ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

Posted by Vidyamaana on 2023-08-31 23:17:17 |

Share: | | | | |


ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

ಹೊಸದಿಲ್ಲಿ: ಚೆಸ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ಪ್ರಧಾನ ಮಂತ್ರಿಯ ನಿವಾಸಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರಜ್ಞಾನಂದ, ಮೋದಿ ಅವರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ಞಾನಂದ, ಸನ್ಮಾನ್ಯ ಪ್ರಧಾನಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಿರುವುದು ದೊಡ್ಡ ಗೌರವ. ನನಗೆ ಮತ್ತು ನನ್ನ ಪೋಷಕರಿಗೆ ಅವರು ನೀಡಿದ ಪ್ರೋತ್ಸಾಹದ ಎಲ್ಲಾ ಮಾತುಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.


ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಇವತ್ತು ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ತಮ್ಮ ನಿವಾಸಕ್ಕೆ ವಿಶೇಷ ಅತಿಥಿಗಳು ಆಗಮಿಸಿದ್ದರು. ನಿಮ್ಮ ಕುಟುಂಬದ ಜೊತೆ ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಯಿತು. ನಿಮ್ಮ ಉತ್ಸಾಹ ಮತ್ತು ಪರಿಶ್ರಮವನ್ನು ನೀವು ನಿರೂಪಿಸಿದ್ದೀರಿ. ಭಾರತದ ಯುವಕರು ಯಾವುದೇ ಡೊಮೇನ್ ಅನ್ನು ಹೇಗೆ ಜಯಿಸಬಹುದು ಎಂಬುದಕ್ಕೆ ನೀವು ಉದಾಹರಣೆಯಾಗಿದ್ದೀರಿ. ನಿಮ್ಮ ಬಗ್ಗೆ ಹೆಮ್ಮೆಯಿದೆ ಪ್ರಜ್ಞಾನಂದ ಎಂದು ಟ್ವೀಟ್ ಮಾಡಿದ್ದಾರೆ.ಅಝರ್​ಬೈಜಾನ್​ನಲ್ಲಿ ಆಗಸ್ಟ್ 24 ರಂದು, 18 ವರ್ಷ ವಯಸ್ಸಿನ ಪ್ರಜ್ಞಾನಂದ ಅವರು ಚೆಸ್ ವಿಶ್ವ ಕಪ್ ಫೈನಲ್‌ನಲ್ಲಿ ಪ್ರಸ್ತುತ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸೆನ್‌ ವಿರುದ್ಧ ಟೈಬ್ರೇಕರ್‌ನಲ್ಲಿ ಸೋತಿದ್ದರು. ಈ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಯುವ ಚೆಸ್ ತಾರೆಯನ್ನು ಹುರಿದುಂಬಿಸಿದ್ದರು.


FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಪ್ರಜ್ಞಾನಂದನ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿ ಫೈನಲ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರಿಗೆ ಕಠಿಣ ಪೈಪೋಟಿ ನೀಡಿದರು. ಇದೇನು ಸಣ್ಣ ಸಾಧನೆಯಲ್ಲ. ಪ್ರಜ್ಞಾನಂದ ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದೀಗ ಯುವ ಚೆಸ್ ತಾರೆಯನ್ನು ಪ್ರಧಾನಿ ನಿವಾಸಕ್ಕೆ ಕರೆಸಿ ಮೋದಿ ಕುಶಲೋಪರಿ ನಡೆಸಿದ್ದಾರೆ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

Posted by Vidyamaana on 2023-03-27 07:30:32 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

ಪುತ್ತೂರು : ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿರುವ ವರುಣ ದೇವರವಿಗ್ರಹಕ್ಕೆಪೂಜೆಸಲ್ಲಿಸಲಾಯಿತುದೇವಸ್ಥಾನದ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿ ವರುಣ ದೇವರ ವಿಗ್ರಹವಿದ್ದು, ಕೆರೆಯಲ್ಲಿ ಸದಾ ನೀರು ತುಂಬಿರುವುದರಿಂದ ಅದು ಭಕ್ತರಿಗೆ ಕಾಣ ಸಿಗುವುದಿಲ್ಲ.

ಅಭಿವೃದ್ಧಿ ಕಾರ್ಯ ಹಿನ್ನೆಲೆ ಕೆರೆಯ ನೀರನ್ನು ಸ್ವಲ್ಪ ಮಟ್ಟಿಗೆ ತೆಗೆಯಲಾಗಿದ್ದು, ಈ ಹಿನ್ನೆಲೆ ಮಂಟಪದ ತಳಭಾಗದಲ್ಲಿರುವ ವರುಣ ದೇವರ ವಿಗ್ರಹವು ಎಲ್ಲರಿಗೂ ಕಾಣ ಸಿಗುತ್ತಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವಾಸ್ತುಶಿಲ್ಪಿ ಜಗನ್ನಿವಾಸ್ ರಾವ್, ಪ್ರಧಾನ ಅರ್ಚಕ ವಸಂತ ಕೆದಿಲಾಯ ರವರು ವಿಗ್ರಹಕ್ಕೆ ಪೂಜೆ ನೆರವೇರಿಸಿದರು.

ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-09-30 22:09:16 |

Share: | | | | |


ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು

ಮೇಕಪ್ ಹಾಗೂ ಪೋನ್ ಗೀಳು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ

Posted by Vidyamaana on 2024-07-17 14:27:21 |

Share: | | | | |


ಮೇಕಪ್ ಹಾಗೂ ಪೋನ್ ಗೀಳು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ: ಪತ್ನಿಯ ಡ್ರೆಸ್ ಹಾಗೂ ಮೇಕಪ್ ಗಾಗಿ ಗಲಾಟೆ ನಡೆದಿದ್ದು, ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala)ದ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ.ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ಚೌದರಿ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಸಮಾಜದ ಶಿಲ್ಪಿಯಾಗಿ ಶಿಕ್ಷಕ - ವಿಶಾಲಾಕ್ಷಿ. ಕೆ. ಶಿಕ್ಷಕರು

Posted by Vidyamaana on 2024-09-05 02:50:40 |

Share: | | | | |


ಸಮಾಜದ ಶಿಲ್ಪಿಯಾಗಿ ಶಿಕ್ಷಕ - ವಿಶಾಲಾಕ್ಷಿ. ಕೆ. ಶಿಕ್ಷಕರು

ಗುರು ಬ್ರಹ್ಮ:ಗುರು ವಿಷ್ಣು: ಗುರು ದೇವೋ ಮಹೇಶ್ವರ: ಗುರು ಸಾಕ್ಷಾತ್ ಪರಬ್ರಹ್ಮ :ತಸ್ಮೈ ಶ್ರೀ ಗುರವೇ ನಮಃ 

   ಅಕ್ಕರೆಯ ತೈಲವನ್ನೆರೆದು ಜ್ಞಾನ ದೀವಿಗೆಯನ್ನು ಬೆಳಗಿ, ನನ್ನ ಜೀವನಕ್ಕೆ ಬೆಳಕು ತೋರಿ, ಸ್ವಾವಲಂಬಿ ಬದುಕನ್ನು ಕಟ್ಟಿಕೊಟ್ಟು, ಮತ್ತೆ ಅಕ್ಕರೆಯ ತೈಲವೆರೆಸಿ ,ಕಿರು ಹಣತೆಗಳ ಬೆಳಗಲು ದಾರಿ ತೋರಿದ ಪರಬ್ರಹ್ಮ ಸ್ವರೂಪಿ ನನ್ನೆಲ್ಲ ಗುರುಗಳಿಗೆ ಸಾಷ್ಟಾಂಗ ನಮಿಸುತ್ತ, ಶಿಕ್ಷಕ ವೃತ್ತಿ ಬದುಕಿನ ಧನ್ಯತೆಯ ಅಭಿಮಾನವನ್ನು ಹಂಚಿಕೊಳ್ಳಬಯಸುತ್ತಿರುವೆನು. 

       ವೃತ್ತಿಗಳಲ್ಲಿ ಅತ್ಯಂತ ಗೌರವಾನ್ವಿತ ಮತ್ತು ತೃಪ್ತಿ ನೀಡಬಲ್ಲ ಹೆಮ್ಮೆಯ ವೃತ್ತಿ ಎಂದರೆ, ಅದು ಶಿಕ್ಷಕ ವೃತ್ತಿ ಎಂದರೆ ತಪ್ಪಾಗಲಾರದು. ಏಕೆಂದರೆ ಉಳಿದೆಲ್ಲ ವೃತ್ತಿಗಳಲ್ಲಿರುವವರು ಕೇವಲ ಸಮಾಜದೊಡನೆ ಅಥವಾ ಯಾಂತ್ರಿಕ ಜಗತ್ತಿನಲ್ಲಿ ವ್ಯವಹರಿಸುತ್ತಿದ್ದರೆ, ಶಿಕ್ಷಕರು ಜೀವಂತ ದೇವರುಗಳೆಂಬ ಹೂ ಮನಸಿನ ಮಕ್ಕಳ ಜೊತೆ ಸದಾ ಸಂತೋಷದಿಂದಿರುವವರು. ಅದರಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರು ಎಂದರೆ ತುಂಬಾ ಭಾಗ್ಯವಂತರು ಎಂದೇ ಹೇಳಬಹುದು. 

     ಸುಮಾರು ಮೂರು ವರ್ಷದ ನಂತರ ಅಮ್ಮನ ಬೆಚ್ಚನೆಯ ಮಡಿಲಿನಿಂದ ಶಾಲೆ ಎನ್ನುವ ಹೊಸ ಪರಿಸರವನ್ನು ಕುತೂಹಲದಿಂದ, ಭಯದಿಂದ ಪ್ರವೇಶಿಸುವ ಮಗುವಿಗೆ ಅಲ್ಲಿನ ಶಿಕ್ಷಕಿಯೇ ಸರ್ವಸ್ವವಾಗಿ ಕಾಣುತ್ತಾಳೆ. ಅದು ತನ್ನ ತಾಯಿ ಸ್ವರೂಪವನ್ನು ಶಿಕ್ಷಕಿಯಲ್ಲಿ ಕಾಣುತ್ತಾ ತಾಯಿಯ ಮಮತೆಯನ್ನು ನಿರೀಕ್ಷಿಸುತ್ತಿರುತ್ತದೆ. ಆ ಸಮಯದಲ್ಲಿ ಶಿಕ್ಷಕರಾದ ನಾವು ಕೊಡುವ ಧೈರ್ಯ ಭರವಸೆ ಪ್ರೀತಿ ಕಾಳಜಿಯು ಮಗು ನಮ್ಮನ್ನು ಸದಾ ಅನುಕರಿಸುವಂತೆ ಮಾಡುತ್ತದೆ. ಒಮ್ಮೆ ಮಕ್ಕಳು ಶಿಕ್ಷಕರಡೆಗೆ ಆಕರ್ಷಿತರಾದರೆ ಮುಂದೆ ಅವರು ಶಿಕ್ಷಕರು ಕಲಿಸುವ ಯಾವುದೇ ವಿಷಯವನ್ನು ತುಂಬಾ ಇಷ್ಟಪಟ್ಟು ಮತ್ತು ಶ್ರದ್ಧೆಯಿಂದ ಕಲಿಯುತ್ತಾರೆ .

     

ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-10 08:24:55 |

Share: | | | | |


ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಪು ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಕುರಿಯ ಸಹಿತ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ


Recent News


Leave a Comment: