ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

Posted by Vidyamaana on 2024-03-23 15:17:51 |

Share: | | | | |


ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

ಕಾಸರಗೋಡು:  ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಹೃದಯಾಘಾತದಿಂದ ನಿಧನ

Posted by Vidyamaana on 2024-06-30 10:36:16 |

Share: | | | | |


ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಹೃದಯಾಘಾತದಿಂದ ನಿಧನ

ವಿಟ್ಲ :ವಿಟ್ಲ ನಿವಾಸಿ, ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ, ವಿಠಲ್‌ ಎಜ್ಯುಕೇಶನ್‌ ಸೊಸೈಟಿ ಸಂಚಾಲಕ ಎಲ್ ಎನ್ ಕೂಡೂರು ನಿಧನರಾದರು.

ಇವರು ಕೃಷಿಕರಾಗಿದ್ದು, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಹಲವು ವರ್ಷಗಳ ವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಬಾಲಕ ಮೃತ್ಯು

Posted by Vidyamaana on 2024-05-06 20:08:01 |

Share: | | | | |


VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಬಾಲಕ ಮೃತ್ಯು

Cricket Video: ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಪುಣೆಯಲ್ಲಿ ನಡೆದಿರುವ ಈ ದಾರುಣ ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ಕ್ರಿಕೆಟ್ (Cricket) ಆಡಲು ಹೋಗಿದ್ದ 11 ವರ್ಷದ ಶೌರ್ಯ ಮೃತಪಟ್ಟ ದುರ್ದೈವಿ. ಪುಣೆಯ ಲೋಹಗಾಂವ್‌ನಲ್ಲಿರುವ ಜಗದ್ಗುರು ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಬ್ಯಾಟ್ಸ್​ಮನ್ ಬಾರಿಸಿದ ಚೆಂಡು ನೇರವಾಗಿ ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಲವಾಗಿ ಬಡಿದಿದೆ.

ಚೆಂಡು ಬಡಿದ ರಭಸದಿಂದ ನಿತ್ರಾಣಗೊಂಡಿದ್ದ ಬಾಲಕ ಹೆಜ್ಜೆಯಿಡುತ್ತಲೇ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ನೇಹಿತರು ಉಪಚರಿಸಿ ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.


ಪಿಕಪ್ ಚಾಲಕ ಸತೀಶ್ ಕೊಪ್ಪ ನೇಣು ಬಿಗಿದು ಆತ್ಮಹತ್ಯೆ-ಡೆತ್ ನೋಟ್ ಪತ್ತೆ

Posted by Vidyamaana on 2024-07-02 21:29:21 |

Share: | | | | |


ಪಿಕಪ್ ಚಾಲಕ ಸತೀಶ್ ಕೊಪ್ಪ ನೇಣು ಬಿಗಿದು ಆತ್ಮಹತ್ಯೆ-ಡೆತ್ ನೋಟ್ ಪತ್ತೆ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಗುಂಪಲಾಜೆ ನಿವಾಸಿ ಸತೀಶ್ ಕುಲಾಲ್ (32ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೨ರಂದು ನಡೆದಿದೆ.

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

Posted by Vidyamaana on 2023-11-02 17:05:39 |

Share: | | | | |


ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು.‌ರಾಜಭಬನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ‌ಪ್ರಮುಖರು ಉಪಸ್ಥಿತರಿದ್ದರು.

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರು ವೈದ್ಯರು ಮೃತ್ಯು

Posted by Vidyamaana on 2023-10-02 18:58:07 |

Share: | | | | |


ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರು ವೈದ್ಯರು ಮೃತ್ಯು

ಕೊಚ್ಚಿ: ಕಾರೊಂದು ಪೆರಿಯಾರ್ ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.


ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು.

ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.


ಗೋತುರುತ್‌ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.



Leave a Comment: