ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

Posted by Vidyamaana on 2024-06-28 19:01:49 |

Share: | | | | |


ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ.

ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪಪ್ಪಿದ್ದಾರೆ ಎಂದು ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ.ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

Posted by Vidyamaana on 2024-01-31 16:02:09 |

Share: | | | | |


ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಮಸೀದಿಯ ಕೆಳಗಿರುವ 10 ಮೊಹರು ನೆಲಮಾಳಿಗೆಗಳಲ್ಲಿ ಹಿಂದೂ ಪೂಜೆಗಳು ಇನ್ನು 7 ದಿನಗಳಲ್ಲಿ ಪ್ರಾರಂಭವಾಗಲಿವೆ. ಇದಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

“ಹಿಂದೂ ಕಡೆಯವರು ‘ವ್ಯಾಸ್ ಕಾ ತೆಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದಾರೆ. ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಿದೆ” ಎಂದು ಹಿಂದೂ ಪರ ಅರ್ಜಿದಾರರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪುರಾತತ್ವ ಇಲಾಖೆ ಮಸೀದಿಯಲ್ಲಿ ಸರ್ವೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು.

ಶಾಸಕರ ಇಂದಿನ ಕಾರ್ಯಕ್ರಮ ಜು 29

Posted by Vidyamaana on 2023-07-28 23:15:14 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 29

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 26 ರಂದು


💥 ಮಧ್ಯಾಹ್ನ 2.30 ಕ್ಕೆ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ‌ಶೇ.100 ಅಂಕಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವುದು


 

💥 ಮಧ್ಯಾಹ್ನ 3 ಗಂಟೆಗೆ ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ


💥 ಸಂಜೆ 7.30 ಕ್ಕೆ‌ಮನಿಷಾ ಸಭಾಂಗಣದಲ್ಲಿ ರೋಟರೀಕ್ಲಬ್ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ

Posted by Vidyamaana on 2024-01-07 10:56:52 |

Share: | | | | |


ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ

ಬೆಂಗಳೂರು : ಬೆಂಗಳೂರು ನಗರದ ಓಲ್ಡ್ ಮದ್ರಾಸ್ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ನಿರ್ವಾಣ ಸ್ಪಾ ಮೇಲೇ ಸಿಸಿಬಿ ದಾಳಿ ನಡೆಸಿದ್ದರಿಂದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ.ಸ್ಪಾ ಮಾಲೀಕ ಅನೀಲ್ ಎಂದು ಹೇಳಲಾಗುತ್ತಿದ್ದು, ಬೇರೆ ರಾಜ್ಯದಿಂದ ಆಗಮಿಸಿ ಇಲ್ಲಿ ಸ್ಪಾ ನಡೆಸುತ್ತಿದ್ದ, ಆದರೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದದ್ದು ಬಯಲಾಗಿದೆ.ಆರೋಪಿಯೂ ಹೊರ ರಾಜ್ಯ ವಿದೇಶದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ.


ಸಿಸಿಬಿ ಮಹಿಳಾ ಸಂರಕ್ಷಣಾ ದಳವು ದಾಳಿ ನಡೆಸಿದ ವೇಳೆ ಒಟ್ಟು 44 ಮಹಿಳೆಯರನ್ನು ಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಹುಮಡಿ ಕಟ್ಟಡದ 1 ಮತ್ತು 6ನೇ ಫ್ಲೋರ್ ನಲ್ಲಿ ಈ ದಂದೆ ನಡೆಯುತ್ತಿತ್ತು.


ಹೊರ ರಾಜ್ಯ ಹಾಗೂ ದೇಶದಿಂದ ಯುವತಿಯರನ್ನು ಕರೆದೊಯ್ದು ಆರೋಪಿ ವೇಶ್ಯಾವಾಟಿಕೆಯಲ್ಲಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಯನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

Posted by Vidyamaana on 2023-07-01 10:00:17 |

Share: | | | | |


ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಶನಿವಾರ ಮಧ್ಯಾಹ್ನ ವರದಿಯಾಗಿದೆ.

ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ ದಂಪತಿ ಮಕ್ಕಳಾದ ನವಾಝ್ ರಹ್ಮಾನ್(22) ಮತ್ತು ನಾದಿಲ್ (17) ಮೃತಪಟ್ಟ ಸಹೋದರರು.

ಸ್ಥಳೀಯರು ಇಬ್ಬರನ್ನು ಮೇಲಕ್ಕೆತ್ತಿ ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.ಈದ್ ಆಚರಣೆಗೆಂದು ಅಜ್ಜಿ ಮನೆಗೆ ಬಂದಿದ್ದ ಸಹೋದರರಿಬ್ಬರು ಸ್ನಾನ ಮಾಡಲು ಕೆರೆಗೆ ಹೋಗಿದ್ದು, ದುರಂತ ಸಂಭವಿಸಿದೆ.

ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿ ಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಬೆಂಗಳೂರಿನಲ್ಲಿ ಆತ್ಮಹತ್ಯೆ

Posted by Vidyamaana on 2023-10-26 20:47:47 |

Share: | | | | |


ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಬೆಂಗಳೂರು, ಅ.26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.


ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್‍ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್‍ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.


ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ, 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ

Recent News


Leave a Comment: