ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

Posted by Vidyamaana on 2023-03-25 05:08:39 |

Share: | | | | |


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು.

ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ, ಅಧಿಕಾರಿಗಳ ತಂಡಗಳಾಗಲಿ ಮುಂದೆ ಬಂದಿಲ್ಲ. ಇದೀಗ ಹಿಂದೂ ಜಾಗರಣಾ ವೇದಿಕೆ ಹೋರಾಟದ ಫಲವಾಗಿ ಜಾಗವನ್ನು ಮತ್ತೆ ದೇವಸ್ಥಾನದ ಹೆಸರಿನಲ್ಲಿ ಪಡೆಯುವಂತಾಗಿದ್ದು, ಈ ಮೂಲಕ ಹಿಂದೂ ಜಾಗರಣ ವೇದಿಕೆ ಧರ್ಮ ಜಾಗೃತಿ ಮಾಡಿದೆ ಎಂದರು.


ಬ್ರಹ್ಮಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿ ದಿಕ್ಸೂಚಿ ಭಾಷಣ ಮಾಡಿ, ಆತ್ಮ ಸ್ಥೈರ್ಯದೊಂದಿಗೆ ಮುನ್ನುಗ್ಗುವ ಸಂಘ ಜಗತ್ತಿನಲ್ಲಿದ್ದರೆ ಅದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದ ಸಂಘಟನೆ. ಈ ನಿಟ್ಟಿನಲ್ಲಿ ನಾವು ಸ್ವಾಭಿಮಾನಿಯಾಗಿ ಎದ್ದು ನಿಂತರೆ ಯಾವ ಕಾರ್ಯವನ್ನು ಮಾಡಲು ಸಾಧ್ಯವಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದ ಅವರು, ಈ ಜಾಗದಲ್ಲಿ ಭವಿಷ್ಯತ್ ನಲ್ಲಿ ಹಿಂದೂ ಸಮಾಜಕ್ಕೆ ಉಪಯೋಗವಾಗುವ ಮಂದಿರವನ್ನು ನಿರ್ಮಾಣ ಮಾಡುವ ತೀರ್ಮಾನ ಮಾಡಲಾಗಿದೆ. ಅದಕ್ಕೆ ದೇವರ ಅನುಗ್ರಹ ಇದೆ ಎಂದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೊಳುವಾರಿನಲ್ಲಿ ಇಂದು ಅನ್ಯರ ಪಾಲಾಗಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಕೊಡುವಲ್ಲಿ ಸಂಘಟನೆಯ ಪಾತ್ರ ಮಹತ್ವದಾಗಿದೆ ಎಂದರು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಯ ಮಾತನಾಡಿ, ಭಜನೆ ಮೂಲಕ ಎಲ್ಲರೂ ಒಂದುಗೂಡಲು ಸಾಧ್ಯ. ಹಿಂದೂ ಜಾಗರಣ ವೇದಿಕೆ ಭಜನೆ ಮೂಲಕ ಧರ್ಮ ಜಾಗೃತಿ ಮೂಡಿಸಿದೆ. ಸುಬಬ್ರಹ್ಮಣ್ಯದ ಪುಣ್ಯ ಭೂಮಿಯನ್ನು ನಮಗೆ ಒಪ್ಪಿಸುವ ಕೆಲಸ ಮಾಡಿದ ಹಿಂದೂ ಜಾಗರಣ ವೇದಿಕೆ ಮಾಡಿದ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.


ರವಿರಾಜ ಶೆಟ್ಟಿ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ದಿನೇಶ್ ಪಂಜಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯ ಪ್ರಮುಖರಾದ ಚಿನ್ಮಯ್ ರೈ ಈಶ್ವರಮಂಗಲ, ರಾಕೇಶ್ ಪಂಜೋಡಿ, ನರಸಿಂಹ ಮಾಣಿ, ಜಯರಾಮ, ಪ್ರೀತಮ್, ಚರಣ್, ಅಭಿ, ಅಶೋಕ್ ಸ್ವಾಮೀಜಿಗಳು ಹಾಗೂ ರವೀಶ ತಂತ್ರಿಯವರನ್ನು ಫಲಪುಷ್ಪ ನೀಡಿ ಗೌರವಿಸಿದರು. ತಾಲೂಕು ಸಮಿತಿ ಸದಸ್ಯರಾದ ಮನೀಶ್ ದರ್ಬೆ, ಲತೇಶ್ ಕೆಮ್ಮಾಯಿ ಅತಿಥಿಗಳನ್ನು ಗೌರವಿಸಿದರು. ಪ್ರೀತಿ ಕುಡ್ವ ಪ್ರಾರ್ಥಿಸಿದರು. ಹಿಂಜಾವೇ ತಾಲೂಕು ಸಹ ಸಂಚಾಲಕ ಸ್ವಸ್ತಿಕ್ ಮೇಗಿನಗುತ್ತು ಸ್ವಾಗತಿಸಿದರು. ಸಹಸಂಚಾಲಕ ಗಿರೀಶ್ ಮಡಪ್ಪಾಡಿ ವಂದಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆಶ್ಲೇಷ ಬಲಿ ಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಬೆಳಿಗ್ಗೆ ವೇ.ಮೂ. ರಾಜೇಶ್ ಭಟ್ ಗಣಪತಿ ಹೋಮ ನೆರವೇರಿಸಿದರು

ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಅಜೀಜ್ ಪೊಲೀಸ್ ವಶಕ್ಕೆ

Posted by Vidyamaana on 2023-10-21 09:03:56 |

Share: | | | | |


ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಅಜೀಜ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ MDMA ಡ್ರಗ್ಸ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.


ಈ ಹಿಂದೆ ಹಲವು ಬಾರಿ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ತೌಡುಗೋಳಿ ನರಿಂಗಾನ ನಿವಾಸಿ ಅಬ್ದುಲ್ ಅಜೀಜ್ @ ಪೋಕರ್ ಅಜೀಜ್(42)‌ ಬಂಧಿತ ಆರೋಪಿ. ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ವಶದಲ್ಲಿರಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 




ಆರೋಪಿ ವಶದಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ -2, ಡಿಜಿಟಲ್ ತೂಕದ ಮಾಪನವನ್ನು ವಶಪಡಿಸಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ರೂ. 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 


ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ. ಈ ಹಿಂದೆ ಜೈಲಿನಲ್ಲಿದ್ದ ಸಮಯ ಕಾರಾಗೃಹ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣವೂ ದಾಖಲಾಗಿರುತ್ತದೆ.

ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

Posted by Vidyamaana on 2023-06-21 07:59:35 |

Share: | | | | |


ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

ತಿರುವನಂತಪುರಂ: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು ಎಳೆದೊಯ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಜೂ.17 ರಂದು ಆಲ್ಫಿಯಾ (18) ಅಖಿಲ್ (21) ನನ್ನು ತಿರುವನಂತಪುರಂನಲ್ಲಿರುವ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ. ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ.ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್‌ ನನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾಳೆ. ಇಬ್ಬರ ಧರ್ಮ ಬೇರೆಯಾಗಿದ್ದರಿಂದ ಎರಡೂ ಕಡೆಯಿಂದ ಸಂಬಂಧಕ್ಕೆ ವಿರೋಧವಿದೆ.


ಜೂ.16 ರಂದು ಆಲ್ಫಿಯಾ ವಿವಾಹವಾಗುವ ನಿಟ್ಟಿನಲ್ಲಿ ತಿರುವನಂತಪುರಂಕ್ಕೆ ತೆರಳಿದ್ದಾರೆ. ಮರುದಿನ ಆಲ್ಫಿಯಾ ಮನೆಯವರು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ ದೇವಸ್ಥಾನದಲ್ಲಿ ಇನ್ನೇನು ಅಖಿಲ್‌ – ಆಲ್ಫಿಯಾ ವಿವಾಹ ನಡೆಯಬೇಕು ಅಷ್ಟರಲ್ಲೇ ಪೊಲೀಸರು ಬಂದಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸಲು ಆಲ್ಫಿಯಾಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಾಗಿದ್ದು,  ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ನಿಟ್ಟಿನಲ್ಲಿ ನಮ್ಮೊಂದಿಗೆ ಬನ್ನಿ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಪೊಲೀಸರ ಮಾತನ್ನು ಕೇಳದಿದ್ದಕ್ಕೆ ಆಲ್ಫಿಯಾಳನ್ನು ಪೊಲೀಸರು ಎಳೆದೊಯ್ದು ವಾಹನದಲ್ಲಿ ಕೂರಿಸಿದ್ದಾರೆ.ನಾನು ಸ್ವಇಚ್ಛೆಯಿಂದ ಅಖಿಲ್‌ ನೊಂದಿಗೆ ಮದುವೆಯಾಗಲು ಮನೆಯಿಂದ ಬಂದಿರುವುದಾಗಿ ಪೊಲೀಸರ ಬಳಿ ಜೂ.16 ರಂದು ಹೇಳಿದ್ದೆ. ನನಗೆ 18 ವರ್ಷ ಆಗಿಲ್ಲ ಎಂದಿದ್ದಾರೆ. ನನ್ನ ಮನೆಯವರು ದೂರು ನೀಡಿದ ಬಳಿಕ ಈ ಘಟನೆ ನಡೆದಿದೆ ಎಂದು ಯುವತಿ ಅಲ್ಫಿಯಾ ಹೇಳಿದ್ದಾಳೆ.

ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Posted by Vidyamaana on 2023-07-14 09:47:39 |

Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: 9.8.7.6.5.4.3…2…1..0 ಅಗ್ನಿ ಜ್ವಾಲೆಯನ್ನು ಉಗುಳುತ್ತಾ ಕೋಟಿ ಕೋಟಿ ಭಾರತೀಯರ ಕನಸಾದ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಶಶಾಂಕ ದಕ್ಷಿಣ ಧ್ರುವದತ್ತ ಪ್ರಯಾಣ ಬೆಳೆಸಿದೆಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದೆ. ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ. ಲ್ಯಾಂಡರ್‌, ರೋವರ್‌ ಜೀವಿತಾವಧಿ 1 ಚಂದ್ರನ ದಿನ (14 ಭೂಮಿ ದಿನಗಳು) ಇರಲಿದೆ (ಚಂದ್ರನ ಹಗಲಿನಲ್ಲಿ ಚಾರ್ಜ್‌ ಆಗಲಿದೆ). ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದೆ. ಅಂದರೆ ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.


ಈವರೆಗೆ ಯಾವುದೇ ಉಪಕರಣಗಳು ಹೋಗದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ತನ್ನ ನೌಕೆಯನ್ನು ಇಳಿಸುವ ಸಾಹಸಕ್ಕೆ ಮುಂದಾಗಿದೆ. ಚಂದ್ರನ ಅಧ್ಯಯನಕ್ಕೆ 2019ರ ಜು.22ರಂದು ಇಸ್ರೋ ಕೈಗೊಂಡಿದ್ದ ಚಂದ್ರಯಾನ-2 ಯೋಜನೆ ವಿಫಲವಾದ ಕಾರಣ ಮತ್ತೊಂದು ಚಂದ್ರಯಾನ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಈ ಬಾರಿ ನೌಕೆ ಇಳಿಸಲು 4 ಕಿ.ಮೀ. X 2.5 ಕಿ.ಮೀ.ನ ವಿಶಾಲ ಸ್ಥಳವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಉಷ್ಣಾಂಶ -230 ಡಿ.ಸೆ. ಗಿಂತ ಕಡಿಮೆ ಇದ್ದು, ಇಲ್ಲಿ ಬಹುಕಾಲದವರಗೆ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪಳೆಯುಳಿಕೆಗಳು ಇರುವ ಅಂದಾಜಿದೆ. ಅಲ್ಲದೆ, 2008ರಲ್ಲಿ ಕೈಗೊಂಡ ಚಂದ್ರಯಾನ-1 ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎಂಬುದು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಧ್ರುವವನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ದಕ್ಷಿಣ ಧ್ರುವದಲ್ಲಿ ಈ ವರೆಗೂ ಬೆಳಕನ್ನೇ ಕಾಣದ ಹಲವು ಪ್ರದೇಶಗಳಿರುವ ಕಾರಣ ಇದು ವಿಜ್ಞಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

15 ದಿನದಲ್ಲಿ ನೂತನ ಕಚೇರಿ ಪ್ರಾರಂಭ ಸಾರ್ವಜನಿಕರ ಸೇವೆಗಾಗಿ 6 ಸಿಬಂದಿ ನೇಮಕ: ಶಾಸಕ ರೈ

Posted by Vidyamaana on 2023-06-12 12:45:41 |

Share: | | | | |


15 ದಿನದಲ್ಲಿ ನೂತನ ಕಚೇರಿ ಪ್ರಾರಂಭ ಸಾರ್ವಜನಿಕರ ಸೇವೆಗಾಗಿ 6 ಸಿಬಂದಿ ನೇಮಕ: ಶಾಸಕ ರೈ

ಪುತ್ತೂರು: ಮುಂದಿನ ೧೫ ದಿನದೊಳಗೆ ನನ್ನ ನೂತನ ಕಚೇರಿ ಪುತ್ತೂರಿನಲ್ಲಿ ಪ್ರಾರಂಭವಾಗಲಿದ್ದು ಸರಕಾರಿ ಆಸ್ಪತ್ರೆಯ ಬಳಿ ಇರುವ ಈಗಿನ ಪುಡಾ ಕಟ್ಟಡದಲ್ಲಿ ನೂತನ ಕಚೇರಿ ಕಾರ್ಯಾರಂಭಿಸಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.

ನೂತನ ಕಚೇರಿಯಲ್ಲಿ ಸಾರ್ವಜನಿಕರ ಸೇವೆಗಾಗಿ ೬ ಮಂದಿ ಸಿಬಂದಿಯನ್ನು ನೇಮಕ ಮಾಡಲಿದ್ದೇನೆ. ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲು, ಮಾಹಿತಿ ನೀಡಲು, ಜನರಿಗೆ ಸ್ಪಂದನೆ ನೀಡಲು ಮತ್ತು ನಗರಸಭಾ ವ್ಯಾಪ್ತಿಯಲ್ಲಿರುವ ಜನರಿಗೆ ಸೇವೆ ಸಲ್ಲಿಸಲು ಬೇರೆ ಬೇರೆ ಕೌಂಟರ್‌ಗಳನ್ನು ಮಾಡಿ ಕಚೇರಿಯಲ್ಲಿ ಸಿಬಂದಿಗಳು ಸೇವೆ ಸಲ್ಲಿಸಲಿದ್ದಾರೆ. ಕಚೇರಿಗೆ ಬರುವ ಮಂದಿಗೆ ಕಚೇರಿಯಲ್ಲಿ ಶಾಸಕರಿಲ್ಲದೇ ಇದ್ದರೂ ಅವರ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಬೇಕು ಮತ್ತು ಶಾಸಕರಿಲ್ಲದೇ ಇರುವ ಸಂದರ್ಭದಲ್ಲಿ ಬಂದ ಕೆಲಸ ಆಗಿಲ್ಲ ಎಂದು ಯಾರೂ ನೊಂದು ಕೊಳ್ಳುವಂತಾಗಬಾರದು. ದೂರದ ಊರುಗಳಿಂದ ಶಾಸಕರನ್ನು ಭೇಟಿಯಾಗಲು ಬರುವ ಶಾಸಕರು ತಮ್ಮ ಕೆಲಸ ಆಗದೆ ಯಾರೂ ಬರಿಗೈಯ್ಯಲ್ಲಿ ತೆರಳುವಂತಾಗಬಾರದು ಎಂಬ ಉದ್ದೇಶದಿಂದ ಕಚೇರಿಯಲ್ಲಿ ಎಲ್ಲಾ ಸೇವೆಗಳು ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

Posted by Vidyamaana on 2023-02-26 15:38:10 |

Share: | | | | |


ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

ಹೊಸದಿಲ್ಲಿ: ದಿಲ್ಲಿಯ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.

ಬೆಳಗ್ಗೆಯಿಂದಲೇ ಒಂಬತ್ತು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಬಳಿಕ ಬಂಧನ ನಡೆದಿದೆ.

“ದೇವರು ನಿಮ್ಮೊಂದಿಗಿದ್ದಾನೆ ಮನೀಶ್, ಲಕ್ಷಾಂತರ ಮಕ್ಕಳ ಮತ್ತು ಅವರ ಪೋಷಕರ ಆಶೀರ್ವಾದ ನಿಮ್ಮ ಮೇಲಿದೆ. ದೇಶ ಮತ್ತು ಸಮಾಜಕ್ಕಾಗಿ ಜೈಲಿಗೆ ಹೋದಾಗ ಜೈಲಿಗೆ ಹೋಗುವುದು ಶಾಪವಲ್ಲ, ಕೀರ್ತಿ, ನೀನು ಬೇಗ ಜೈಲಿನಿಂದ ಹಿಂತಿರುಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಕ್ಕಳು, ಪೋಷಕರು ಮತ್ತು ದೆಹಲಿಯ ನಾವೆಲ್ಲರೂ ನಿಮಗಾಗಿ ಕಾಯುತ್ತಿದ್ದೇವೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.



Recent News


Leave a Comment: