ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


ಪುರುಷರಿಗೂ ಬಂತು ಗರ್ಭನಿರೋಧಕ ಚುಚ್ಚುಮದ್ದು; ಅಡ್ಡಪರಿಣಾಮಗಳಿಲ್ಲದೆ ಸುರಕ್ಷಿತ ಎನ್ನುತ್ತದೆ ಅಧ್ಯಯನ!

Posted by Vidyamaana on 2023-10-22 21:23:55 |

Share: | | | | |


ಪುರುಷರಿಗೂ ಬಂತು ಗರ್ಭನಿರೋಧಕ ಚುಚ್ಚುಮದ್ದು; ಅಡ್ಡಪರಿಣಾಮಗಳಿಲ್ಲದೆ ಸುರಕ್ಷಿತ ಎನ್ನುತ್ತದೆ ಅಧ್ಯಯನ!

ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ವಿಶ್ವದಲ್ಲೇ ಮೊದಲು ಚುಚ್ಚುಮದ್ದಿನ ಪುರುಷ ಗರ್ಭನಿರೋಧಕದ ಕ್ಲಿನಿಕಲ್ ಪ್ರಯೋಗಗಳನ್ನು ಪೂರ್ಣಗೊಳಿಸಿದೆ. ಇದು ಯಾವುದೇ ಗಂಭೀರ ಅಡ್ಡಪರಿಣಾಮಗಳಿಲ್ಲದೆ ಸುರಕ್ಷಿತ, ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.25-40 ವರ್ಷ ವಯಸ್ಸಿನ 303 ಅಭ್ಯರ್ಥಿಗಳನ್ನು ಒಳಗೊಂಡಿರುವ ಮೂರು ಹಂತದ ಕ್ಲಿನಿಕಲ್ ಪ್ರಯೋಗದ ಸಂಶೋಧನೆಗಳು ಕಳೆದ ತಿಂಗಳು ಅಂತರರಾಷ್ಟ್ರೀಯ ಮುಕ್ತ-ಪ್ರವೇಶ ಆಂಡ್ರೊಲಜಿ ಜರ್ನಲ್‌ನಲ್ಲಿ ಪ್ರಕಟವಾಗಿವೆ.ಮೂರು ಹಂತದ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಇಂಡಿಯಾ (DCGI) ಅನುಮತಿ ನೀಡಿದೆ ಮತ್ತು ಆಯಾ ಕೇಂದ್ರಗಳ ಸಾಂಸ್ಥಿಕ ನೈತಿಕ ಸಮಿತಿಗಳಿಂದ ಅನುಮೋದಿಸಲಾಗಿದೆ. ಆಸ್ಪತ್ರೆ ಆಧಾರಿತ ಅಧ್ಯಯನವನ್ನು ಐದು ಕೇಂದ್ರಗಳಲ್ಲಿ ನಡೆಸಲಾಯಿತು. ಮೂರು ಹಂತ ಕ್ಲಿನಿಕಲ್ ಪ್ರಯೋಗಗಳನ್ನು ಐದು ವಿಭಿನ್ನ ಕೇಂದ್ರಗಳಲ್ಲಿ (ನವದೆಹಲಿ, ಉಧಂಪುರ್, ಲುಧಿಯಾನ, ಜೈಪುರ ಮತ್ತು ಖರಗ್‌ಪುರ) ನಡೆಸಲಾಗಿದೆ.


ಅಧ್ಯಯನ ನಡೆದಿದ್ದು ಹೇಗೆ?: ಕಳೆದ ಏಳು ವರ್ಷಗಳ ಕಾಲ 303 ಆರೋಗ್ಯವಂತ ವಿವಾಹಿತ ಪುರುಷರ ಮೇಲೆ ಈ ಇಂಜೆಕ್ಷನ್‌ನ ಪ್ರಯೋಗ ಮಾಡಲಾಗಿತ್ತು. ಇದರ ಫಲಿತಾಂಶದ ಮೇಲೆ ಈ ಪ್ರಯೋಗ ಯಶಸ್ವಿಯಾಗಿದೆ ಎಂದು ಐಸಿಎಂಆರ್‌ ತಿಳಿಸಿದೆ. ಹಾರ್ಮೋನ್ ಅಲ್ಲದ ಚುಚ್ಚುಮದ್ದಿನ ಪುರುಷ ಗರ್ಭನಿರೋಧಕ RISUG (ಮಾರ್ಗದರ್ಶನದ ಅಡಿಯಲ್ಲಿ ವೀರ್ಯದ ಹಿಮ್ಮುಖ ಪ್ರತಿಬಂಧ) ಸಂಪೂರ್ಣವಾಗಿ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಈ ಅಧ್ಯಯನವು ಬಹಿರಂಗಪಡಿಸಿದೆ. ವೀರ್ಯ ಕೋಶಗಳು ವೃಷಣದಿಂದ ವೀರ್ಯ ನಾಳದ ಮೂಲಕ ಶಿಶ್ನವನ್ನು ತಲುಪುತ್ತವೆ.ಇದು ದೀರ್ಘಕಾಲ ಕೆಲಸ ಮಾಡುತ್ತದೆ. ಮೂರನೇ ಹಂತದ ಅಧ್ಯಯನದ ಆವಿಷ್ಕಾರಗಳನ್ನು ಅಂತಾರಾಷ್ಟ್ರೀಯ ಮುಕ್ತ ಪ್ರವೇಶ ಜರ್ನಲ್ ಆಂಡ್ರೊಲಜಿಯಲ್ಲಿ ಪ್ರಕಟಿಸಲಾಗಿದೆ.25-40 ವರ್ಷ ವಯಸ್ಸಿನವರನ್ನು ಕುಟುಂಬ ಯೋಜನೆಗಾಗಿ ಆಯ್ಕೆ ಮಾಡಲಾಯಿತು ಮತ್ತು ಅವರಿಗೆ 60 mg ರಿವರ್ಸಿಬಲ್ ಚುಚ್ಚುಮದ್ದನ್ನು ನೀಡಲಾಯಿತು. ವಿಶೇಷವೆಂದರೆ ಯಾವುದೇ ಗಂಭೀರ ಅಡ್ಡ ಪರಿಣಾಮಗಳಿಲ್ಲದೆ RISUG ನೊಂದಿಗೆ 99 ಪ್ರತಿಶತ ಗರ್ಭಧಾರಣೆಯನ್ನು ತಡೆಯಬಹುದು ಎಂದು ಐಸಿಎಂಆರ್‌ ತನ್ನ ಪ್ರಯೋಗದ ಮೂಲಕವಾಗಿ ತಿಳಿಸಿದೆ. ಗರ್ಭನಿರೋಧಕ ಅಭಿವೃದ್ಧಿಯಲ್ಲಿ, RISUG ಎಲ್ಲಾ ಇತರ ಗರ್ಭನಿರೋಧಕಗಳಿಗೆ ಹೋಲಿಸಿದರೆ ಗಂಡು ಮತ್ತು ಹೆಣ್ಣು ಎರಡೂ ಗರ್ಭನಿರೋಧಕ ಕಾರ್ಯಕ್ರಮಕ್ಕೆ ಪ್ರವೇಶದ ಹೊಸ್ತಿಲಲ್ಲಿರುವುದರಿಂದ ಹೆಚ್ಚಿನ ಪರಿಣಾಮಕಾರಿತ್ವವನ್ನು ಪ್ರಸ್ತುತಪಡಿಸುತ್ತದೆ. ಪ್ರಯೋಗಕ್ಕೆ ಒಳಪಟ್ಟ ವಿವಾಹಿತ ಪುರುಷರ ಪತ್ನಿಯರ ಆರೋಗ್ಯದ ಮೇಲೂ ನಿಗಾ ಇಡಲಾಗಿದ್ದು, ಯಾವುದೇ ದುಷ್ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ. ಈ ಗರ್ಭನಿರೋಧಕವು 13 ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತದೆ. ಯಾವುದೇ ಫಾರ್ಮಾ ಕಂಪನಿಯು ಈ ರೀತಿಯ ಉತ್ಪನ್ನವನ್ನು ಮಾರಾಟ ಮಾಡಲು ಬಯಸುವುದಿಲ್ಲ, ಅದು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗಿ ಉಳಿಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅದನ್ನು ಮಾರುಕಟ್ಟೆಗೆ ತರುವ ಪ್ರಕ್ರಿಯೆಯು ಸವಾಲಾಗಬಹುದು. ವೀರ್ಯ ಕೋಶಗಳು ವೃಷಣದಿಂದ ವೀರ್ಯ ನಾಳದ ಮೂಲಕ ಶಿಶ್ನವನ್ನುತಲುಪುತ್ತವೆ. RISUG ಅನ್ನು ಐಐಟಿ ಖರಗ್‌ಪುರದ ಡಾ. ಸುಜೋಯ್ ಕುಮಾರ್ ಗುಹಾ ಅಭಿವೃದ್ಧಿಪಡಿಸಿದ್ದಾರೆ.


ಅಧ್ಯಯನದ ಪ್ರಕಾರ, ನಿರಂತರವಾಗಿ ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯೊಂದಿಗೆ, ಜನಸಂಖ್ಯೆಯ ನಿಯಂತ್ರಣಕ್ಕಾಗಿ ಪುರುಷ ಗರ್ಭನಿರೋಧಕ ಆಧುನಿಕ ವಿಧಾನಗಳನ್ನು ಅಭಿವೃದ್ಧಿಪಡಿಸುವ ತುರ್ತು ಅವಶ್ಯಕತೆಯಿದೆ. ಸಂತಾನಹರಣವು ಗರ್ಭನಿರೋಧಕ ಕ್ರಮವಾಗಿ ಸಾಕಷ್ಟು ಪರಿಣಾಮಕಾರಿಯಾಗಿದ್ದರೂ ಸಹ, ಈ ವಿಧಾನದ ಕೆಲವು ಪ್ರಮುಖ ಮಿತಿಗಳು ಸುಧಾರಿತ ತಂತ್ರಗಳ ಅಭಿವೃದ್ಧಿಗೆ ಕರೆ ನೀಡುತ್ತವೆ.

ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ

Posted by Vidyamaana on 2023-08-02 08:19:43 |

Share: | | | | |


ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ

ಬೆಂಗಳೂರು: ದೈಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ ಪ್ರೇಯಸಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದಲ್ಲದೆ, ತನ್ನ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಡ್ಯಾನ್ಸ್‌ ಮಾಸ್ಟರ್‌ ಸೇರಿ ಮೂವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌(25) ಮತ್ತು ಆತನ ಸ್ನೇಹಿತರಾದ ಸಂತೋಷ್‌ (29) ಹಾಗೂ ಶಶಿ (30) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು 24 ವರ್ಷದ ಯುವತಿ ಮೇಲೆ ಕಳೆದೊಂದು ವರ್ಷದಿಂದ ಕೃತ್ಯ ಎಸಗುತ್ತಿದ್ದರು. ಆರೋಪಿಗಳ ಬಳಿಯಿದ್ದ ಲ್ಯಾಪ್‌ಟಾಪ್‌, ಮೊಬೈಲ್‌ಗ‌ಳು, ಪೆನ್‌ಡ್ರೈವ್‌, ಫೋಟೋ, ವಿಡಿಯೋಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.


ಸಂತ್ರಸ್ತೆ ಹಾಗೂ ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಆಗ ಆರೋಪಿ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ವೇಳೆ ಆಕೆಗೆ ತಿಳಿಯದಂತೆ ಮೊಬೈಲ್‌ನಲ್ಲಿ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದುಕೊಂಡಿದ್ದ. ಕೆಲ ದಿನಗಳ ಬಳಿಕ ಆತನ ವಿಕೃತ ವ್ಯಕ್ತಿತ್ವ ತಿಳಿದ ಸಂತ್ರಸ್ತೆ, 2021ರಿಂದ ದೂರವಾಗಿದ್ದಳು. ಆದರೆ, ಆರೋಪಿ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ, ಹತ್ತಾರು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ತನಗೆ ಹಣ ಬೇಕಾದಾಗ, ಕೆಲ ಸ್ನೇಹಿತರಿಂದ ಸಾವಿರಾರು ರೂ. ಪಡೆದುಕೊಂಡಿದ್ದು, ಅವರಿಗೂ ವಿಡಿಯೋ ಕಳುಹಿಸಿದ್ದ. ಅವರು ಸಹ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ್ದಾರೆ. ಹೀಗೆ ಐದಾರು ಮಂದಿ ಆಕೆಗೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇನ್‌ಸ್ಟ್ರಾದಲ್ಲಿ ವಿಡಿಯೋ ಅಪ್‌ಲೋಡ್‌ :

 ಮಧ್ಯೆ ಆರೋಪಿ ಇನ್‌ಸ್ಟ್ರಾಗ್ರಾಂನಲ್ಲಿ ನಕಲಿ ಪೇಜ್‌ ತೆರೆದು, ಖಾಸಗಿ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಿದ್ದಾನೆ. ಅದನ್ನು ಆಕೆಯ ಸ್ನೇಹಿತರು, ಪರಿಚಯಸ್ಥರಿಗೆ ಶೇರ್‌ ಮಾಡಿದ್ದ. ಅದರಿಂದ ಗಾಬರಿಗೊಂಡ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಪ್ರಮುಖ ಆರೋಪಿ ಡ್ಯಾನ್ಸ್‌ ಮಾಸ್ಟರ್‌ ಸಂತ್ರಸ್ತೆಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ವೆುàಲ್‌ ಮಾಡಿ, ತನ್ನ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ನೃತ್ಯ ಶಾಲೆಯ ವಿದ್ಯಾರ್ಥಿನಿಯರ ಮೇಲೂ ಈ ರೀತಿಯ ದೌರ್ಜನ್ಯ ಎಸಗಿದ್ದಾನೆ ಎಂಬ ಬಗ್ಗೆ ಪರಿಶೀಲಿಸಲಾಗಿದೆ.-

ಲಕ್ಷ್ಮೀ  ಪ್ರಸಾದ್‌, ಈಶಾನ್ಯ ವಿಭಾಗ ಡಿಸಿಪಿ

ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆ

Posted by Vidyamaana on 2023-10-09 15:45:30 |

Share: | | | | |


ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.



ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.


ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.


ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.

ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2024-03-23 19:42:29 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

ಪುತ್ತೂರು :ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.


ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದು, ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ಟರಿ (45) ಎಂಬಾಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಆಕೆಯ ಬಳಿಯಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.


ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

Posted by Vidyamaana on 2023-10-09 08:56:05 |

Share: | | | | |


ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ಧರ್ಮಗಳು ನ್ಯಾಯ, ಸತ್ಯ, ಅಹಿಂಸೆಯನ್ನೇ ಕಲಿಸುತ್ತದೆ, ಆದರೆ ಆ ಧರ್ಮವನ್ನು ನಂಬಿರುವ ನಾವು ನಾನು ಮೇಲು ಅವನು ಕೀಲು ಎಂಬ ದೃಷ್ಟಿಯಿಂದ ಕಚ್ಚಾಟ ಮಾಡುತ್ತಿದ್ದೇವೆ ಇದು ಸಲ್ಲದು, ಭಾರತ ವಿಶ್ವಗುರುವಾಗಬೇಕಾದರೆ ದೇಶದಲ್ಲಿ ಕೋಮು ಸೌಹಾರ್ಧತೆ ನೆಲೆಯೂರಬೇಕು, ಪ್ರತೀಯೊಬ್ಬ ಭಾರತೀಯರೂ ಒಂದೇ ತಾಯಿ ಮಕ್ಕಳಂತೆ ಬಾಳಿಬದುಕಬೇಕಾಗಿದೆ ಎಂದು ಹೇಳಿದರು.ನೊಂದವರಿಗೆ ನಾವು ಧರ್ಮ , ಜಾತಿ ನೋಡದೆ ಸಹಾಯ ಮಾಡುವ , ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಇದ್ದಲ್ಲಿ ಮಾತ್ರ ನಮ್ಮ ಊರು ಶಾಂತಿಯ ನೆಲೆ ಬೀಡಾಗಲು ಸಾಧ್ಯ ಎಂಬುದನ್ನು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು ರಾಜಕೀಯ ಲಾಭಕ್ಕೋಸ್ಕರ ಕೆಲವೊಂದು ರಾಜಕೀಯ ಪಕ್ಷಗಳು ಇಲ್ಲಿ ಕೋಮು ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದೆ ಇದರ ಬಗ್ಗೆ ಜನರಲ್ಲಿ ಜಾಗೃತಿಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಮಂಜೇಶ್ವರ ಸಾಸಕರಾದ ಎಂ ಕೆ ಎಂ ಅಶ್ರಫ್‌ರವರು ಮಾತನಾಡಿ ಭಾರತದ ಜಾತ್ಯಾತೀತ ತತ್ವ ಅದು ಎಂದೆಂದೂ ಇಲ್ಲಿ ನೆಲೆ ನಿಲ್ಲಿದೆ ಅದನ್ನು ತೊಡೆದು ಹಾಕಲು ಯಾವ ಕೋಮು ಶಕ್ತಿಗೂ ಸಾಧ್ಯವಿಲ್ಲ. ದೇಶದಲ್ಲಿ ೯೦ ಶೇ. ಜನರಲ್ಲಿ ಹರಿಯುವ ರಕ್ತ ಅದು ಸೌಹಾರ್ಧತೆಯ ರಕ್ತವಾಗಿದೆ. ದೇಶದ ಮೊದಲ ಸ್ವಾತಂತರ್‍ಯ ಹೋರಾಟವನ್ನು ಆರಂಭ ಮಾಡಿದ್ದು ಓರ್ವ ಮುಸ್ಲಿಂ ಧರ್ಮಗುರುವಾಗಿದ್ದರ ಅವರಿಗೆ ಇಲ್ಲಿನ ಶೇ.೧೦೦ ಹಿಂಧೂ ಬಂಧುಗಳು ಬೆಂಬಲ ನೀಡಿದ್ದರು ಎಂಬ ಇತಿಹಾಸವನ್ನು ನಾವು ಮರೆಯಬಾರದು. ದೇಶದ ಸೌಹಾರ್ಧತೆಯನ್ನು ಹಾಳು ಮಾಡುವ ಶಕ್ತಿಗಳ ವಿರುದ್ದ ನಾವು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು. ಕೆಪಿಸಿಸಿ ಸಂಯೋಜಕರಾದ ಕವು ಹೇಮನಾಥ ಶೆಟ್ಟಿ ಮಾತನಾಡಿ ಸೌರ್ಹಾರ್ಧತೆ ಎಂಬುದು ಹೃದಯದಲ್ಲಿ ಹುಟ್ಟುವಂತದ್ದು ಕೋಮುವಾದ ಮೈಗೂಡಿಸಿಕೊಂಡಲ್ಲಿ ಈ ದೇಶದಲ್ಲಿ ಬದುಕುವುದು ಕಷ್ಟ ಸಾಧ್ಯವಾಗಿದೆ. ಕೋಮುವಾದವನ್ನು ಮಾಡಿ ಜನರ ನಡುವೆ ಕಲಹ ಸೃಷ್ಟಿಸಿದವರು ಯಾವ ಸಾಧನೆಯನ್ನು ಮಾಡಿಲ್ಲ, ಇನ್ನೂ ಮಾಡುವುದು ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ಮಂಜೇಶ್ವರ ಶಾಕರಾದ ಎಂ ಕೆ ಎಂ ಅಶ್ರಫ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಸ್ವಾಗತಿಸಿದರು. ಆಸಿಫ್ ಹಾಜಿ ತಂಬುತ್ತಡ್ಕ ವಂದಿಸಿದರು.

ಲಾಟರಿಯಲ್ಲಿ 80 ಲಕ್ಷ ರೂ. ಗೆದ್ದ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ವ್ಯಕ್ತಿ ಮೃತ್ಯು

Posted by Vidyamaana on 2023-04-04 09:34:41 |

Share: | | | | |


ಲಾಟರಿಯಲ್ಲಿ 80 ಲಕ್ಷ ರೂ. ಗೆದ್ದ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ವ್ಯಕ್ತಿ ಮೃತ್ಯು

ತಿರುವನಂತಪುರಂ: 80 ಲಕ್ಷ ರೂ. ಲಾಟರಿ ಹಣವನ್ನು ಗೆದ್ದ ಸಂತಸದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿರುವ ಪಂಗೋಡ್ ನಲ್ಲಿ ನಡೆದಿರುವುದು ವರದಿಯಾಗಿದೆ.ಪಂಗೋಡ್ ನಿವಾಸಿ ಸಜೀವ್ (35)‌ ಮೃತ ವ್ಯಕ್ತಿ.ಪಾರ್ಟಿ ಮಾಡುತ್ತಿದ್ದ ವೇಳೆ ಎಲ್ಲರೂ ಮದ್ಯದ ನಶೆಯಲ್ಲಿದ್ದರು. ಈ ವೇಳೆ ಸಂತೋಷ್ ಎಂಬ ವ್ಯಕ್ತಿ ಸಜೀವ್ ಅವರನ್ನು ತಳ್ಳಿದ್ದಾರೆ. ಪರಿಣಾಮ ಸಜೀವ್ , ರಬ್ಬರ್ ತೋಟದ ಆಳದ ಹೊಂಡಕ್ಕೆ ಬಿದ್ದಿದ್ದಾರೆ. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಸೋಮವಾರ ಸಂಜೆ ಅವರು ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಕೇಸ್‌ ದಾಖಲಿಸಿದ್ದು, ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ಬಳಿಕವೇ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

Recent News


Leave a Comment: