ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಭಾರತ ಸೇರಿ 6 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ಘೋಷಿಸಿದ ಶ್ರೀಲಂಕಾ

Posted by Vidyamaana on 2023-10-24 20:24:03 |

Share: | | | | |


ಭಾರತ ಸೇರಿ 6 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ಘೋಷಿಸಿದ ಶ್ರೀಲಂಕಾ

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.



ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.



ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ.ಹೂಡಿಕೆ: ಎಂ ಬಿ ಪಾಟೀಲ

Posted by Vidyamaana on 2024-06-19 13:51:41 |

Share: | | | | |


ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ.ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

Posted by Vidyamaana on 2023-12-07 13:41:00 |

Share: | | | | |


ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್‌: ಹೈದರಾಬಾದಿನ ಎಲ್‌ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅದ್ದೂರಿ ಕಾರ್ಯಕ್ರಮದಲ್ಲಿ ರೇವಂತ್ ರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಉಪಸ್ಥಿತರಿದ್ದರು.


ಸುಮಾರು ಒಂದು ಲಕ್ಷ ಮಂದಿ ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

Posted by Vidyamaana on 2023-10-21 10:10:13 |

Share: | | | | |


ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.


2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು.


ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ

ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ ದ್ವಿಚಕ್ರ ವಾಹನ, ನದಿ ನೀರಿನಲ್ಲಿ ಮೃತದೇಹ ಪತ್ತೆ : ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ ಸಂಬಂಧಿಕರು.

Posted by Vidyamaana on 2023-01-13 02:20:08 |

Share: | | | | |


ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ ದ್ವಿಚಕ್ರ ವಾಹನ, ನದಿ ನೀರಿನಲ್ಲಿ ಮೃತದೇಹ ಪತ್ತೆ : ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ ಸಂಬಂಧಿಕರು.

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಹಳೇ ಸೇತುವೆಯಲ್ಲಿ ಬುಧವಾರ ಮಧ್ಯರಾತ್ರಿ ವೇಳೆಗೆ ದ್ವಿಚಕ್ರ ವಾಹನ ಸೇತುವೆಯ ಗೇಡರಿಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ  ಬಳಿಕ ನೇತ್ರಾವತಿ ನೀರಿನಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದ್ದು, ಮರಣದ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತನ ಕುಟುಂಬಸ್ಥರು ಗುರುವಾರ ಬೆಳಿಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. 

HSRP ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

Posted by Vidyamaana on 2024-04-29 08:11:43 |

Share: | | | | |


HSRP ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನಗಳಿಗೆ ಹೈಸೆಕ್ಯುರಿಟಿ ನಂಬ‌ರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಎಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ್ದು ಇನ್ನು ಮುಂದೆ ಆದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ.2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಎಚ್‌ಎಸ್‌ಆರ್ಪಿಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಎಚ್‌ಎಸ್‌ಆರ್ಪಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

Recent News


Leave a Comment: