ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

Posted by Vidyamaana on 2023-07-04 21:46:28 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾ


ಬೆಂಗಳೂರು: ವಿಧಾನ ಸಭಾ ಚುನಾವಣೆಯ ಸೋಲಿನ ಬಳಿಕ ರಾಜಕೀಯದ ಸುಳಿಗಾಳಿಯಲ್ಲಿ ಓಲಾಡುತ್ತಿರುವ ರಾಜ್ಯ ಬಿಜೆಪಿ ಎಂಬ ನಾವೆಯ ಚುಕ್ಕಾಣಿಯನ್ನು ಮತ್ತೆ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಭಾವಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತನ್ನ ಕೈಗೆ ತೆಗೆದುಕೊಂಡಿದ್ದಾರೆ. ಪ್ರಬಲ ಕಾಂಗ್ರೆಸ್ ಪಕ್ಷವನನ್ನು ಸದನದ ಹೊರಗೆ ಮತ್ತು ಒಳಗೆ ಸಮರ್ಥವಾಗಿ ಎದುರಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲುವಂತಾಗಲು ಬಿಜೆಪಿಗೆ ಸದ್ಯಕ್ಕೆ ಸಮರ್ಥ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷರು ಬೇಕಾಗಿದ್ದಾರೆ.


ಈ ಕಾರಣದಿಂದ ಕಮಲ ಪಕ್ಷದ ಕೇಂದ್ರ ಪ್ರಮುಖರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತುರ್ತಾಗಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಎಸ್.ವೈ ವಿಪಕ್ಷ ನಾಯಕನ ಸ್ಥಾನಕ್ಕೆ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಚಿಸಿರುವ ಎರಡು ಹೆಸರುಗಳು ಸ್ವತಃ ಕೇಂದ್ರ ಬಿಜೆಪಿ ನಾಯಕರನ್ನೇ ಅಚ್ಚರಿಯಲ್ಲಿ ಕೆಡವಿದೆ.


ಪಕ್ಷ ಮತ್ತೆ ರಾಜ್ಯದಲ್ಲಿ ಸಮರ್ಥವಾಗಿ ಬೆಳೆಯಬೇಕಾದ್ರೆ ಇವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಬಿಎಸ್.ವೈ ಕೆಂದ್ರ ನಾಯಕರ ಮನ ಒಲಿಸಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರುಗಳನ್ನು ಬಿ.ಎಸ್.ವೈ ಸೂಚಿಸಿದ್ದು ಈ ಕುರಿತು ಕೇಂದ್ರ ಬಿಜೆಪಿ ನಾಯಕರು ಗಂಭೀರವಾಗಿ ಆಲೋಚಿಸುತ್ತಿದ್ದು ಇವತ್ತು ಅಥವಾ ನಾಳೆಯೊಳಗೆ ಈ ಕುರಿತಾಗಿ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.


ಈ ಹಿಂದೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿದ್ದಾಗ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಅವರು ಬಳಿಕ ನಮೋ 2.0 ಸಂಪುಟದಲ್ಲಿ ಕೇಂದ್ರ ಸಚಿವೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿಪಕ್ಷಗಳನ್ನು ಎದುರಿಸಲು ಮತ್ತು ರಾಜ್ಯಾದ್ಯಂತ ಬಿಜೆಪಿಯನ್ನು ಮರು ಸಂಘಟಿಸಲು ಶೋಭಾ ಅವರ ರಾಜಕೀಯ ಅನುಭವ ಪ್ರಯೋಜವಾಗುತ್ತದೆ ಎಂಬ ವಾದವನ್ನು ಬಿಎಸ್ ವೈ ಬಣ ಮಂಡಿಸುತ್ತಿದೆ. ಇನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರರೂ ಸಹ ಬಿ.ಎಸ್.ವೈ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು ಇವರಿಬ್ಬರಿಗೆ ಕೇಂದ್ರ ನಾಯಕರು ಓಕೆ ಅಂದ್ರೆ ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ವೈ ಬಣದ ಹಿಡಿತ ಮತ್ತೆ ಬಿಗಿಯಾಗಲಿದೆ.

ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

Posted by Vidyamaana on 2023-05-24 12:47:41 |

Share: | | | | |


ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

ಬೆಳ್ತಂಗಡಿ: ಖಡಕ್ ರಾಜಕಾರಣಿ ಎಂದೇ ಖ್ಯಾತಿ ಪಡೆದ ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರರನ್ನು ರಾಜಕೀಯದಲ್ಲಿ ಸಕ್ರೀಯವಾಗಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಖಡಕ್ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದ ವಸಂತ್ ಬಂಗೇರರನ್ನು ಎಂ.ಎಲ್.ಸಿ. ಮಾಡಿ, ಸಚಿವರನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸಿಎಂ ಇಂಗಿತ. ಈ ಮೂಲಕ ಕರಾವಳಿ ರಾಜಕೀಯವನ್ನು ಮತ್ತೆ ಸಕ್ರೀಯಗೊಳಿಸುವುದು ಚಾಣಕ್ಯ ಸಿದ್ದರಾಮಯ್ಯರ ತಂತ್ರ ಎಂದು ಹೇಳಲಾಗಿದೆ.

ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

Posted by Vidyamaana on 2024-02-03 13:35:15 |

Share: | | | | |


ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

ಮುಂಬೈ : ಬಾಲಿವುಡ್​ ನಟಿ, ಮಾದಕ ಚೆಲುವೆ ಪೂನಂ ಪಾಂಡೆ ಸತ್ತಿಲ್ಲ ಬದುಕಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ರಿವೀಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟಿ ಪೂನಂ ಪಾಂಡೆ ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ಬಯಸಿದ್ದು, ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್​ನಿಂದ ನಾನು ಬಳಲುತ್ತಿಲ್ಲ. ಆದರೆ, ದುರಂತವೆಂದರೆ ಈ ರೋಗವನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಸಾವಿರಾರು ಮಹಿಳೆಯರ ಜೀವವನ್ನು ಈ ರೋಗ ಬಲಿ ಪಡೆದುಕೊಂಡಿದೆ.


ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಗಟ್ಟಬಲ್ಲದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳು ಪ್ರಮುಖವಾಗಿದ್ದು, ಈ ಕಾಯಿಲೆಯಿಂದ ಯಾರೂ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳಲು ನಾವು ಎಚ್ಚರದಿಂದಿರಬೇಕು. ವಿಮರ್ಶಾತ್ಮಕ ಅರಿವಿನೊಂದಿಗೆ ಒಬ್ಬರಿಗೊಬ್ಬರು ಜಾಗೃತಿ ಮೂಡಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಿಳೆಯರಿಗೆ ತಿಳಿಸೋಣ ಏನು ಮಾಡಬಹುದೆಂಬುದನ್ನು ಒಟ್ಟಾಗಿ, ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಶ್ರಮಿಸೋಣ ಎಂದು ಹೇಳಿದ್ದಾರೆ.

ಎ.23ರಂದು ಪುತ್ತೂರಿನಲ್ಲಿ ಅಣ್ಣಾಮಲೈ ಹವಾ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ

Posted by Vidyamaana on 2024-04-20 20:54:33 |

Share: | | | | |


ಎ.23ರಂದು ಪುತ್ತೂರಿನಲ್ಲಿ ಅಣ್ಣಾಮಲೈ ಹವಾ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬಿಜೆಪಿ ಚುನಾವಣಾ ಸಂಯೋಜಕರಾದ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಅಂದು ಬೆಳಗ್ಗೆ ೮.೩೦ಕ್ಕೆ ಅಣ್ಣಾ ಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ೧೦.೩೦ಕ್ಕೆ ಪುತ್ತೂರಿಗೆ ಬರಲಿದ್ದುö, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಾದ ಬಳಿಕ  ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.

ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

Posted by Vidyamaana on 2023-06-30 11:45:49 |

Share: | | | | |


ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಶುಕ್ರವಾರ ಆದೇಶ ನೀಡಿದೆ.

24 ಗಂಟೆಗಳಿಗೂ ಹೆಚ್ಚು ಕಾಲ ನಡೆದ ದಾಳಿ, ಶೋಧ ಕಾರ್ಯದ ವೇಳೆ ತಹಶೀಲ್ದಾರ್ ಅವರ ನಿವಾಸ ಮತ್ತು ಇತರ ಕಡೆಗಳಲ್ಲಿ ಆಸ್ತಿಗಳಲ್ಲಿ ಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಗುರುವಾರ ಅವರನ್ನು ಬಂಧಿಸಿದ್ದರು.

Recent News


Leave a Comment: