ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2024-03-31 11:00:28 |

Share: | | | | |


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು :ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಮಾ 31ರಂದು ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಚಾಲನೆ ನೀಡಲಾಯಿತು , ಈ ಸಂಧರ್ಭದಲ್ಲಿ ಎಪ್ರಿಲ್ 2ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಮಾಹಿತಿ ನೀಡಲಾಯಿತು .

ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Posted by Vidyamaana on 2023-08-08 11:59:58 |

Share: | | | | |


ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸುಳ್ಯ: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾದ ಮೂಲಕ ಪ್ರತಿಭಟನೆ ನಡೆಯಿತು.ನಿಂತಿಕಲ್ಲಿನಿಂದ ಸುಳ್ಯದವರೆಗೆ ಸುಮಾರು 22 ಕಿ.ಮೀವರೆಗೆ ಕಾಲ್ನಡಿಗೆ ಸಾಗಿ ಸುಳ್ಯದಲ್ಲಿ ಬೃಹತ್ ಸಭೆ ನಡೆಯಿತು.



ಸೌಜನ್ಯ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದರು.



ಬೃಹತ್ ಜಾಥಾದಲ್ಲಿ ಪಕ್ಷ, ಜಾತಿ, ಧರ್ಮ ಮರೆತು ಹೋರಾಟ ನಡೆಸಲಾಗುತ್ತಿದೆ. ಸುಳ್ಯದ ಗೌಡರ ಸಂಘ ಸೇರಿ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದಾರೆ.


ಇತ್ತೀಚೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರ ನಡೆದಿದ್ದ ಬೃಹತ್ ಸಮಾವೇಶ ನಡೆಸಲಾಗಿತ್ತು. ಸಮಾವೇಶದಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು. ಈ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

Posted by Vidyamaana on 2024-06-15 15:55:40 |

Share: | | | | |


ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

ಪುತ್ತೂರು : ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ (28) ರವರ ಪತ್ನಿಯಾದ ದೀಪಿಕಾ(23) ನಾಪತ್ತೆಯಾದವರು.

ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ.. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ರೇಡ್ : ದಾಳಿ ವೇಳೆ 156 ನಕಲಿ ವೈದ್ಯರು ಪತ್ತೆ

Posted by Vidyamaana on 2024-01-11 12:16:23 |

Share: | | | | |


ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ರೇಡ್ : ದಾಳಿ ವೇಳೆ 156 ನಕಲಿ ವೈದ್ಯರು ಪತ್ತೆ

ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು.ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.


ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ ಮುಂದಾಗಿದ್ದರು. ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.ಅಕ್ರಮ ಸ್ಕ್ಯಾನಿಕ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್‌ಓ ಹಾಗೂ ಸಿ ಹೆಚ್ ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಎಲ್ಲ ಸ್ಕ್ಯಾನಿಂಗ್ ಸೆಂಟರ್ ಮೇಲ್ ದಾಳಿ ಪರಿಶೀಲನೆ ನಡೆಸಿ ಈಗಾಗಲೇ ಅಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿವೆ.ಜೊತೆಗೆ ಅಧಿಕಾರಿಗಳ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಒಟ್ಟು 583 ಸ್ಕ್ಯಾನಿಕ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ತೀರ್ಥಲತಾ ನಾಪತ್ತೆ

Posted by Vidyamaana on 2023-08-02 10:49:33 |

Share: | | | | |


ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ   ತೀರ್ಥಲತಾ ನಾಪತ್ತೆ

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.


ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

Posted by Vidyamaana on 2023-10-28 16:29:10 |

Share: | | | | |


ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಗಳನ್ನು ದಾಖಲಿಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಕೂಡಾ ಕೇಸ್ ಹಾಕಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.


ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ನಳೀನ್ ಕುಮಾರ್ ಕಟೀಲ್, ಜನಪ್ರತಿನಿಧಿಗಳ ಮೇಲೆ ಕೂಡಾ ಕೇಸ್ ಹಾಕಿ ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದ್ದು, ಪೊಲೀಸ್ ಇಲಾಖೆಯ ಮೂಲಕ ಸರ್ಕಾರ ಎಫ್ ಐ ಆರ್ ದಾಖಲಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕ ಹರೀಶ್ ಪೂಂಜಾ ಮೇಲೆ ಒಂದೇ ತಿಂಗಳಿನಲ್ಲಿ ಎರಡನೇ ಎಫ್‌ಐ ಆರ್ ದಾಖಲಿಸಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ಗಳನ್ನು ದಾಖಲಿಸುತ್ತಿರುವುದು ಹೆಚ್ಚಾಗುತ್ತಿದ್ದು,ರಾಷ್ಟ್ರ ವಿರೋಧಿಗಳ ಮೇಲೆ ಒಂದೂ ಕೇಸ್ ದಾಖಲಾಗುತ್ತಿಲ್ಲ ಎಂದು ಕಟೀಲ್  ಟೀಕಿಸಿದಾರೆ



Leave a Comment: