ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

Posted by Vidyamaana on 2024-06-09 16:20:13 |

Share: | | | | |


ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜನರಲ್ ವಿ.ಕೆ. ಸಿಂಗ್ ಅವರನ್ನು ಸೌಹಾರ್ದ ಭೇಟಿ ಮಾಡಿದ ಬ್ರಿಜೇಶ್ ಚೌಟ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ.

ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

Posted by Vidyamaana on 2023-07-20 02:17:28 |

Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

ಪುತ್ತೂರು: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಒಡೆದು ಹಾಕಿರುವ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ ಎಂದು ತಿಳಿದುಬಂದಿದೆ.

ಬಪ್ಪಳಿಗೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೊಬೈಲ್ ಕಸಿದು‌ ಹಾನಿಗೊಳಿಸಲಾಗಿದೆ ಎಂದು ನಿಶಾಂತ್ ಆರೋಪಿಸಿದ್ದರು. ಇದನ್ನು ಪತ್ರಕರ್ತರ ಸಂಘಗಳು ಖಂಡಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದವು. ಇದೀಗ ಬಂದ ಮಾಹಿತಿಯಂತೆ, ಮೊಬೈಲ್ ಒಡೆದು‌ ಹಾಕಿದವರು‌ ಹೊಸ ಮೊಬೈಲನ್ನು ನಿಶಾಂತ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು‌ ತಿಳಿದುಬಂದಿದೆ.

ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

Posted by Vidyamaana on 2024-01-09 09:59:52 |

Share: | | | | |


ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

ಶಿವಮೊಗ್ಗ, ಜ 09: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.


ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್​ಲೆಟ್ ಕಡಿಮೆಯಾಗಿತ್ತು. ಆರ್​ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್​ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್​ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.


ಯುವತಿಯಲ್ಲಿ ರಕ್ತದಲ್ಲಿ‌ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್​ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್​ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್​ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್​ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.

ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

Posted by Vidyamaana on 2023-05-02 04:31:44 |

Share: | | | | |


ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತುಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ: ಇಬ್ಬರು ಯುವಕರ ಬಂಧನ

Posted by Vidyamaana on 2024-03-14 20:42:51 |

Share: | | | | |


ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ: ಇಬ್ಬರು ಯುವಕರ ಬಂಧನ

ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ.


ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು, ಇದೀಗ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯುವತಿ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸಿಎಂ ಜನತಾ ದರ್ಶನ ಕ್ಕೆ ಭರ್ಜರಿ ರೆಸ್ಪಾನ್ಸ್: 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನಗಳ ಡೆಡ್ ಲೈನ್

Posted by Vidyamaana on 2023-11-28 07:05:17 |

Share: | | | | |


ಸಿಎಂ ಜನತಾ ದರ್ಶನ ಕ್ಕೆ ಭರ್ಜರಿ ರೆಸ್ಪಾನ್ಸ್: 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನಗಳ ಡೆಡ್ ಲೈನ್

ಬೆಂಗಳೂರು : ಸೋಮವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 3,812 ಅರ್ಜಿಗಳು ಸಲ್ಲಿಕೆಯಾಗಿದ್ದಾವೆ. ಇವುಗಳ ವಿಲೇವಾರಿಗೆ ಸಿಎಂ ಸಿದ್ಧರಾಮಯ್ಯ 15 ದಿನಗಳ ಡೆಡ್ ಲೈನ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ.ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ.


ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.


ಸ್ಛಳದಲ್ಲೇ ಪರಿಹಾರ


ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಲಾಗಿತ್ತು. ಆದರೆ, ಇದನ್ನುಪಾವತಿಸುವಷ್ಟು ಆರ್ಥಿಕ ಚೈತನ್ಯ ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗಿರಲಿಲ್ಲ. ಹಾಗಂತ, ಶಾಲೆಗೆ ಅತಿ ಅಗತ್ಯವಾಗಿದ್ದ ಸಿ.ಎ. ನಿವೇಶನವನ್ನು ಕೈಬಿಡುವಂತೆಯೂ ಇರಲಿಲ್ಲ. ಇದಕ್ಕೇನು ಪರಿಹಾರ? ಎಂದು ಯೋಚಿಸಿದ ಶಾಲಾ ಆಡಳಿತ ಮಂಡಳಿ ಇಂದು ಜನತಾ ದರ್ಶನಕ್ಕೆ ಬಂದು ತಮ್ಮ ಅಹವಾಲು ಸಲ್ಲಿಸಿತು. ಜನಪರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ ಕೂಡಲೇ ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವ ಮೂಲಕ ಅಂಧಮಕ್ಕಳ ಬದುಕಿಗೆ ನೆಮ್ಮದಿಯ ಸೂರು ಕಲ್ಪಿಸಿದರು. ಇಂತಹ ಪ್ರಕರಣ ಸೇರಿದಂತೆ ಅನೇಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿ ಸಿಎಂ ಸಿದ್ಧರಾಮಯ್ಯ ಸ್ಪಂದಿಸಿದರು.


ಒಟ್ಟಾರೆ ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜನರಿಂದಲೇ ನೇರವಾಗಿ ಅಹವಾಲುಸ್ವೀಕರಿಸಿ ಸ್ಪಂದಿಸುವ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದರು. ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಪರಿಹರಿಸುವ ನಿಟ್ಟಿನಲ್ಲಿ ಸ್ಪಂದಿಸಿದರು.



Leave a Comment: