ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಶ್ರೀ ರಾಮಚಂದ್ರಮನ ನಾಡಿನಿಂದ ಮಹಾಲಿಂಗೇಶ್ವರನ ಸನ್ನಿಧಿಗೆ ಬಂತು ಪವಿತ್ರ ಅಕ್ಷತೆ

Posted by Vidyamaana on 2023-11-27 16:39:47 |

Share: | | | | |


ಶ್ರೀ ರಾಮಚಂದ್ರಮನ ನಾಡಿನಿಂದ ಮಹಾಲಿಂಗೇಶ್ವರನ ಸನ್ನಿಧಿಗೆ ಬಂತು ಪವಿತ್ರ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು.

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ. ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು.ಬಳಿಕ ಅಕ್ಷತೆ ತುಂಬಿದ ಕಲಶವನ್ನು ಮೆರವಣಿಗೆ ಮೂಲಕ ದೇವಸ್ಥಾನದ ಹೊರಾಂಗಣದಲ್ಲಿ ಸುತ್ತು ಬಂದು ದೇವಸ್ಥಾನದ ಒಳಾಂಗಣಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಗರ್ಭಗುಡಿಯಲ್ಲಿ ಅಕ್ಷತೆಯನ್ನಿರಿಸಿ ಪ್ರಾರ್ಥನೆ ಮೂಲಕ ಪೂಜೆ ನೆರವೇರಿಸಲಾಯಿತು. ಬಳಿಕ ಅಕ್ಷತೆಯನ್ನು ಪಾವಿತ್ರ್ಯತೆಯೊಂದಿಗೆ ಇರಿಸಲಾಯಿತು. ಅಕ್ಷತೆಯನ್ನು ಪ್ರತೀ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ಜ. 1 ರಿಂದ 15 ರ ತನಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಹಿಂದುವಿನ ಮನೆಗೆ ಈ ಅಕ್ಷತೆಯನ್ನು ಸಂಪರ್ಕ ಅಭಿಯಾನದ ಮೂಲಕ ತಲುಪಿಸಲಾಗುವುದು. ಜ. 7 ರಂದು ಸಂಪರ್ಕ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಮಹಾಸಂಪರ್ಕ ಅಭಿಯಾನ ನಡೆಯಲಿದೆ.ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಯೋಜಕ್ ರವೀಂದ್ರ ಪಿ., ಸಂಚಾಲಕ ಡಾ. ಕೃಷ್ಣ ಪ್ರಸನ್ನ ಸೇರಿದಂತೆ ಮತ್ತಿತರ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಮೀಸಲು ಪೊಲೀಸ್ ಘಟಕಗಳಿಗೆ ನೇಮಕಾತಿ

Posted by Vidyamaana on 2024-06-15 12:01:42 |

Share: | | | | |


ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಮೀಸಲು ಪೊಲೀಸ್ ಘಟಕಗಳಿಗೆ ನೇಮಕಾತಿ

ಬೆಂಗಳೂರು : 2023-24ನೇ ಸಾಲಿಗೆ 1500 ಪೊಲೀಸ್‌ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.

ಹುದ್ದೆಗಳ ವಿವರ

ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886

ಕಲ್ಯಾಣ ಕರ್ನಾಟಕ ವೃಂದ ಹು

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯ (ಸ್ಪೆಷಲ್ ಆರ್‌ಪಿಸಿ) ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅವ್ರು ನನ್ನನ್ನು ಖರೀದಿಸುವಷ್ಟು ಶ್ರೀಮಂತರಲ್ಲ : ಬಿಜೆಪಿ ಸೇರ್ಪಡೆ ವರದಿಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

Posted by Vidyamaana on 2024-04-04 19:50:39 |

Share: | | | | |


ಅವ್ರು ನನ್ನನ್ನು ಖರೀದಿಸುವಷ್ಟು ಶ್ರೀಮಂತರಲ್ಲ : ಬಿಜೆಪಿ ಸೇರ್ಪಡೆ ವರದಿಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

ನವದೆಹಲಿ : ಪ್ರಕಾಶ್ ರಾಜ್ ತಮ್ಮ ವಿಚಿತ್ರ ಶೈಲಿ ಮತ್ತು ಬಲವಾದ ನಟನೆಯಿಂದ ಸುದ್ದಿಯಲ್ಲಿದ್ದಾರೆ. ಪ್ರಕಾಶ್ ರಾಜ್ ಯಾವಾಗಲೂ ಬಿಜೆಪಿ ವಿರುದ್ಧವಾಗಿದ್ದು, ತಮ್ಮ ನೀತಿಗಳ ಬಗ್ಗೆ ಮತ್ತೆ ಮತ್ತೆ ಪ್ರಶ್ನೆಗಳನ್ನ ಎತ್ತುತ್ತಲೇ ಇರುತ್ತಾರೆ. ಆದ್ರೆ, ಈ ನಡುವೆ ಪ್ರಕಾಶ್ ರಾಜ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Posted by Vidyamaana on 2024-06-22 11:31:59 |

Share: | | | | |


ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.

ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.

ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 17) ವಿದ್ಯುತ್ ನಿಲುಗಡೆ

Posted by Vidyamaana on 2023-06-16 23:14:10 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 17) ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ, ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

Posted by Vidyamaana on 2023-08-30 02:07:54 |

Share: | | | | |


ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

ಪುತ್ತೂರು: ಪುತ್ತೂರಿನಲ್ಲಿ ಶಾಸಕರ ಕಚೇರಿ ಲೋಕಾರ್ಪಣೆ ಆಗಿದೆ. ಇದಕ್ಕೆ ನಾವೆಲ್ಲ ಸಂತೋಷ ಪಡಬೇಕು. ಆದರೆ ಆ ಕಚೇರಿಗೆ ನಗರಸಭೆಯ ತೆರಿಗೆ ಹಣವನ್ನು ವಿನಿಯೋಗಿಸಿದ್ದು ಖಂಡನೀಯ. ಪುತ್ತೂರು ನಗರಸಭೆಯ ರೂ. 31ಲಕ್ಷ ವೆಚ್ಚ ಮಾಡಿ ಶಾಸಕರ ಐಶಾರಾಮಿ ಕಚೇರಿ ನಿರ್ಮಾಣ ಆಗಿದೆ. ಈ ಹಣವನ್ನು ನಗರಸಭೆಗೆ ಜಿಲ್ಲಾಧಿಕಾರಿಗಳು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿ ನೇತೃತ್ವದಲ್ಲಿ ನಗರಸಭೆ ಸದಸ್ಯರೊಂದಿಗೆ ಪುತ್ತೂರು ನಗರಸಭೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕ ಅಶೋಕ್ ರೈ ಅವರ ಕಚೇರಿ ಮಾಡಲು ಅನುದಾನ ಎಲ್ಲಿಂದ ಬಂತು ಎಂಬುದನ್ನು ಯಾರು ನೋಡಿರಿಲ್ಲ. ಪುತ್ತೂರಿನ ಇತಿಹಾಸದಲ್ಲಿ ಶಾಸಕರಾಗಿದ್ದ ಸದಾನಂದ ಗೌಡ, ಶಕುಂತಳಾ ಶೆಟ್ಟಿ, ಮಲ್ಲಿಕಾಪ್ರಸಾದ್, ನಾನು ಕೂಡಾ ಸೇರಿದಂತೆ ಯಾರು ಕೂಡಾ ಐಶಾರಾಮದ ಕಚೇರಿ ಮಾಡಿಲ್ಲ. ಜನಾಮಾನ್ಯರ ತೆರಿಗೆ ಹಣದಲ್ಲಿ ಕಚೇರಿ ಮಾಡದೆ ತಾಲೂಕು ಪಂಚಾಯತ್, ತಾಲೂಕು ಆಡಳಿತ ಸೌಧದಲ್ಲೇ ಕಚೇರಿ ಮಾಡಿದ್ದೆವು. ಜನಸಾಮಾನ್ಯರಿಗೆ ಸುಲಭವಾಗಿ ಶಾಸಕರು ಸಿಗಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಕಡೆ ಸರಕಾರಿ ಕಚೇರಿಯಲ್ಲೇ ಮಾಡಲಾಗಿತ್ತು. ಆದರೆ ಪುತ್ತೂರು ಶಾಸಕರು ತಮ್ಮ ಕಚೇರಿಗೆ ನಗರಸಭೆಯ ರೂ. 31ಲಕ್ಷವನ್ನು ವಿನಿಯೋಗಿಸಿದ್ದಾರೆ. ಪುತ್ತೂರು ನಗರಸಭೆಯ ಜನರ ತೆರಿಗೆ ಹಣದಲ್ಲಿ ಈ ಕಚೇರಿಗೆವಿನಿಯೋಗ ಮಾಡುವ ಕೆಲಸದ ಬದಲು ಅದು ಪುತ್ತೂರಿನ ಅಭಿವೃದ್ಧಿಗೆ ವಿನಿಯೋಗ ಆಗಬೇಕಾಗಿತ್ತು. ನಗರಸಭೆಯ ಸದಸ್ಯರಿಗೆ ಅನುದಾನ ಹಂಚಿಕೆ ಮಾಡಿದಲ್ಲಿ ಅವರು ತಮ್ಮ ತಮ್ಮ ವಾರ್ಡ್‌ಗಳ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದರು. ಆದರೆ ಇಲ್ಲಿ ಶಾಸಕರು ಸೂಚನೆ ಕೊಟ್ಟು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ನಗರಸಭೆಯ ಜನಪ್ರತಿನಿಧಿಗಳ ಗಮನಕ್ಕೂ ತಾರದೆ ನಿರ್ಣಯ ಮಾಡಿ ಅನುದಾನವನ್ನು ಶಾಸಕರ ಕಚೇರಿಗೆ ವಿನಿಯೋಗಿಸಲು ನೀಡಿರುವುದು ಖಂಡನೀಯ. ಈ ನಡುವೆ ಪುಡಾ ಕಚೇರಿನ್ನು ಖಾಸಗಿ ಕಟ್ಟಡಕ್ಕೆ ವರ್ಗಾವಣೆ ಮಾಡುವ ಮೂಲಕ ನಗರಸಭೆಗೆ ಪುಡಾದ ಬಾಡಿಗೆಯಿಂದ ಬರುವ ಅನುದಾನವು ಕಡಿತವಾಗಿದೆ. ಇದೀಗ ಪುಡಾವು ಹೆಚ್ಚುವರಿ ರೂ. 16ಸಾವಿರ ಬಾಡಿಗೆ ಕೊಡಬೇಕಾಗಿ ಬಂದಿದೆ. ಒಂದು ಶಾಸಕರ ಕಚೇರಿಗಾಗಿ ಎಷ್ಟು ಖರ್ಚನ್ನು ಸರಕಾರದ ಖಜಾನೆಯಿಂದ ಖರ್ಚು ಮಾಡುತ್ತಾರೆ ಎಂಬುದು ಜನಸಾಮಾನ್ಯರು ಯೋಚನೆ ಮಾಡಬೇಕು. ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ ಎಲ್ಲಿಂದ ಭ್ರಷ್ಟಾಚಾರ ಆಗುತ್ತಿದೆ. ಎಲ್ಲಿ ಸರಕಾರದ ಹಣ ಪೋಲಾಗುತ್ತಿದೆ. ಇದನ್ನು ಯೋಚನೆ ಮಾಡಬೇಕು. ಅದಕ್ಕಾಗಿ ಪುತ್ತೂರು ನಗರಸಭೆಯ ಜನರು ತೆರಿಗೆ ರೂಪದಲ್ಲಿ ನಗರಸಭೆಗೆ ಕಟ್ಟಿದ ಹಣವನ್ನು ಮತ್ತೆ ನಗರಭೆಗೆ ಜಿಲ್ಲಾಧಿಕಾರಿಯವರು ಕೊಡಿಸಬೇಕು. ಆ ಹಣದಿಂದ ನಗರಸಭೆಯ ಸದಸ್ಯರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಅಭಿವೃದ್ಧಿ ಮಾಡಬಹುದು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿಯಿಂದ ನಗರಸಭೆಯ ಮುಂದೆ ಪ್ರತಿಭಟನೆ ಅನಿವಾರ್ಯವಾಗಬಹುದು ಎಂದು ಅವರುಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ನಾನು ಶಾಸಕನಾಗಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯವರು ನೇರ ಸರಕಾರದಿಂದ ನೀಡಿದ ರೂ. 3ಲಕ್ಷದಲ್ಲಿ ನನ್ನ ಕಚೇರಿ ನಿರ್ಮಾಣ ಆಗಿದೆ ಎಂದರು. ಆದರೆ ಈಗಿನ ಶಾಸಕರು ಒಂದು ಕಚೇರಿಗಾಗಿ ಇಷ್ಟೊಂದು ಹೊರೆ ಭರಿಸುವುದು ಅಗತ್ಯವಿತ್ತಾ ಎಂದು ಪ್ರಶ್ನಿಸಿದರು

 ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್.ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಸದಸ್ಯೆ ಗೌರಿ ಬನ್ನೂರು ಉಪಸ್ಥಿತರಿದ್ದರು.



Leave a Comment: