ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


ಇಂದು ಕರೆಂಟ್ ಇಲ್ಲ

Posted by Vidyamaana on 2024-02-29 04:44:20 |

Share: | | | | |


ಇಂದು ಕರೆಂಟ್ ಇಲ್ಲ

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಉಪ್ಪಿನಂಗಡಿ ವಾಟರ್‌ಸಪ್ಪೆ ಮತ್ತು ಕಾಂಚನ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕಮ್ಮಾರ ಫೀಡರ್‌ನಲ್ಲಿ ಫೆ.29 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರ ಮತ್ತು 110/33/11ಕೆವಿ ಕಣ್ಣೀರಿ ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಕ್ಯೂಲ, ನೆಕ್ಕಿಲಾಡಿ ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕುಂಬ್ರ ಬದ್ರಿಯಾ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Posted by Vidyamaana on 2023-08-15 14:44:58 |

Share: | | | | |


ಕುಂಬ್ರ ಬದ್ರಿಯಾ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು; ಕುಂಬ್ರ ಬದ್ರಿಯಾ ನಗರ ಬದ್ರಿಯಾ ಜುಮಾ ಮಸ್ಜಿದ್ ಹಾಗೂ ಮದ್ರಸ ವಠಾರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಮಾತ್ ಅಧ್ಯಕ್ಷ ಉಸ್ಮಾನ್ ಮುಸ್ಲಿಯಾರ್ ದ್ವಜಾರೀಹಣಗೈದರು.‌ಖತೀಬರಾದ‌ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು.‌ಜಮಾತ್ ಕಾರ್ಯದರ್ಶಿ ಅದ್ರಾಮ ಕೊಯಿಲ, ಕೋಶಾಧಿಕಾರಿ ಇಸ್ಮಾಯಿಲ್ ಬದ್ರಿಯಾನಗರ, ಜಮಾತ್ ಮಾಜಿ ಕಾರ್ಯದರ್ಶಿ ಇಸ್ಮಾಯಿಲ್ ಕೋಳಿಗದ್ದೆ, ಫಾರೂಕ್ ಮಗಿರೆ, ಆದು ಕೊಯಿಲ, ಸಿಎಂ‌ಅಬ್ದುಲ್ ರಹಿಮಾನ್, ರಝಾಕ್ ಆಟೋ ಸಾಂತಿಯಡಿ,ಸಿರಾಜ್ ಬದ್ರಿಯಾನಗರ ,ಸಾದಿಕ್ ಮಗಿರೆ ಮತ್ತಿತರರು ಉಪಸ್ಥಿತರಿದ್ದರು. ಉಸ್ತಾದ್ ಖಲೀಲ್ ಸ ಅದಿ ಸ್ವಾಗತಿಸಿ, ಮುಅಲ್ಲಿಂ ವಂದಿಸಿದರು.

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

Posted by Vidyamaana on 2024-02-11 21:30:15 |

Share: | | | | |


ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಫೆ.11: ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ.


ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.


1.ಧರ್ಮಶೀಲಾ ಗುಪ್ತಾ: ಬಿಹಾರ

2.ಡಾ.ಭೀಮ್ ಸಿಂಗ್: ಬಿಹಾರ

3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್

4.ಸುಭಾಷ್ ಬರಲಾ: ಹರಿಯಾಣ

5.ನಾರಾಯಾಣ ಭಾಂಡಗೆ: ಕರ್ನಾಟಕ

6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ

7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ

8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ

9.ಸಾಧನಾ ಸಿಂಗ್: ಉತ್ತರ ಪ್ರದೇಶ

10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ

11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ

12.ನವೀನ್ ಜೈನ್: ಉತ್ತರ ಪ್ರದೇಶ

13.ಮಹೇಂದ್ರ ಭಟ್: ಉತ್ತರಾಖಂಡ್

14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಕ್ರಿದ್ ಸಡಗರ

Posted by Vidyamaana on 2024-06-17 21:21:40 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಕ್ರಿದ್ ಸಡಗರ

ಪುತ್ತೂರು : ಈದ್-ಉಲ್-ಅಝ್‌ಹಾ ಬಕ್ರಿದ್ ಹಬ್ಬವನ್ನು ಜಿಲ್ಲೆಯಾದ್ಯಂತೆ ಸಡಗರದಿಂದ ಆಚರಿಸಲಾಯಿತು 

ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿ, ಈದ್ಗಾಗಳಲ್ಲಿ ನಡೆದ ಸಾಮೂಹಿಕ ನಮಾಜ್‌ ಭಕ್ತಿ-ಭಾವದ ಅಲೆಯನ್ನು ಎಬ್ಬಿಸಿತು.

ಎಲ್ಲೂ ಹೇಳದ ತನ್ನ ಎಂಗೇಜ್ಮೆಂಟ್ ರಿಂಗ್ ಕಥೆ ಬಿಚ್ಚಿಟ್ಟ ನಟಿ ಪ್ರಿಯಾಮಣಿ

Posted by Vidyamaana on 2024-02-22 17:43:09 |

Share: | | | | |


ಎಲ್ಲೂ ಹೇಳದ ತನ್ನ ಎಂಗೇಜ್ಮೆಂಟ್ ರಿಂಗ್ ಕಥೆ ಬಿಚ್ಚಿಟ್ಟ ನಟಿ ಪ್ರಿಯಾಮಣಿ

ಪುತ್ತೂರು: ಚಿನ್ನಾಭರಣ ಹಾಗೂ ಡೈಮಂಡ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್’ನ 10ನೇ ಮಳಿಗೆ ಪುತ್ತೂರಿನ ಏಳ್ಮುಡಿಯಲ್ಲಿ ಫೆ. 22ರಂದು ಉದ್ಘಾಟನೆಗೊಂಡಿತು.

ಮಳಿಗೆ ಉದ್ಘಾಟಿಸಿ ಮಾತನಾಡಿದ ಬಹುಭಾಷಾ ತಾರೆ ಪ್ರಿಯಾಮಣಿ ಅವರು, 6 ವರ್ಷಗಳ ಹಿಂದೆ ತನ್ನ ಗಂಡನ ಜೊತೆ ಖರೀದಿಸಿದ ತನ್ನ ಎಂಗೇಜ್ಮೆಂಟ್ ರಿಂಗಿನ ಕಥೆಯನ್ನು ಬಿಚ್ಚಿಟ್ಟರು.

ಇದುವರೆಗೆ ತಾನು ಎಲ್ಲೂ ಈ ವಿಚಾರವನ್ನು ಹೇಳಿಕೊಂಡಿರಲಿಲ್ಲ. ಇದೀಗ ಮೊದಲ ಬಾರಿಗೆ ಹೇಳುತ್ತಿದ್ದೇನೆ. 6 ವರ್ಷಗಳ ಹಿಂದೆ ನನ್ನ ಗಂಡನ ಜೊತೆ ಎಂಗೇಜ್ಮೆಂಟ್ ರಿಂಗ್ ಖರೀದಿಸಿದ್ದು, ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್’ನಲ್ಲಿ. ಈಗಲೂ ಅದೇ ರಿಂಗನ್ನು ನಾನು ಧರಿಸಿಕೊಂಡಿದ್ದೇನೆ ಎಂದು ಹೇಳಿದರು.

ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್ ಚಿನ್ನಾಭರಣಕ್ಕೆ ಹೆಸರುವಾಸಿ. ಇದೀಗ 10ನೇ ಮಳಿಗೆ ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ. ಇದು ಇನ್ನಷ್ಟು ಅಭಿವೃದ್ಧಿಯಾಗಿ 100ನೇ ಮಳಿಗೆ ತೆರೆಯುವಂತಾಗಲಿ ಎಂದು ಶುಭಹಾರೈಸಿದರು.

ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಎಸ್.ಡಿ.ಪಿ.ಐ. ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಮೌಂಟೇನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹಮದ್ ಹಾಜಿ ಆಕರ್ಷಣ್, ಸುದಾನ ವಸತಿಯುತ ಶಾಲಾ ಸಂಚಾಲಕ ರೆವರೆಂಡ್ ವಿಜಯ್ ಹಾರ್ವಿನ್, ಲಯನ್ಸ್ ಜಿಲ್ಲಾ 317ಡಿ ಲಿಯೋ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ ಕಾವು, ಕಾವು ಹೇಮನಾಥ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ, ಅಶ್ರಫ್ ಕಲ್ಲೇಗ, ಶಕೂರ್ ಹಾಜಿ, ನೂರುದ್ದೀನ್ ಸಾಲ್ಮರ, ಇಬ್ರಾಹಿಂ ಗೋಳಿಕಟ್ಟೆ, ಟಿ.ಎಂ. ಶಹೀದ್ ಮೊದಲಾದವರು ಶುಭಹಾರೈಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಬ್ದುಲ್ ರಹೂಫ್, ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹೀಮ್, ಜನರಲ್ ಮ್ಯಾನೇಜರ್ ಉಣ್ಣಿತ್ತನ್, ಬ್ರಾಂಚ್ ಮ್ಯಾನೇಜರ್ ಕೆ.ಎಸ್. ಮುಸ್ತಫಾ ಕಕ್ಕಿಂಜೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭಯೋತ್ಪಾದನ ಸಂಘಟನೆ ಜೊತೆ ಸಂಪರ್ಕ ಆರೋಪ -ಡಿ 8 ರಂದು ಬಜರಂಗದಳದಿಂದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು

Posted by Vidyamaana on 2023-12-08 04:40:26 |

Share: | | | | |


ಭಯೋತ್ಪಾದನ ಸಂಘಟನೆ ಜೊತೆ ಸಂಪರ್ಕ ಆರೋಪ -ಡಿ 8 ರಂದು ಬಜರಂಗದಳದಿಂದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು

ಪುತ್ತೂರು: ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡು ಅವರುಗಳ ನೇತೃತ್ವದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದನ್ನು ಬಜರಂಗದಳ ಖಂಡಿಸುತ್ತದೆಯಲ್ಲದೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ ತಿಳಿಸಿದ್ದಾರೆ.ಮುಖ್ಯಮಂತ್ರಿಯವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಮುಸಲ್ಮಾನ ಸಮಾಜಕ್ಕೆ ಹತ್ತು ಸಾವಿರ ಕೋಟಿ ಹಣವನ್ನು ಅನುದಾನ ನೀಡುತ್ತೇನೆಂದು ಹೇಳಿದ್ದು ಕರ್ನಾಟಕದ ಮುಖ್ಯಮಂತ್ರಿ ಭಯೋತ್ಪಾದನೆಗೆ ಹಣಕಾಸು ವ್ಯವಸ್ಥೆ ಮಾಡುವ ವ್ಯಕ್ತಿಯೇ ಎಂದು ಸಂಶಯ ವ್ಯಕ್ತವಾಗುತ್ತಿದೆ. ಮತ್ತು ನಮ್ಮ ತೆರಿಗೆ ಹಣವನ್ನು ಈ ರೀತಿ ತುಷ್ಟಿಕರಣಕ್ಕೋಸ್ಕರ ಮಾತನಾಡುವುದು,ಅನುದಾನ ಘೋಷಣೆ ಮಾಡುವುದು ಬಹುಸಂಖ್ಯಾತ ಹಿಂದುಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಘಟನೆ ಡಿ.8 ರಂದು ರಾಜ್ಯಪಾಲರ ಬಳಿ ದೂರುನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಮಾಡಿ,ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.



Leave a Comment: