KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಭಾರೀ ಮಳೆ ಹಿನ್ನೆಲೆ ನಾಳೆ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Posted by Vidyamaana on 2023-07-05 13:56:56 |

Share: | | | | |


ಭಾರೀ ಮಳೆ  ಹಿನ್ನೆಲೆ ನಾಳೆ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6ರಂದು ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.


ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:


 ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

 ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

 ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

 ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

Posted by Vidyamaana on 2024-06-30 16:40:20 |

Share: | | | | |


ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81 ವ) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ

ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ : ಪುತ್ತಿಲ ಪರಿವಾರದಿಂದ ಸಹಾಯಹಸ್ತ

Posted by Vidyamaana on 2024-02-09 17:29:46 |

Share: | | | | |


ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ : ಪುತ್ತಿಲ ಪರಿವಾರದಿಂದ ಸಹಾಯಹಸ್ತ

ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾದ ಕುಟುಂಬಕ್ಕೆ ಪುತ್ತಿಲ ಪರಿವಾರ ಸಹಾಯಹಸ್ತ ನೀಡಿದೆ.


ಪಡೀಲು ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದೆ.ಅವಘಡ ನಡೆದ ದಿನದಂದೆ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಫೆ.9 ರಂದು ಅವರ ಮನೆಗೆ ಭೇಟಿ ನೀಡಿ ಸಹಾಯಹಸ್ತ ನೀಡಿದರು.ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ,ಚಂದ್ರಹಾಸ ಶೆಟ್ಟಿ ಆನೆಮಜಲು,ಸತೀಶ್ ಭಂಡಾರಿ,ಪ್ರವೀಣ್ ಭಂಡಾರಿ, ಮನೀಶ್ ಕುಲಾಲ್, ಶರತ್ ರೈ ಸ್ಥಳಿಯರಾದ ಚಂದ್ರಹಾಸ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

Posted by Vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಭಜರಂಗಿ ನಟಿ ವಿದ್ಯಾ ಹತ್ಯೆ ಪ್ರಕರಣ: ಆರೋಪಿ ಪತಿ ನಂದೀಶ್ ಬಂಧನ

Posted by Vidyamaana on 2024-05-24 05:33:00 |

Share: | | | | |


ಭಜರಂಗಿ ನಟಿ ವಿದ್ಯಾ ಹತ್ಯೆ ಪ್ರಕರಣ: ಆರೋಪಿ ಪತಿ ನಂದೀಶ್ ಬಂಧನ

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾಗಿದ್ದ (Murder Case) ಕಾಂಗ್ರೆಸ್ ಮುಖಂಡೆ ಹಾಗೂ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ಭಜರಂಗಿ ಯಲ್ಲಿ ನಟಿಸಿದ್ದ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್‌ನನ್ನು ಬನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ಭಜರಂಗಿಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿ ಕೊಲೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ ಕಾಂತಾರ ಕೋಣಗಳು

Posted by Vidyamaana on 2023-11-26 19:39:25 |

Share: | | | | |


ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ ಕಾಂತಾರ ಕೋಣಗಳು

ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ. ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ.ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು ಇಂದು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪದಕ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟವನ್ನು ಅಲ್ಲಿ ನೆರೆದಿದ್ದವರು ಕಣ್ತುಂಬಿಕೊಂಡರು.ಅರಮನೆ ಮೈದಾನದಲ್ಲಿ ನಿರ್ಮಿಸಿರುವ ರಾಜ-ಮಹಾರಾಜ ಕೆರೆಯಲ್ಲಿ ಬೆಂಗಳೂರು ಕಂಬಳದ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಪ್ಪು, ಕಿಟ್ಟು ಜೋಡಿ ಕೋಣಗಳು ಇತಿಹಾಸ ಬರೆದಿವೆ.ಏಳು ಬಲಿಷ್ಠ ಕೋಣಗಳ ಹಿಂದಿಕ್ಕಿದ ಕಾಂತಾರ ಜೋಡಿ ಕೋಣವು ಒಂದು ಲಕ್ಷ ನಗದು ಹಾಗೂ 16 ಗ್ರಾಂ ಚಿನ್ನ ತನ್ನದಾಗಿಸಿಕೊಂಡಿತು

Recent News


Leave a Comment: