಂದ್ಯೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ..ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

20 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಅಪ್ಪಳಿಸಿದ ಕಾರು! ಮೂವರು ಭಾರತೀಯ ಮಹಿಳೆಯರ ಸಾವು

Posted by Vidyamaana on 2024-04-28 06:19:08 |

Share: | | | | |


20 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಅಪ್ಪಳಿಸಿದ ಕಾರು! ಮೂವರು ಭಾರತೀಯ ಮಹಿಳೆಯರ ಸಾವು

ನ್ಯೂಯಾರ್ಕ್​: ಅಮೆರಿಕಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ (Ro

non

Accident) ಭಾರತದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳಾಗಿದ್ದಾರೆ.ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯ ಸೇತುವೆಯೊಂದರ ಮೇಲಿಂದ ಎಸ್‌ಯುವಿ ಉರುಳಿದ ಬಿದ್ದಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ದಾಖಲಾಗಿದ್ದಾರೆ

ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

Posted by Vidyamaana on 2024-01-03 07:33:20 |

Share: | | | | |


ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

ಬೆಂಗಳೂರು : ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಬೇಡಿಕೆ ಮತ್ತು ಸ್ವೀಕಾರ ಕುರಿತು ಸ್ಪಷ್ಟ ಪುರಾವೆಗಳಿರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗದಗದ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್‌ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಲಂಚ ಪ್ರಕರಣವನ್ನು ರದ್ದುಪಡಿಸಿದೆ.ಲಂಚ ಸ್ವೀಕಾರ ಆರೋಪದ ಮೇಲೆ ತಮ್ಮ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸೆಕ್ಷನ್ 7(ಎ) ಪ್ರಕಾರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದಾಳಿ ನಡೆಸುವಂತಹ ಸಂದರ್ಭದಲ್ಲಿ ಆರೋಪಿ ಸರ್ಕಾರಿ ಅಧಿಕಾರಿ ಮುಂದೆ ಕೆಲಸ ಬಾಕಿಯಿದ್ದು, ಅದನ್ನು ನಿರ್ವಹಿಸಲು ಅವರು ಲಂಚಕ್ಕಾಗಿ ಬೇಡಿಕೆ ಇಟ್ಟಿರಬೇಕಾಗುತ್ತದೆ ಹಾಗೂ ಲಂಚ ಸ್ವೀಕರಿಸಿರಬೇಕಾಗುತ್ತದೆ. ಆಗಷ್ಟೇ ಆರೋಪ ಸಾಬೀತುಪಡಿಸಲು ಸಾಧ್ಯವಿದೆ ಎಂದು ಪೀಠ ಹೇಳಿದೆ.


ಈ ಪ್ರಕರಣದಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯ ಶೋಧನೆ ನಡೆಸಿದ್ದ ಎಸಿಬಿ ತನಿಖಾಧಿಕಾರಿಗಳು ಅರ್ಜಿದಾರರ ಕೈಯಲ್ಲಿದ್ದ 9,390 ರು. ಮತ್ತು ಅವರ ಜೇಬಿನಿಂದ 50 ರು. ವಶಕ್ಕೆ ಪಡೆದುಕೊಂಡಿದ್ದರು. ಆ ಮೊತ್ತವನ್ನು ಕಚೇರಿಯಲ್ಲಿ ದಾಖಲೆಗಳ ನೋಂದಣಿಗಾಗಿ ಶುಲ್ಕ ಸ್ವೀಕರಿಸಲಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ. ಹೀಗಿರುವಾಗ ಅರ್ಜಿದಾರರು ಬೇಡಿಕೆಯಿಟ್ಟು ಲಂಚ ಸ್ವೀಕರಿಸಿದ್ದಾರೆ ಎಂಬ ಅಂಶ ನಿಗೂಢವಾಗಿದೆ.ಮೇಲಾಗಿ ಎಸಿಬಿ ಅಧಿಕಾರಿಗಳು ಶೋಧನೆ ವೇಳೆ ಅರ್ಜಿದಾರರು ಬೇಡಿಕೆಯಿಟ್ಟ ಲಂಚ ಸ್ವೀಕರಿಸಿದ ಘಟನೆಯ ಪಂಚನಾಮೆ ಮಾಡಿಲ್ಲ. ಆದ್ದರಿಂದ ಪ್ರಕರಣ ವಿಚಾರಣೆಗೆ ಮುಂದುವರೆಸಿದರೆ ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. ಪ್ರಕರಣದ ವಿವರ:


ಗದಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಿಬ್ಬಂದಿ ಸಾರ್ವಜನಿಕರ ಕೆಲಸ ನಿರ್ವಹಣೆಗಾಗಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ. ಹೀಗಾಗಿ, ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸತ್ಯಾಂಶ ಪರಿಶೀಲಿಸಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು ಎಂದು ಕೋರಿ 2019ರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿಗೆ ಅನಾಮಧೇಯ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಪೊಲೀಸರು, ಗದಗ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಭೇಟಿ ನೀಡಿ ಶೋಧಿಸಿದ್ದರು. ಈ ವೇಳೆ ಅರ್ಜಿದಾರರ ಕೈಯಲ್ಲಿ 9,390 ರು. ಇದ್ದವು. ಆ ಹಣ ವಶಪಡಿಸಿಕೊಂಡಿದ್ದ ಎಸಿಬಿ ಪೊಲೀಸರು, ಶ್ರೀಕಾಂತ್‌ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಹಾಗೂ ಲಂಚ ಸ್ವೀಕರಿಸಿದ ಆರೋಪದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿತ್ತು. ಅದನ್ನು ಪ್ರಶ್ನಿಸಿ ಶ್ರೀಕಾಂತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು



Leave a Comment: