ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

Posted by Vidyamaana on 2024-04-20 20:48:45 |

Share: | | | | |


ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ಪುತ್ತೂರು:  ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಎ.೨೧ರಿಂದ ೨೮ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಎ.೨೧ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಪಾಕ ಶಾಲೆ ಉದ್ಘಾಟನೆ, ಲಾಕರ್ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ, ಅತಿಥಿ ಕೊಠಡಿ ಉದ್ಘಾಟನೆ, ಮುಖ್ಯ ವೇದಿಕೆ ಉದ್ಘಾಟನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಕ್ಷೇತ್ರದ ತಂತ್ರಿಗಳು ಹಾಗೂ ಋತ್ವಿಜರಿಗೆ ಸ್ವಾಗತ, ನಂತರ ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ವೈದಿಕ ತಾಂತ್ರಿಕ ವಿಧಿ ವಿಧಾನಗಳು ಪ್ರಾರಂಭಗೊಳ್ಳಲಿದೆ.

ಧಾರ್ಮಿಕ ಉಪನ್ಯಾಸಗಳು

ಎ.೨೧ ರಂದು ಸಂಜೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎ.೨೨ ರಂದು ಸಂಜೆ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಎ.೨೩ ರಂದು ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಸ್ವಾಮೀಜಿಯವರು, ಎ.೨೪ ರಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಎ.೨೫ ರಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಗಣ್ಯರ ಉಪಸ್ಥಿತಿಯಲ್ಲಿ ಆಶೀರ್ವಚನ ನೀಡಲಿದ್ದಾರೆ. ಎ.೨೬ ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕೆಮ್ಮಿ೦ಜೆ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

Posted by Vidyamaana on 2024-06-29 13:06:13 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು

Posted by Vidyamaana on 2023-09-20 21:06:47 |

Share: | | | | |


ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು

ವಿಜಯನಗರ: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ. 


ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ. 


ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ‌ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು,  ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ. 


ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.

ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್‌ ಪೆನ್‌ ಕೆಮರಾ ನಿಷೇಧ

Posted by Vidyamaana on 2023-05-10 02:11:21 |

Share: | | | | |


ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್‌ ಪೆನ್‌ ಕೆಮರಾ ನಿಷೇಧ

ಮಂಗಳೂರು: ಮೊಬೈಲ್‌ ಫೋನ್‌, ಪೆನ್‌ ಕೆಮರಾ, ವಿವಿಧ ಬಗೆಯ ಆಯುಧ, ನೀರಿನ ಬಾಟಲ್‌, ಆಹಾರ ಸಾಮಗ್ರಿಗಳು ಹಾಗೂ ಸ್ಫೋಟಕ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳಾದ  ರವಿ ಕುಮಾರ್‌ ಅವರು ತಿಳಿಸಿದ್ದಾರೆ ಚುನಾವಣೆ ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ ವೀಕ್ಷಕರು, ಭದ್ರತಾ ಸಿಬಂದಿ ನೇಮಿಸಲಾಗಿದೆ. ಪ್ರಿಸೈಡಿಂಗ್‌ ಆಫಿಸರ್‌, ಅಸಿಸ್ಟೆಂಟ್‌ ಪ್ರಿಸೈಡಿಂಗ್‌ ಆಫೀಸರ್‌, ಮತಗಟ್ಟೆ ಅಧಿಕಾರಿ ಗಳು ಹಾಗೂ ಡಿ ದರ್ಜೆ ನೌಕರ ರನ್ನು ನೇಮಿಸಲಾಗಿದೆ.ವಿಶೇಷ ಚೇತನ ಮತದಾರರಿ ಗಾಗಿ ಗಾಲಿ ಕುರ್ಚಿ, ಭೂತ ಕನ್ನಡಿ ಬ್ರೈಲ್‌ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ರ್‍ಯಾಂಪ್‌, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

Posted by Vidyamaana on 2024-05-19 17:35:19 |

Share: | | | | |


ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು.ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮಂಗಳೂರಿನಲ್ಲಿ ಶಿಲ್ಪಾಸ್ ಹೆಲ್ತ್ ಕೇರ್ ಶುಭಾರಂಭ

Posted by Vidyamaana on 2023-02-22 17:21:42 |

Share: | | | | |


ಮಂಗಳೂರಿನಲ್ಲಿ ಶಿಲ್ಪಾಸ್ ಹೆಲ್ತ್ ಕೇರ್  ಶುಭಾರಂಭ

ಮಂಗಳೂರು, ಫೆ.22; ನಗರದ ರಥಬೀದಿಯ ಹೂವಿನ ಮಾರುಕಟ್ಟೆಯ ಎದುರಿನ ಅನಂತೇಶ್ ಕಟ್ಟಡದ ಒಂದನೇ ಮಹಡಿಯಲ್ಲಿ  ಶಿಲ್ಪಾಸ್ ಹೆಲ್ತ್ ಕೇರ್ ಉದ್ಘಾಟನಾ ಸಮಾರಂಭ ಬುಧವಾರ  ನೆರವೇರಿತು . ಮಾಸ್ಟರ್ ಸಮನ್ವಯ್ ಉರುಬೈಲು ರಿಬ್ಬನ್ ಕತ್ತರಿಸುವ  ಮೂಲಕ   ಉದ್ಘಾಟಿಸಿದರು.   ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಪಿ. ಯಸ್ ದೀಪ ಬೆಳಗಿಸಿ ಶುಭ ಕೋರಿದರು.

ಮಂಗಳೂರು ಮಹಾ ನಗರ ಪಾಲಿಕೆ ಯ ಉಪ ಮೇಯರ್ ಪೂರ್ಣಿಮಾ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,  C. A . ಜಗನ್ನಾಥ್ ಕಾಮತ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಶುಭ ಕೋರಿದರು.

ಸಮಾರಂಭದಲ್ಲಿ  ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಡಾ ಯು. ಪಿ. ಶಿವಾನಂದ, ಶೋಭಾ ಶಿವಾನಂದ, ಕಮಲ ಮುಡೂರು, ಸುಬ್ರಾಯ ಶೆಣೈ, ಶಾಂತಿ ಶೆಣೈ, ವಿಶ್ವೇಶ್ವರಯ್ಯ ಟೆಕ್ನಿಕಲ್ ಯುನಿವರ್ಸಿಟಿಯ  ಗವರ್ನಿಂಗ್ ಕೌನ್ಸಿಲ್ ಸದಸ್ಯ  ಡಾ. ಉಜ್ವಲ್ ಉರುಬೈಲು, ಸುಜಿತ್ ರೈ ಪಾಲ್ತಾಡು, ಶಿಲ್ಪಾಸ್ ಹೆಲ್ತ್ ಕೇರ್ ನಲ್ಲಿ ಮುಂದಿನ ದಿನಗಳಲ್ಲಿ ಲಭ್ಯರಿರುವ  ಎ. ಜೆ.ಆಸ್ಪತ್ರೆಯ ನ್ಯೂರೋಲೋಜಿಸ್ಟ್  ಡಾ. ಪ್ರದ್ಯುಮ್ನ ಭಂಡಾರಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ದ ಕಾರ್ಯಕಾರಿ ಸಮಿತಿ ಸದಸ್ಯ  ಪಿ. ಬಿ. ಹರೀಶ್ ರೈ,  ದ.ಕ .ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್ ಮೊದಲಾದವರು ಉಪಸ್ಥಿತರಿದ್ದರು. ಶಿಲ್ಪಾಸ್ ಹೆಲ್ತ್ ಕೇರ್ ನ ಡಾ. ಶಿಲ್ಪಾ ಶೆಣೈ ಸ್ವಾಗತಿಸಿ ವಂದಿಸಿದರು, ಶ್ರೇಯಸ್ ಊರುಬೈಲು ಸಹಕರಿಸಿದರು, ಭಾಸ್ಕರ್ ರೈ ಕಟ್ಟ ನಿರೂಪಿಸಿದರು.



Leave a Comment: