ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

Posted by Vidyamaana on 2024-06-18 13:17:16 |

Share: | | | | |


ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Posted by Vidyamaana on 2023-08-31 07:33:50 |

Share: | | | | |


ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಅನುತ್ತೀರ್ಣರಾದ ವಿದ್ಯಾರ್ಥಿಗಳ ಬಾಳಿಗೆ ಹೊಸ ಬೆಳಕಾಗಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಗುರುವಾರ ಭೇಟಿ ನೀಡಿದರು.

ಸಂಸ್ಥೆಯ ಸಂಚಾಲಕ ಪಿ.ವಿ. ಗೋಕುಲ್’ನಾಥ್, ಪ್ರಾಂಶುಪಾಲೆ ಹೇಮಲತಾ ಗೋಕುಲ್’ನಾಥ್ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

Posted by Vidyamaana on 2023-11-20 18:51:17 |

Share: | | | | |


ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

ಅಹಮದಾಬಾದ್‌, ನ.20: ಆಸ್ಟ್ರೇಲಿಯ 6ನೇ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ


ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ


ವೈರಲ್​ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್‌ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್​ ಪಂದ್ಯಕ್ಕೂ ಮುನ್ನ ಮಾರ್ಷ್​ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್​ಗೆ 450 ರನ್​ ಬಾರಿಸುತ್ತದೆ, ಭಾರತ 65 ರನ್​ಗೆ ಆಲೌಟ್​ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್​ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ 15ರನ್​ಗೆ ಔಟಾಗಿದ್ದರು.


ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.


ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-10 08:24:55 |

Share: | | | | |


ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಪು ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಕುರಿಯ ಸಹಿತ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ


ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

Posted by Vidyamaana on 2024-05-26 11:01:07 |

Share: | | | | |


ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಮೂಲದ ರಾಜೇಶ್  ಅವರು ಆರ್.ಎಸ್.ಎಸ್.ಪ್ರಚಾರಕರಾಗಿ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

2022ರ ಜುಲೈನಲ್ಲಿ ಅವರನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಮಹತ್ವದ ಹುದ್ದೆಗೆ ಬಂದವರ ಅವಧಿ ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಅವಧಿಗೆ ಮೊದಲೇ ಅವರನ್ನು ಬದಲಾವಣೆ ಮಾಡಲಾಗಿದೆ.

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ

Posted by Vidyamaana on 2024-04-14 20:23:09 |

Share: | | | | |


ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್​ ಶೋ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು.

Recent News


Leave a Comment: