KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಹಾರಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ: ಆ್ಯಕ್ಟಿವ್ ಸವಾರನಿಗೆ ಗಾಯ!

Posted by Vidyamaana on 2024-05-31 20:08:32 |

Share: | | | | |


ಹಾರಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ: ಆ್ಯಕ್ಟಿವ್ ಸವಾರನಿಗೆ ಗಾಯ!


ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಎದುರು ಶುಕ್ರವಾರ ಸಂಜೆ ನಡೆದಿದೆ.

ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ (KA21 A 6438) ನಜ್ಜುಗುಜ್ಜಾಗಿದೆ.

ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

Posted by Vidyamaana on 2023-07-28 04:23:35 |

Share: | | | | |


ಕೇರಳದಲ್ಲಿ 10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

ಮಲಪ್ಪುರಂ:  ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ನಗರಸಭೆಯ 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದೆ. ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ.ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ, ಲೀಲಾ, ಬಿಂದು, ಶೀಜಾ, ಚಂದ್ರಿಕಾ ಮತ್ತು ಕಾರ್ತ್ಯಾಯನಿ ಮಾನ್ಸೂನ್ ಬಂಪರ್ ಪ್ರಥಮ ಬಹುಮಾನ ಪಡೆದವರು.ಮೊದಲು 9 ಮಂದಿ ಸೇರಿ ಲಾಟರಿ ಟಿಕೆಟ್ ಖರೀಸಲು ನೋಡಿದೆವು, ಆದರೆ ಹಣದ ಕೊರತೆಯಿಂದ ಮತ್ತಿಬ್ಬರು ಕಾರ್ಮಿಕರು ಸೇರಿಕೊಂಡರು. ಕೊನೆಗೆ 11 ಮಂದಿ ಸೇರಿದ 250 ರೂಪಾಯಿಯ ಟಿಕೆಟ್ ಖರೀದಿಸಿದೆವು ಎಂದು ಟಿಕೆಟ್ ಖರೀದಿಸಿದ ರಾಧ ತಿಳಿಸಿದ್ದಾರೆ.ಸಾಲಗಳ ಬಾಕಿ, ಮಕ್ಕಳ ಮದುವೆ, ಆಸ್ಪತ್ರೆ, ಚಿಕಿತ್ಸೆಯ ವೆಚ್ಚ ಸೇರಿ ನಾವೆಲ್ಲರೂ ಆರ್ಥಿಕವಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೆವು. ಈಗ ಹಣ ಗೆದ್ದಿರುವುದು ಬದುಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗೆ ನೆರವಾಗಲಿದೆ’ ಎನ್ನುತ್ತಾರೆ ಪೌರಕಾರ್ಮಿಕ ಮಹಿಳೆಯರು.ಟಿಕೆಟ್ ಸಂಖ್ಯೆ MB 200261 ಮೊದಲ ಬಹುಮಾನ 10 ಕೋಟಿ ರೂ. ಬಹುಮಾನದ ಚೀಟಿಯನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಪರಪ್ಪನಂಗಡಿ ಶಾಖೆಗೆ ಹಸ್ತಾಂತರಿಸಲಾಗಿದೆ

ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Posted by Vidyamaana on 2024-04-02 15:13:55 |

Share: | | | | |


ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಅವರ ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಪದ್ಮನಾಭ ಸಾಮಂತ್ ಅವರ ತಾಯಿ, ತನ್ನ ಮಗನ ದಾರುಣ ಸ್ಥಿತಿಯನ್ನು ಪದ್ಮರಾಜ್ ಅವರಿಗೆ ತಿಳಿಸಿ ಕಣ್ಣೀರಾದರು. 

ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.

Posted by Vidyamaana on 2023-08-25 15:26:30 |

Share: | | | | |


ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.

ಪುತ್ತೂರು : 2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣವನ್ನು ನ್ಯಾಯಲಯ ಖುಲಾಸೆಗೊಳಿಸಿ ಆದೇಶಿಸಿದೆ.


ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಪುತ್ತಿಲ, ಶ್ರೀಕಾಂತ್ ಆಚಾರ್ ಹಿಂದಾರ್ ದೋಷಮುಕ್ತರೆಂದು ನ್ಯಾಯಾಲಯ ಆದೇಶ ನೀಡಿದೆ.

ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ,ಹರಿಣಿ ವಾದಿಸಿದರು.

2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ಹಲ್ಲೆ ನಡೆಸಿದ್ದಾರೆಂದು ತಾಲೂಕು ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಕಣ್ಣರಾಯ ರವರು ದೂರು ನೀಡಿದ್ದು, ನಳಿನೀ ಲೋಕಪ್ಪ ಗೌಡ ಮತ್ತು ಲೋಕಪ್ಪ ಗೌಡ ಮುಖ್ಯ ಸಾಕ್ಷಿದಾರರಾಗಿದ್ದರು.


ಇದು ಸತ್ಯ ಮತ್ತು ನ್ಯಾಯಕ್ಕೆ ಸಂದ ಗೌರವ ಎಂದು ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.

ಟಿಕೆಟ್ ಕೈತಪ್ಪಿದ್ದಕ್ಕೆ ಎಂಡಿಎಂಕೆ ಸಂಸದ ಆತ್ಮಹತ್ಯೆಗೆ ಯತ್ನ ಪ್ರಕರಣ ; ಹೃದಯಘಾತದಿಂದ ಆಸ್ಪತ್ರೆಯಲ್ಲಿ ನಿಧನ

Posted by Vidyamaana on 2024-03-28 13:50:10 |

Share: | | | | |


ಟಿಕೆಟ್ ಕೈತಪ್ಪಿದ್ದಕ್ಕೆ ಎಂಡಿಎಂಕೆ ಸಂಸದ ಆತ್ಮಹತ್ಯೆಗೆ ಯತ್ನ ಪ್ರಕರಣ ; ಹೃದಯಘಾತದಿಂದ ಆಸ್ಪತ್ರೆಯಲ್ಲಿ ನಿಧನ

ತಮಿಳುನಾಡು, ಮಾ 29: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

Posted by Vidyamaana on 2024-06-15 15:55:40 |

Share: | | | | |


ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

ಪುತ್ತೂರು : ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ (28) ರವರ ಪತ್ನಿಯಾದ ದೀಪಿಕಾ(23) ನಾಪತ್ತೆಯಾದವರು.

ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ.. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Recent News


Leave a Comment: