ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಮಂಗಳೂರು : ಬೆಳಗಾವಿ ಮೂಲದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸೆರೆ

Posted by Vidyamaana on 2024-08-07 20:24:03 |

Share: | | | | |


ಮಂಗಳೂರು : ಬೆಳಗಾವಿ ಮೂಲದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸೆರೆ

ಸುರತ್ಕಲ್: ಇಲ್ಲಿನ ಜೋಕಟ್ಟೆಯಲ್ಲಿ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂಲತಃ ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ ಫಕೀರಪ್ಪ (55) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

Posted by Vidyamaana on 2023-09-21 20:47:54 |

Share: | | | | |


ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

   ಮೊಬೈಲ್​​ ಕಳೆದು ಹೋದ ತಕ್ಷಣ ನಮಗಾಗುವ ಗಾಬರಿ ಅಷ್ಟಿಷ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ.ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿ ಮತ್ತು ನಮ್ಮ ಮೊಬೈಲ್​ ಡೇಟಾ ಸೋರಿಕೆಯಾಗುವ ಟೆನ್ಶನ್​ ತುಂಬಾನೆ ಇರುತ್ತೆ.ಆದ್ರೆ ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆಯಪ್( KSP Application ) ಸಹಾಯ ಮಾಡಲಿದೆ. 


ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ಸಂಚಾರ್ ಸಾಥಿ ಪೋರ್ಟಲ್ ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ನಿಷೇಧ

Posted by Vidyamaana on 2023-06-25 05:25:56 |

Share: | | | | |


ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ನಿಷೇಧ

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಐತಿಹಾಸಿಕ ಪರಶುರಾಮ ಥೀಂ ಪಾರ್ಕ್‌ ನಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆಇಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕ ಅಳವಡಿಕೆ, ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಅತೀ ಅಗತ್ಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅಧಿಕಾರಿಗಳು ಕೈಗೊಂಡಿದ್ದಾರೆ.

ಜೂ. 26 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್‌ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಜನ್ಮ ದಿನಾಂಕಕ್ಕೆ ಆಧಾರ್ ಕಾರ್ಡ್ ಮಾನ್ಯವಲ್ಲ: ದಾಖಲೆ ಪಟ್ಟಿಯಿಂದ ಆಧಾರ್ ಕೈಬಿಟ್ಟ EPFO

Posted by Vidyamaana on 2024-01-18 08:39:29 |

Share: | | | | |


ಇನ್ನು ಜನ್ಮ ದಿನಾಂಕಕ್ಕೆ ಆಧಾರ್ ಕಾರ್ಡ್ ಮಾನ್ಯವಲ್ಲ: ದಾಖಲೆ ಪಟ್ಟಿಯಿಂದ ಆಧಾರ್ ಕೈಬಿಟ್ಟ EPFO

ನವದೆಹಲಿ: ಜನ್ಮ ದಿನಾಂಕ ಪರಿಷ್ಕರಣೆ ಮತ್ತು ತಿದ್ದುಪಡಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ಉದ್ಯೋಗಿಗಳ ಭವಿಷ್ಯ ನಿತ್ಯ ಸಂಸ್ಥೆ(EPFO) ಕೈ ಬಿಟ್ಟಿದೆ.ಇನ್ನು ಮುಂದೆ ಇಪಿಎಫ್‌ಒ ನಲ್ಲಿ ಜನ್ಮ ದಿನಾಂಕ ಅಪ್ ಡೇಟ್, ತಿದ್ದುಪಡಿಗೆ, ಆಧಾರ್ ಅರ್ಹ ದಾಖಲೆ ಎಲ್ಲ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ.ಈ ಉದ್ದೇಶಕ್ಕಾಗಿ ಇನ್ನು ಮುಂದೆ ಜನ್ಮ ಪ್ರಮಾಣ ಪತ್ರ, ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಪಾನ್ ಕಾರ್ಡ್, ಪಾಸ್ಪೋರ್ಟ್ ಮೊದಲಾದವುಗಳನ್ನು ದಾಖಲೆಯಾಗಿ ಬಳಸಬಹುದು ಎಂದು ಹೇಳಲಾಗಿದೆ.


EPFO ಗಾಗಿ ಆಧಾರ್ ಇನ್ನು ಮುಂದೆ ಜನ್ಮ ದಿನಾಂಕದ ಪುರಾವೆಯಾಗಿ ಮಾನ್ಯವಾಗಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO), ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಜನವರಿ 16, 2024 ರಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ತೆಗೆದುಹಾಕಲಾಗಿದೆ. ಇದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ನಿರ್ದೇಶನವನ್ನು ಅನುಸರಿಸಿದೆ ಎಂದು ಹೇಳಲಾಗಿದೆ.ಆಧಾರ್ ಒಂದು ವಿಶಿಷ್ಟ ಗುರುತಾಗಿದ್ದರೂ, ಆಧಾರ್ ಕಾಯಿದೆ 2016 ರ ಪ್ರಕಾರ ಜನ್ಮ ದಿನಾಂಕದ ಪುರಾವೆಯಾಗಿ ಗುರುತಿಸಲಾಗಿಲ್ಲ. UIDAI ಆಧಾರ್ ಗುರುತಿನ ಪರಿಶೀಲನೆಯನ್ನು ಒದಗಿಸಿದೆ, ಜನ್ಮ ಪುರಾವೆಯಲ್ಲ ಎಂದು ಹೇಳಿದೆ.

ಬಡ ಮಹಿಳೆಯಿಂದ ಪಡ್ಕೊಂಡ ಲಂಚದ ಹಣ ವಾಪಾಸು ಕೊಟ್ಟ ಉಗ್ರಾಣಿ

Posted by Vidyamaana on 2023-09-14 18:46:57 |

Share: | | | | |


ಬಡ ಮಹಿಳೆಯಿಂದ ಪಡ್ಕೊಂಡ ಲಂಚದ ಹಣ ವಾಪಾಸು ಕೊಟ್ಟ ಉಗ್ರಾಣಿ

ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ ಎಂಬವರು ಶಾಸಕರ ಬಳಿ ಬಂದು ನನ್ನ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿಲ್ಲ, ನನಗೆ ಅಕ್ರಮ ಸಕ್ರಮ ಸಂಜೂರು ಮಾಡಿಲ್ಲ, ನಾನು ಉಗ್ರಾನಿಗೆ ೩೦ ಸಾವಿರ ಹಣ ನೀಡಿದ್ದೇನೆ, ಬೀಡಿ ಕಟ್ಟಿ ಜೀವನ ಮಾಡುವ ನನ್ನಿಂದ ಉಗ್ರಾನಿ ೩೦ ಸಾವಿರ ಲಂಚ ಪಡೆದುಕೊಂಡಿದ್ದಾರೆ, ಹಣ ಕೊಟ್ಟರೂ ನನ್ನ ಕೆಲಸ ಮಾಡಿಕೊಟ್ಟಿಲ್ಲ ನನಗೆ ನ್ಯಾಯ ಕೊಡಬೇಕು, ನನಗೆ ಅಕ್ರಮ ಸಕ್ರಮ ಮಾಡಿಕೊಡಬೇಕು ಎಂದು ಶಾಸಕರಾದ ಅಶೋಕ್ ರೈಯವರಲ್ಲಿ ಹೇಳಿಕೊಂಡಿದ್ದರು.

ಮಹಿಳೆಯ ಆರೋಪವನ್ನು ಆಲಿಸಿದ ಶಾಸಕರು ತಕ್ಷಣವೇ ಉಗ್ರಾನಿಯ ನಂಬರ್ ಪಡೆದು ಕರೆ ಮಾಡಿ ನೀವು ಚಂದ್ರಾವತಿಯವರಿಂದ ಅಕ್ರಮ ಸಕ್ರಮ ವಿಲೇವಾರಿಗೆ ಪಡೆದುಕೊಂಡಿರುವ ೩೦ ಸಾವಿರ ಹಣವನ್ನು ಒಂದು ವಾರದೊಳಗೆ ಮರಳಿ ಕೊಡಬೇಕು ಇಲ್ಲವಾದರೆ ನಿಮ್ಮನ್ನು ಕೆಲಸದಿಂದ ಸಸ್ಪೆಂಡ್ ಮಾಡಿಸುತ್ತೇನೆ, ಬಡವರಿಂದ ಹಣ ಯಾಕೆ ಪಡೆದುಕೊಂಡಿದ್ದೀರಿ ಎಂದು ಹೇಳಿ ಪಡೆದ ಹಣವನ್ನು ಮರಳಿಸಲು ಒಂದು ವಆರದ ಗಡುವು ನೀಡಿದ್ದರು.

ಸೆ. ೧೪ ರಂದು ಮಹಿಳೆಯ ಮನೆಗೆ ಬಂದ ಉಗ್ರಾಣಿ ತಾನುಪಡೆದುಕೊಂಡಿದ್ದ ೩೦ ಸಾವಿರ ಲಂಚದ ಹಣವನ್ನು ಮರಳಿಸಿದ್ದಾರೆ.

ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

Posted by Vidyamaana on 2024-06-22 14:26:00 |

Share: | | | | |


ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಮಂಗಳೂರು : ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ ಮಂದಿಗೆ ಚಾಕು ತೋರಿಸಿ ಬೆದರಿಸಿ ಬಳಿಕ ಮನೆಮಂದಿಯನ್ನು ಕಟ್ಟಿಹಾಕಿ ಮನೆಯಲ್ಲಿದ್ದ ನಗ ನಗದು ದೋಚಿ ಪರಾರಿಯಾಗಿದ್ದಾರೆ,

Recent News


Leave a Comment: