ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಲಡ್ಡು ಬಂದು ಬಾಯಿಗೆ ಬಿತ್ತು..! ಆರ್ಡರ್ ಮಾಡಿದ್ದು ಫುಡ್ ಪಾರ್ಸೆಲ್ ಬಂದಿದ್ದು ಕ್ಯಾಶ್!!

Posted by Vidyamaana on 2024-07-21 15:34:53 |

Share: | | | | |


ಲಡ್ಡು ಬಂದು ಬಾಯಿಗೆ ಬಿತ್ತು..! ಆರ್ಡರ್ ಮಾಡಿದ್ದು ಫುಡ್ ಪಾರ್ಸೆಲ್ ಬಂದಿದ್ದು ಕ್ಯಾಶ್!!

ಕೊಪ್ಪಳ: ಗ್ರಾಹಕನಿಗೆ ಆಹಾರ ಪಾರ್ಸಲ್​ ಕವರ್​ ನೀಡುವ ಬದಲಿಗೆ ಹೋಟೆಲ್ ಮಾಲಿಕ 50 ಸಾವಿರ ರೂ. ಹಣವಿದ್ದ ಕವರ್​ ನೀಡಿದ ಘಟನೆ ನಡೆದಿದ್ದು, ಗ್ರಾಹಕ ಪಾರ್ಸಲ್​ ತೆಗೆದುಕೊಂಡು ಹೋಗಿ ಮನೆಯಲ್ಲಿ ನೋಡಿದಾಗ ತಿಂಡಿ ಬದಲಿಗೆ 50 ಸಾವಿರ ರೂ. ಇರುವುದು ಕಂಡಿದೆ.

ರಸೂಲ್ ಸಾಬ ಸೌದಾಗರ್ ಎಂಬುವರು ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ಅವರು ಬ್ಯಾಂಕ್​ಗೆ ಕಟ್ಟಲು ಎಂದು ಮನೆಯಿಂದ 49,625 ರೂಪಾಯಿ ಇದ್ದ ಹಣದ ಕವರ್​ನ್ನು ಹೋಟೆಲ್ ನಲ್ಲಿಟ್ಟಿದ್ದರು.



ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿ ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Posted by Vidyamaana on 2024-07-30 21:50:03 |

Share: | | | | |


ಉಡುಪಿ ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್  ಆತ್ಮಹತ್ಯೆಗೆ ಶರಣು

ಉಡುಪಿ : ಮಂದಾರ್ತಿ,ಮಡಾಮಕ್ಕಿ, ಅಮೃತೇಶ್ವರಿ,ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು( 32) ಮಂಗಳವಾರ(ಜು.30) ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ; ಮೆನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಗುಂಡಿಕ್ಕಿ ಯುವಕನನ್ನ ಕೊಂದ ದುಷ್ಕರ್ಮಿಗಳು

Posted by Vidyamaana on 2024-03-04 04:38:01 |

Share: | | | | |


ಉಡುಪಿ ; ಮೆನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಗುಂಡಿಕ್ಕಿ ಯುವಕನನ್ನ ಕೊಂದ ದುಷ್ಕರ್ಮಿಗಳು

ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ. 


ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ

ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ

Posted by Vidyamaana on 2023-07-31 05:25:54 |

Share: | | | | |


ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ

ಬಂಟ್ವಾಳ : ಮನುಷ್ಯನ ರಕ್ತವು ಇನ್ನೊಂದು ಜೀವವನ್ನು ಉಳಿಸಲು ಬಳಕೆಯಾಗಬೇಕೇ ವಿನಃ ರಸ್ತೆಯಲ್ಲಿ ಚೆಲ್ಲುವಂತಾಗಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟರು. 


ಅವರು ಕಲ್ಲಡ್ಕ ಝಮಾನ್ ಬಾಯ್ಸ್ ಇದರ ಆಶ್ರಯದಲ್ಲಿ ಬ್ಲಡ್‌ ಡೋನರ್ಸ್ ಮಂಗಳೂರು,   ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಹಾಗೂ ಯೆನೆಪೋಯ ಆಸ್ಪತ್ರೆ ಮಂಗಳೂರು ಇವುಗಳ ಸಹಕಾರದೊಂದಿಗೆ

ಮರ್ಹೂಂ ಬಿ.ಕೆ ಇದ್ದಿನಬ್ಬ ಕಲ್ಲಡ್ಕ ಇವರ ಸ್ಮರಣಾರ್ಥ ಕಲ್ಲಡ್ಕ  ಗಂಗಾಧರ ಸಂಕೀರ್ಣದ  ಮರ್ಹೂಂ ಹಾಜಿ ಅಬ್ದುಲ್ಲಾ , ಮರ್ಹೂಂ ರಾಝಿಕ್ ಕುಪ್ಪೆಟ್ಟಿ ವೇದಿಕೆಯಲ್ಲಿ ಭಾನುವಾರ ನಡೆದ ಸೌಹಾರ್ಧ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು .


    ರಕ್ತದ ಅವಶ್ಯಕತೆ ಬಂದಾಗ ಯಾರೂ ಯಾವ ಜಾತಿ, ಧರ್ಮ, ಪಂಗಡದವನ ರಕ್ತ ಎಂಬುದನ್ನು ನೋಡುವುದಿಲ್ಲವೋ, ಇದೇ ಮನೋಸ್ಥಿತಿಯನ್ನು ನೈಜ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದಾಗ ಭಾರತದ ಭವ್ಯ ಜಾತ್ಯಾತೀತ ಪರಂಪರೆಗೆ ಶಕ್ತಿ ತುಂಬಲಿದೆ ಎಂದರು.


  ಶಿಬಿರವನ್ನು ಕಲ್ಲಡ್ಕ ಮುಹಿಯದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ,

ಉದ್ಘಾಟಿಸಿದರು,  ಇರ್ಶಾದ್ ದಾರಿಮಿ ಅಲ್ ಜಝರಿ ಶುಭ ಹಾರೈಸಿದರು. ಝಮಾನ್ ಬಾಯ್ಸ್ ಅಧ್ಯಕ್ಷ ಮಹಮ್ಮದ್ ಸಜ್ಜಾದ್ ಅಧ್ಯಕ್ಷತೆ ವಹಿಸಿದ್ದರು.


    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಲಡ್ಕ ಗಂಗಾಧರ ಸಂಕೀರ್ಣದ ಮಾಲಕ ಶಾಂತರಾಮ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಸ್.ಡಿ.ಪಿ.ಐ. ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ, ಮಂಗಳೂರು ಬ್ಲಡ್‌ ಡೋನರ್ಸ್ ಅಧ್ಯಕ್ಷ ನವಾಝ್ ನರಿಂಗಾನ, ಗೋಳ್ತಮಜಲು ಹಜಾಜ್ ಸಮೂಹ ಸಂಸ್ಥೆಯ ಪಾಲುದಾರ ಇಮ್ತಿಯಾಝ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ.ಕೆ.ಜಬ್ಬಾರ್ ಬೋಳಿಯಾರ್, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಕೆ.ಸಿ.ರೋಡ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಮಾತನಾಡಿ ಶುಭ ಹಾರೈಸಿದರು.


   ಇದೇ ವೇಳೆ ಶಾಂತರಾಮ ಶೆಟ್ಟಿ, ಸಾಹುಲ್ ಹಮೀದ್ ಕಾಶಿಪಟ್ನ ಹಾಗೂ ಡಾ.ಸಮ್ರೀನಾ,  ಅವರನ್ನು ಸನ್ಮಾನಿಸಲಾಯಿತು.

241 ಮಂದಿ ರಕ್ತದಾನ ಮಾಡಿದರು.


    ಕಲ್ಲಡ್ಕ ಮೆಸ್ಕಾಂ ಶಾಖಾಧಿಕಾರಿ ಮಹಾಬಲ, ಬ್ಲಡ್ ಡೋನರ್ಸ್ ಗೌರವಾಧ್ಯಕ್ಷ ಗೌರವಾಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಉದ್ಯಮಿಗಳಾದ ಜಿ.ಎಸ್.ಸಿದ್ದೀಕ್ ಕಲ್ಲಡ್ಕ, ನವಾಝ್ ಕೆ.ಎನ್, ಬಿ.ಕೆ.ಫೈರೋಝುದ್ದೀನ್ ಬಿ.ಕೆ ನಗರ, ಕೆ.ಎಸ್.ಫೈರೋಝ್ ಕಲ್ಲಡ್ಕ, ಶಾಫಿ ಕಲ್ಲಡ್ಕ , ಎಸ್.ಆರ್. ರಫೀಕ್ ಗೋಳ್ತಮಜಲು, ವಿಟ್ಲ ಪಡ್ನೂರು ಗ್ರಾ.ಪಂ.ಮಾಜಿ ಸದಸ್ಯ ಸಿದ್ದೀಕ್ ಸರವು, ಕಾಂಗ್ರೆಸ್ ಸೇವಾದಳ ಜಿಲ್ಲಾ ಕಾರ್ಯದರ್ಶಿ ವೆಂಕಪ್ಪ ಪೂಜಾರಿ ಮೊದಲಾದವರು ಭಾಗವಹಿಸಿದ್ದರು


    ಇರ್ಫಾನ್ ಕಲ್ಲಡ್ಕ ಸ್ವಾಗತಿಸಿ, ಫಾರೂಕ್ ಎಫ್ ತ್ರೀ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಾತಿಮಾ ಅಫ್ನಾ ಕಾಸರಗೋಡಿನಲ್ಲಿ ಪತ್ತೆ

Posted by Vidyamaana on 2024-02-01 19:15:43 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಾತಿಮಾ ಅಫ್ನಾ  ಕಾಸರಗೋಡಿನಲ್ಲಿ ಪತ್ತೆ

ಪುತ್ತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕಿ ಇದೀಗ ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ.


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಾತಿಮಾ ಅಫ್ನಾ ಮನೆಯಿಂದ ಶಾಲೆಗೆಂದು ತೆರಳಿದ್ದು, ಆದರೆ ಶಾಲೆಗೆ ಹೋಗಿರಲಿಲ್ಲ.

ಇಂದು ಶಾಲೆಯಲ್ಲಿ ಪರೀಕ್ಷೆ ಇತ್ತು ಎನ್ನಲಾಗಿದ್ದು, ಅಫ್ನ ಶಾಲೆಗೆ ಹೋಗದೆ ನೇರವಾಗಿ ಪರ್ಲಡ್ಕದ ಬಾಲವನಕ್ಕೆ ತೆರಳಿದ್ದಳು. ಐಡಿ ಕಾರ್ಡ್‌ ಇಲ್ಲದ ಕಾರಣ ಬಾಲವನದ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಅಲ್ಲಿಂದ ಹಿಂದಿರುಗಿ ಬಂದ ಅಫ್ನ ಪರ್ಲಡ್ಕದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ತೆರಳಿ ನಾನು ಶಾಲೆಗೆ ಹೋಗಿಲ್ಲ, ಇಂದು ಇಲ್ಲಿ ಇರುವುದಾಗಿ ಹೇಳಿದ್ದಾಳೆ. ಸಂಬಂಧಿಕರ ಮನೆಮಂದಿ ಆಕೆಯನ್ನು ಶಾಲೆಗೆ ಬಿಟ್ಟು ಬರಲು ಮುಂದಾದಾಗ ಅಫ್ನ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಮನೆಯ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದರೂ ಆಕೆ ಕಾಣಸಿಕ್ಕಿರಲಿಲ್ಲ. ಸಂಬಂಧಿಕರಿಂದ ಮಾಹಿತಿ ಪಡೆದ ಮನೆಯವರು ಬೆಳಗ್ಗಿನಿಂದಲೇ ಅಫ್ನಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಅಫ್ನ ಎಲ್ಲಿಯೂ ಪತ್ತೆಯಾಗಿಲ್ಲ.


ಬಳ್ಕಾಡ್ ನಿವಾಸಿ ಅಶ್ರಫ್‌ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಫ್ನ ನಾಪತ್ತೆಯಾಗಿರುವುದಾಗಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾತಿಮಾ ಅಫ್ನ ಕಾಸರಗೋಡಿನಲ್ಲಿ ಪತ್ತೆಯಾಗಿದ್ದು, ಪುತ್ತೂರಿಗೆ ಕರೆತರಲು ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿದ್ದಾರೆ.


ನಗರದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ಅಫ್ನ ಎಂದಿನಂತೆ ಬೆಳಿಗ್ಗೆ ಮನೆಯಿಂದ ಇತರ ಮಕ್ಕಳ ಜೊತೆ ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಶಾಲೆಗೆಂದು ಬಂದಿದ್ದಳು.  ಈ ಹಿನ್ನೆಲೆಯಲ್ಲಿ ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಪತ್ತೆಯಾಗುವುದರೊಂದಿಗೆ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

Recent News


Leave a Comment: