ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.

ಕಬಕ : ಪ್ರಧಾನಿ ಮೋದಿ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಬಿಜೆಪಿ ವತಿಯಿಂದ ಮಹಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ

Posted by Vidyamaana on 2023-09-17 15:25:04 |

Share: | | | | |


ಕಬಕ : ಪ್ರಧಾನಿ ಮೋದಿ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಬಿಜೆಪಿ ವತಿಯಿಂದ ಮಹಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ಭಾರತೀಯ ಜನತಾ ಪಾರ್ಟಿ ವತಿಯಿಂದ ದೇಶದ ಪ್ರಧಾನಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಯವರ 73ನೇ ಜನ್ಮದಿನದ ಪ್ರಯುಕ್ತ ಕಬಕ ಮಹಾದೇವಿ ದೇವಸ್ಥಾನದಲ್ಲಿ ಅವರ ಆಯುಷ್ಯ,ಆರೋಗ್ಯ ವೃದ್ಧಿಗಾಗಿ ಮತ್ತು ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಮಹಾದೇವಿ ಅನುಗ್ರಹಿಸಲಿ ಎಂದು ಕುಂಕುಮಾರ್ಚನೆ ಸೇವೆ ಮಾಡುವುದರ ಮೂಲಕ ಪ್ರಾರ್ಥಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ,ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್,ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,ನಿತೀಶ್ ಕುಮಾರ್ ಶಾಂತಿವನ,ಎಸ್.ಟಿ ಮೋರ್ಚ ಪ್ರ.ಕಾರ್ಯದರ್ಶಿ ಹರೀಶ್ ಬಿಜತ್ರೆ, ಪುಣಚ ಮಹಾಶಕ್ತೀ ಕೇಂದ್ರ ಕಾರ್ಯದರ್ಶಿ ದಯಾನಂದ ಶೆಟ್ಟಿ ,ಮಾಣಿಲ ಬಿಜಿಪಿ ಪ್ರಮುಖರಾದ ಗೀತಾನಂದ ಶೆಟ್ಟಿ,ರಾಜೇಶ್ ಬಾಳೆಕಲ್ಲು,ಕಬಕ ಶಕ್ತೀ ಕೇಂದ್ರದ ಜಯರಾಮ್ ನೆಕ್ಕರೆ, ಪಂಚಾಯತ್ ಸದಸ್ಯರಾದ ರುಕ್ಮಯ ಗೌಡ,ಯತೀಶ್ ಪದ್ನಡ್ಕ,ವಿಟ್ಲ ಮುಡ್ನೂರು ಪಂ.ಅಧ್ಯಕ್ಷರಾದ ಪುನೀತ್ ಮಾಡತ್ತಾರು,ಕಿಶೋರ್ ನಾಟೆಕಲ್ಲು ಮೊದಲಾದವರು ಉಪಸ್ಥಿತರಿದ್ದರು.

ರೈ ಎಜುಕೇಶನಲ್ ಟ್ರಸ್ಟ್‌ ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Posted by Vidyamaana on 2024-03-23 07:56:34 |

Share: | | | | |


ರೈ ಎಜುಕೇಶನಲ್ ಟ್ರಸ್ಟ್‌ ನಿಂದ  ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ. ೨೩ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್‌ನ ಕಾಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.

ಮಾ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕೋರ್ಸು ಕಲಿತರೆ ಏನು ಉದ್ಯೋಗ ಪಡೆದುಕೊಳ್ಳಬಹುದು, ಕೋರ್ಸುಗಳು ಎಲ್ಲೆಲ್ಲಿ ಸಿಗುತ್ತದೆ, ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವೃತ್ತಿಪರ ಕೋರ್ಸುಗಳು ಹೇಗೆ ಪರಿಣಾಮಕಾರಿ ಎಂಬ ವಿಚಾರದ ಬಗ್ಗೆ ಕಾರ್ಯಾಗಾರ ನಡೆಯಲಿದೆ.


ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ.ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಸಪಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ ವಿ ಸೂರ್ಯಾನಾರಾಯಣರವರು ಕಾರ್ಯಾಗಾರ ನಡೆಸಿಕೊಡಲಿದ್ದು, ಕಾರ್ಯಕ್ರಮದಲ್ಲಿ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟಿ ಇದರ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ, ಕ್ಯಾಡೊಕಾನ್ ವಿದ್ಯಾ ಸಂಸ್ಥೆ ಬೆಂಗಳೂರು ಇದರ ಶ್ರದ್ದಾ ಎಂ ರವರು ಭಾಗವಹಿಸಲಿದ್ದಾರೆ.

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

Posted by Vidyamaana on 2024-05-25 20:01:21 |

Share: | | | | |


ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ಬೆಂಗಳೂರು : ವಿಧಾನಪರಿಷತ್‌ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೇ?: ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.

ದಿನನಿತ್ಯ ಟ್ರಾಫಿಕ್ ಜಾಮಿಗೆ ಕಾರಣವಾಗಿದೆ Ksrtc ಮುಂಭಾಗದ ಬ್ಯಾರಿಕೇಡ್

Posted by Vidyamaana on 2023-06-10 08:00:53 |

Share: | | | | |


ದಿನನಿತ್ಯ ಟ್ರಾಫಿಕ್ ಜಾಮಿಗೆ ಕಾರಣವಾಗಿದೆ Ksrtc ಮುಂಭಾಗದ ಬ್ಯಾರಿಕೇಡ್

ಪುತ್ತೂರು: ಇಲ್ಲಿನ‌ KSRTC ಬಸ್ ನಿಲ್ದಾಣಕ್ಕೆ ಜನ ಬರಬೇಕು. ಅದಕ್ಕಾಗಿಯೇ ಬೃಹತ್ ಸಂಕೀರ್ಣ ಕಟ್ಟಿಸಿರುವುದು. ಆದರೆ ಈ ವಾಣಿಜ್ಯ ಸಂಕೀರ್ಣದ ಮುಂಭಾಗ ಪ್ರಯಾಣಿಕರ, ಸಾರ್ವಜನಿಕರ ವಾಹನ ನಿಲ್ಲಿಸಬಾರದು. ಹೇಗಿದೆ ನೋಡಿ‌ ಇಲಾಖೆಯ ಲಾಜಿಕ್!

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಬದಿಯ ಸ್ಬಲ್ಪ ಜಾಗ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹಿಂದೆ ಬಳಕೆ ಆಗುತ್ತಿತ್ತು. ಅಂದರೆ ತಮ್ಮ ಸ್ವಂತ ವಾಹನ ಅಥವಾ ರಿಕ್ಷಾದಲ್ಲಿ ಬರುವ ಪ್ರಯಾಣಿಕರು ಹತ್ತಿಳಿಯಲು ಇದು ಪ್ರಯೋಜನಕಾರಿಯಾಗಿತ್ತು. ಆದರೆ ಈಗ ಈ ಜಾಗವನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಪರಿಣಾಮ ಬಸ್ ನಿಲ್ದಾಣಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರು ರಸ್ತೆಯಲ್ಲೇ ವಾಹನ ನಿಲ್ಲಿಸಬೇಕಾಗಿದೆ. ಸಮಸ್ಯೆ ಶುರುವಾಗಿದ್ದೇ ಇಲ್ಲಿ. ಇದೀಗ ರಸ್ತೆಯಿಡೀ ಬ್ಲಾಕ್.

ನಿಲ್ದಾಣಕ್ಕೆ ಬರುವ ವಾಹನಗಳು, ನಿರ್ಗಮಿಸುವ ಬಸ್ ಗಳು, ಎಪಿಎಂಸಿ ರಸ್ತೆಯಿಂದ ಆಗಮಿಸುವ ಸಾರ್ವಜನಿಕ ವಾಹನಗಳು ಮುಖ್ಯರಸ್ತೆಯಿಂದ‌ ಆಗಮಿಸುವ ವಾಹನಗಳ ಸಂಚಾರಕ್ಕೆ ತೊಡಕಾಗಿ‌ ಪರಿಣಮಿಸಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಕೋಟಿ - ಚೆನ್ನಯರ ಹೆಸರು ನಾಮಕರಣದಂದು ಈ ಬ್ಯಾರಿಕೇಡ್ ಹಾಕಲಾಗಿತ್ತು. ಅದು, ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂದು. ಆದರೆ ಈ ಬ್ಯಾರಿಕೇಡನ್ನು ಅದೇ ಸ್ಥಳದಲ್ಲಿ ಶಾಶ್ವತವಾಗಿಸುವುದೇ?

Ksrtc ನಿಲ್ದಾಣ ಮುಂಭಾಗ ಹಾಕಿರುವ ಬ್ಯಾರಿಕೇಡ್ ಗಳಿಂದ ಪ್ರಯಾಣಿಕರಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ತೊಂದರೆಯಾಗಿದೆ. ಆದ್ದರಿಂದ ಈ ಬ್ಯಾರಿಕೇಡ್ ಗಳನ್ನು ತೆರವು ಮಾಡಬೇಕು ಎಂದು ಪುತ್ತೂರು ವರ್ತಕ ಸಂಘ ಮನವಿ ನೀಡಿತ್ತು. ಆದರೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಂದ ಇದುವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ.

ಪತಿಯೂ ಬೇಕು ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

Posted by Vidyamaana on 2024-04-04 21:52:51 |

Share: | | | | |


ಪತಿಯೂ ಬೇಕು  ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

ಲಕ್ನೋ: 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ.ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು.ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು.


ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದ್ದು, ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದಳು

Recent News


Leave a Comment: