ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ತಂಡದ ಕಬಡ್ಡಿ ತರಬೇತುದಾರರಾಗಿ ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆ

Posted by Vidyamaana on 2023-11-26 22:22:27 |

Share: | | | | |


ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ತಂಡದ ಕಬಡ್ಡಿ ತರಬೇತುದಾರರಾಗಿ ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆ

ಪುತ್ತೂರು : ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಲಿಟ್ಲ್ ಫ್ಲವರ್ ಶಾಲೆಯ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕರ್ನಾಟಕ ತಂಡದ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.


ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ 14 ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ನೇತೃತ್ವದ ತಂಡ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಜನವರಿ 28 ರಂದು ನಡೆಯುವ 14 ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಲಿಟ್ಲ್ ಫ್ಲವರ್ ಶಾಲೆಯ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕರ್ನಾಟಕ ತಂಡದ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ

ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

Posted by Vidyamaana on 2023-02-06 15:12:33 |

Share: | | | | |


ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.

ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು:

ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,

ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ - ಮೊ: 9480805320

ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ

Posted by Vidyamaana on 2024-02-18 04:47:59 |

Share: | | | | |


ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ

ಪುತ್ತೂರು: ಪುರುಷರಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ) ಫೆ.18 ಭಾನುವಾರ ನಡೆಯಲಿದೆ.


ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ ನಡೆಯುವ ಶಿಬಿರದಲ್ಲಿ ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸದೇ ಕೂಡಲೇ ತಪಾಸಣೆ ಮಾಡಿಕೊಂಡು ಮುಂದೆ ಆಗುವ ಅನೇಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹಾಗಾಗಿ ನಮ್ಮ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತವಾಗಿ ಶಲ್ಯ ತಂತ್ರ ವಿಭಾಗದ ತಜ್ಞ ವೈದ್ಯರ ತಪಾಸಣೆ, ಸಲಹೆ ಮತ್ತು ಸಂದರ್ಶನವನ್ನು ಆಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಶಸ್ತ್ರಕ್ರಿಯೆಗೆ ಒಳಪಡದೆ ಆಯುರ್ವೇದೀಯ ಕ್ಷಾರ ಕರ್ಮವನ್ನು ಅತ್ಯಂತ ರಿಯಾಯಿತಿ ದರದಲ್ಲಿ ಮಾಡಲಾಗುವುದು. ಇದರ ಪ್ರಯೋಜನೆಯನ್ನು ಸಾರ್ವಜನಿಕರು ಪಡೆದುಕೊಳ್ಳಲು ಫೆ.17ನೇ ಶನಿವಾರದ ಮೊದಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು ಡಾ ಸುಜಯ್ ತಂತ್ರಿ, ಕೆಮ್ಮಿಂಜೆ ತಿಳಿಸಿದ್ದಾರೆ.

ವಿಶೇಷವಾಗಿ ಶಲ್ಯ ತಂತ್ರ ವಿಭಾಗದ ತಜ್ಞ ವೈದ್ಯರು ಪ್ರತೀ ಆದಿತ್ಯವಾರ ಸಂಜೆ 3.30ರಿಂದ 5.30ರ ವರೆಗೆ ಲಭ್ಯರಿರುತ್ತಾರೆ. ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಬೆಳ್ಳಾರೆ : ಅನ್ಯಮತೀಯ ಯುವಕನಿಂದ ಯುವತಿಗೆ ಕಿರುಕುಳ ಆರೋಪ : ಯುವಕ ಪೊಲೀಸ್ ವಶಕ್ಕೆ

Posted by Vidyamaana on 2023-11-08 21:31:21 |

Share: | | | | |


ಬೆಳ್ಳಾರೆ : ಅನ್ಯಮತೀಯ ಯುವಕನಿಂದ ಯುವತಿಗೆ ಕಿರುಕುಳ ಆರೋಪ : ಯುವಕ ಪೊಲೀಸ್ ವಶಕ್ಕೆ

ಬೆಳ್ಳಾರೆ :ನಿಂತಿಕಲ್ಲಿನಲ್ಲಿ  ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ರಾತ್ರಿ ನಡೆದಿದೆ.

ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ  ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ  ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.

ಬಿಕಾಂ ಪದವೀಧರನ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ – ಕ್ಲಿನಿಕ್ ಸೀಝ್

Posted by Vidyamaana on 2023-12-17 16:18:09 |

Share: | | | | |


ಬಿಕಾಂ ಪದವೀಧರನ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ – ಕ್ಲಿನಿಕ್ ಸೀಝ್

ಉಡುಪಿ: ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ಗಳ ಮೇಲೆ ದಾಳಿ ನಡೆಸಿ ಬಿಕಾಂ ಪದವೀಧರ ‘ಆಯುರ್ವೇದಿಕ್ ಡಾಕ್ಟರ್’ನ್ನು ಅರೆಸ್ಟ್‌ ಮಾಡಿದ್ದಾರೆ. ದಾಳಿಯಲ್ಲಿ ಇತರ ನಕಲಿ ವೈದ್ಯರು ಸಿಕ್ಕಿ ಬಿದ್ದಿದ್ದಾರೆ ಎಂದೂ ವರದಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ 7 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬಿಕಾಂ ಪದವೀಧರನೇ ಆಯುರ್ವೇದಿಕ್, ಆಲೋಪತಿ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದುದು ಬಯಲಾಗಿದೆ.


ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ ನಡೆಸಿದಾಗ ಬಿಕಾಂ ಪದವೀಧರನಾಗಿರುವ ಸಂದೇಶ್ ರಾವ್ ತಾನು ಆಯುರ್ವೇದಿಕ್ ವೈದ್ಯ ಎಂದು ಆಯುರ್ವೇದಿಕ್ ಸೆಂಟರ್ ತೆಗೆದಿರುವುದು ಪತ್ತೆಯಾಗಿದೆ.ಆಯುರ್ವೇದಿಕ್ ಸೆಂಟರ್ ಸೀಜ್ ಮಾಡಿರುವ ಅಧಿಕಾರಿಗಳು ಬ್ರಹ್ಮಾವರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ

ಲಾರಿಗೆ ಬೈಕ್ ಡಿಕ್ಕಿ ಹೊಡೆದು ಪತ್ರಕರ್ತ ಮಧು ಕುಮಾರ್ ಮೃತ್ಯು

Posted by Vidyamaana on 2024-07-07 18:22:57 |

Share: | | | | |


ಲಾರಿಗೆ ಬೈಕ್ ಡಿಕ್ಕಿ ಹೊಡೆದು ಪತ್ರಕರ್ತ ಮಧು ಕುಮಾರ್ ಮೃತ್ಯು

ಮಂಡ್ಯ : ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಪ್ರತಕರ್ತರೊಬ್ಬರು ಅಸುನೀಗಿದ ಘಟನೆ ನಡೆದಿದೆ.ಶನಿವಾರ ರಾತ್ರಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಪತ್ರಕರ್ತ ಬಿ.ಎ.ಮಧು ಕುಮಾರ್ (34) ಮೃತಪಟ್ಟಿದ್ದಾರೆ.

Recent News


Leave a Comment: