ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 07:37:52 |

Share: | | | | |


ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ ಸಫ್ವಾನ್ ಅರೆಸ್ಟ್

Posted by Vidyamaana on 2024-07-07 09:34:59 |

Share: | | | | |


ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ  ಸಫ್ವಾನ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್‌ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.18 : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Posted by Vidyamaana on 2023-02-17 05:34:28 |

Share: | | | | |


ಫೆ.18 : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಫೆ.18 ಶನಿವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.

ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಭಜನಾ ತಂಡಗಳಿಂದ ಸಂಜೆ 6 ಕ್ಕೆ ಕುಣಿತ ಭಜನೆ,  ಮಹಾಪೂಜೆ  ಮತ್ತು ರಾತ್ರಿ 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 12 ಕ್ಕೆ ಮಹಾಶಿವರಾತ್ರಿಯ ವಿಶೇಷ ಪೂಜೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ

Posted by Vidyamaana on 2024-08-17 06:39:10 |

Share: | | | | |


SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು :78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು.

ಧ್ವಜಾರೋಹಣವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ನೆರವೇರಿಸಿದರು.

ಅಂಗಡಿಗೆ ನುಗ್ಗಿದ ಕೃತಕ ನೆರೆ

Posted by Vidyamaana on 2023-07-06 09:18:48 |

Share: | | | | |


ಅಂಗಡಿಗೆ ನುಗ್ಗಿದ ಕೃತಕ ನೆರೆ

ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಬಿರುಸಾದ ಮಳೆಗೆ ಬೆಂಗಳೂರು, ಮಂಗಳೂರು ಮುಳುಗಡೆ ಆಗಿದೆ ಎಂದರೆ ಅದಕ್ಕೆ ಕಾಂಕ್ರಿಟೀಕರಣ ಎಂದು ಹೇಳಬಹುದು. ಆದರೆ ಪುತ್ತೂರಿನಂತಹ ಪೇಟೆಯಲ್ಲಿ ಮಳೆನೀರಿಗೆ ಅಂಗಡಿ ಮುಳುಗಡೆ ಆಗಿದೆ ಎಂದರೆ ಅದಕ್ಕೆ ಮೋರಿ ಅಸಮರ್ಪಕ ತಂತ್ರಜ್ಞಾನ ಎಂದೇ ಹೇಳಬೇಕು.

ಸಾಲ್ಮರದಲ್ಲಿ ಪುಟ್ಟ ವ್ಯಾಪಾರಿಯೊಬ್ಬರು ತನ್ನ ಸಂಸಾರ ನೌಕೆ ಸಾಗಿಸಲು ಪುಟ್ಟ ಅಂಗಡಿ ಹಾಕಿದ್ದರು. ಈ ವ್ಯಾಪಾರಿಯ ಪುಟ್ಟ ಸಂಸಾರ ನೌಕೆ ಮುಂದೆ ಸಾಗಲು ಇದೀಗ ನಗರಸಭೆಯ ಅವೈಜ್ಞಾನಿಕ ಕಾಮಗಾರಿಯೇ ತಡೆಯಾಗಿ ಪರಿಣಮಿಸಿದೆ‌.

ಮೋರಿ ಸಮಸ್ಯೆಯಿಂದ ಮಳೆನೀರು ಸರಾಗ ಹರಿವಿಗೆ ಅಡ್ಡಿಯಾಗಿದೆ. ಇದರಿಂದ ಕೃತಕ ನೆರೆ ಸೃಷ್ಟಿಯಾಗಿ, ಅಂಗಡಿಗೆ ನುಗ್ಗಿದೆ. ಅಂಗಡಿ ಭಾಗಶಃ ಮುಳುಗಡೆಯಾಗಿದ್ದು, ಅಂಗಡಿಯೊಳಗೆ ತೆರಳದಂತಹ ಸ್ಥಿತಿ ನಿರ್ಮಾಣವಾಗಿದೆ. ವ್ಯಾಪಾರ ನಡೆಸಲು ಸಾಧ್ಯವಾಗದ ವ್ಯಾಪಾರಿ, ಅಂಗಡಿಗೆ ಬಾಗಿಲು ಹಾಕಿ ಸುಮ್ಮಗೆ ಕುಳಿತುಕೊಳ್ಳುವಂತಾಗಿದೆ.

ಇದೇ ಮೊದಲಲ್ಲ:

ಹಿಂದಿನ ವರ್ಷವೂ ಇದೇ ಸಮಸ್ಯೆ ಎದುರಾಗಿತ್ತು. ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದ ಬಳಿಕ, ಮೋರಿ ಸಮಸ್ಯೆ ಸರಿಪಡಿಸಿದ್ದರು. ಬಳಿಕ ಅಂಗಡಿಯ ವ್ಯಾಪಾರ ಮುಂದುವರಿಸಿದ್ದರು. ಆದರೆ ಹಿಂದಿನ ವರ್ಷದಂತೆ ಈ ಬಾರಿಯೂ ಸಮಸ್ಯೆ ಪುನರಾವರ್ತನೆಯಾಗಿದೆ‌. ನಗರಸಭೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಫಲವಾಗಿದೆ. ಸದ್ಯ, ಬಡಕುಟುಂಬಕ್ಕೆ ಧಿಕ್ಕಾಗಿರುವ ಪುಟ್ಟ ಅಂಗಡಿಗೆ ಎದುರಾಗಿರುವ ಕೃತಕ ನೆರೆಯ ಹಾವಳಿಯಿಂದ ಮುಕ್ತಿ ನೀಡುವಂತೆ ಸ್ಥಳೀಯರು ಅಲವತ್ತುಕೊಂಡಿದ್ದಾರೆ.

ವಿಟ್ಲ: ಹೇಮಂತ್ ನಾಪತ್ತೆ

Posted by Vidyamaana on 2024-08-01 07:49:12 |

Share: | | | | |


ವಿಟ್ಲ: ಹೇಮಂತ್ ನಾಪತ್ತೆ

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ಎಂಬಲ್ಲಿನ ವ್ಯಕ್ತಿಯೋರ್ವರು ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಹೇಮಂತ್ ( 37) ಎಂದು ಗುರುತಿಸಲಾಗಿದೆ. ಹೇಮಂತ್ ಎಂಬವರು ಜುಲೈ 22ರಂದು ನೆಕ್ಕಿಲಾರು ಮನೆಯಿಂದ ಸಂಘಕ್ಕೆ ಹಣ ಕಟ್ಟಲು ಹೋದವರು ಮನೆಗೆ ಬಾರದೇ ಇದ್ದು ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಎಂದು ಬರುತ್ತದೆ.

Recent News


Leave a Comment: