ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ

Posted by Vidyamaana on 2023-12-20 17:23:38 |

Share: | | | | |


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ‌. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ  ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ.  ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

ಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್ ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು ಜನ ವಶಕ್ಕೆ.

Posted by Vidyamaana on 2023-02-07 15:06:22 |

Share: | | | | |


ಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್  ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು ಜನ ವಶಕ್ಕೆ.

ಬೆಳ್ತಂಗಡಿ : ಉಜಿರೆ ಎಂ.ಎಸ್.ಎಸ್ ಲಾಡ್ಜ್ ಮೇಲೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ನೇತೃತ್ವದಲ್ಲಿ ತಂಡದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.ಉಜಿರೆ ಚಾರ್ಮಾಡಿ ರಸ್ತೆಯಲ್ಲಿರುವ ಸುರೇಶ್ ಪೂಜಾರಿ ಎಂಬಾತ ಬಾಡಿಗೆ ಪಡೆದ ಎಮ್.ಎಸ್.ಎಸ್ ಲಾಡ್ಜ್ ಮೇಲೆ ಫೆ.7 ರಂದು ಸಂಜೆ ದಾಳಿ ವೇಳೆ ದಾಖಲೆಗಳಿಲ್ಲದೆ ರೂಂಗಳಲ್ಲಿ ಐದು ಮಂದಿ ಯುವತಿಯರನ್ನು ಮತ್ತು ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಬೇಕಾಗಿದೆ.

ಉಳ್ಳಾಲ :ಸೇವಂತಿಗುಡ್ಡೆ ನಿವಾಸಿ ಮಾಜಿ ರೌಡಿ ಶಮೀರ್ ನೇಣಿಗೆ ಶರಣು

Posted by Vidyamaana on 2023-10-17 16:51:05 |

Share: | | | | |


ಉಳ್ಳಾಲ :ಸೇವಂತಿಗುಡ್ಡೆ ನಿವಾಸಿ  ಮಾಜಿ ರೌಡಿ ಶಮೀರ್ ನೇಣಿಗೆ ಶರಣು

ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.


ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ‌ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ. 


ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.




ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ‌ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.


ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.

ಪುತ್ತೂರು : ಸ್ವಾತಂತ್ರ್ಯೋತ್ಸವಕ್ಕೆ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶ!

Posted by Vidyamaana on 2024-08-13 05:45:22 |

Share: | | | | |


ಪುತ್ತೂರು : ಸ್ವಾತಂತ್ರ್ಯೋತ್ಸವಕ್ಕೆ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶ!

ಪುತ್ತೂರು : ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದ್ದು, ಪ್ಲಾಸ್ಟಿಕ್ ನಿಂದ ತಯಾರಿಸಲಾದ ರಾಷ್ಟ್ರಧ್ವಜ ಹಾಗೂ ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶಿಸಿದೆ.


ಸರ್ಕಾರದ ಆದೇಶದಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ನಿಂದ ತಯಾರಾದಂತಹ ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ (Single Use Plastic-SUP) ಉತ್ಪನ್ನ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆಯಿಂದ ಆದೇಶ ಹೊರಡಿಸಲಾಗಿದೆ.

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

Posted by Vidyamaana on 2024-08-12 07:05:50 |

Share: | | | | |


ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ(ಆಗಸ್ಟ್ 11) ವೇಳೆ ನಡೆದಿದೆ.

ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

ಡಾಲರ್ ಎದುರು ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Posted by Vidyamaana on 2023-09-08 11:45:10 |

Share: | | | | |


ಡಾಲರ್ ಎದುರು ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ದೆಹಲಿ: ಅಮೆರಿಕದ ಡಾಲರ್ ಎದುರು ರುಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದ್ದು ಅ೦ದಾಜು 83.14 ರು. ಆಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಹಾಗೂ ಅಮೆರಿಕದ ಡಾಲರ್ ಕರೆನ್ಸಿ ಬಲಿಷ್ಠಗೊಂಡಿದ್ದುದೇ ರುಪಾಯಿ ಮೌಲ್ಯ ಕುಸಿತಕ್ಕೆ ಕಾರಣವೆನ್ನಲಾಗಿದೆ. ಅಮೆರಿಕ ಡಾಲರ್ ಎದುರು ರುಪಾಯಿ ಮೌಲ್ಯವು ಗುರುವಾರದ ಆರು ತಿಂಗಳುಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ವಿದೇಶಿ ವಿನಿಮಯಫಾರೆಕ್ಸ್) ವರ್ತಕರು ಹೇಳಿದ್ದಾರೆ. ದಿನದ ವಹಿವಾಟಿನ ಆರಂಭದಲ್ಲಿ ಅಂತ‌ ಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ಎದುರು ರುಪಾಯಿ ಕರೆನ್ಸಿಯು 83.08ಕ್ಕೆ ಆಗಿದ್ದು, ದಿನದ ವಹಿವಾಟಿನ ಅಂತ್ಯಕ್ಕೆ 83.18ಕ್ಕೆ ಕುಸಿಯಿತು ಎಂದು ಫಾರೆಕ್ಸ್ ಮೂಲಗಳು ತಿಳಿಸಿವೆ. ಭಾರತೀಯ ಕರೆನ್ಸಿಯು ಈ ವರ್ಷದ ಆಗಸ್ಟ್ 21ರಂದು 83.13 ರು. ಆಗಿದ್ದುಅದು ಈವರ್ಷದ ಅತ್ಯಧಿಕ ಕುಸಿತವಾಗಿತ್ತು

Recent News


Leave a Comment: