ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

Posted by Vidyamaana on 2023-02-06 15:12:33 |

Share: | | | | |


ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.

ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು:

ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,

ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ - ಮೊ: 9480805320

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ಕಂಬಳದಡ್ಡ ಹೃದಯಾಘಾತದಿಂದ ನಿಧನ.

Posted by Vidyamaana on 2023-08-23 07:50:02 |

Share: | | | | |


ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ಕಂಬಳದಡ್ಡ ಹೃದಯಾಘಾತದಿಂದ ನಿಧನ.

ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರ ಸೀತಾರಾಮ ಶೆಟ್ಟಿ (47) ಆ.23ರಂದು ಹೃದಯಾಘಾತದಿಂದ ನಿಧನರಾದರು


ಸೀತಾರಾಮ ಶೆಟ್ಟಿ ರವರು ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದು, ಧಾರ್ಮಿಕ ಹಾಗೂ ಕಂಬಳ, ಜೇಸಿಐ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು.ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು

ನಿರ್ವಹಣೆ ಮಾಡುತ್ತಿದ್ದ ಸೀತಾರಾಮ ಶೆಟ್ಟಿ ಎಂದಿನಂತೆ ಆ.23

ಬಾರ್ & ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹೃದಯಾಘಾತ

ಸಂಭವಿಸಿದ್ದು, ಕೂಡಲೇ ಅವರನ್ನು ಪುತ್ತೂರು ಖಾಸಗಿಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಅವರು

ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರು ಪತ್ನಿ, ಮಕ್ಕಳು, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಸೂಸೈಡ್

Posted by Vidyamaana on 2024-05-12 14:05:41 |

Share: | | | | |


ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಸೂಸೈಡ್

 ಆನೇಕಲ್ ತಾಲೂಕಿನ ಜಿಗಣಿ ಬಳಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.21 ವರ್ಷದ ಅಮೃತೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಬಿಹಾರ ಮೂಲದ ಅಮೃತೇಶ್ ಪಾಂಡೆ ಜಿಗಣಿ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾನೆ

ಹೇಮಲತಾ ಪಾಂಡೆ, ವಿಜಯ್ ಶಂಕರ್ ದಂಪತಿ ಪುತ್ರ ಅಮೃತೇಶ್ ಕಳೆದ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿದ್ದ. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು ಅದರಂತೆಯೇ ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಸೇರಿಸಿದ್ರು. ಅಮೃತೇಶ್, R​.V.ಕಾಲೇಜಿನಲ್ಲಿ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

Posted by Vidyamaana on 2023-05-17 10:52:40 |

Share: | | | | |


ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ  ಬಸ್ ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ.

ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


ಮಾಜಿ ಸಚಿವ ಎಸ್‌ ಅಂಗಾರ ಅವರ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Posted by Vidyamaana on 2024-03-20 15:37:58 |

Share: | | | | |


ಮಾಜಿ ಸಚಿವ ಎಸ್‌ ಅಂಗಾರ ಅವರ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಸುಳ್ಯ: ಮಾಜಿ ಸಚಿವ ಎಸ್ ಅಂಗಾರ ಅವರ ನಿವಾಸಕ್ಕೆ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದರು.

ಎಸ್.ಅಂಗಾರರವರ ದೊಡ್ಡತೋಟ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ,ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ ಮತ್ತಿತರರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು; ಸಿಎಂ ದಿಲ್ಲಿ ಪ್ರವಾಸದಲ್ಲಿ ಬದಲಾವಣೆ

Posted by Vidyamaana on 2023-06-21 05:31:43 |

Share: | | | | |


ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು; ಸಿಎಂ ದಿಲ್ಲಿ ಪ್ರವಾಸದಲ್ಲಿ ಬದಲಾವಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು,ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಣಿಪಾಲ್ ಆಸ್ಪತ್ರೆಯಲ್ಲಿ ಪಾರ್ವತಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ತಿಳಿಸಿವೆ.ಪಾರ್ವತಿ ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದ್ದು, ಆಮ್ಲಜನಕದ ಸಹಾಯದೊಂದಿಗೆ ತುರ್ತು ನಿಗಾ ಘಟಕದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪಾರ್ವತಿ ಅವರ ಜೊತೆ ಅವರ ಮಗ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿದ್ದಾರೆ.ಇನ್ನು, ಪತ್ನಿಯ ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ದಿಲ್ಲಿ ಪ್ರವಾಸದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ ದಿಲ್ಲಿ ಕಡೆ ಸಿದ್ದರಾಮಯ್ಯ ತೆರಳಲಿದ್ದಾರೆ. ಬುಧವಾರ ಬೆಳಗ್ಗೆ 9.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಸಿದ್ದರಾಮಯ್ಯ ತೆರಳಬೇಕಿತ್ತು. ಆದರೆ, ಈಗ ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ನಿಂದ ವಿಶೇಷ ವಿಮಾನದ ಮೂಲಕ ಸಿದ್ದರಾಮಯ್ಯ ದಿಲ್ಲಿಗೆ ತೆರಳಲಿದ್ದಾರೆ. ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದು, ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗವಹಿಸಲಿದ್ದಾರೆ.

Recent News


Leave a Comment: