ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಸುದ್ದಿಗಳು News

Posted by vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್‌ ಸಮೇತ  ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 Share: | | | | |


ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

Posted by Vidyamaana on 2024-04-14 07:59:23 |

Share: | | | | |


ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಮಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದುದ್ದಕ್ಕೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಿ ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.

ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

Posted by Vidyamaana on 2023-05-11 01:51:32 |

Share: | | | | |


ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

ಪುತ್ತೂರು:ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನ ಸಭಾ ಚುನಾವಣೆ ಮೇ10ರ೦ದು ಶಾಂತಿಯುತವಾಗಿ ಮುಕ್ತಾಯಗೊ೦ಡಿದೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ಮತದಾನ ನಡೆದಿದೆ.ಕೆಲವೊ೦ದು ಕೇಂದ್ರಗಳಲ್ಲಿ ಅವಧಿ ಮುಗಿದ ಬಳಿಕವೂ ಮತದಾನ ನಡೆದಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ80.08 ಮತ ಚಲಾವಣೆಯಾಗಿದೆ.ಮತಚಲಾಯಿಸಲು ಹಕ್ಕು ಪಡೆದಿದ್ದ 2,12,753 ಮತದಾರರಲ್ಲಿ 1,70,366 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 1,04,918 ಪುರುಷ ಮತದಾರರ ಪೈಕಿ 84,087 ಮತ್ತು1,07,832 ಮಹಿಳಾ ಮತದಾರರ ಪೈಕಿ 86,278 ಮಂದಿ ಮತ ಚಲಾಯಿಸಿದ್ದಾರೆ. ಇವಿಎಂನಲ್ಲಿನ ತಾಂತ್ರಿಕ ದೋಷದಿಂದಾಗಿ ಕೆಲವೊಂದು ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸ್ಥಗಿತಗೊಂಡು ವಿಳಂಬ ಹೊರತುಪಡಿಸಿದರೆ ಮತದಾನ ಸುಸೂತ್ರವಾಗಿ ನಡೆದಿದೆ.ಕ್ಷೇತ್ರದ ಕೆಲವು ಬೂತ್‌ಗಳಲ್ಲಿ ಮತದಾನ ಅವಧಿ ಮುಕ್ತಾಯದ ವೇಳೆಯೂ ಜನ ಸರತಿ ಸಾಲಲ್ಲಿ ನಿಂತಿದ್ದರಿಂದ ರಾತ್ರಿ 7.30ರ ತನಕವೂ ಮತದಾನ ಪ್ರಕ್ರಿಯೆ ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.53 ಮತ ಚಲಾವಣೆಯಾಗಿದೆ.ಒಟು 2,06,029 ಮತದಾರರ ಪೈಕಿ 1,61,788 ಮತದಾರರು ಮತ ಚಲಾಯಿಸಿದ್ದಾರೆ.ಬಂಟ್ವಾಳ ವಿಧಾನಸಭಾ ಚುನಾವಣೆಯಲ್ಲಿ 2,28,377 ಮತದಾರರ ಪೈಕಿ 1,83,326 ಮತದಾರರು ಮತ ಚಲಾಯಿಸುವ ಮೂಲಕ ಶೇ.80.27 ಮತದಾನವಾಗಿದೆ.

ಲೋಕಸಭೆ ಚುನಾವಣೆ : ರಾಜ್ಯದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿ ಪ್ರಕಟ

Posted by Vidyamaana on 2024-04-21 19:57:57 |

Share: | | | | |


ಲೋಕಸಭೆ ಚುನಾವಣೆ : ರಾಜ್ಯದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆ-2024 ರ ಚುನಾವಣಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಪಟ್ಟಂತೆ ಚುನಾವಣಾ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಕಿರು ಹೊತ್ತಿಗೆಯ ಪ್ರತಿಯನ್ನು ವಿತರಿಸಿ ಸೂಕ್ತ ತಿಳುವಳಿಕೆಯನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಿದೆ.

ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

Posted by Vidyamaana on 2023-10-15 10:39:08 |

Share: | | | | |


ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್‌ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ ಎಂದು ಹೇಳಿದ್ದಾರೆ.


ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರ ಪೈಕಿ ವರ್ಷಕ್ಕೆ 1,200 ಮಂದಿಯನ್ನು ಕಾಶಿ, ಗಯಾ ಯಾತ್ರೆಗೆ ಉಚಿತವಾಗಿ ಕಳುಹಿಸಲಾಗುವುದು. ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತರಾದರೆ ಅವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-05-07 11:48:08 |

Share: | | | | |


ಅಹ್ಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್ನಲ್ಲಿ ಮತದಾನ ಮಾಡಿದರು

ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

Posted by Vidyamaana on 2023-08-26 01:32:33 |

Share: | | | | |


ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

ಮೂಡುಬಿದಿರೆ: ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ ವಿಶಾಲ್ ಟೂರಿಸ್ಟ್ ಆಗಿದ್ದು, ಬೆಳ್ತಂಗಡಿ ತಾಲೂಕಿನ ಪಡ್ಡಂದಡ್ಕ ಗಾಂಧೀನಗರದ ನಡುವೆ

ಅಪಘಾತಕ್ಕೀಡಾಗಿದೆ. ಒಟ್ಟು 27 ಮಂದಿ

ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಊರವರು ಜಮಾಯಿಸಿದ್ದಾರೆ. ತಕ್ಷಣ ಅಂಬ್ಯುಲೆನ್ಸ್ ಸೇವೆಯ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ



Leave a Comment: