ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

Posted by Vidyamaana on 2024-03-18 21:39:28 |

Share: | | | | |


ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೇ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ನೀಡಿದ್ದು, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂದು ದಾಖಲೆಯೊಂದಿಗೆ ತಿಳಿಸಿದ್ದಾರೆ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರ ಇರುವುದಲ್ಲ. ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ

ಆಲಂಕಾರಿನ ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ

Posted by Vidyamaana on 2023-05-26 06:28:55 |

Share: | | | | |


ಆಲಂಕಾರಿನ ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ

ಕಡಬ : ಆಲಂಕಾರಿನ ಉದ್ಯಮಿಯೊಬ್ಬರು ಶುಕ್ರವಾರ ಮುಂಜಾನೆ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾಂತಿಮೊಗರಿನಿಂದ ವರದಿಯಾಗಿದೆ.

ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಶೇಖರ (60) ಆತ್ಮಹತ್ಯೆ ಮಾಡಿಕೊಂಡವರು. ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮೃತರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಆಲಂಕಾರು ಶ್ರೀ ದುರ್ಗಾಂಬಾ ಕಲಾ ಸಂಘದಲ್ಲೂ ಸಕ್ರೀಯರಾಗಿದ್ದರು. ಯಕ್ಷಗಾನ ಅರ್ಥದಾರಿಯೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ. | WATCH VIDEO

Posted by Vidyamaana on 2024-01-06 12:08:14 |

Share: | | | | |


ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ. | WATCH VIDEO


💥ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ. | WATCH VIDEO



ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗೀತಮ್ ವಿಶ್ವವಿದ್ಯಾಲಯದ ಆವರಣದಲ್ಲಿ ಯುವ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು 18 ವರ್ಷದ ರೇಣು ಶ್ರೀ ಎಂದು ಗುರುತಿಸಲಾಗಿದೆ.ಶುಕ್ರವಾರ ಆತ್ಮಹತ್ಯೆಯ ಗೊಂದಲದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.ವಿಡಿಯೋದಲ್ಲಿ, ಯುವ ವಿದ್ಯಾರ್ಥಿನಿ ಕಟ್ಟಡದ ಐದನೇ ಮಹಡಿಯಲ್ಲಿ ಬಾಲ್ಕನಿಯಲ್ಲಿ ತುದಿಯಲ್ಲಿ ಕುಳಿತಿರುವುದು ಕಂಡುಬಂದಿದೆ.


ಇತರ ಜನರ ಕೂಗುಗಳ ನಡುವೆ ಯುವತಿ ಇದ್ದಕ್ಕಿದ್ದಂತೆ ನೆಲಕ್ಕೆ ಹಾರಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.ಯುವತಿಯ ಈ ವಿಪರೀತ ಹೆಜ್ಜೆಯ ಹಿಂದಿನ ಕಾರಣ ತಕ್ಷಣವೇ ತಿಳಿದುಬಂದಿಲ್ಲ. ತನ್ನ ಜೀವನವನ್ನು ಕೊನೆಗೊಳಿಸುವ ಮೊದಲು ಅವಳು ತನ್ನ ಆತ್ಮಹತ್ಯೆಗೆ ಯಾರನ್ನಾದರೂ ದೂಷಿಸಿದ್ದಾಳೆ ಎಂಬುದು ಸಹ ಸ್ಪಷ್ಟವಾಗಿಲ್ಲ. ಮಾಹಿತಿ ನೀಡಿದ ನಂತರ, ಪೊಲೀಸರು GITAM ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ತಲುಪಿ ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

Posted by Vidyamaana on 2024-03-23 15:52:34 |

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಸ್ನೇಹಂ ಟಿಸ್ಕೋ ಟೇಪ್‌ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ; ಅಪಾಯದಲ್ಲಿ ಹಲವು ಕಾರ್ಮಿಕರು

Posted by Vidyamaana on 2024-08-06 23:29:17 |

Share: | | | | |


ಸ್ನೇಹಂ ಟಿಸ್ಕೋ ಟೇಪ್‌ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ; ಅಪಾಯದಲ್ಲಿ ಹಲವು ಕಾರ್ಮಿಕರು

ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಟಿಕ್ಸೋ ಟೇಪ್ ತಯಾರಿಸುವ ಕಾರ್ಖಾನೆಗೆ ಮಂಗಳವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಸಾಧ್ಯತೆ ಇದೆ.‌

ತಾಲೂಕಿನ‌ ನಾವಗೆ ಗ್ರಾಮದ ಬಳಿ ಇರುವ ಸ್ನೇಹಂ ಎಂಬ ಟಿಸ್ಕೋ ಟೇಪ್‌ ತಯಾರಿಸುವ ಈ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ.‌ ಹೆಚ್ಚಿನ‌ ಪ್ರಮಾಣದಲ್ಲಿ ಪ್ಲಾಸ್ಟಿಕ್ ಇದ್ದಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ. ಸುಮಾರು60ಕ್ಕೂ ಹೆಚ್ಚು ಜನ ಒಳಗೆ ಇದ್ದರು ಎಂಬ ಮಾಹಿತಿ ಇದೆ. ಕಾರ್ಖಾನೆಯ ಲಿಪ್ಟ್ ಬಳಿ 8-10 ಕಾರ್ಮಿಕರು ಇದ್ದರು. ಕೂಡಲೇ ಐದು ಜನರನ್ನು ಹೊರಗೆ ತೆಗೆಯಲಾಗಿದೆ. ಇನ್ನೂ ಅನೇಕರು ಒಳಗೆ ಇದ್ದಿರುವ ಮಾಹಿತಿ‌ಇದೆ. ಆದರೆ ಏನು ಆಗಿದೆ ಎಂಬ ಮಾಹಿತಿ ಸಿಕ್ಕಿಲ್ಲ

BREAKING : ದೇಶಾದ್ಯಂತ ಫೇಸ್ ಬುಕ್ ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2023-10-18 22:39:00 |

Share: | | | | |


BREAKING : ದೇಶಾದ್ಯಂತ ಫೇಸ್ ಬುಕ್  ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಹೌದು, ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಇನ್ನು ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್, ಅಪ್ಲಿಕೇಶನ್ ಮತ್ತು ವೆಬ್ಸೈಟ್ ಎರಡಕ್ಕೂ ಸರ್ವರ್ ಸಂಪರ್ಕ ಸಮಸ್ಯೆಗಳಿಗೆ ಸಂಬಂಧಿಸಿದ ವರದಿಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯನ್ನ ತೋರಿಸಿದೆ.

Recent News


Leave a Comment: