ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಪುತ್ತೂರಿನ ನೆಲದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಹತ್ತೂರ ಜನತೆಯನ್ನು ಧನ್ಯರಾಗಿಸಿದ ಪುತ್ತಿಲ ಪರಿವಾರದ ಕಾರ್ಯಕ್ರಮ

Posted by Vidyamaana on 2023-12-27 11:43:03 |

Share: | | | | |


ಪುತ್ತೂರಿನ ನೆಲದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಹತ್ತೂರ ಜನತೆಯನ್ನು ಧನ್ಯರಾಗಿಸಿದ ಪುತ್ತಿಲ ಪರಿವಾರದ ಕಾರ್ಯಕ್ರಮ

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.

ಹಿಂದುಗಳು ಹಿಂದೂಗಳಾಗಿ ಉಳಿದರೆ ರಾಮ ಮಂದಿರ ಉಳಿಯುತ್ತದೆ. ಜತೆಗೆ ಮೋದಿ ಇರುವಷ್ಟು ಕಾಲ ಮಂದಿರ ಇರುತ್ತದೆ. ಮೋದಿಯನ್ನು ಕಿತ್ತೊಗೆಯುವ ಅಪಸ್ವರಗಳು ಪ್ರಸ್ತುತ ಕೇಳಿ ಬರುತ್ತಿದ್ದು, ಅದನ್ನು ಸುಳ್ಳಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ರಕ್ತಗತಗೊಳಿಸಬೇಕಾದ ಅಗತ್ಯವಿದೆ ಎಂದು ನುಡಿದರು.

ಸ್ವಾಮೀಜಿಯವರು ಶ್ರೀನಿವಾಸ ಕಲ್ಯಾಣೋತ್ಸವದ ಮಾಂಗಲ್ಯ ಧಾರಣೆ ಸಹಿತ ಎಲ್ಲಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಈ ಸಂದರ್ಭ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ಸ್ವಾಮೀಜಿಗಳಿಗೆ ಪುಷ್ಪವೃಷ್ಠಿ ಸಮರ್ಪಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಉಮೇಶ್ಕೋಡಿಬೈಲು, ಪ್ರಸನ್ನ ಕುಮಾರ ಮಾರ್ತ ಸಹಿತಿ ಸೇವಾರ್ಥಿಗಳು ಪುಷ್ಪವೃಷ್ಠಿ ಮಾಡಿದರು.

ಸೋಮವಾರ ರಾತ್ರಿ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದು, ಶ್ರೀನಿವಾಸ ಕಲ್ಯಾಣೋತ್ಸವವನ್ನು ಸಂಭ್ರಮದಿಂದ ವೀಕ್ಷಿಸಿದರು. ಈ ಸಂದರ್ಭದಲ್ಲಿ ಭಜನೆ, ಭಜನಾ ಸಂಕೀರ್ತನೆ, ಆಕರ್ಷಕ ಕುಣಿತ ಭಜನೆ, ಭಕ್ತಿ ರಸಮಂಜರಿ ಜರಗಿತು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಸುಡುಮದ್ದು ಪ್ರದರ್ಶನವೂ ನಡೆಯಿತು. ತಿರುಪತಿ ಕ್ಷೇತ್ರ ಮೂಲದ ಬೆಂಗಳೂರಿನ ಲಕ್ಷ್ಮೀಪತಿ ನೇತೃತ್ವದಲ್ಲಿ ಸುಮಾರು 27 ಮಂದಿ ಆಗಮಿಕರು ಕಲ್ಯಾಣೋತ್ಸವವನ್ನು ನಡೆಸಿಕೊಟ್ಟರು. ಸಂಜೆ ಗೋಧೋಳಿ ಸಮಯದಲ್ಲಿಭಕ್ತರ ಗೋವಿಂದನ ಉದ್ಘೋಷದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಮಹಾಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು. 

ಈ ಸಂದರ್ಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಕೋಶಾಧಿಕಾರಿ ಉದಯ ಕುಮಾರ್ ರೈ ಸಂಪ್ಯ, ಸ್ವಾಗತ ಸಮಿತಿ ಅಧ್ಯಕ್ಷ ಕಿರಣ್ಧರ್ಮಸ್ಥಳ, ಸಂಚಾಲಕ  ರವಿಕುಮಾರ್ ರೈ ಕೆದಂಬಾಡಿ, ಕಾರ್ಯದರ್ಶಿಗಳಾದ ಗಣೇಶ್ ಚಂದ್ರ ಭಟ್, ನಟೇಶ್ಪೂಜಾರಿ, ವಿವಿಧ ಸಮಿತಿ ಸಂಚಾಲಕರು, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಪವನ್ ನಿಗೂಢ ಸಾವು | ಆತ್ಮಹತ್ಯೆಯ ಬಗ್ಗೆಯೇ ಗೊಂದಲ.

Posted by Vidyamaana on 2023-03-10 11:57:43 |

Share: | | | | |


ವಿದ್ಯಾರ್ಥಿ ಪವನ್ ನಿಗೂಢ ಸಾವು | ಆತ್ಮಹತ್ಯೆಯ ಬಗ್ಗೆಯೇ ಗೊಂದಲ.

ಮಂಗಳೂರು: ಏಕಾಏಕಿ ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿಯೋರ್ವ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಗುರುಪುರ ಸೇತುವೆ ಹೊಳೆಯಲ್ಲಿ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸಿ ಚಿರಪರಿಚಿತನಾಗಿದ್ದ ಗುರುಪುರ- ಕೈಕಂಬ ಬಳಿಯ ಕಾಜಿಲ ಎಂಬಲ್ಲಿನ ನಿವಾಸಿ ಪವನ್ ಎಂದು ಗುರುತಿಸಲಾಗಿದೆ.ಈತ ನಿನ್ನೆ ಏಕಾಏಕಿ ಮನೆಯಿಂದ ಹೊರಟು ಹೋಗಿದ್ದು, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಆಗಿದ್ದು, ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇತ್ತ ಗಾಬರಿಗೊಂಡ ಮನೆಮಂದಿ ಹಾಗೂ ಹಿತೈಷಿಗಳು ಈತನ ಸುಳಿವು ಕಾಣಲು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ವಿವರಗಳನ್ನು ಹರಿಯಬಿಟ್ಟಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮಧ್ಯಾಹ್ನ ಹೊತ್ತಿಗೆ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಹಾಗೂ ಪೊಲೀಸರ ಸಹಾಯದಿಂದ ಶವ ಮೇಲಕ್ಕೆ ಎತ್ತಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾವಿನ ಸುತ್ತ ಕೆಲವೊಂದು ಅನುಮಾನಗಳು ವ್ಯಕ್ತವಾಗಿದ್ದು, ಪ್ರೀತಿಯ ವಿಚಾರವಾಗಿ ನೊಂದುಕೊಂಡು ಆತ್ಮಹತ್ಯೆ ನಡೆಸಿದ್ದಾನೆ ಎನ್ನುವ ಮಾತುಗಳು ಕೇಳಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು

Posted by Vidyamaana on 2024-06-27 09:54:47 |

Share: | | | | |


ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ  ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಮಂಗಳೂರು, ಜೂ 27 ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

Posted by Vidyamaana on 2024-05-14 07:21:10 |

Share: | | | | |


ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

ಉತ್ತರ ಪ್ರದೇಶ: ವೈದ್ಯರೊಬ್ಬರು ತನ್ನ ಪತ್ನಿಯನ್ನು ಹೋಟೆಲ್‌ ರೂಮ್ ನಲ್ಲಿ ಇತರ ಇಬ್ಬರು ಪುರುಷರೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ವೇಳೆ ದಾಲ್ ನಡೆಸಿ ಹಿಡಿದು ಕೆಂಡಾಮಂಡಲವಾಗಿ ಬಡಿದಾಡಿಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡು ಕಡೆಯವರ ನಡುವೆ ನಡೆದ ತೀವ್ರ ವಾಗ್ವಾದ ಮತ್ತು ಘರ್ಷಣೆ ನಡೆದಿದ್ದು ಕೆಮರಾದಲ್ಲಿ ಸೆರೆಯಾಗಿದೆ.

ಪತ್ನಿಯ ಚಟುವಟಿಕೆಯಿಂದ ಅನುಮಾನಗೊಂಡ ವೈದ್ಯ ಇತರರೊಂದಿಗೆ ಗುರುವಾರ ರಾತ್ರಿ ಹೊಟೇಲ್ ಕೋಣೆಗೆ ನುಗ್ಗಿದ್ದು, ಹೆಂಡತಿಯೊಂದಿಗೆ ಇಬ್ಬರು ಪುರುಷರನ್ನು ಆಕ್ಷೇಪಾರ್ಹ ಪರಿಸ್ಥಿತಿಯಲ್ಲಿ ಕಂಡಿದ್ದಾರೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಇಬ್ಬರು ಪುರುಷರ ನಡುವೆ ದೈಹಿಕ ಘರ್ಷಣೆ ನಡೆದು ಹೈಡ್ರಾಮಾ ನಡೆದಿದೆ. ಘಟನೆ ಈಗ ಬಟಾಬಯಲಾಗಿದೆ.

ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದ ಮರ -ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಮೃತ್ಯು

Posted by Vidyamaana on 2023-06-05 04:49:46 |

Share: | | | | |


ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ  ಮೈಮೇಲೆ ಬಿದ್ದ ಮರ -ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ  ಮೃತ್ಯು

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ರವರು ಮೃತಪಟ್ಟಿರುವ ಘಟನೆ ನಡೆದಿದೆ.ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗ ರವರ ಪುತ್ರ ಗೋಪಾಲಕೃಷ್ಣ ಮೃತರು.ಮನೆಯ ಜಾಗದಲ್ಲಿ ಮರದ ದಿಮ್ಮಿಯನ್ನು ಪಿಕಪ್ ಗೆ ತುಂಬಿಸುವ ವೇಳೆ ಮರ ಹಿಂದಕ್ಕೆ ಬಂದು ಗೋಪಾಲಕೃಷ್ಣ ರವರ ಮೈಮೇಲೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರುವ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಗೋಪಾಲಕೃಷ್ಣ ರವರು ಬಡಗನ್ನೂರು ಗ್ರಾ.ಪಂ ಸದಸ್ಯ ಹಾಗೂ ಸುಳ್ಯಪದವು ಯುವ ಶಕ್ತಿ ಬಳಗದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಈಜುಕೊಳದಲ್ಲಿ ಮುಳುಗಿ ಹರಿಯಾಣ ಮೂಲದ ಅಭಿಷೇಕ್ ಮೃತ್ಯು

Posted by Vidyamaana on 2023-12-13 11:23:22 |

Share: | | | | |


ಈಜುಕೊಳದಲ್ಲಿ ಮುಳುಗಿ ಹರಿಯಾಣ ಮೂಲದ ಅಭಿಷೇಕ್ ಮೃತ್ಯು

ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಹರಿಯಾಣ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈಜುಕೊಳದಲ್ಲಿ ಈಜುವಾಗ ಘಟನೆ ನಡೆದಿದೆ ಎನ್ನಲಾಗಿದೆ.


15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಅಭಿಷೇಕರನ್ನು ಈಜುಕೊಳದ ಜೀವರಕ್ಷಕರಾದ ರಾಜೇಂದ್ರ ಮತ್ತು ಪುಂಡಲಿಕ್ ಅವರು ಕೂಡಲೇ ಮೇಲಕ್ಕೆ ತಂದಿದ್ದಾರೆ. ಸ್ಥಳದಲ್ಲಿದ್ದ ಪ್ರೊ. ನರೇಂದ್ರ ನಾಯಕ್ ಮತ್ತು ಇತರರು ಸಿಪಿಆರ್ ಮಾಡಿ ಉಸಿರಾಡುವಂತೆ ಮಾಡಿದರೂ ಪ್ರಯೋಜನವಾಗಿಲ್ಲ. ಅಭಿಷೇಕ್ ಸಾವು ನೀರಲ್ಲಿ ಉಸಿರುಗಟ್ಟಿ ಸಂಭವಿಸಿದೆಯೇ ಅಥವಾ ಹೃದಯಾಘಾತದಿಂದ ಸಂಭವಿಸಿದೆಯೆ ಎಂದು ತನಿಖೆಯಿಂದ ತಿಳಿದುಬರಬೇಕಿದೆ.

Recent News


Leave a Comment: