ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Posted by Vidyamaana on 2024-06-16 17:20:11 |

Share: | | | | |


ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದೆ, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕುರಿಯ ಗ್ರಾಮದ ಎನ್ ಆರ್ ಸಿ ಸಿ - ಅಮ್ಮುಂಜ ರಸ್ತೆಯು ರೂ ೧೦ ಲಕ್ಷದಲ್ಲಿ ಕಾಂಕ್ರೀಟ್ ಆಗಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಧ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ರಸ್ತೆ ಕಾಂಕ್ರೀಟ್ ಆಗಿಲ್ಲವೆಂದು ಬೇಜಾರುಮಾಡಬೇಡಿ ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದರು. ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ದಿಗೆ ೧೦ ಲಕ್ಷ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ (ಎ 27)ಪ್ರಚಾರ ಸಭೆಗಳು

Posted by Vidyamaana on 2023-04-27 02:00:20 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ   ಇಂದಿನ (ಎ 27)ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.


ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

 ಬೆಳಿಗ್ಗೆ  9 : 30 ರಿಂದ 11 ಗಂಟೆ ಗೆ  ಇಡ್ಕಿದು ಸೇವಾ ಸಹಕಾರ ಸಂಘ ಪ್ರದಾನ ಕಚೇರಿ ಯ ಮುಂಬಾಗದ ಉರಿಮಜಲಿನಲ್ಲಿ   ಮತ್ತು   ಕಬಕ ವಲಯದ ಕಲ್ಲಂದಡ್ಕ ಎಂಬಲ್ಲಿ ಬೆಳಿಗ್ಗೆ 10.30 ರಿಂದ 12.30 ರ ತನಕ  ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ..

ನೆಲ್ಲಿಕಟ್ಟೆ ನಿವಾಸಿ ಶ್ರೀಧ‌ರ್ ನಿಧನ

Posted by Vidyamaana on 2024-07-20 17:18:35 |

Share: | | | | |


ನೆಲ್ಲಿಕಟ್ಟೆ ನಿವಾಸಿ ಶ್ರೀಧ‌ರ್ ನಿಧನ

ಪುತ್ತೂರು:ಇಲ್ಲಿನ ನೆಲ್ಲಿಕಟ್ಟೆ ನಿವಾಸಿ ದಿ.ಅಣ್ಣು ಭಂಡಾರಿ ಅವರ ಪುತ್ರ ನೆಲ್ಲಿಕಟ್ಟೆ ಶ್ರೀಧ‌ರ್ (72ವ) ಜು.20 ರಂದು ಪುತ್ತೂರು ಬಸ್‌ ನಿಲ್ದಾಣದ ಬಳಿ ನಿಧನರಾದರು.

ಮಂಗಳೂರು ಕಾರ್ಮಿಕನನ್ನು ಸುಟ್ಟು ಹಾಕಿ ಕೊಲೆ: ವಿದ್ಯುತ್‌ ಸ್ಪರ್ಶವೆಂದು ಬಿಂಬಿಸಲು ಯತ್ನಿಸಿದ ಅಂಗಡಿ ಮಾಲಕ ತೌಸಿಫ್ ಹುಸೈನ್ ಬಂಧನ

Posted by Vidyamaana on 2023-07-09 05:57:26 |

Share: | | | | |


ಮಂಗಳೂರು  ಕಾರ್ಮಿಕನನ್ನು ಸುಟ್ಟು ಹಾಕಿ ಕೊಲೆ: ವಿದ್ಯುತ್‌ ಸ್ಪರ್ಶವೆಂದು ಬಿಂಬಿಸಲು ಯತ್ನಿಸಿದ ಅಂಗಡಿ ಮಾಲಕ ತೌಸಿಫ್ ಹುಸೈನ್ ಬಂಧನ

ಮಂಗಳೂರು: ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ‌ಮಾಡಿರುವ ಘಟನೆ ನಗರದ ಮುಳಿಹಿತ್ಲುವಿನಲ್ಲಿ ನಡೆದಿದೆ.


ಉತ್ತರ ಭಾರತ ಮೂಲದ ಗಜ್ಞಾನ್ ಅಲಿಯಾಸ್ ಜಗು ಎಂಬ ಕಾರ್ಮಿಕನನ್ನು ಮಶುಪಾ ಜನರಲ್ ಸ್ಟೋರ್ ಮಾಲೀಕ ತೌಸಿಫ್ ಹುಸೈನ್ ಎಂಬಾತ ಕೊಲೆ ಮಾಡಿರುವುದಾಗಿ ಹೇಳಲಾಗಿದೆ.


ಬೆಂಕಿ ಹಚ್ಚಿ ಕೊಂದ ಬಳಿಕ ಆರೋಪಿ ವಿದ್ಯುತ್ ಶಾಕ್ ಎಂದು ಪೊಲೀಸ್ ದೂರು ನೀಡಿದ್ದಾನೆ. ಶನಿವಾರ ಬೆಳಗ್ಗೆ 7.30 ಕ್ಕೆ ಕೃತ್ಯ ಎಸಗಿದ್ದು, ಬಳಿಕ ಮಧ್ಯಾಹ್ನ 1.30 ಕ್ಕೆ ವೆನ್ಲಾಕ್ ಆಸ್ಪತ್ರೆಗೆ ರವಾನೆ ಮಾಡಿ ವಿದ್ಯುತ್ ಶಾಕ್ ನಿಂದ ಘಟನೆ ಅಂತಾ ತಿರುಚಲು ಯತ್ನಿಸಿದ್ದಾನೆ.


ಆದರೆ ಪೊಲೀಸರ ಅನುಮಾನದಿಂದ ವಿಚಾರಿಸಿದಾಗ ಕೃತ್ಯ ಬಯಲಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತೌಸಿಫ್ ಹುಸೈನ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ ಪುತ್ತೂರಿನ ಈ ಏರಿಯಾಗಳಲ್ಲಿ ಕೆಲವು ಗ್ರಾಮಗಳಲ್ಲಿ ಇಂದು ಇಡೀ ದಿನ ಕರೆಂಟ್ ಇಲ್ಲ

Posted by Vidyamaana on 2024-01-04 07:10:05 |

Share: | | | | |


ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ ಪುತ್ತೂರಿನ ಈ ಏರಿಯಾಗಳಲ್ಲಿ  ಕೆಲವು ಗ್ರಾಮಗಳಲ್ಲಿ ಇಂದು  ಇಡೀ ದಿನ ಕರೆಂಟ್ ಇಲ್ಲ

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.4 ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11ಕೆ ವಿ ಪುತ್ತೂರು ವಲಯ ಮತ್ತು 10/11ಕೆವಿ ಕರಾಯ ವಿದ್ಯುತ್‌ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹಾರಾಡಿ, ಪಡೀಲು, ಬೊಳುವಾರು, ಮಯೂರ ಬಳಿ, ಕೊಂಬೆಟ್ಟು, ಕೋರ್ಟ್ ರೋಡ್, ಮಿನಿ ವಿಧಾನ ಸೌಧ, ತಾಲೂಕು ಪಂಚಾಯತ್, ಪರ್ಲಡ್ಕ, ಬೈಪಾಸ್ ರಸ್ತೆ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

Posted by Vidyamaana on 2024-04-20 20:48:45 |

Share: | | | | |


ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ಪುತ್ತೂರು:  ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಎ.೨೧ರಿಂದ ೨೮ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಎ.೨೧ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಪಾಕ ಶಾಲೆ ಉದ್ಘಾಟನೆ, ಲಾಕರ್ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ, ಅತಿಥಿ ಕೊಠಡಿ ಉದ್ಘಾಟನೆ, ಮುಖ್ಯ ವೇದಿಕೆ ಉದ್ಘಾಟನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಕ್ಷೇತ್ರದ ತಂತ್ರಿಗಳು ಹಾಗೂ ಋತ್ವಿಜರಿಗೆ ಸ್ವಾಗತ, ನಂತರ ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ವೈದಿಕ ತಾಂತ್ರಿಕ ವಿಧಿ ವಿಧಾನಗಳು ಪ್ರಾರಂಭಗೊಳ್ಳಲಿದೆ.

ಧಾರ್ಮಿಕ ಉಪನ್ಯಾಸಗಳು

ಎ.೨೧ ರಂದು ಸಂಜೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎ.೨೨ ರಂದು ಸಂಜೆ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಎ.೨೩ ರಂದು ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಸ್ವಾಮೀಜಿಯವರು, ಎ.೨೪ ರಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಎ.೨೫ ರಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಗಣ್ಯರ ಉಪಸ್ಥಿತಿಯಲ್ಲಿ ಆಶೀರ್ವಚನ ನೀಡಲಿದ್ದಾರೆ. ಎ.೨೬ ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕೆಮ್ಮಿ೦ಜೆ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

Recent News


Leave a Comment: