ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

Posted by Vidyamaana on 2023-08-12 17:55:28 |

Share: | | | | |


Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ವಿಚಾರ ಶುದ್ಧ ಸುಳ್ಳು ಇಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆಈ ಕುರಿತು ಸ್ಪಷ್ಟನೆ ನೀಡಿದ ಅವರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ತಡೆದು ದರೋಡೆ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ಪ್ರೆಸ್‌ ವೇ ದರೋಡೆಕೋರರ ಹಾವಳಿ ಎಂದು ಪೋಸ್ಟ್ ಮಾಡಲಾಗಿತ್ತು ಇದು ಸತ್ಯಕ್ಕೆ ದೂರವಾದ ವಿಚಾರ ಇಲ್ಲಿ ಒಂದು ಘಟನೆ ನಡೆದಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಕರಣ ನಡೆದಿಲ್ಲ ಹಾಗಾಗಿ ಯಾರು ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಹೇಳಿದ್ದಾರೆ.ಜಾಲತಾಣದಲ್ಲಿ ಹಾಕಿರುವ ಸುಳ್ಳು ಸುದ್ದಿ‌ ಅಲ್ಲದೆ ಈ ಪೋಟೋದಲ್ಲಿರುವ ರಸ್ತೆ ಭಾರತಕ್ಕೆ ಸಂಬಂಧಿಸಿದ್ದಲ್ಲ ಇದು ಹೊರ ದೇಶಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ. ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಯಾವುದೇ ದರೋಡೆಗಳು ಆಗುತ್ತಿಲ್ಲ. ಅಲ್ಲದೆ ಹೈವೇ ಪ್ಯಾಟ್ರೋಲ್ ಇಪ್ಪತ್ತನಾಲ್ಕು ಗಂಟೆ ಕೆಲಸ ಮಾಡುತ್ತಿದೆ. ಈ ಹಿಂದೆ ಆಗಿದ್ದ ದರೋಡೆಗಳ ಪ್ರಕರಣಕ್ಕೆ‌ ಸಂಬಂಧಿಸಿದ ಆರೋಪಿಗಳನ್ನ ಈಗಾಗಲೇ ಬಂಧಿಸಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಹೇಳಿದ್ದಾರೆ

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ- ಕೇರಳ ಮೂಲದ ಅನೂಪ್, ಲತೀಫ್ ಪೊಲೀಸ್ ವಶಕ್ಕೆ

Posted by Vidyamaana on 2024-02-06 21:01:29 |

Share: | | | | |


ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ- ಕೇರಳ ಮೂಲದ ಅನೂಪ್, ಲತೀಫ್ ಪೊಲೀಸ್ ವಶಕ್ಕೆ

ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರ ಹಾಗೂ ಕೇರಳಕ್ಕೆ ಮಹೇಂದ್ರ ಬೊಲೆರೋ ವಾಹನದಲ್ಲಿ ಬೃಹತ್ ಪ್ರಮಾಣದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 120 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಫೆ.06 ರಂದು ಮಂಗಳೂರು ನಗರಕ್ಕೆ ಒರಿಸ್ಸಾದಿಂದ ಬೊಲೆರೋದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ ನೇತೃತ್ವದ ತಂಡ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿದೆ.

ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವಯನಾಡ್‌ನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರು ನಿವಾಸಿಯಾದ ಲತೀಪ್ ಕೆ.ವಿ(36) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಶದಲ್ಲಿದ್ದ ಸಿಲ್ವರ್ ಬಣ್ಣದ ಮಹೇಂದ್ರ ಬೊಲೆರೋ ಕಾರು, ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ, 3 ಮೊಬೈಲ್ ಫೋನ್, ರೂ. 4020 ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಬೊಲೆರೋ ಜೀಪು,  ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 35,14,520 ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

ಆರೋಪಿಗಳಿಬ್ಬರೂ ಕೇರಳದ ರಾಜ್ಯದವರಾಗಿದ್ದು, ಕರ್ನಾಟಕ, ಕೇರಳ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾ ರಾಜ್ಯದಿಂದ ಗಾಂಜಾವನ್ನು ಖರೀದಿಸಿ ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಗಾಂಜಾವನ್ನು ಕಳ್ಳ ಸಾಗಾಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೋಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ನ್ನು ಮಾಡಿ ಈ ಬಾಕ್ಸ್ ನಲ್ಲಿ ಗಾಂಜಾವನ್ನು ಬಚ್ಚಿಟ್ಟಿದ್ದರು.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಸದ್ಯ ಬಂಧಿಸಲ್ಪಟ್ಟಿರುವ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು


ಲಕ್ಷಾಂತರ ರೂಪಾಯಿಯ ಐ ಫೋನ್ ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಜಯಂತ್ ವಿಟ್ಲ

Posted by Vidyamaana on 2023-04-24 23:10:56 |

Share: | | | | |


ಲಕ್ಷಾಂತರ ರೂಪಾಯಿಯ ಐ ಫೋನ್  ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ  ಜಯಂತ್ ವಿಟ್ಲ

ಪುತ್ತೂರು: ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ತೌಸೀಫ್ ರವರು ಕಳೆದುಕೊಂಡಿದ್ದ ಸುಮಾರು 1.35 ಲಕ್ಷ ರೂಪಾಯಿ ಬೆಲೆಬಾಳುವ ಮೊಬೈಲ್‌ ಹಿಂತಿರುಗಿಸುವ ಮೂಲಕ ಪತ್ರಿಕೆ ಸಾಗಾಟ ಮಾಡುವ ಜಯಂತ ವಿಟ್ಟ ರವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಕಾರಿನಲ್ಲಿ ಮಂಗಳೂರಿನಿಂದ ಸುಳ್ಯಕ್ಕೆ ದಿ, ಹಿಂದು ಇಂಗ್ಲಿಷ್ ಪತ್ರಿಕೆಯ ಸಾಗಾಟ ಮಾಡುತ್ತಿರುವ ಜಯಂತ ವಿಟ್ಲರವರಿಗೆ ಎ.23ರಂದು ರಾತ್ರಿ ಮಂಗಳೂರಿನ ಕಂಕನಾಡಿ ರಾಧಾ ಮೆಡಿಕಲ್‌ ಬಳಿ ರಸ್ತೆಯಲ್ಲಿ ಐಫೋನ್ ಮೊಬೈಲ್ ಬಿದ್ದು ಸಿಕ್ಕಿತು. ಇದರ ಕುರಿತು ಜಯಂತರವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎ.24ರಂದು ಮೊಬೈಲ್ ನಲ್ಲಿದ್ದ ನಂಬರ್ ಮೂಲಕ ಸಂಪರ್ಕಿಸಿ ಮೊಬೈಲ್ ವಾರಿಸುದಾರರಾಗಿರುವ ಪುತ್ತೂರಿನ ವಳತ್ತಡ್ಕ ತೌಸೀಫ್ ರವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.

ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್: ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು?

Posted by Vidyamaana on 2024-06-14 15:34:19 |

Share: | | | | |


ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್: ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು?

ಬೆಂಗಳೂರು :ಬಿಎಸ್‌ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ವಿಚಾರ ಸಂಬಂಧ ಮಾಧ್ಯಮ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ? ನನಗೆ ಗೊತ್ತಿಲ್ಲ? ನಾನು ಮೀಟಿಂಗ್‌ನಲ್ಲಿದ್ದೇನೆ ನೀವು ಹೇಳಿದ್ಮೇಲೆ ಗೊತ್ತಾಗಿದ್ದು. ನನಗೆ ಈ ವಿಚಾರದಲ್ಲಿ ತಿಳಿವಳಿಕೆ ಇಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದರು

ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ ಶಹಾಬುದ್ದೀನ್

Posted by Vidyamaana on 2023-04-05 10:20:36 |

Share: | | | | |


ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ  ಶಹಾಬುದ್ದೀನ್

ಮಧ್ಯಪ್ರದೇಶ: ಐಪಿಎಲ್ ಆರಂಭವಾಗಿದ್ದು, ಕ್ರಿಕೆಟ್ ಪ್ರೀಯರು ಎಂಜಾಯ್ ಮಾಡುತ್ತಿದ್ದಾರೆ. ಜತೆಗೆ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್‌ಗಳು ಹೆಚ್ಚು ಸಕ್ರೀಯವಾಗಿದ್ದು, ಯುವಸಮೂಹವನ್ನು ಆಕರ್ಷಿಸುತ್ತಿದೆ. ತಮ್ಮದೇ ತಂಡ ರಚಿಸಿ ಹಣ ಹೂಡಿಕೆ ಮಾಡುತ್ತಿದ್ದಾರೆ. ಇದೀಗ ಯುವಕನೊಬ್ಬನ ಅದೃಷ್ಟ ಬದಲಾಗಿದ್ದು, ಕೋಟಿ ರೂಪಾಯಿ ಮೊತ್ತವನ್ನೇ ಗೆದ್ದುಕೊಂಡಿದ್ದಾನೆ.

ಯುವಕನೊಬ್ಬ ಆನ್‌ಲೈನ್ ಗೇಮಿಂಗ್‌ನಲ್ಲಿ 49 ರೂಪಾಯಿ ಹೂಡಿಕೆ ಮಾಡಿ, ಬರೋಬ್ಬರಿ 1.5 ಕೋಟಿ ರೂ. ಗೆದ್ದಿದ್ದಾನೆ. ಗೇಮಿಂಗ್ ಆ್ಯಪ್‌ನಲ್ಲಿ ವರ್ಚುವಲ್ ಕ್ರಿಕೆಟ್ ತಂಡವನ್ನು ರಚಿಸುವ ಮೂಲಕ ಕೋಟಿ ರೂಪಾಯಿ ಗೆಲ್ಲಲು ಸಾಧ್ಯವಾಗಿದೆ.ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಶಹಾಬುದ್ದೀನ್ ಮನ್ಸೂರಿ ಎಂಬ ಚಾಲಕ 1.5 ಕೋಟಿ ರೂಪಾಯಿ ಅನ್ ಲೈನ್ ಗೇಮಿಂಗ್ ಮೂಲಕ ಗೆದ್ದುಕೊಂಡ ಯುವಕ. ಈತ ಚಾಲಕನಾಗಿ ದುಡಿಯುತ್ತಿದ್ದು, ಕಳೆದ ಭಾನುವಾರ ಕೊಲ್ಕತಾ ಮತ್ತು ಪಂಜಾಬ್ ನಡುವಿನ ತಂಡ ರಚಿಸಿ ಆನ್‌ಲೈನ್‌ನಲ್ಲಿ ಕ್ರಿಕೆಟ್ ಆಡಿದ್ದಾನೆ. ಕಳೆದ ಎರಡು ವರ್ಷಗಳಿಂದ ಆನ್‌ಲೈನ್ ಕ್ರಿಕೆಟ್ ಆಟದಲ್ಲಿ ತಂಡಗಳನ್ನು ರಚಿಸುತ್ತಾ ಅದೃಷ್ಟ ಪರೀಕ್ಷಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

ಸದ್ಯ ಶಹಾಬುದ್ದೀನ್ ತನ್ನ ಆ್ಯಪ್ ವ್ಯಾಲೆಟ್‌ನಿಂದ 20 ಲಕ್ಷ ರೂ. ವಿತ್ ಡ್ರಾ ಮಾಡಿಕೊಂಡಿದ್ದಾನೆ. ವಿಜೇತ ಮೊತ್ತದ 1.5 ಕೋಟಿ ರೂ.ನಲ್ಲಿ ಒಟ್ಟು 6 ಲಕ್ಷ ರೂ. ತೆರಿಗೆ ಕಡಿತವಾಗಿದೆ. ಮಧ್ಯಪ್ರದೇಶದ ಸಂಧ್ಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶಹಾಬುದ್ದೀನ್, ಇದೀಗ ಗೆದ್ದ ಹಣದಲ್ಲಿ ಸ್ವಂತ ಮನೆ ಕಟ್ಟುವ ಯೋಜನೆ ಹಾಕಿಕೊಂಡಿದ್ದೇನೆ. ಉಳಿದ ಮೊತ್ತದಲ್ಲಿ ಸ್ವಂತ ಉದ್ಯಮ ಆರಂಭಿಸುವ ಗುರಿ ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.



Leave a Comment: