ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

Posted by Vidyamaana on 2023-03-21 09:33:25 |

Share: | | | | |


ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು:ಅಪಾಯ ಸಂಭವಿಸುವ ಮೊದಲು ಈ ಎರಡು ಕಡೆಯ ಹೊಂಡ ಮುಚ್ಚಿ!!

Posted by Vidyamaana on 2024-08-02 19:20:36 |

Share: | | | | |


ಪುತ್ತೂರು:ಅಪಾಯ ಸಂಭವಿಸುವ ಮೊದಲು ಈ ಎರಡು ಕಡೆಯ ಹೊಂಡ ಮುಚ್ಚಿ!!

ಪುತ್ತೂರು: ಮಳೆ ಕಾರಣಕ್ಕೆ ರಸ್ತೆಗಳು ಹೊಂಡ ಬಿದ್ದಿವೆ ನಿಜ. ಆದರೆ ವಾಹನಗಳು ನಲುಗಿ ಹೋಗುತ್ತಿವೆ, ಸಂಚಾರ ದಟ್ಟಣೆಗೆ ಎಡೆ ನೀಡಿದೆ, ಪ್ರಯಾಣಿಕರು ರೋಸಿ ಹೋಗಿದ್ದಾರೆ.

ಇದು ದರ್ಬೆ ಜಂಕ್ಷನ್ ಹಾಗೂ ಹರ್ಷ ಮಳಿಗೆಯ ಮುಂದಿನ ಮರಣ ಗುಂಡಿಗಳಿಂದ ಅಗಿರುವ ಸಮಸ್ಯೆ

ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

Posted by Vidyamaana on 2023-07-30 07:59:14 |

Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.


ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

Posted by Vidyamaana on 2024-04-15 14:22:31 |

Share: | | | | |


ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

ಮಂಗಳೂರು : ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ತಂಡದ ಮಧ್ಯೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.

ಮನೆಯಲ್ಲಿ ಅಗ್ನಿ ದುರಂತ; ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ್ಯು

Posted by Vidyamaana on 2024-07-15 11:33:49 |

Share: | | | | |


ಮನೆಯಲ್ಲಿ ಅಗ್ನಿ ದುರಂತ; ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ್ಯು

ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (Death). ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರಾಗಿರುವ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿಗೆ ಗಂಭೀರ ಗಾಯಗಳಾಗಿದ್ದವು. ಇಬ್ಬರನ್ನೂ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಪುತ್ತೂರು : ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

Posted by Vidyamaana on 2024-08-05 18:38:19 |

Share: | | | | |


ಪುತ್ತೂರು : ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಪುತ್ತೂರು : ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟಗೊಂಡಿದೆ.

Recent News


Leave a Comment: