2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಕಡಬ : ಓಮ್ನಿ-ಕ್ರೆಟಾ ಕಾರಿನ ನಡುವೆ ಭೀಕರ ಅಪಘಾತ-ಓರ್ವ ಮೃತ್ಯು

Posted by Vidyamaana on 2023-12-23 15:29:02 |

Share: | | | | |


ಕಡಬ : ಓಮ್ನಿ-ಕ್ರೆಟಾ ಕಾರಿನ ನಡುವೆ ಭೀಕರ ಅಪಘಾತ-ಓರ್ವ ಮೃತ್ಯು

ಕಡಬ : ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ಮಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ.ಹಲವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಬಕ್ರೀದ್ ಹಬ್ಬದ ಹಿನ್ನಲೆ ! ಪುತ್ತೂರು ಸಂತೆ ಖಾಲಿ-ಖಾಲಿ

Posted by Vidyamaana on 2024-06-17 12:59:40 |

Share: | | | | |


ಬಕ್ರೀದ್ ಹಬ್ಬದ ಹಿನ್ನಲೆ ! ಪುತ್ತೂರು ಸಂತೆ ಖಾಲಿ-ಖಾಲಿ

ಪುತ್ತೂರು : ವಾರದ ಮೊದಲ ದಿನ ಅಂದರೆ ಸೋಮವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಪುತ್ತೂರು ಸಂತೆ ನಡೆಯುತ್ತಿದ್ದು, ಇಂದು (ಜೂ.17) ಬಕ್ರೀದ್ ಹಬ್ಬದ ಹಿನ್ನೆಲೆ ಸಂತೆ ಮೈದಾನ ಖಾಲಿ ಖಾಲಿಯಾಗಿದೆ.

ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

Posted by Vidyamaana on 2023-07-07 04:08:07 |

Share: | | | | |


ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಲಾಭ ಪಡೆಯಲು ವ್ಯಕ್ತಿಯೋರ್ವ ಬುರ್ಖಾ ಧರಿಸಿದ ಅನುಮಾನ ವ್ಯಕ್ತವಾಗಿದೆ.


ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬುರ್ಖಾ ಹಾಕಿದ ವ್ಯಕ್ತಿ ಪತ್ತೆಯಾಗಿದ್ದು, ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿರುವ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.


ವೀರಭದ್ರಯ್ಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಹೀಗಾಗಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಆದರೆ ಭಿಕ್ಷಾಟನೆ ಮಾಡುವ ಉದ್ದೇಶದಿಂದಾಗಿ ತಾನು ಬುರ್ಖಾ ಧರಿಸಿದ್ದಾಗಿ ವೀರಭದ್ರಯ್ಯ ಹೇಳಿದ್ದಾನೆ.

ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ಭಿಕ್ಷಾಟನೆಗೆ ಬುರ್ಖಾ ಹಾಕಿರುವುದಾಗಿ ವೀರಭದ್ರಯ್ಯ ಹೇಳಿದ್ದಾನೆ

ಇಂದು (ಜ 18) ವಿದ್ಯುತ್‌ ನಿಲುಗಡೆ

Posted by Vidyamaana on 2024-01-18 07:13:25 |

Share: | | | | |


ಇಂದು (ಜ 18) ವಿದ್ಯುತ್‌ ನಿಲುಗಡೆ

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.18ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಕೊಯಿಲ, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ

Posted by Vidyamaana on 2023-05-27 05:40:33 |

Share: | | | | |


ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ

ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಪುತ್ತೂರು ಶಾಸಕರಾದ ಅಶೋಕ್ ರೈ ರವರು ಪ್ರತಿಕ್ರಿಯಿಸಿದ್ದಾರೆ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಜೊತೆ ಮಾತನಾಡುವುದಾಗಿ ಅವರು ತಿಳಿಸಿದರುಹಿಂದಿನ ಬಿಜೆಪಿ ಸರಕಾರ ಸರಿಯಾದ ರೀತಿ ನೇಮಕಾತಿ ಮಾಡಿಕೊಳ್ಳದೆ ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು ಬಿಜೆಪಿ ಸರಕಾರದ ತಪ್ಪಾಗಿದೆ.

ನಾನು ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಯವರಲ್ಲಿ ಮಾತನಾಡಿದ ಶೀಘ್ರ ಮರು ನೇಮಕಾತಿ ಬಗ್ಗೆ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದರು

ಅಕ್ಕನ ಮನೆಯಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳಿ ತಂಗಿ ಅಂದರ್!

Posted by Vidyamaana on 2024-05-08 07:16:07 |

Share: | | | | |


ಅಕ್ಕನ ಮನೆಯಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳಿ ತಂಗಿ ಅಂದರ್!

ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. 

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

Recent News


Leave a Comment: