ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ನೀತಿ ಸಂಹಿತೆ ಶಾಸಕರ ಸಭೆಗೆ ತಡೆಯೊಡ್ಡಿದ ಅಧಿಕಾರಿಗಳು

Posted by Vidyamaana on 2024-05-13 18:30:31 |

Share: | | | | |


ನೀತಿ ಸಂಹಿತೆ ಶಾಸಕರ ಸಭೆಗೆ ತಡೆಯೊಡ್ಡಿದ ಅಧಿಕಾರಿಗಳು

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು‌ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ ಅಲ್ಲಿಗೆ ಬಂದ ತಹಶಿಲ್ದಾರ್ ರೊಳಗೊಂಡ ಅಧಿಕಾರಿಗಳ ತಂಡ ನೀತಿ ಸಂಹಿತೆ ಸಡಿಲಿಕೆಯಾಗದ ಕಾರಣ ನೀವು ಸಭೆ ನಡೆಸುವಂತಿಲ್ಲ ಎಂದು ಸಭೆ ನಡೆಸದಂತೆ ತಿಳಿಸಿದ ಘಟನೆ ಮೇ.13 ರಂದು ನಡೆದಿದೆ.

ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಸಮರ್ಪಕವಾದ ಕುಡಿಯುವ ನೀರಿಲ್ಲ. ಎಂಟು ಝೋನ್ ವ್ಯಾಪ್ತಿಯಲ್ಲಿ ನೀರಿಲ್ಲದೆ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸಾರ್ವಜನಿಕರು ನಗರಸಭೆ ಅಥವಾ ಜಲಸಿರಿ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಶಾಸಕರು ಜಲಸಿರಿ ಅಧಿಕಾರಿಗಳ ಸಭೆಯನ್ನು ತನ್ನ ಕಚೇರಿಯಲ್ಲಿ ಕರೆದಿದ್ದರು. ಸಭೆ ಪ್ರಾರಂಭವಾಗಿ ಅರ್ಧ ತಾಸು ಬಳಿಕ ಸಭೆಗೆ ಆಗಮಿಸಿದ ತಹಶೀಲ್ದಾರ್ ಒಳಗೊಂಡ ಅಧಿಕಾರಿಗಳ ತಂಡ ಚುನಾವಣಾ ನೀತಿ‌ಸಂಹಿತೆ ಇರುವ ಕಾರಣ ಯಾವುದೇ ಸಭೆ ನಡೆಸುವಂತಿಲ್ಲ ಎಂದು ಶಾಸಕರಿಗೆ ಹೇಳಿದರು.

ಸಂಕಷ್ಟದಲ್ಲಿ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿ: ಸಂಪರ್ಕಕ್ಕೇ ಸಿಗದ ಬಿಜೆಪಿ ಶಾಸಕ, ಸಂಸದರು

Posted by Vidyamaana on 2024-03-29 20:05:15 |

Share: | | | | |


ಸಂಕಷ್ಟದಲ್ಲಿ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿ: ಸಂಪರ್ಕಕ್ಕೇ ಸಿಗದ ಬಿಜೆಪಿ ಶಾಸಕ, ಸಂಸದರು

ಕಾರವಾರ, ಮಾರ್ಚ್​ 28: ಲೋಕಸಭೆ ಚುನಾವಣೆಗೆ (Lok Sabha Election) ಉತ್ತರ ಕನ್ನಡ (Uttara Kann

non

a) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ ಕಾಗೇರಿಗೆ ಸಂಪರ್ಕಕ್ಕೇ ಸಿಗುತ್ತಿಲ್ಲ ಎನ್ನಲಾಗಿದೆ. ಶಾಸಕ, ಸಂಸದರ ಮನವೋಲಿಸುವುದೇ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ದೊಡ್ಡ ಸವಾಲಾಗಿದೆ. ಯಾರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಹಾಗೆಂದು ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ಮತ್ತೊಂದೆಡೆ, ಕಾಗೇರಿಯವರ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಡಿಕೊಳ್ಳುತ್ತಿದ್ದಾರೆ.


ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತೆ ಇದ್ದಾರೆ. ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಕೂಡಲೇ ಅವರು ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಕ್ಕೆ ಬಿಡದಂತೆ ಸಂಸದ ಹೆಗಡೆ ಸೆಕ್ಯೂರಿಟಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.ಇದೀಗ ಸಂಸದರ ಮೌನ ಹಾಗೂ ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆ ನೋವಾಗಿ ಪರಿಣಮಿಸಿದೆ.


ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದ ಕಾಗೇರಿ, ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿದ್ದಾರೆ.


ಹೆಗಡೆ ಮನೆ ಗೇಟ್ ಬಳಿ ಅರ್ಧ ಗಂಟೆ ಕಾದ ಕಾಗೇರಿ

ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂಬುದು ಗೊತ್ತಾಗಿದೆ. ಅನಂತಕುಮಾರ್ ಹೆಗಡೆ ಸಹಕಾರ ಇಲ್ಲದೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಭಾರಿ ಕಷ್ಟ ಎಂದೂ ಹೇಳಲಾಗುತ್ತಿದೆ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದಕ್ಕೆ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಕಾಗೇರಿ ಆತಂಕಕ್ಕೆ ಕಾರಣವಾಗಿದೆ.

ಎ 16. ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ

Posted by Vidyamaana on 2023-04-16 11:08:59 |

Share: | | | | |


ಎ 16. ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ  ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಸರ್ಪಿಸಲು ಅವಕಾಶ ಕಲ್ಪಿಸಲಾಗಿದೆ.ಇಂದು ರಾತ್ರಿ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ ಹಾಗೂ ಪರಿವಾರ ದೈವಗಳ ಕಿರುವಾಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಲ್ನಾಡಿನ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಮಲ್ಲಿಗೆಯನ್ನು ಅರ್ಪಿಸುತ್ತಿದ್ದಾರೆ. ಪ್ರತಿ ವರ್ಷ ಸಂಜೆ ವೇಳೆ ಮಲ್ಲಿಗೆ ಅರ್ಪಿಸಲಾಗುತ್ತಿತ್ತು. ಈ ಬಾರಿ ಬದಲಾವಣೆ ಮಾಡಲಾಗಿದೆ.

ಮಲ್ಲಿಗೆ ಪ್ರಿಯೆ ಉಳ್ಳಾಲ್ತಿ ಅಮ್ಮನಿಗೆ ಪುತ್ತೂರು ನಗರದ ಉಳ್ಳಾಲ್ತಿ ಕಟ್ಟೆಯಲ್ಲಿ ಮಲ್ಲಿಗೆ ಅರ್ಪಿಸಲು ಬೆಳಿಗ್ಗೆಯಿಂದಲೇ ಮಲ್ಲಿಗೆ ಸ್ಟಾಲ್ ಗಳನ್ನು ತೆರೆದಿರುವುದು ಕಂಡು ಬಂದಿತ್ತು. ಚೆಂಡು ಒಂದರ ಮಲ್ಲಿಗೆ ದರ 100 ರೂಪಾಯಿ ಆಗಿತ್ತು. ಈ ಬಾರಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಿಂದುತ್ವದ ಮಲ್ಲಿಗೆ ಶೀರ್ಷಿಕೆಯಡಿ 10 ಮಲ್ಲಿಗೆ ಸ್ಟಾಲ್ ಗಳನ್ನು ತೆರೆಯಲಾಗಿದೆ.

ಲವರ್ ಡೆತ್‌ನೋಟ್‌ನಲ್ಲಿ ಕೋಡ್‌: ಹತ್ಯೆಗೀಡಾದ ಪ್ರೇಯಸಿ ಮೃತದೇಹ ಪತ್ತೆ!

Posted by Vidyamaana on 2024-01-19 08:41:37 |

Share: | | | | |


ಲವರ್ ಡೆತ್‌ನೋಟ್‌ನಲ್ಲಿ ಕೋಡ್‌: ಹತ್ಯೆಗೀಡಾದ ಪ್ರೇಯಸಿ ಮೃತದೇಹ ಪತ್ತೆ!

ಮುಂಬಯಿ : ಮಹಾ ರಾಷ್ಟ್ರದ ನವಿಮುಂಬಯಿ ಯಿಂದ 2023ರ ಡಿ. 12ರಂದು ನಾಪತ್ತೆಯಾಗಿದ್ದ 19 ವರ್ಷದ ಯುವತಿ ವೈಷ್ಣವಿ ಬಾಬರ್‌ ಎಂಬವರ ಶವ ಕೊನೆಗೂ ಪತ್ತೆಯಾಗಿದೆ. ವಿಚಿತ್ರವೆಂದರೆ ಶವ ಪತ್ತೆಯಾಗಿರುವುದು ಆಕೆಯ ಪ್ರಿಯಕರ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿದ್ದ ಸೀಕ್ರೆಟ್‌ ಕೋಡ್‌ನಿಂದ!ಹೌದು, ವೈಭವ ಎಂಬ ಯುವಕನ ಜತೆಗೆ ಪ್ರೀತಿಯಲ್ಲಿದ್ದ ವೈಷ್ಣವಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಆಕೆ ನಾಪತ್ತೆಯಾಗಿದ್ದ ದಿನವೇ ಇತ್ತ ವೈಭವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತನ ಶವವೇನೋ ಸಿಕ್ಕಿತ್ತು ಆದರೆ ವೈಷ್ಣವಿ ಏನಾದಳೆಂಬುದು ತಿಳಿದು ಬಂದಿರಲಿಲ್ಲ. ಬಳಿಕ ಪೊಲೀಸರು ವೈಭವ್‌ ಮೊಬೈಲ್‌ನಲ್ಲಿದ್ದ ಡೆತ್‌ನೋಟ್‌ ಗಮನಿಸಿ ದಾಗ ಅದರಲ್ಲಿ “ಎಲ್‌01-501′ ಎಂಬ ಕೋಡ್‌ ಇದ್ದದ್ದನ್ನು ಗಮನಿಸಿದ್ದಾರೆ. ಅದರ ಬೆನ್ನು ಹತ್ತಿ ತನಿಖೆ ನಡೆಸಿದಾಗ ಆ ಸಂಖ್ಯೆಯು ಅರಣ್ಯ ಇಲಾಖೆಯು ಮರ ವೊಂದರ ಮೇಲೆ ಬರೆದಿರುವ ಸಂಖ್ಯೆ ಎಂದು ತಿಳಿದುಬಂದಿದ್ದು, ಅದೇ ಮರದ ಕೆಳಗೆ ವೈಷ್ಣವಿಯ ಶವ ಹೂತಿರುವುದು ಪತ್ತೆಯಾಗಿದೆ.

ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

Posted by Vidyamaana on 2023-05-24 12:47:41 |

Share: | | | | |


ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

ಬೆಳ್ತಂಗಡಿ: ಖಡಕ್ ರಾಜಕಾರಣಿ ಎಂದೇ ಖ್ಯಾತಿ ಪಡೆದ ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರರನ್ನು ರಾಜಕೀಯದಲ್ಲಿ ಸಕ್ರೀಯವಾಗಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಖಡಕ್ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದ ವಸಂತ್ ಬಂಗೇರರನ್ನು ಎಂ.ಎಲ್.ಸಿ. ಮಾಡಿ, ಸಚಿವರನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸಿಎಂ ಇಂಗಿತ. ಈ ಮೂಲಕ ಕರಾವಳಿ ರಾಜಕೀಯವನ್ನು ಮತ್ತೆ ಸಕ್ರೀಯಗೊಳಿಸುವುದು ಚಾಣಕ್ಯ ಸಿದ್ದರಾಮಯ್ಯರ ತಂತ್ರ ಎಂದು ಹೇಳಲಾಗಿದೆ.

ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

Posted by Vidyamaana on 2023-07-25 08:33:03 |

Share: | | | | |


ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

ವಿಟ್ಲ: ಇನ್ನೋವಾ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರಿನ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ

Recent News


Leave a Comment: